Homeಮುಖಪುಟಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

- Advertisement -
- Advertisement -

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ ‘ನೀಲಿ’ (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ ಹಾಕಿ ಇಂಡಿಯಾ (HI) ಬಿಡುಗಡೆ ಮಾಡಿರುವ ಹೊಸ ಕಿಟ್, ಕ್ರೀಡಾಪಟುಗಳ ವಲಯದಲ್ಲಷ್ಟೇ ಅಲ್ಲದೆ ರಾಜಕೀಯ ರಂಗದಲ್ಲೂ ದೊಡ್ಡ ಸಂಚಲನ ಸೃಷ್ಟಿಸಿದೆ. ಸಾಂಪ್ರದಾಯಿಕ ಗುರುತನ್ನು ನಾಶಪಡಿಸಿ, ಪ್ರತಿಯೊಂದರಲ್ಲೂ ಕೇಸರಿಮಯ ಮಾಡಲು ಹೊರಟಿರುವ ಆಡಳಿತಾರೂಢ ಬಿಜೆಪಿ ಸಿದ್ಧಾಂತದ ವಿರುದ್ಧ ಪ್ರತಿಪಕ್ಷಗಳು ಹಾಗೂ ಮಾಜಿ ಆಟಗಾರರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?”: ಮಾಜಿ ನಾಯಕ ರಸ್ಕ್ವಿನ್ಹಾ ಆಕ್ರೋಶ

ಭಾರತೀಯ ಹಾಕಿ ತಂಡದ ಈ ಹಠಾತ್ ಬಣ್ಣ ಬದಲಾವಣೆಯನ್ನು ಮಾಜಿ ನಾಯಕ ಹಾಗೂ ಪ್ರಸಿದ್ಧ ಹಾಕಿ ಪಟು ವೀರೆನ್ ರಸ್ಕ್ವಿನ್ಹಾ ತೀವ್ರವಾಗಿ ಖಂಡಿಸಿದ್ದಾರೆ. ‘X’ (ಟ್ವಿಟರ್) ಖಾತೆಯಲ್ಲಿ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಅವರು, “ಹಾಕಿ ಇಂಡಿಯಾದ ಈ ನಿರ್ಧಾರ ನಿಜಕ್ಕೂ ತೀರಾ ಮುಜುಗರ ತರುವಂತದ್ದು. ಭಾರತೀಯ ಹಾಕಿ ತಂಡದ ಪರಂಪರೆ ಮತ್ತು ಗುರುತು ಯಾವಾಗಲೂ ನೀಲಿ ಬಣ್ಣದ್ದಾಗಿದೆ. ನಾನು ವರ್ಷಗಳ ಕಾಲ ಅತ್ಯಂತ ಹೆಮ್ಮೆಯಿಂದ ಆ ನೀಲಿ ಜೆರ್ಸಿ ಧರಿಸಿ ಆಡಿದ್ದೇನೆ. ಅಭಿಮಾನಿಗಳು ಕೂಡ ನಮ್ಮ ತಂಡವನ್ನು ನೀಲಿ ಬಣ್ಣದಲ್ಲೇ ನೋಡಲು ಬಯಸುತ್ತಾರೆ. ಇದ್ದಕ್ಕಿದ್ದಂತೆ ಕಿತ್ತಳೆ ಬಣ್ಣ ತಂದಿದ್ದರ ಹಿಂದಿನ ತರ್ಕವೇನು?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ. ಹೆಮ್ಮೆ ಮತ್ತು ಪರಂಪರೆಯ ವಿಷಯದಲ್ಲಿ ಇಂತಹ ಬದಲಾವಣೆ ಸರಿಯಲ್ಲ ಎಂಬುದು ಅವರ ಸ್ಪಷ್ಟ ನಿಲುವಾಗಿದೆ.

“ಮುಂದೆ ಸೇನಾ ಸಮವಸ್ತ್ರಕ್ಕೂ ಕೇಸರಿ ಹೇರಬಹುದು”: ಪ್ರಿಯಾಂಕಾ ಗಾಂಧಿ, ಪ್ರತಿಪಕ್ಷಗಳ ನೇರ ದಾಳಿ

ಹಾಕಿ ಜೆರ್ಸಿಗೆ ಕೇಸರಿ ಬಣ್ಣ ಬಳಿಯುತ್ತಿದ್ದಂತೆ ಸಂಸತ್ತಿನ ಅಂಗಳದಲ್ಲಿ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ಧ್ವನಿಯೆತ್ತಿದ್ದಾರೆ. ದೇಶದ ಪ್ರತಿಯೊಂದು ಸಾಂಸ್ಥಿಕ ಹಾಗೂ ಕ್ರೀಡಾ ಗುರುತಿನ ಮೇಲೆ ಕೇಸರಿ ಬಣ್ಣವನ್ನು ಹೇರಲಾಗುತ್ತಿದೆ ಎಂದು ನಾಯಕರು ದೂರಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಬಗ್ಗೆ ಕಠಿಣವಾಗಿ ಮಾತನಾಡಿ, “ಆರ್‌ಎಸ್‌ಎಸ್ ಪ್ರಭಾವಿತ ಶಿಕ್ಷಣ ನೀತಿ ಮತ್ತು ನಿರ್ಧಾರಗಳ ಮೂಲಕ ಸರ್ಕಾರವು ದೇಶದ ಇತಿಹಾಸ, ಸಮವಸ್ತ್ರಗಳನ್ನು ಬದಲಾಯಿಸಲು ಹೊರಟಿದೆ. ಆದರೆ ಈ ವಿಷಯಗಳಲ್ಲಿ ದೇಶದ ಯುವಜನತೆಯ ನಿಜವಾದ ಅಭಿಪ್ರಾಯವೇನು ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಈ ದೇಶದ ಸ್ವಾತಂತ್ರ್ಯ ಸಂಗ್ರಾಮವು ಸತ್ಯ ಮತ್ತು ಅಹಿಂಸೆಯ ತತ್ವಗಳ ಮೇಲೆ ನಡೆದಿದೆ. ಆ ಇತಿಹಾಸದಲ್ಲಿ ಆರ್‌ಎಸ್‌ಎಸ್ ಎಲ್ಲೂ ಇರಲಿಲ್ಲ. ದೇಶದ ಜನರಿಗೆ ಸತ್ಯ ಏನೆಂದು ತಿಳಿದಿದೆ ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನ ನಿಜವಾದ ಉದ್ದೇಶವೇನೆಂಬುದು ಈಗ ಅವರಿಗೆ ಸ್ಪಷ್ಟವಾಗಿ ಅರ್ಥವಾಗುತ್ತಿದೆ,” ಎಂದು ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಮಾತನಾಡಿ, “ಇಂದು ಅವರು ಹಾಕಿಯಲ್ಲಿ ಬಣ್ಣ ಬದಲಾಯಿಸಿದ್ದಾರೆ, ನಾಳೆ ಭಾರತೀಯ ಸೈನ್ಯದ ಸಮವಸ್ತ್ರಕ್ಕೂ ಇದೇ ರೀತಿ ಕೇಸರಿ ಬಣ್ಣ ಹೇರಿದರೂ ಅಚ್ಚರಿಯಿಲ್ಲ. ಯಾರೂ ಇವರನ್ನು ನಂಬಲು ಸಾಧ್ಯವಿಲ್ಲ, ಅವರಿಗೆ ಪ್ರತಿಯೊಂದರಲ್ಲೂ ಕೇಸರಿಯೇ ಬೇಕು. ಪ್ರತಿಯೊಂದಕ್ಕೂ ತನ್ನದೇ ಆದ ಇತಿಹಾಸ ಮತ್ತು ಮಹತ್ವವಿದೆ. ಅಧಿಕಾರಕ್ಕೆ ಬಂದ ತಕ್ಷಣ ಇಂತಹ ಚಿಹ್ನೆಗಳನ್ನು ಬದಲಾಯಿಸುವುದು ಅತ್ಯಂತ ದುರದೃಷ್ಟಕರ,” ಎಂದಿದ್ದಾರೆ.

ಮತ್ತೊಬ್ಬ ಹಿರಿಯ ನಾಯಕ ತಾರಿಕ್ ಅನ್ವರ್ ಮಾತನಾಡಿ, “ಇದು ಬಿಜೆಪಿಯ ಸಂಕುಚಿತ ಮನಸ್ಥಿತಿಯ ಸಂಕೇತ. ಶಿಕ್ಷಣವಿರಲಿ ಅಥವಾ ಕ್ರೀಡೆಯಿರಲಿ, ಎಲ್ಲೆಡೆ ತಮ್ಮ ಸಿದ್ಧಾಂತವನ್ನು ಹೇರಲಾಗುತ್ತಿದೆ. ಮೈದಾನದಲ್ಲಿ ಪ್ರದರ್ಶನ ಮುಖ್ಯವೇ ಹೊರತು ಧಾರ್ಮಿಕ ಬಣ್ಣಗಳಲ್ಲ. ಸಾಂಪ್ರದಾಯಿಕ ನೀಲಿ ಬಣ್ಣವನ್ನು ಬದಲಾಯಿಸಿ ಧಾರ್ಮಿಕ ಬಣ್ಣ ಹೇರುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಇತ್ತ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟರ್ಕಿ, “ಆಟದ ಮೈದಾನದ ಟರ್ಫ್ ನೀಲಿ ಬಣ್ಣದಲ್ಲಿರುವುದರಿಂದ ಆಟಗಾರರ ಜೆರ್ಸಿಯೂ ನೀಲಿಯಾಗಿದ್ದರೆ ಗೋಚರತೆಯ (Visibility) ಸಮಸ್ಯೆ ಉಂಟಾಗುತ್ತದೆ ಎಂದು ತರಬೇತುದಾರರು ಹೇಳಿದ್ದರು. ಆದ್ದರಿಂದ ಈ ಬದಲಾವಣೆ ಮಾಡಲಾಗಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಆದರೆ, ದಶಕಗಳಿಂದ ಕ್ರೀಡಾಭಿಮಾನಿಗಳ ಮನಸ್ಸಿನಲ್ಲಿ ನೆಲೆಸಿದ್ದ ‘ಮೆನ್ ಇನ್ ಬ್ಲೂ’ ಗುರುತನ್ನು ಅಳಿಸಿ ಕೇಸರಿಮಯ ಮಾಡಲು ಹೊರಟಿರುವ ಸರ್ಕಾರದ ನಡೆಗೆ ಸಾರ್ವಜನಿಕ ವಲಯದಲ್ಲೂ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...