Homeಮುಖಪುಟಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇವಲ ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಮಾತ್ರ ಕ್ಷಮಿಸುತ್ತೀರಾ ಅಥವಾ ವಿದ್ಯಾರ್ಥಿಗಳ ಮೇಲಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುತ್ತೀರಾ? ಎಂದು ಅವರು ಪ್ರಧಾನಿಯವರನ್ನು ವಿಡಿಯೋದ ಕಮೆಂಟ್ ಬಾಕ್ಸ್‌ನಲ್ಲಿ ನೇರವಾಗಿ ಪ್ರಶ್ನಿಸಿ ಸರ್ಕಾರದ ದ್ವಂದ್ವ ನಿಲುವನ್ನು ಬಯಲಿಗೆಳೆದಿದ್ದಾರೆ.

ನೀಟ್ (NEET) ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಲಾಗಿತ್ತು ಎಂದು ಪ್ರಧಾನಿ ಮೋದಿ ವಿಡಿಯೊದಲ್ಲಿ ಉಲ್ಲೇಖಿಸಿದ್ದರು. ನಿಂದನೆ ಯಾವುದಕ್ಕೂ ಪರಿಹಾರವಲ್ಲ ಯುವಕರನ್ನು ಶಿಕ್ಷಿಸುವುದು, ಕೋರ್ಟ್-ಕಚೇರಿ ಎಂದು ಕಿರುಕುಳ ನೀಡುವುದರಿಂದ ಪರಿಸ್ಥಿತಿ ಬದಲಾಗುವುದಿಲ್ಲ. ದಾರಿ ತಪ್ಪಿದ ಯುವಕರನ್ನು ಕ್ಷಮಿಸಿ ಸರಿದಾರಿಗೆ ತರಲು ಬಯಸುತ್ತೇನೆ ಎಂದು ಮೋದಿ ತಮ್ಮ ವಿಡಿಯೊದಲ್ಲಿ ಪ್ರತಿಪಾದಿಸಿದ್ದರು.

ಪ್ರಧಾನಿಯವರ ಈ ಕ್ಷಮಾಪಣೆಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಭಿಜೀತ್ ದೀಪ್ಕೆ, ಸರ್ಕಾರದ ಮಾತು ಮತ್ತು ಕೃತಿಯ ನಡುವಿನ ಅಂತರವನ್ನು ಎತ್ತಿ ತೋರಿಸಿದ್ದಾರೆ. ಒಂದು ಕಡೆ ಪ್ರಧಾನಿ ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯ ಮಾತಾಡುತ್ತಿದ್ದರೆ, ಇನ್ನೊಂದೆಡೆ ನ್ಯಾಯಕ್ಕಾಗಿ ಧ್ವನಿ ಎತ್ತಿದ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ಬಂಧನದ ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮಾಧ್ಯಮದವರ ಮೇಲೆ ಆಕ್ಷೇಪಾರ್ಹ ಪದ ಬಳಸಿದ್ದ ಬಿಜೆಪಿ ನಾಯಕರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ, ಆದರೆ ತಮ್ಮ ಭವಿಷ್ಯಕ್ಕಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ. ಈ ದೇಶದಲ್ಲಿ ಸಾಮಾನ್ಯ ಯುವಜನತೆಗೆ ಒಂದು ಕಾನೂನು, ಆಡಳಿತಾರೂಢ ಬಿಜೆಪಿ ನಾಯಕರಿಗೆ ಇನ್ನೊಂದು ಕಾನೂನು ಇದೆಯೇ? ಎಂದು ದೀಪ್ಕೆ ಕಟುವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಜಂತರ್ ಮಂತರ್ ಪ್ರತಿಭಟನೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದ 15 ವರ್ಷದ ಬಾಲಕಿಯೊಬ್ಬಳು ಕ್ಷಮಾಪಣೆಯ ವಿಡಿಯೊ ಬಿಡುಗಡೆ ಮಾಡಿದ್ದಾಳೆ. ನಾನು ತಪ್ಪು ಮಾಡಿದ್ದೇನೆ, ಇದು ನನ್ನ ಮೊದಲ ಮತ್ತು ಕೊನೆಯ ತಪ್ಪು. ಇತರರ ಪ್ರಭಾವಕ್ಕೆ ಒಳಗಾಗಿ ಹೀಗೆ ಮಾತನಾಡಿದೆ ಎಂದು ಆಕೆ ಕ್ಷಮೆ ಯಾಚಿಸಿದ್ದಾಳೆ. ಮತ್ತೊಂದೆಡೆ, ಈ ಬೆಳವಣಿಗೆಗಳ ನಡುವೆಯೇ ಸುಪ್ರೀಂ ಕೋರ್ಟ್ ಸಹ ಪ್ರಮುಖ ನಿರ್ದೇಶನ ನೀಡಿದ್ದು, ಯಾವುದೇ ಅಪರಾಧ ಹಿನ್ನೆಲೆಯಿಲ್ಲದ ಅಪ್ರಾಪ್ತ ಪ್ರತಿಭಟನಾಕಾರರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...