Homeಮುಖಪುಟಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

- Advertisement -
- Advertisement -

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ.

ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ ಗೆಲ್ಲುತ್ತಿದ್ದ ಬಿಹಾರದ ಬಂಕಿಪುರದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಗೆಲುವು ಸಾಧಿಸಿದೆ. ಈ ಗೆಲುವು ಪ್ರಶಾಂತ್ ಕಿಶೋರ್ ಮತ್ತು ಅವರ ಪಕ್ಷದ ಇಬ್ಬರಿಗೂ ಚುನಾವಣಾ ರಾಜಕೀಯದ ಮೊಟ್ಟಮೊದಲ ಅಧಿಕೃತ ಗೆಲುವಾಗಿದೆ.

ಜನ ಸುರಾಜ್ ಪಕ್ಷವನ್ನು ಅಕ್ಟೋಬರ್ 2024ರಲ್ಲಿ ಪ್ರಶಾಂತ್ ಕಿಶೋರ್ ಸ್ಥಾಪಿಸಿದರು. ನವೆಂಬರ್ 2025ರಲ್ಲಿ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು 238 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತಾದರೂ, ಒಂದು ಸ್ಥಾನದಲ್ಲೂ ಗೆಲ್ಲಲಾಗದೆ ಸಂಪೂರ್ಣವಾಗಿ ಹಿನ್ನಡೆ ಅನುಭವಿಸಿತ್ತು. ಆ ಚುನಾವಣೆಯಲ್ಲಿ ಖಾತೆ ತೆರೆಯದ ಪಕ್ಷಕ್ಕೆ, ಈಗ ಬಂಕಿಪುರ ಉಪಚುನಾವಣೆಯ ಮೂಲಕ ಬಿಹಾರ ವಿಧಾನಸಭೆಯಲ್ಲಿ ಮೊದಲ ಶಾಸಕ ಸ್ಥಾನ ಸಿಕ್ಕಂತಾಗಿದೆ.

ಇಷ್ಟು ದಿನ ತೆರೆಮರೆಯ ರಾಜಕೀಯ ತಂತ್ರಜ್ಞರಾಗಿ (Political Strategist) ದೇಶದ ವಿವಿಧ ಪ್ರಮುಖ ಪಕ್ಷಗಳಿಗೆ ಚುನಾವಣೆ ಗೆಲ್ಲಿಸಿಕೊಡುತ್ತಿದ್ದ ಪ್ರಶಾಂತ್ ಕಿಶೋರ್ ಅವರು, ತಮ್ಮ ಜೀವಮಾನದಲ್ಲೇ ಮೊದಲ ಬಾರಿಗೆ ನೇರವಾಗಿ ಚುನಾವಣಾ ಕಣಕ್ಕಿಳಿದಿದ್ದು ಇದೇ ಮೊದಲ ಬಾರಿಗೆ. ಹೀಗಾಗಿ ಅಭ್ಯರ್ಥಿಯಾಗಿ ಇದು ಅವರ ಮೊದಲ ವೈಯಕ್ತಿಕ ಗೆಲುವಾಗಿದೆ.

2025ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ವತಃ ಸ್ಪರ್ಧಿಸದೇ ಇದ್ದದ್ದೇ ಪಕ್ಷದ ಸೋಲಿಗೆ ಪ್ರಮುಖ ಕಾರಣ ಎಂದು ಪ್ರಶಾಂತ್ ಕಿಶೋರ್ ಒಪ್ಪಿಕೊಂಡಿದ್ದರು. ಆ ತಪ್ಪನ್ನು ತಿದ್ದಿಕೊಳ್ಳಲು ಈ ಉಪಚುನಾವಣೆಯಲ್ಲಿ ಸ್ವತಃ ತಾವೇ ಅಖಾಡಕ್ಕಿಳಿದು ಯಶಸ್ವಿಯಾಗಿದ್ದಾರೆ.

ಬಿಜೆಪಿಯ ಹಾಲಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರ ಬಂಕಿಪುರ

ಬಿಜೆಪಿಯ ಹಿರಿಯ ನಾಯಕರಾದ ನಿತಿನ್ ನಬೀನ್ ಅವರು ಡಿಸೆಂಬರ್ 2025ರಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಹಾಗೂ ಜನವರಿ 2026ರಲ್ಲಿ ಅಧಿಕೃತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದರು. ಇದಾದ ಬಳಿಕ ಏಪ್ರಿಲ್ 2026ರಲ್ಲಿ ಅವರು ಸಂಸತ್ತಿನ ಮೇಲ್ಮನೆಯಾದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು.

ಸಂಸದರಾಗಿ (ರಾಜ್ಯಸಭಾ ಸದಸ್ಯರಾಗಿ) ಆಯ್ಕೆಯಾದ ಹಿನ್ನೆಲೆಯಲ್ಲಿ, ಅವರು ತಾವು ಪ್ರತಿನಿಧಿಸುತ್ತಿದ್ದ ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಮಾರ್ಚ್ 30, 2026 ರಂದು ಅಧಿಕೃತವಾಗಿ ರಾಜೀನಾಮೆ ನೀಡಿದರು.

ತನ್ನ ಪಕ್ಷದ ಮೊದಲ ಗೆಲುವು, ಅಭ್ಯರ್ಥಿಯಾಗಿ ಮೊದಲ ಗೆಲುವು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕ್ಷೇತ್ರದಲ್ಲಿ ಗೆಲುವು, ಹೀಗೆ ಬಂಕಿಪುರದ ಗೆಲುವು ಪ್ರಶಾಂತ್ ಕಿಶೋರ್ ಪಾಲಿಗೆ ಒಂದು ಐತಿಹಾಸಿಕ ಗೆಲುವಾಗಿದೆ.

ಗುಜರಾತ್‌ನ ಮಂಜಲ್‌ಪುರ

ಗುಜರಾತ್‌ನ ಮಂಜಲ್‌ಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭಿಖಾಭಾಯಿ ರಬರಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸತೇಂದ್ರಭಾಯಿ ಪಟೇಲ್ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ 55,481 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ 24,851 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ಅಂತರ 30,630 ಇದ್ದು, 2,247 ನೋಟಾ ಮತಗಳು ಚಲಾವಣೆಯಾಗಿವೆ.

ಮಂಜಲ್‌ಪುರ ವಿಧಾನಸಭಾ ಕ್ಷೇತ್ರದ ಹಿರಿಯ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಯೋಗೇಶ್ ಪಟೇಲ್ ಅವರು ಜೂನ್ 2, 2026 ರಂದು ದೀರ್ಘಕಾಲದ ಕಾಯಿಲೆಯಿಂದ ನಿಧನರಾದ ಕಾರಣ ಈ ಕ್ಷೇತ್ರದಲ್ಲಿ ಉಪಚುನಾವಣೆ ನಡೆದಿತ್ತು.

ಮಧ್ಯಪ್ರದೇಶದ ದಾಟಿಯಾ

fದಾಟಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ರಾಜೇಂದ್ರ ಭಾರ್ತಿ ಅವರ ಶಾಸಕ ಸ್ಥಾನ ರದ್ದಾದ ಕಾರಣ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘನಶ್ಯಾಮ್ ಸಿಂಗ್ ಗೆಲುವು ದಾಖಲಿಸಿದ್ದಾರೆ. ಘನಶ್ಯಾಮ್ ಅವರು 66,757 ಮತಗಳನ್ನು ಪಡೆದರೆ, ಪ್ರತಿಸ್ಪರ್ದಿ ಬಿಜೆಪಿ ಅಭ್ಯರ್ಥಿ ಅಶುತೋಷ್ ತಿವಾರಿ ಅವರು 60,741 ಮತಗಳನ್ನು ಗಳಿಸಿದ್ದಾರೆ. ಇಲ್ಲಿ ಗೆಲುವಿನ ಅಂತರ 6,016 ಮತಗಳು ಮಾತ್ರ. ಅಲ್ಲದೆ, ಬರೋಬ್ಬರಿ 21 ಅಭ್ಯರ್ಥಿಗಳು ಕಣದಲ್ಲಿದ್ದರು. 456 ನೋಟಾ ಮತಗಳು ಕೂಡ ಚಲಾವಣೆಯಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...