Homeಮುಖಪುಟಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

- Advertisement -
- Advertisement -

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆರಂಭವಾದ ಸಿಜೆಪಿಯ ಪ್ರಮುಖ ನಾಯಕರ ಕಾರ್ಯತಂತ್ರ ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ದೀಪ್ಕೆ, ಮಾಧ್ಯಮ ಮತ್ತು ನ್ಯಾಯಾಂಗದಂತಹ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಸಾರ್ವಜನಿಕ ನಂಬಿಕೆಯ ಕುರಿತು ಈ ಸಭೆಯಲ್ಲಿ ಮುಖ್ಯವಾಗಿ ಚರ್ಚಿಸಲಾಗುವುದು ಎಂದರು. ಇದರೊಂದಿಗೆ ಎಥೆನಾಲ್ ಮಿಶ್ರಿತ ಇಂಧನದ ಪರಿಣಾಮ ಹಾಗೂ ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗದಂತಹ ನೈಜ ಸಮಸ್ಯೆಗಳ ಕುರಿತೂ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ ಎಂದು ತಿಳಿಸಿದರು.

ಇದೇ ವೇಳೆ, ಇ20 ಪೆಟ್ರೋಲ್ ಬಳಕೆಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಮಾರು 100 ಬೆಂಬಲಿಗರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದತ್ತ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಅಮೆರಿಕದಿಂದ ಎಥೆನಾಲ್ ಖರೀದಿಸಲು ಒಪ್ಪಿಕೊಂಡು ದೇಶದ ಹಿತಾಸಕ್ತಿಯನ್ನು ಬಲಿ ನೀಡಿದೆ ಎಂದು ಕೇಜ್ರಿವಾಲ್ ತೀವ್ರ ಆರೋಪ ಮಾಡಿದರು. ಅಲ್ಲದೆ, ವ್ಯಾಪಕ ವಿರೋಧದ ನಡುವೆಯೂ ಸರ್ಕಾರ ಇ20 ಇಂಧನಕ್ಕಾಗಿ ಹಠ ಹಿಡಿಯುತ್ತಿರುವುದರ ಹಿಂದೆ ‘ಗುಪ್ತ ಕಾರ್ಯಸೂಚಿ’ ಇದೆ ಎಂದು ದೂರಿದರು.

ಮತ್ತೊಂದೆಡೆ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಮ್ಮ ಆಂದೋಲನಕ್ಕೆ ಮಾರ್ಗದರ್ಶಕರಾಗಿ ಮುಂದುವರಿಯಲಿದ್ದು, ಅವರಿಂದ ನಿರಂತರ ಸಲಹೆಗಳನ್ನು ಪಡೆಯಲಾಗುವುದು ಎಂದು ಸಿಜೆಪಿ ಮುಖ್ಯ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ. ಇತ್ತೀಚೆಗೆ ಸಿಜೆಪಿ ನೇತೃತ್ವದಲ್ಲಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಒತ್ತಾಯಿಸಲಾಗುವುದು ಹಾಗೂ ಈ ಕುರಿತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದರು. ದೇಶಾದ್ಯಂತ ನಡೆದ ವಿದ್ಯಾರ್ಥಿ ಚಳವಳಿಯ ವೇಳೆ ಗಾಯಗೊಂಡ ಪ್ರತಿಭಟನಾಕಾರರಿಗೆ ಕಾನೂನು ಮತ್ತು ವೈದ್ಯಕೀಯ ನೆರವು ನೀಡಲು ತಂಡ ಶ್ರಮಿಸುತ್ತಿದೆ ಎಂದೂ ದಾಸ್ ಮಾಹಿತಿ ನೀಡಿದರು.

ಇತ್ತೀಚಿನ ಹೋರಾಟಗಳ ಪರಾಮರ್ಶೆ ನಡೆಸುವುದು, ತಳಮಟ್ಟದಲ್ಲಿ ಸಂಘಟನೆಯನ್ನು ವಿಸ್ತರಿಸುವುದು ಹಾಗೂ ಭವಿಷ್ಯದ ಕಾರ್ಯತಂತ್ರದ ನೀಲನಕ್ಷೆಯನ್ನು ಸಿದ್ಧಪಡಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ದೇಶಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಜನರ ನಿರೀಕ್ಷೆಗಳು ಹೆಚ್ಚಾಗಿವೆ. ಈ ಜವಾಬ್ದಾರಿಯನ್ನು ಅರಿತು ಸಂಘಟನೆಯನ್ನು ಹೇಗೆ ಬೆಳೆಸಬೇಕು ಎಂಬುದನ್ನು ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ದೀಪ್ಕೆ ಹೇಳಿದರು. ಎರಡು ದಿನಗಳ ಕಾಲ ನಡೆಯಲಿರುವ ಈ ಕಾರ್ಯತಂತ್ರ ಸಭೆಯಲ್ಲಿ ಅಭಿಜೀತ್ ದೀಪ್ಕೆ, ಸೌರವ್ ದಾಸ್ ಜೊತೆಗೆ ಆಶುತೋಷ್ ರಾಂಕಾ, ರತ್ನಾ ಸಿಂಗ್ ಸೇರಿದಂತೆ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದಾರೆ.

ಇದೇ ವೇಳೆ, ಜಾರ್ಖಂಡ್‌ನಲ್ಲಿ ರಾಜ್ಯ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಇತರ ನೇಮಕಾತಿ ಪರೀಕ್ಷೆಗಳ ಅಕ್ರಮ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಲು ಜಾರ್ಖಂಡ್‌ಗೆ ತೆರಳುವುದಾಗಿ ದೀಪ್ಕೆ ಪ್ರಕಟಿಸಿದರು. ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಜುಲೈ 29 ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಉದ್ಯೋಗ ಆಕಾಂಕ್ಷಿಗಳು, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಸ್ವತಂತ್ರ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸುತ್ತಿದ್ದು, ಸಿಜೆಪಿ ಅವರ ಪ್ರತಿಯೊಂದು ನ್ಯಾಯಯುತ ಬೇಡಿಕೆಯ ಪರವಾಗಿ ನಿಲ್ಲಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಚುನಾವಣಾ ರಾಜಕೀಯ ಪ್ರವೇಶಿಸುವ ಕುರಿತು ಮಾತನಾಡಿದ ಅವರು, ಸಿಜೆಪಿ ರಾಜಕೀಯ ಪ್ರವೇಶಿಸುವುದಕ್ಕಿಂತ ಮಾಧ್ಯಮಗಳೇ ಹೆಚ್ಚು ಕಾತುರದಿಂದಿದ್ದಂತೆ ಕಾಣುತ್ತಿದೆ ಎಂದರು. ನ್ಯಾಯಾಂಗ, ರಾಜಕಾರಣ, ಮಾಧ್ಯಮ ಹಾಗೂ ಚುನಾವಣಾ ಆಯೋಗಗಳ ಮೇಲಿನ ನಂಬಿಕೆಯನ್ನು ಜನರು ಕಳೆದುಕೊಂಡಿದ್ದಾರೆ. ರಾಜಕೀಯ ಪಕ್ಷಗಳ ಸ್ಥಿತಿ ಶೋಚನೀಯವಾಗಿದ್ದು, ಬೆಳಿಗ್ಗೆ ಜನರು ಒಂದು ಪಕ್ಷಕ್ಕೆ ಮತ ಹಾಕಿದರೆ, ಸಂಜೆಯ ವೇಳೆಗೆ ಇನ್ನಾರದೋ ಸರ್ಕಾರ ರಚನೆಯಾಗುತ್ತದೆ. ಇಂತಹ ಸಂದರ್ಭದಲ್ಲಿ ವ್ಯವಸ್ಥೆಯಲ್ಲಿ ಹೊಣೆಗಾರಿಕೆಯನ್ನು ತರಲು ಬಲವಾದ ಸಾರ್ವಜನಿಕ ಒತ್ತಡದ ಗುಂಪಿನ ಅಗತ್ಯವಿದೆ ಹೊರತು ತಕ್ಷಣಕ್ಕೆ ಸಾಂಪ್ರದಾಯಿಕ ರಾಜಕೀಯ ಪಕ್ಷ ಕಟ್ಟುವ ಯಾವುದೇ ಉದ್ದೇಶ ನಮಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಮುಂದಿನ ದಿನಗಳಲ್ಲಿ ‘ಜೆನ್ ಝೀ’ (Gen Z) ಯುವಜನರ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ಅರಿತು ಸಾಮಾಜಿಕ ಆಂದೋಲನವನ್ನು ಮುನ್ನಡೆಸಲಾಗುವುದು ಎಂದರು.

ಅಮೆರಿಕದಲ್ಲಿದ್ದ ದೀಪ್ಕೆ ಜೂನ್ ತಿಂಗಳಿನಲ್ಲಿ ಭಾರತಕ್ಕೆ ಮರಳಿ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಯುವಜನರ ಬೃಹತ್ ಆಕ್ರೋಶಕ್ಕೆ ಕಾರಣವಾಗಿದ್ದ ಈ ಹೋರಾಟದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ದೇಶದ ವಿವಿಧ ನಗರಗಳಲ್ಲಿ ಈ ಆಂದೋಲನ ಹರಡಿದ್ದ ವೇಳೆ ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಬಿಹಾರದಲ್ಲಿ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪ್ರಕರಣಗಳನ್ನು ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...