HomeಅಂಕಣಗಳುKarnataka against SIRಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

- Advertisement -
- Advertisement -

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ ಪದೇ ಹೇಳಿಕೊಳ್ಳುತ್ತಿದ್ದಾರೆ.

ಆದರೆ, ತಳಮಟ್ಟದಲ್ಲಿ ವಾಸ್ತವ ಸ್ಥಿತಿ ಬೇರೆಯೇ ಇದೆ. ಮುಖ್ಯವಾಗಿ ಆದಿವಾಸಿಗಳು, ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ತಳ ಸಮುದಾಯಗಳ ಪರಿಸ್ಥಿತಿ ಶೋಚನೀಯವಾಗಿದೆ. ವ್ಯವಸ್ಥೆಯ ಲೋಪದಿಂದ ಈ ಸಮುದಾಯಗಳ ಸಾವಿರಾರು ಜನರು ತಮ್ಮ ಅಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳುವುದು ಖಚಿತವಾಗಿದೆ.

ಆಗಸ್ಟ್ 8ರಂದು ಎಸ್‌ಐಆರ್ ಪ್ರಕ್ರಿಯೆಯ ಮನೆ ಮನೆ ಗಣತಿ ಅಥವಾ ಫಾರಂ ವಿತರಣೆ ಮತ್ತು ವಾಪಸ್ ಪಡೆಯುವ ಅವಧಿ ಕೊನೆಗೊಳ್ಳಲಿದೆ. ಆದರೆ, ಕೊಡಗು ಜಿಲ್ಲೆಯ ಆದಿವಾಸಿ ಹಾಡಿಗಳಿಗೆ ಇನ್ನೂ ಫಾರಂ ತಲುಪಿಯೇ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

2026 ಜುಲೈ 29ರಂದು ಆಂದೋಲನ ಪತ್ರಿಕೆ ಪ್ರಕಟಿಸಿದ ವರದಿ ಪ್ರಕಾರ, ಕೊಡಗು ಜಿಲ್ಲೆಯಲ್ಲಿ ಎಸ್‌ಐಆರ್ ಫಾರಂ ವಿತರಣೆ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್‌. ಜೆ ಸೋಮಶೇಖರ್ ಹೇಳಿದ್ದಾರೆ. ಆದರೆ, ವಿರಾಜಪೇಟೆ ತಾಲೂಕಿನ ಬಾಳುಗೋಡು ಮತ್ತು ಬಿ.ಶೆಟ್ಟಿಗಿರಿ ಹಾಡಿಗಳಲ್ಲಿ (ಹಳ್ಳಿಗಳಲ್ಲಿ) ಸುಮಾರು 26 ಜನರಿಗೆ ಇನ್ನೂ ಫಾರಂ ತಲುಪಿಲ್ಲ ಎಂದು ನಾಗರಿಕ ಮತ ಕಾವಲು ಸಮಿತಿಯ ಹೇಮಂತ್ ಹೇಳುತ್ತಾರೆ.

ಫಾರಂ ತಲುಪದವರ ಕಥೆ ಒಂದೆಡೆಯಾದರೆ, ಇನ್ನು ಫಾರಂ ತಲುಪಿದವರ ಕಥೆ ಬೇರೆಯದ್ದೇ ಆಗಿದೆ. ಎರಡೂ ಹಳ್ಳಿಗಳ ಮತದಾರರು ಆದಿವಾಸಿಗಳು, ದಲಿತರು ಆಗಿರುವುದರಿಂದ ಅವರಿಗೆ ಫಾರಂ ತುಂಬುವುದು ಗೊತ್ತಿಲ್ಲ. ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಈ ಫಾರಂ ಏಕೆ ಕೊಟ್ಟಿದ್ದಾರೆ ಎಂದೇ ಮಾಹಿತಿಯಿಲ್ಲ. ಕೆಲವೆಡೆ ಫಾರಂ ತುಂಬಲು ಬಿಎಲ್‌ಒಗಳು ಸಹಾಯ ಮಾಡಿದ್ದು, ಆದರೆ, ತಪ್ಪು ತಪ್ಪಾಗಿ ತುಂಬಿದ್ದಾರೆ ಎಂದು ಹೇಮಂತ್ ವಿವರಿಸಿದ್ದಾರೆ.

ಬಾಳುಗೋಡು ಹಾಡಿಯಲ್ಲಿ 80 ಮಂದಿ ಆದಿವಾಸಿ ಎರವ ಸಮುದಾಯದ ಮತದಾರರಿದ್ದಾರೆ. ಈ ಪೈಕಿ 40 ಮತದಾರರ ಫಾರಂಗಳನ್ನು ನಾವು ಪರಿಶೀಲನೆ ಮಾಡಿದ್ದೇವೆ. ಒಬ್ಬರು ಮಾತ್ರ ಸರಿಯಾಗಿ ಫಾರಂ ತುಂಬಿರುವುದು ಕಂಡು ಬಂದಿದೆ. ಬಿ.ಶೆಟ್ಟಿಗೆರಿಯಲ್ಲಿ 500ಕ್ಕೂ ಹೆಚ್ಚು ಎರವ, ಜೇನು ಕುರುಬ ಮತ್ತು ದಲಿತ ಸಮುದಾಯಗಳ ಮತದಾರರಿದ್ದಾರೆ. ಈ ಪೈಕಿ 100ಕ್ಕೂ ಹೆಚ್ಚು ಮಂದಿಯ ಫಾರಂಗಳನ್ನು ನಾವು ಪರಿಶೀಲಿಸಿದ್ದೇವೆ. ಕೇವಲ 26ರ ಜನರು ಮಾತ್ರ ಸರಿಯಾಗಿ ಫಾರಂ ತುಂಬಿದ್ದಾರೆ ಎಂದು ಹೇಮಂತ್ ತಿಳಿಸಿದ್ದಾರೆ.

ವಿವಿಧ ಇಲಾಖೆಯ ಸಿಬ್ಬಂದಿಯನ್ನು ಬಿಎಲ್‌ಒಗಳಾಗಿ ನೇಮಿಸಲಾಗಿದೆ. ಅವರಿಗೆ ಸಹಾಯ ಮಾಡಲು ಕೆಲವರನ್ನು ನಿಯೋಜಿಸಲಾಗಿದೆ. ಈ ಪೈಕಿ ಬಹುತೇಕರಿಗೆ ಸರಿಯಾದ ತರಬೇತಿ ನೀಡಿಲ್ಲ. 2002ರ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರ ವಿವರಗಳನ್ನು 2025ರ ಮಾಹಿತಿ ತುಂಬಬೇಕಾದಲ್ಲಿ ತುಂಬಿದ್ದಾರೆ. ಇನ್ನೂ 2002ರ ಪಟ್ಟಿಯಲ್ಲಿ ಹೆಸರು ಇಲ್ಲದವರ ಫಾರಂನಲ್ಲಿ ಸಂಬಂಧಿಕರ ಬದಲು ಅದೇ ಮತದಾರರ ಮಾಹಿತಿಯನ್ನೇ ತುಂಬಿದ್ದಾರೆ. ಈ ರೀತಿ ಹಲವು ಲೋಪಗಳು ಆಗಿವೆ ಎಂದು ವಿವರಿಸಿದ್ದಾರೆ.

ಇನ್ನೂ ಕೆಲ ಮತದಾರರ ಫಾರಂಗಳಲ್ಲಿ ಮಾಹಿತಿ ಸಿಕ್ಕಿಲ್ಲ ಎಂದು ಬಿಎಲ್‌ಒಗಳೇ ಬರೆದಿದ್ದಾರೆ. ಈ ಎಲ್ಲಾ ಕಾರಣಗಳಿಗೆ ಈ ಜನರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳುವುದು ಖಂಡಿತ ಎಂದು ಹೇಮಂತ್ ಕಳವಳ ವ್ಯಕ್ತಪಡಿಸಿದ್ದಾರೆ.

ಆದಿವಾಸಿ ಮತದಾರರ 2002ರ ಪಟ್ಟಿ ಹುಡುಕುವುದು ಸವಾಲಾಗಿದೆ. ಹಾಡಿ ಜನರ ಸಹಾಯಕ್ಕೆ ಯಾವುದೇ ಪಕ್ಷಗಳ ಬಿಎಲ್‌ಎಗಳು ಬರುತಿಲ್ಲ. ಬಿಎಲ್‌ಒಗಳಿಗೆ ಸರಿಯಾಗಿ ತರಬೇತಿ ಇಲ್ಲ ಎಂದು ಹೇಮಂತ್ ಸಮಸ್ಯೆ ವಿವರಿಸಿದ್ದಾರೆ.

ದಾಖಲೆಗಳು ಇಲ್ಲ, ಪಿಆರ್‌ಸಿ, ಜಾತಿ ಪ್ರಮಾಣ ಪತ್ರ ಸಿಗುವುದು ಅನುಮಾನ

ಇನ್ನೂ ಫಾರಂ ಸಿಗದ ಮತದಾರರು ತಮ್ಮ ಹಕ್ಕು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಫಾರಂ ಸಿಕ್ಕವರ ಪೈಕಿ ಬಹುತೇಕರು ಸರಿಯಾಗಿ ತುಂಬದೆ, ವಿವರಗಳು ಮ್ಯಾಚ್ ಆಗದೆ ಕರಡು ಪಟ್ಟಿಯಿಂದ ಹೊರ ಬೀಳುವುದು ಖಚಿತವಾಗಿದೆ. ಇಆರ್‌ಒ ನೋಟಿಸ್ ಕೊಟ್ಟರೆ ಸಮರ್ಥಿಸಿಕೊಳ್ಳಲು ಈ ಜನಗಳ ಬಳಿ ಯಾವುದೇ ದಾಖಲೆಗಳಿಲ್ಲ. ಶಾಶ್ವತ ನಿವಾಸಿ ಪ್ರಮಾಣ ಪತ್ರ ಪಡೆಯೋಣ ಅಂದರೆ, ಇವರದ್ದು ಸರ್ಕಾರಿ ಜಾಗದಲ್ಲಿ ಹೋರಾಟ ನಿರತ ಹಳ್ಳಿಗಳಾಗಿವೆ. ಜಾತಿ ಪ್ರಮಾಣ ಪತ್ರ ಪಡೆಯಲು ಇವರ ಜಾತಿಗಳು ಸರಿಯಾಗಿ ವಿಂಗಡಣೆಯೇ ಆಗಿಲ್ಲ ಎಂದು ಹೇಮಂತ್ ಹೇಳಿದ್ದಾರೆ.

ನಾನುಗೌರಿ.ಕಾಂ ವಿರಾಜಪೇಟೆ ತಾಲೂಕು ಬಾಳುಗೋಡು ಗ್ರಾಮದ ಹಿರಿಯ ಮತದಾರರೊಬ್ಬರ ಗಣತಿ ನಮೂನೆಯನ್ನು ಪರಿಶೀಲನೆ ನಡೆಸಿದೆ. ಈ ವೇಳೆ ಅವರ ನಮೂನೆಯಲ್ಲಿ ಎರಡೂ ಬದಿಯ ಕಾಲಂಗಳನ್ನು ತುಂಬಿರುವುದು ಕಂಡು ಬಂದಿದೆ. ಈ ರೀತಿಯ ಉದಾಹರಣೆಗಳು ಹಲವಿದೆ ಎಂದು ಹೇಮಂತ್ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...