Homeಮುಖಪುಟ'ನುಡಿಯು ಸಿರಿಯಲ್ಲ ಬದುಕು' ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ 'ಜನನುಡಿ-2026'

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

- Advertisement -
- Advertisement -

“ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ,” ಎಂದು ‘ಅಭಿಮತ ಮಂಗಳೂರು’ ಆಶಯ ವ್ಯಕ್ತಪಡಿಸಿದೆ.

ಪ್ರಭುತ್ವದ ನಿರಂಕುಶ ಧೋರಣೆ, ಸಾಂಸ್ಕೃತಿಕ ಕಾರ್ಪೊರೇಟೀಕರಣ ಹಾಗೂ ಸಮಾಜವನ್ನು ವಿಭಜಿಸುವ ಕೋಮುವಾದಿ ಶಕ್ತಿಗಳ ವಿರುದ್ಧ ಸಾಂಸ್ಕೃತಿಕ-ಸಾಹಿತ್ಯಿಕ ಪ್ರತಿರೋಧದ ಸಂಕೇತವಾಗಿ ರೂಪುಗೊಂಡಿದ್ದ ‘ಜನನುಡಿ’ ಮತ್ತೆ ಸದ್ದು ಮಾಡಲು ಸಜ್ಜಾಗಿದೆ. ‘ಅಭಿಮತ ಮಂಗಳೂರು’ ಆಶ್ರಯದಲ್ಲಿ 2026ರ ನವೆಂಬರ್ 28 ಮತ್ತು 29 ರಂದು ಕರಾವಳಿ ನಗರಿ ಮಂಗಳೂರಿನಲ್ಲಿ ‘ಜನನುಡಿ – 2026’ ಅನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 50ಕ್ಕೂ ಹೆಚ್ಚು ಹಿರಿಯ-ಕಿರಿಯ ಬರಹಗಾರರು, ರಂಗಕರ್ಮಿಗಳು, ಚಿಂತಕರು ಮತ್ತು ಜನಪರ ಆಕ್ಟಿವಿಸ್ಟ್‌ಗಳು ಭಾಗವಹಿಸಿದ್ದ ‘ಅಭಿಮತ’ದ ಪ್ರಾಥಮಿಕ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಸಕ್ತ ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಎದುರಿಸುತ್ತಿರುವ ತೀವ್ರ ಸವಾಲುಗಳನ್ನು ಕೇಂದ್ರವಾಗಿಟ್ಟುಕೊಂಡು ಈ ಬಾರಿಯ ‘ಜನನುಡಿ’ ಗೋಷ್ಠಿಗಳನ್ನು ವಿನ್ಯಾಸಗೊಳಿಸಲು ತೀರ್ಮಾನಿಸಲಾಗಿದೆ.

‘ಜನನುಡಿ’ಯ ಹುಟ್ಟು

ಕರಾವಳಿಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಯ ಹೆಸರಿನಲ್ಲಿ ನಡೆಯುತ್ತಿದ್ದ ಅದ್ದೂರಿ, ಕಾರ್ಪೊರೇಟ್ ಪ್ರಾಯೋಜಿತ ಹಾಗೂ ವಿಚಾರಶೂನ್ಯ ಉತ್ಸವಗಳಿಗೆ ಪರ್ಯಾಯವಾಗಿ 2013ರಲ್ಲಿ ‘ಅಭಿಮತ’ ಬಳಗದ ಮೂಲಕ ‘ನುಡಿಯು ಸಿರಿಯಲ್ಲ ಬದುಕು’ ಎಂಬ ಟ್ಯಾಗ್‌ಲೈನ್‌ನೊಂದಿಗೆ ಜನ್ಮತಾಳಿದ್ದು ‘ಜನನುಡಿ’

ಸಾಹಿತ್ಯಿಕ ಆಡಂಬರ, ಬ್ರಾಂಡ್ ಕಟ್ಟುವ ತಂತ್ರ ಹಾಗೂ ಅಧಿಕಾರಸ್ಥರ ಓಲೈಕೆಯ ವಿರುದ್ಧ ‘ಜನರ ಧ್ವನಿ’ಯಾಗಿ ಆರಂಭವಾದ ಈ ಸಮಾವೇಶ, ಪ್ರಭುತ್ವದ ತಪ್ಪು ನೀತಿಗಳು, ಮೌಢ್ಯ (ಉದಾಹರಣೆಗೆ ಮಡೆಸ್ನಾನ), ಕೋಮುವಾದ ಮತ್ತು ಜಾಗತೀಕರಣದ ಪರಿಣಾಮಗಳ ಕುರಿತು ಮುಕ್ತವಾಗಿ ಚರ್ಚಿಸುವ ವೇದಿಕೆಯಾಗಿತ್ತು.

ಡಾ. ಯು.ಆರ್. ಅನಂತಮೂರ್ತಿ, ಜಿ. ರಾಜಶೇಖರ್, ಪ್ರೊ. ರಾಜೇಂದ್ರ ಚೆನ್ನಿ, ಕೆ.ವಿ. ನಾರಾಯಣ, ಡಾ. ಎಚ್.ಎಸ್. ಅನುಪಮಾ, ಸಾರಾ ಅಬೂಬಕರ್, ಪ್ರಕಾಶ್ ರೈ ಮುಂತಾದ ಪ್ರಗತಿಪರ ವೈಚಾರಿಕ ದೈತ್ಯರು ‘ಜನನುಡಿ’ಯ ಗೋಷ್ಠಿಗಳಲ್ಲಿ ಧ್ವನಿಯಾಗಿದ್ದರು. ಯಾವುದೇ ಸರ್ಕಾರಿ ಅನುದಾನ ಅಥವಾ ಕಾರ್ಪೊರೇಟ್ ಹಂಗಿಲ್ಲದೆ, ಪ್ರಗತಿಪರ ಮನಸ್ಸುಗಳ ಸ್ವಯಂಪ್ರೇರಿತ ವಂತಿಗೆಯಿಂದಲೇ ನಡೆದುಬಂದದ್ದು ‘ಜನನುಡಿ’ಯ ಹೆಗ್ಗಳಿಕೆ.

ಕಳೆದ ಕೆಲವು ವರ್ಷಗಳಿಂದ ಸಾಂಸ್ಥಿಕ ತೊಡಕುಗಳು, ಕೋವಿಡ್‌ ಸಂದರ್ಭ ಹಾಗೂ ಸಂಘಟನಾತ್ಮಕ ಹಿನ್ನಡೆಗಳಿಂದಾಗಿ ‘ಜನನುಡಿ’ ನಿರಂತರವಾಗಿ ನಡೆಯಲು ಸಾಧ್ಯವಾಗಿರಲಿಲ್ಲ. ಸಾಂಸ್ಕೃತಿಕ ಚಳವಳಿಗಳಲ್ಲಿ ಉಂಟಾದ ಈ ಶೂನ್ಯತೆಯು ಜನಪರ ಚಳವಳಿಗಳ ಮೇಲೆ ಪರಿಣಾಮ ಬೀರಿತ್ತು. ಆದರೆ, ಇಂದಿನ ಆತಂಕಕಾರಿ ರಾಜಕೀಯ ಮತ್ತು ಸಾಮಾಜಿಕ ಸನ್ನಿವೇಶದಲ್ಲಿ ‘ಜನನುಡಿ’ಯಂತಹ ಮುಕ್ತ, ವೈಚಾರಿಕ ಹಾಗೂ ಜನಪರ ವೇದಿಕೆಯು ಕಾಲದ ಅತ್ಯಂತ ತುರ್ತು ಅಗತ್ಯ ಎಂಬ ಅಭಿಪ್ರಾಯ ನಾಡಿನಾದ್ಯಂತ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ‘ಜನನುಡಿ’ಗೆ ಮರುಜೀವ ನೀಡಲು ಮುಂದಾಗಿರುವ ‘ಅಭಿಮತ’, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸಮಾನಮನಸ್ಕ ಸಂಘಟನೆಗಳು, ಸಾಹಿತಿಗಳು ಮತ್ತು ಚಿಂತಕರನ್ನು ಒಗೂಡಿಸಲು ಯೋಜನೆ ರೂಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...