Homeಮುಖಪುಟಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ (ಆ.4) ಪೊಲೀಸರಿಗೆ ನಿರ್ದೇಶನ ನೀಡಿದೆ.

ತಂಜಾವೂರಿನಲ್ಲಿ ಸೋಮವಾರ (ಆ.3) ನಡೆದ ಕಾವೇರಿ ಪ್ರತಿಭಟನೆಯಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉದಯನಿಧಿ ವಿರುದ್ದ ಹಲವು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಉದಯನಿಧಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮೇಲಿನಂತೆ ಆದೇಶಿಸಿದೆ.

ಉದಯನಿಧಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಕೆ. ಇಳಂಥಿರೆಯನ್ ಅವರು, ವಿಚಾರಣೆಗೆ ಪೊಲೀಸರೊಂದಿಗೆ ಸಂಪೂರ್ಣವಾಗಿ ಸಹಕರಿಸುವಂತೆ ಅವರಿಗೆ ಸೂಚಿಸಿದ್ದಾರೆ.

ಈಗಾಗಲೇ ಉದಯನಿಧಿ ಅವರನ್ನು ಪೊಲೀಸರು ಬಂಧಿಸಿರುವುದರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಿಂಧುವಾಗುವುದಿಲ್ಲ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು. ಆದಾಗ್ಯೂ, ಪ್ರಕರಣದ ಸತ್ಯಾಸತ್ಯತೆ ಮತ್ತು ಸಂದರ್ಭಗಳನ್ನು ಪರಿಗಣಿಸಿ ನ್ಯಾಯಾಲಯವು ಜಾಮೀನು ನೀಡಬಹುದು ಎಂದು ತಿಳಿಸಿದ್ದಾರೆ.

ಅಡ್ವೊಕೇಟ್ ಜನರಲ್ ವಿಜಯ್ ನಾರಾಯಣ್ ಅವರು ಉದಯನಿಧಿ ಸ್ಟಾಲಿನ್ ಅವರನ್ನು ಈಗಾಗಲೇ ಬಂಧಿಸಲಾಗಿದ್ದು, ವಿಚಾರಣೆಗಾಗಿ ತಂಜಾವೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸರ್ಕಾರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಬಯಸುವುದಿಲ್ಲ. ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ, ವಿಚಾರಣೆಗೆ ಪೊಲೀಸರೊಂದಿಗೆ ಸಹಕರಿಸುವಂತೆ ಉದಯನಿಧಿ ಅವರಿಗೆ ನಿರ್ದೇಶನ ನೀಡುವಂತೆ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಮಂಗಳವಾರ (ಆ.4) ಬೆಳಿಗ್ಗೆ ಸುಮಾರು 11 ಗಂಟೆಗೆ ತಂಜಾವೂರು ಮತ್ತು ನೀಲಂಕರೈ ಪೊಲೀಸರ ಜಂಟಿ ತಂಡವು ಉದಯನಿಧಿ ಅವರನ್ನು ನೀಲಂಕರೈನ ಈಸ್ಟ್ ಕೋಸ್ಟ್ ರೋಡ್‌ನಲ್ಲಿರುವ ಅವರ ನಿವಾಸದಿಂದ ವಿಚಾರಣೆಗಾಗಿ ಬಂಧಿಸಿದೆ. ಉದಯನಿಧಿ ಅವರ ಬಂಧನ ಡಿಎಂಕೆ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಉದಯನಿಧಿ ಅವರ ಬಂಧನ ವಿರೋಧಿಸಿ ಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ, ಇತ್ತ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕಾರ್ಯಕರ್ತರು ಪ್ರತಿ ಪ್ರತಿಭಟನೆ ನಡೆಸಿದ್ದರಿಂದ ತಂಜಾವೂರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸ್ ಮೂಲಗಳ ಪ್ರಕಾರ, ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡಿನಾದ್ಯಂತ ಉದಯನಿಧಿ ವಿರುದ್ಧ ಇದುವರೆಗೆ ಆರು ಎಫ್‌ಐಆರ್‌ಗಳು ದಾಖಲಾಗಿವೆ. ಟಿವಿಕೆ ಪಕ್ಷದ ಮಹಿಳಾ ಘಟಕದ ಸಂಘಟಕಿ ನೀಡಿದ ದೂರಿನ ಆಧಾರದ ಮೇಲೆ ತಂಜಾವೂರಿನಲ್ಲಿ ಪ್ರಕರಣ ದಾಖಲಾಗಿದ್ದು, ಅವರ ಹೇಳಿಕೆಗಳು ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಮತ್ತು ಅವಹೇಳನಕಾರಿಯಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...