Homeಮುಖಪುಟವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ...

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

- Advertisement -
- Advertisement -

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಸಂಸತ್ತಿನ ಆವರಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಕಪಿಲ್ ಸಿಬಲ್, “ಅಧಿಕಾರಿಗಳು ಈ ಕ್ರಮಕ್ಕೆ ಜವಾಬ್ದಾರಿ ವಹಿಸಿಕೊಂಡಿದ್ದರೂ ಸಹ, ಗೃಹ ಸಚಿವರು ಸಂಸತ್ತನ್ನು ಉದ್ದೇಶಿಸಿ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದರು.

“ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅಥವಾ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಜವಾಬ್ದಾರಿಯನ್ನು ವಹಿಸಿಕೊಂಡರೂ ಸಹ, ಗೃಹ ಸಚಿವರು ಇನ್ನೂ ಹೇಳಿಕೆ ನೀಡಬೇಕು. ಗೃಹ ಸಚಿವರು ಏಕೆ ಮಾತನಾಡುತ್ತಿಲ್ಲ? ಏಕೆಂದರೆ ಅವರ ಬಳಿ ಉತ್ತರವಿಲ್ಲ. ಅನುಮತಿಯಿಲ್ಲದೆ ಯಾರೂ ಪೆಲೆಟ್ ಗನ್‌ಗಳನ್ನು ಬಳಸುವಂತಿಲ್ಲ. ಅಂತಹ ಅಧಿಕಾರಗಳನ್ನು ಉನ್ನತ ಅಧಿಕಾರಿಗಳು ನೀಡುತ್ತಾರೆ” ಎಂದರು.

“ಪೆಲೆಟ್ ಗನ್‌ಗಳನ್ನು ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಬಳಸಬಹುದು. ಗೃಹ ಸಚಿವರು ಈ ವಿಷಯದ ಬಗ್ಗೆ ಸಂಸತ್ತನ್ನು ಏಕೆ ಉದ್ದೇಶಿಸಿ ಮಾತನಾಡಿಲ್ಲ” ಎಂದು ಪ್ರಶ್ನಿಸಿದರು.

“ಗೃಹ ಸಚಿವರು ಸಂಸತ್ತಿಗೆ ಬರುತ್ತಿಲ್ಲ, ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆರಂಭದಲ್ಲಿ ಪೆಲೆಟ್ ಗನ್‌ಗಳನ್ನು ಬಳಸಲಾಗಿದೆ ಎಂಬ ಹೇಳಿಕೆಯನ್ನು ಆಡಳಿತ ಪಕ್ಷದ ಕೆಲವರು ತಿರಸ್ಕರಿಸಿದರು. ಆದರೆ ಅವುಗಳನ್ನು ಬಳಸಲಾಗಿದೆ ಎಂದು ತಿಳಿದಾಗ, ಗೃಹ ಸಚಿವರು ಮೌನವಾಗಿದ್ದಾರೆ. ಆದ್ದರಿಂದ, ರಾಹುಲ್ ಗಾಂಧಿ ಹೇಳಿದ್ದೆಲ್ಲವೂ ನಿಜ” ಎಂದು ಸಿಬಲ್ ತಿಳಿಸಿದರು.

ಜುಲೈ 20 ರಂದು ಸಂಸತ್ತಿಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ದೌರ್ಜನ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೇಲೆ ಕಾಂಗ್ರೆಸ್ ಸಂಸದರು ದಾಳಿ ತೀವ್ರಗೊಳಿಸಿದರು.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಗೃಹ ಸಚಿವ ಅಮಿತ್ ಶಾ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಘಟನೆಯ ಬಗ್ಗೆ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿದರು.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೆಹಲಿ ಪೊಲೀಸರು ಮತ್ತು ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‌) ಪ್ರತಿಭಟನಾಕಾರರ ವಿರುದ್ಧ ಪೆಲೆಟ್ ಗನ್ ಮತ್ತು ಲಾಠಿ ಸೇರಿದಂತೆ ಅತಿಯಾದ ಬಲಪ್ರಯೋಗ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಈ ದಮನಕ್ಕೆ ಗೃಹ ಸಚಿವರು ನೇರ ಹೊಣೆ ಎಂದು ಅವರು ಪ್ರತಿಪಾದಿಸಿದರು.

ಕೇವಲ ಎರಡು ಸಾಧ್ಯತೆಗಳಿವೆ; ಗೃಹ ಸಚಿವರು ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ ಅಥವಾ ಅದರ ಬಗ್ಗೆ ತಿಳಿದಿರಲಿಲ್ಲ ಎಂದರು.

“ಕೇಂದ್ರ ಸಚಿವರೇ ಆದೇಶಿಸಿದರೆ ಅವರು ತಪ್ಪಿತಸ್ಥರು. ಅವರಿಗೆ ತಿಳಿದಿಲ್ಲದಿದ್ದರೆ, ಅವರು ಅಸಮರ್ಥರು. ಎರಡೂ ಸಂದರ್ಭಗಳಲ್ಲಿ ಅವರು ಅಧಿಕಾರದಿಂದ ಹೋಗಬೇಕಾಗುತ್ತದೆ” ಎಂದು ಗಾಂಧಿ ಹೇಳಿದರು.

ರಾಷ್ಟ್ರವ್ಯಾಪಿ ಆಂದೋಲನದ ನೇತೃತ್ವ ವಹಿಸಿದ್ದ ಕಾಕ್ರೋಚ್‌ ಜನತಾ ಪಕ್ಷ (ಸಿಜೆಪಿ), ಜುಲೈ 25 ರಂದು ಜಂತರ್ ಮಂತರ್‌ನಲ್ಲಿ ನಡೆದ ಧರಣಿ ಮುಗಿಯುವ ಮೊದಲೇ ಪ್ರತಿಭಟನಾಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ನಿರೀಕ್ಷೆಯಿತ್ತು ಎಂದು ಹೇಳಿದರು.

ದೇಶಾದ್ಯಂತ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಪ್ರತಿಭಟನಾಕಾರರನ್ನು ರಕ್ಷಿಸುವ ಕುರಿತು ಕಾನೂನು ಮಾರ್ಗದರ್ಶನ ಪಡೆಯಲು ಅವರ ತಂಡವು ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಭೇಟಿ ಮಾಡಿದೆ ಎಂದು ಸಿಜೆಪಿ ಮೂಲಗಳು ತಿಳಿಸಿವೆ.

ಪ್ರತಿಭಟನೆಗಳ ಸಮಯದಲ್ಲಿ ನಡೆದ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಪುರಾವೆಗಳನ್ನು ಸಂಗ್ರಹಿಸಲು ಸಿಜೆಪಿ ರಾಷ್ಟ್ರವ್ಯಾಪಿ ಕಾನೂನು ನೆರವು ಕೋಶವನ್ನು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...