Homeಮುಖಪುಟಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

- Advertisement -
- Advertisement -

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ ಅನು ಗ್ರೋವರ್ ಬಲಿಗಾ ಅವರನ್ನು ವರ್ಗಾವಣೆ ಮಾಡಿದೆ. ಒಟ್ಟು 138 ನ್ಯಾಯಾಂಗ ಅಧಿಕಾರಿಗಳನ್ನು ಒಳಗೊಂಡ ಬೃಹತ್ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಬಲಿಗಾ ಅವರ ವರ್ಗಾವಣೆ ನಡೆದಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಪಬ್ಲಿಕ್ ಪರೀಕ್ಷೆಗಳಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ಅಕ್ರಮಗಳಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಾಗಿ ದೆಹಲಿ ಹೈಕೋರ್ಟ್ ಜುಲೈ 23ರಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿತ್ತು. ಜುಲೈ 2ರಂದು ನ್ಯಾಯಾಧೀಶೆ ಬಲಿಗಾ ಅವರು ಈ ನ್ಯಾಯಾಲಯದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು.

ದೆಹಲಿ ಹೈಕೋರ್ಟ್ ಹೊರಡಿಸಿರುವ ವರ್ಗಾವಣೆ ಆದೇಶದ ಪ್ರಕಾರ, ನ್ಯಾಯಾಧೀಶೆ ಬಲಿಗಾ ಅವರನ್ನು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾಯ್ದೆಯಡಿ ರಚಿಸಲಾದ ವಿಶೇಷ ನ್ಯಾಯಾಲಯಕ್ಕೆ ನೇಮಿಸಲಾಗಿದೆ. ಇವರೊಂದಿಗೆ ವಿಶೇಷ ನ್ಯಾಯಾಧೀಶರುಗಳಾದ ವಿಕಾಸ್ ಧುಲ್, ಪ್ರಶಾಂತ್ ಶರ್ಮಾ, ಪುಲಸ್ತ್ಯ ಪ್ರಮಾಚಲ, ಕಿರಣ್ ಬನ್ಸಾಲ್ ಮತ್ತು ಅಮಿತ್ ಬನ್ಸಾಲ್ ಅವರನ್ನು ಸಹ ಎನ್‌ಐಎ ನ್ಯಾಯಾಲಯಗಳಿಗೆ ವರ್ಗಾಯಿಸಲಾಗಿದೆ ಎಂದು ವರದಿ ತಿಳಿಸಿದೆ.

ಈ ಹಿಂದೆ ನೀಟ್ ಸೇರಿದಂತೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ವಿಶೇಷ ನ್ಯಾಯಾಧೀಶ ಅಜಯ್ ಗುಪ್ತಾ ಅವರು, ನ್ಯಾಯಾಧೀಶೆ ಬಲಿಗಾ ಅವರಿಂದ ಈ ತ್ವರಿತಗತಿ ನ್ಯಾಯಾಲಯದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆಗಳ ವಿರುದ್ಧದ ವ್ಯಾಪಕ ಪ್ರತಿಭಟನೆಗಳು ಮತ್ತು ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಡಗಳು ಹೆಚ್ಚಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ತ್ವರಿತಗತಿ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

ಪಬ್ಲಿಕ್ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024 ಮತ್ತು ಇತರ ಸಂಬಂಧಿತ ಅಪರಾಧಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಗಾಗಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಈ ತ್ವರಿತಗತಿ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅಂತಹ ಎಲ್ಲಾ ಪ್ರಕರಣಗಳನ್ನು ಈ ನ್ಯಾಯಾಲಯಕ್ಕೆ ವರ್ಗಾಯಿಸಲು ನಿರ್ದೇಶಿಸಲಾಗಿದೆ.

ಆದಾಗ್ಯೂ, ಮತ್ತೊಂದು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅತ್ಯಂತ ಮೊದಲ ವಿಚಾರಣೆಗೆ ಹಾಜರಾಗಲು ವಿಫಲವಾದ ಕಾರಣ, ದೆಹಲಿಯ ಈ ತ್ವರಿತಗತಿ ನ್ಯಾಯಾಲಯ ಜುಲೈ 27ರಂದು ಆರಂಭದಲ್ಲೇ ಅಡಚಣೆಯನ್ನು ಎದುರಿಸಿತ್ತು ಎಂದು ದಿ ವೈರ್ ಈ ಹಿಂದೆ ವರದಿ ಮಾಡಿತ್ತು. ಆ ದಿನ, ಪ್ರಕರಣಕ್ಕೆ ಸಂಬಂಧಿಸಿದ ಎರಡು ಜಾಮೀನು ಅರ್ಜಿಗಳ ವಿಚಾರಣೆ ನಡೆಯಬೇಕಿತ್ತು.

ಪ್ರತಿವಾದಿ ವಕೀಲರ ಕೋರಿಕೆಯ ಮೇರೆಗೆ ನ್ಯಾಯಾಲಯದ ನಡಾವಳಿಗಳನ್ನು ಮುಂದೂಡಲಾಗಿತ್ತು. ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ಹಾಗೂ ಇಬ್ಬರು ಆರೋಪಿಗಳ ಜಾಮೀನು ಅರ್ಜಿಗಳ ಪರಿಶೀಲನೆಗಾಗಿ ಈ ವಿಷಯವನ್ನು ಆಗಸ್ಟ್ 3ಕ್ಕೆ ಪಟ್ಟಿ ಮಾಡಲಾಗಿದೆ.

ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ನಡೆಸುವಲ್ಲಿ ಸರಣಿ ವೈಫಲ್ಯಗಳು ಉಂಟಾದ ನಂತರ, ಶೈಕ್ಷಣಿಕ ಸುಧಾರಣೆಗಳಿಗಾಗಿ ಪ್ರತಿಭಟನೆಗಳ ನೇತೃತ್ವ ವಹಿಸಿದ್ದ ಕಾಕ್ರೋಚ್ ಜನತಾ ಪಾರ್ಟಿಯು ಈ ತ್ವರಿತಗತಿ ನ್ಯಾಯಾಲಯವನ್ನು ಕೇವಲ ಒಂದು ‘ತಾತ್ಕಾಲಿಕ ಉಪಶಮನ’ ಎಂದು ಹೇಳಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಅವರು ಕೂಡ ಪ್ರಶ್ನೆ ಪತ್ರಿಕೆ ಸೋರಿಕೆ ಬಿಕ್ಕಟ್ಟಿಗೆ ತ್ವರಿತಗತಿ ನ್ಯಾಯಾಲಯವನ್ನು ಒಂದು ಪರಿಹಾರವಾಗಿ ತಂದಿದ್ದಕ್ಕಾಗಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಪ್ರಶ್ನೆ ಪತ್ರಿಕೆ ಸೋರಿಕೆ ಬಿಕ್ಕಟ್ಟಿಗೆ ತ್ವರಿತಗತಿ ನ್ಯಾಯಾಲಯಗಳೇ ಪರಿಹಾರ ಎಂದು ಮೋದಿ ಸರ್ಕಾರ ಯಾವ ಮುಖ ಇಟ್ಟುಕೊಂಡು ಡಂಗುರ ಸಾರುತ್ತಿದೆ? ಈ ಪ್ರಕರಣಗಳ ತನಿಖೆ ಮತ್ತು ಕಾನೂನು ಪ್ರಕ್ರಿಯೆ ನಡೆಸುವಲ್ಲಿ ಅದರದೇ ಆದ ಸಿಬಿಐ ಶೂನ್ಯ ಆಸಕ್ತಿಯನ್ನು ಪ್ರದರ್ಶಿಸುತ್ತಿದೆ” ಎಂದು ಜೈರಾಮ್ ರಮೇಶ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...