Homeಮುಖಪುಟಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

- Advertisement -
- Advertisement -

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ ಸಿಬ್ಬಂದಿ ಆತನಿಗೆ ತೀವ್ರವಾಗಿ ಥಳಿಸಿರುವ ಬಗ್ಗೆ ವರದಿಯಾಗಿದೆ.

ಬಾಲಕಿಯ ಮೃತದೇಹ ನದಿಯೊಂದರ ಬಳಿ ಪತ್ತೆಯಾಗಿದ್ದು, ಕಾನ್‌ಸ್ಟೇಬಲ್ ಅಭಿಷೇಕ್ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ಆಸ್ಪತ್ರೆಯ ಸಿಬ್ಬಂದಿ, ಅಭಿಷೇಕ್‌ನನ್ನು ಗುರುವಾರ (ಜು.30) ವೈದ್ಯಕೀಯ ತಪಾಸಣೆಗೆ ಕರೆ ತಂದಾಗ ಹಲ್ಲೆ ನಡೆಸಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, 2018ರ ಬ್ಯಾಚ್‌ನ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅದಕ್ಕೂ ಮುನ್ನ ಪೊಲೀಸರು ಆತನ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ಆತನ ಮೇಲೆ ಹಲ್ಲೆ ನಡೆಸಿದ್ದರಿಂದ, ವೈದ್ಯಕೀಯ ತಪಾಸಣೆಯನ್ನು ಪೂರ್ಣಗೊಳಿಸಲು ಪೊಲೀಸರು ಹೆಚ್ಚುವರಿ ಭದ್ರತಾ ಪಡೆಯನ್ನು ಕರೆಸಿದ್ದಾರೆ.

ಅಭಿಷೇಕ್ ಹತ್ಯೆ ಮಾಡಿದ್ದಾನೆ ಎನ್ನಲಾದ ಬಾಲಕಿ ಬುಧವಾರ (ಜು.29) ಮಧ್ಯಾಹ್ನ ಆಸ್ಪತ್ರೆಯಲ್ಲಿದ್ದ ತನ್ನ ಅನಾರೋಗ್ಯ ಪೀಡಿತ ತನ್ನ ಅಕ್ಕನಿಗೆ ಊಟ ಕೊಟ್ಟು ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಕಾನ್‌ಸ್ಟೇಬಲ್ ಅಭಿಷೇಕ್ ಆಕೆಯನ್ನು ಬೈಕ್‌ನಲ್ಲಿ ಅಪಹರಿಸಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳದ ಸಿಸಿಟಿವಿ ವಿಡಿಯೋಗಳನ್ನು ಪರಿಶೀಲಿಸಿದಾಗ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿಯೊಬ್ಬ ಬಾಲಕಿಯನ್ನು ಹಿಂಬಾಲಿಸುತ್ತಿರುವುದು ಪತ್ತೆಯಾಗಿದೆ. ಕೊನೆಗೆ ವಿಡಿಯೋದಲ್ಲಿ ಕಾಣಿಸಿಕೊಂಡ ಬೈಕ್ ಅಭಿಷೇಕ್ ಯಾದವ್‌ಗೆ ಸೇರಿದ್ದು ಎಂದು ಗೊತ್ತಾಗಿದೆ. ವಿಚಾರಣೆ ವೇಳೆ ಆತನೇ ಪೊಲೀಸರನ್ನು ಬಾಲಕಿಯ ಮೃತದೇಹವಿದ್ದ ಸ್ಥಳಕ್ಕೆ ಕರೆದೊಯ್ದಿದ್ದಾನೆ ಎಂದು ವರದಿಯಾಗಿದೆ.

ಗೋರಖ್‌ಪುರದ ಹಿರಿಯ ಪೊಲೀಸ್ ಅಧೀಕ್ಷಕರಾದ (ಎಸ್‌ಎಸ್‌ಪಿ) ಕೌಸ್ತುಭ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ, ಆರೋಪಿ ಅಭಿಷೇಕ್‌ನನ್ನು ಸೇವೆಯಿಂದ ವಜಾಗೊಳಿಸುವ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

“ಇಂತಹ ಭೀಕರ ಕೃತ್ಯದಲ್ಲಿ ಭಾಗಿಯಾದ ನಂತರ ಆತ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಅರ್ಹನಲ್ಲ. ಆತ ಒಬ್ಬ ಹ್ಯಾಬಿಚುಯಲ್ ಅಪರಾಧಿಯಾಗಿದ್ದು, ಕಳೆದ ವರ್ಷ ಜನವರಿಯಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿದ್ದ. ಬಳಿಕ ಆತನನ್ನು ಅಮಾನತುಗೊಳಿಸಲಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸೆಪ್ಟೆಂಬರ್‌ನಲ್ಲಿ ಆತನ ಅಮಾನತು ಆದೇಶವನ್ನು ರದ್ದುಗೊಳಿಸಲಾಗಿತ್ತು. ನಂತರ ಡಯಲ್ 112 ವಿಭಾಗದಲ್ಲಿ ಕರ್ತವ್ಯದಲ್ಲಿದ್ದ” ಎಂದು ಎಸ್‌ಎಸ್‌ಪಿ ವಿವರಿಸಿದ್ದಾರೆ.

ಗೋರಖ್‌ಪುರ ಎಸ್‌ಎಸ್‌ಪಿ ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿಯನ್ನು ಪತ್ತೆಹಚ್ಚಲು ತನಿಖಾಧಿಕಾರಿಗಳು 200ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಾನ್‌ಸ್ಟೇಬಲ್ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್‌ಎಸ್‌ಎ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎನ್‌ಡಿಟಿವಿ ವರದಿ ಮಾಡಿದೆ. ಹಿಂದಿನ ದೌರ್ಜನ್ಯದ ಆರೋಪದ ನಂತರ ಆತನನ್ನು ಜೈಲಿಗೆ ಅಟ್ಟಲಾಗಿತ್ತು ಮತ್ತು ಕರ್ತವ್ಯದಿಂದ ಅಮಾನತುಗೊಳಿಸಲಾಗಿತ್ತು. ಆದರೆ, ನಂತರ ಅಮಾನತು ಆದೇಶವನ್ನು ಹಿಂಪಡೆಯಲಾಗಿತ್ತು ಎಂದು ವರದಿ ತಿಳಿಸಿದೆ.

ಬುಧವಾರ ಬಾಲಕಿ ನಾಪತ್ತೆಯಾದ ಬಳಿಕ, ಆಕೆಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಕೈಗೊಂಡು ಆರೋಪಿ ಅಭಿಷೇಕ್ ಯಾದವ್‌ನನ್ನು ಬಂಧಿಸಿದ್ದಾರೆ. ಆತನ ಮಾಹಿತಿ ಮೇರೆಗೆ ಬಾಲಕಿಯ ಶವ ಪತ್ತೆ ಹಚ್ಚಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...