Homeಮುಖಪುಟನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

- Advertisement -
- Advertisement -

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ ಎಂದು ಆಂದೋಲನದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ತಮ್ಮ ತವರೂರಾದ ಛತ್ರಪತಿ ಸಂಭಾಜಿನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿನ ರಾಜಕೀಯ ವ್ಯವಸ್ಥೆಯ ಕುಸಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಇಡಿ (ED) ಮತ್ತು ಸಿಬಿಐ (CBI) ನಂತಹ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ಪಕ್ಷಗಳನ್ನು ಹೇಗೆ ಒಡೆಯಲಾಗುತ್ತಿದೆ ಎಂಬುದನ್ನು ದೇಶ ನೋಡುತ್ತಿದೆ. ಚುನಾವಣೆಗಳಲ್ಲಿ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗುತ್ತಿದೆ. ಜನರು ಇಡೀ ರಾಜಕಾರಣದ ಮೇಲಿನ ನಂಬಿಕೆಯನ್ನೇ ಕಳೆದುಕೊಂಡಿರುವ ಈ ಹಂತದಲ್ಲಿ, ಮತ್ತೊಂದು ರಾಜಕೀಯ ಪಕ್ಷವನ್ನು ಕಟ್ಟಿ ನಾವೇನು ಮಾಡಲು ಸಾಧ್ಯ? ಎಂದು ದೀಪ್ಕೆ ಪ್ರಶ್ನಿಸಿದ್ದಾರೆ.

ದೇಶದ ನ್ಯಾಯಾಂಗ, ಚುನಾವಣಾ ವ್ಯವಸ್ಥೆ ಹಾಗೂ ಮಾಧ್ಯಮಗಳ ಮೇಲೂ ಸಾರ್ವಜನಿಕರು ವಿಶ್ವಾಸ ಕಳೆದುಕೊಳ್ಳುತ್ತಿರುವ ಇಂದಿನ ಆತಂಕಕಾರಿ ಪರಿಸ್ಥಿತಿಯಲ್ಲಿ, ದೇಶಕ್ಕೆ ನೈಜ ಮತ್ತು ಬಲವಾದ ಜನಾಂದೋಲನದ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ಅಮೆರಿಕದಲ್ಲಿ ವ್ಯಾಸಂಗ ಮಾಡಲು ತಮಗೆ ಹಣ ಎಲ್ಲಿಂದ ಬಂತು ಎಂಬ ವಿರೋಧಿಗಳ ದೂರಿನ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅಭಿಜೀತ್ ದೀಪ್ಕೆ, ನನ್ನ ವಿದ್ಯಾರ್ಥಿವೇತನ (ಸ್ಕಾಲರ್‌ಶಿಪ್) ಮತ್ತು ಶೈಕ್ಷಣಿಕ ಸಾಲದ (Education Loan) ಪತ್ರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ನಾನು ಸದಾ ಸಿದ್ಧನಿದ್ದೇನೆ. ಆದರೆ ‘ಚಕ್ರವರ್ತಿ’ಯಂತಿರುವ ದೇಶದ ನಾಯಕರು ತಮ್ಮ ಪದವಿ ಪ್ರಮಾಣಪತ್ರವನ್ನು ದೇಶಕ್ಕೆ ತೋರಿಸಲು ಸಿದ್ಧರಿದ್ದಾರೆಯೇ? ಎಂದು ಪರೋಕ್ಷವಾಗಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಯುವ ಆಂದೋಲನದ ಮುಂದಿನ ಹೆಜ್ಜೆಗಳ ಬಗ್ಗೆ ಚರ್ಚಿಸಲು ಸಿಜೆಪಿ ಸಂಸ್ಥಾಪಕರು, ವಕ್ತಾರರು ಮತ್ತು ಸಾಂಸ್ಥಿಕ ನಾಯಕರು ಪಾಲ್ಗೊಳ್ಳುವ ಎರಡು ದಿನಗಳ ಕಾರ್ಯತಂತ್ರ ಸಭೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯುದ್ದಕ್ಕೂ ಶ್ರಮಿಸಿದ 50 ಪ್ರಮುಖ ಸ್ವಯಂಸೇವಕರು ಸೇರಿದಂತೆ ಹಲವು ಪಾಲುದಾರರೊಂದಿಗೆ ಸಿಜೆಪಿ ತಂಡದ ಸದಸ್ಯರು ಸಮಾಲೋಚನೆ ನಡೆಸುತ್ತಿದ್ದಾರೆ.

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಕಾರಣವಾದ ಯಶಸ್ವಿ ಪ್ರತಿಭಟನೆಯ ನಂತರ, ಯುವಜನರಲ್ಲಿ ದೇಶದ ಭವಿಷ್ಯದ ಬಗ್ಗೆ ಹೊಸ ಆಶಾವಾದ ಮೂಡಿದೆ. ಈ ಹಿನ್ನೆಲೆಯಲ್ಲಿ, ಕಾರ್ಯತಂತ್ರ ಸಭೆಯ ಬಳಿಕ ದೇಶಾದ್ಯಂತ ಇರುವ ತನ್ನ ಸ್ವಯಂಸೇವಕರನ್ನು ತಲುಪಲು ಸಿಜೆಪಿ ಯೋಜಿಸಿದ್ದು, ಯುವಜನರ ಅಗತ್ಯಗಳು ಮತ್ತು ಆಕಾಂಕ್ಷೆಗಳನ್ನು ಅರಿಯಲು ‘ಅಖಿಲ ಭಾರತ ಆಲಿಸುವಿಕೆ ಪ್ರವಾಸ’ (Nationwide Listening Tour) ಆಯೋಜಿಸಲು ನಿರ್ಧರಿಸಿದೆ.

ಈ ಕುರಿತು ಮಾತನಾಡಿದ ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್, ಯುವಕರು ಒಗ್ಗೂಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಈ ಅಹಂಕಾರಿ ಸರ್ಕಾರದ ಸೋಲು ಸಾಬೀತುಪಡಿಸಿದೆ. ಯುವಜನರ ನಿರೀಕ್ಷೆಗಳನ್ನು ಅರ್ಥಪೂರ್ಣ ಕಾರ್ಯಗಳಾಗಿ ಪರಿವರ್ತಿಸಲು ನಮ್ಮ ತಂಡವು ಅತ್ಯುತ್ತಮ ಮಾರ್ಗವನ್ನು ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...