Homeಮುಖಪುಟಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಜುಲೈ 29 ರಂದು ರಾಂಚಿಯಲ್ಲಿ ಆರಂಭವಾದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಈಗ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವಾಗಿ ಬದಲಾಗಿದೆ. ಆಗಸ್ಟ್ 6ರಿಂದ ಪ್ರಾರಂಭವಾಗಲಿರುವ ಜಾರ್ಖಂಡ್ ವಿಧಾನಸಭೆಯ ಮುಂಗಾರು ಅಧಿವೇಶನಕ್ಕೂ ಮುನ್ನ, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಆರು ಜನರು ಈ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ.

ಜಾರ್ಖಂಡ್ ಲೋಕತಾಂತ್ರಿಕ ಕ್ರಾಂತಿಕಾರಿ ಮೋರ್ಚಾದ ಸದಸ್ಯ ದೇವೇಂದ್ರ ನಾಥ್ ಮಹತೋ ಅವರ ಉಪವಾಸ ಸತ್ಯಾಗ್ರಹವು ಇಂದು, ಆಗಸ್ಟ್ 5 ರಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಈ ಹೋರಾಟಕ್ಕೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ (ಎಐಎಸ್‌ಎ-ಐಸಾ) ಬೆಂಬಲ ಘೋಷಿಸಿವೆ. ಈ ಸಂಘಟನೆಗಳ ಆಶ್ರಯದಲ್ಲಿ ನಡೆದ ದೇಶವ್ಯಾಪಿ ತೀವ್ರ ಪ್ರತಿಭಟನೆಯು ಇತ್ತೀಚೆಗಷ್ಟೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾಗಿತ್ತು.

ಆಗಸ್ಟ್ 7ರಂದು ವಿಧಾನಸಭೆಗೆ ಮೆರವಣಿಗೆ ನಡೆಸುವುದಾಗಿ ಐಸಾ ಘೋಷಿಸಿದೆ. ವಿದ್ಯಾರ್ಥಿಗಳ ಬೇಡಿಕೆಗಳು ಕೇವಲ 14ನೇ ಜೆಪಿಎಸ್‌ಸಿ ಪರೀಕ್ಷೆಯನ್ನು ರದ್ದುಗೊಳಿಸುವುದಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ಸಂಘಟನೆ ತಿಳಿಸಿದೆ. ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ-ಸಿಜಿಎಲ್, ಜೆಪಿಎಸ್‌ಸಿ-ಜೆಇಟಿ ಸಹಾಯಕ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು ಮತ್ತು ಪೊಲೀಸ್ ನೇಮಕಾತಿ ಪರೀಕ್ಷೆಗಳು ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ನಿಯಮಿತ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಬೇಕು ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರಬೇಕು ಎಂದು ಸಂಘಟನೆಯು ಒತ್ತಾಯಿಸಿದೆ.

ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳ ಬೇಡಿಕೆಗಳಿಗೆ ಬೆಂಬಲವಾಗಿ ತಿರಂಗಾ ಮಾರ್ಚ್ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲು ಶೀಘ್ರದಲ್ಲೇ ಕೋರ್ ಕಮಿಟಿ ಸಭೆ ನಡೆಸಲಾಗುವುದು ಎಂದು ಜೆಪಿಎಸ್‌ಸಿ-ಜೆಎಸ್‌ಎಸ್‌ಸಿ ಸುಧಾರಣಾ ಮಂಚ್ ವಕ್ತಾರ ಜೀವನ್ ಕುಮಾರ್ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ದೇವೇಂದ್ರ ನಾಥ್ ಮಹತೋ ಯಾರು?

ಆಗಸ್ಟ್ 2 ರಂದು ತಮ್ಮ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿರುವ ಮಹತೋ ಅವರು, ವಾರಗಟ್ಟಲೆ ಪ್ರತಿಭಟನೆ ನಡೆಸಿದರೂ ಸರ್ಕಾರ ಯಾವುದೇ ದೃಢವಾದ ಕ್ರಮ ಕೈಗೊಂಡಿಲ್ಲ, ಹೀಗಾಗಿ ತಮಗೆ ಬೇರೆ ದಾರಿ ಉಳಿದಿಲ್ಲ ಎಂದು ಹೇಳಿದ್ದಾರೆ. ಈ ಚಳುವಳಿಯು ಈಗ ಸಾವಿರಾರು ಅಭ್ಯರ್ಥಿಗಳ ಪಾಲಿಗೆ “ಮಾಡು ಇಲ್ಲವೇ ಮಡಿ” ಹಂತವನ್ನು ತಲುಪಿದೆ ಎಂದು ಅವರು ತಿಳಿಸಿದ್ದಾರೆ.

ಚಳುವಳಿಯನ್ನು ಶಾಂತಿಯುತ ಮತ್ತು ಸಾಂವಿಧಾನಿಕವಾಗಿ ಮುಂದುವರಿಸಲು ಬೆಂಬಲಿಗರಲ್ಲಿ ಮನವಿ ಮಾಡಿರುವ ಮಹತೋ, ಈ ಹೋರಾಟವು ಯಾವುದೇ ಒಬ್ಬ ವ್ಯಕ್ತಿಗಾಗಿ ಅಲ್ಲ, ಬದಲಿಗೆ ಜಾರ್ಖಂಡ್‌ನ ಲಕ್ಷಾಂತರ ಯುವಕರ ಭವಿಷ್ಯಕ್ಕಾಗಿ ಎಂದು ಹೇಳಿದ್ದಾರೆ.

ದೆಹಲಿ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರೊಂದಿಗೆ ಮಹತೋ ಅವರು ಇಂದು (ಆಗಸ್ಟ್ 5) ಮಾತನಾಡಿದ್ದಾರೆ ಎಂದು ವರದಿಗಳು ಹೇಳಿವೆ. ವಿಡಿಯೋ ಕಾಲ್ ಮೂಲಕ ನಡೆದ ಈ ಸಂಭಾಷಣೆಯಲ್ಲಿ, ವಾಂಗ್ಚುಕ್ ಅವರು ಪ್ರತಿಭಟನೆ ಮತ್ತು ಮಹತೋ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಜೊತೆಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡ ಅವರು, ಚಳುವಳಿಯನ್ನು ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮುಂದುವರಿಸಲು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ದಿ ವೈರ್ ಹಿಂದಿ ವರದಿಯ ಪ್ರಕಾರ, ಮಹತೋ ಅವರು ರಾಂಚಿ ಜಿಲ್ಲೆಯ ಹಳ್ಳಿಯೊಂದರ ನಿವಾಸಿಯಾಗಿದ್ದಾರೆ. ಅವರು ಬುಂದುವಿನಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಮುಗಿಸಿದ್ದು, ನಂತರ ರಾಂಚಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣವನ್ನು ಪಡೆದಿದ್ದಾರೆ. ಅವರು ಸಂಸ್ಕೃತ ಹಾಗೂ ಬುಡಕಟ್ಟು ಮತ್ತು ಪ್ರಾದೇಶಿಕ ಭಾಷೆಯಾದ ಕುಡ್ಮಾಲಿಯಲ್ಲಿ ಪ್ರಥಮ ದರ್ಜೆಯ ಸ್ನಾತಕೋತ್ತರ ಪದವಿಗಳನ್ನು ಮುಗಿಸಿದ್ದು, ಹಜಾರಿಬಾಗ್‌ನಲ್ಲಿ ಬಿಎಡ್ ಪದವಿಯನ್ನೂ ಸಹ ಪಡೆದಿದ್ದಾರೆ.

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಅವರು ತಮಾರ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2015 ರಿಂದಲೂ ವಿದ್ಯಾರ್ಥಿ ಚಳುವಳಿಗಳೊಂದಿಗೆ ಗುರುತಿಸಿಕೊಂಡಿರುವ ಮಹತೋ, ವಿದ್ಯಾರ್ಥಿವೇತನ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ನಿಯಮಗಳು, ಮೀಸಲಾತಿ ನೀತಿ ಹಾಗೂ ಜೆಪಿಎಸ್‌ಸಿ ಮತ್ತು ಜೆಎಸ್‌ಎಸ್‌ಸಿ ನಡೆಸಿದ ಪರೀಕ್ಷೆಗಳಲ್ಲಿನ ಆಪಾದಿತ ಅಕ್ರಮಗಳಿಗೆ ಸಂಬಂಧಿಸಿದ ಸಮಸ್ಯೆಗಳ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ.

ವಿದ್ಯಾರ್ಥಿಗಳ ಬೇಡಿಕೆ ಏನು?

ಪ್ರತಿಭಟನಾಕಾರರು ಏಪ್ರಿಲ್ 19ರಂದು ನಡೆದ 14ನೇ ಜೆಪಿಎಸ್‌ಸಿ ಸಂಯೋಜಿತ ಪೂರ್ವಭಾವಿ ಪರೀಕ್ಷೆಯನ್ನು (ಪ್ರಿಲಿಮಿನರಿ ಎಕ್ಸಾಮಿನೇಷನ್) ರದ್ದುಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಕಳೆದ ಏಳು ವರ್ಷಗಳಲ್ಲಿ ಜೆಪಿಎಸ್‌ಸಿ ಮತ್ತು ಜೆಎಸ್‌ಎಸ್‌ಸಿ ನಡೆಸಿದ ಎಲ್ಲಾ ನೇಮಕಾತಿ ಪರೀಕ್ಷೆಗಳ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಆಪಾದಿತ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಇತರ ಕೇಂದ್ರ ತನಿಖಾ ಸಂಸ್ಥೆಗಳು ಸಹ ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದರ ಜೊತೆಗೆ, ಒಎಂಆರ್ ಉತ್ತರ ಪತ್ರಿಕೆಗಳಲ್ಲಿ ಐದನೇ ಆಯ್ಕೆಯಾಗಿ ‘ಉತ್ತರಿಸಿಲ್ಲ’ (ನಾಟ್ ಅಟೆಂಪ್ಟೆಡ್) ಎಂಬ ಆಪ್ಷನ್ ಅನ್ನು ಸೇರಿಸಬೇಕು ಮತ್ತು ನೇಮಕಾತಿ ಸಂಸ್ಥೆಗಳಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿದ್ದ ಜೆಪಿಎಸ್‌ಸಿ ಆಕಾಂಕ್ಷಿ ರಾಹುಲ್ ಕುಮಾರ್ ಕ್ರಾಂತಿ ಅವರು, “ಜೆಪಿಎಸ್‌ಸಿ ಪ್ರಶ್ನೆಪತ್ರಿಕೆಗಳು ಹಲವು ಬಾರಿ ಸೋರಿಕೆಯಾಗಿವೆ. ಈ ಬಾರಿ ಅಭ್ಯರ್ಥಿಗಳ ಒಎಂಆರ್ ಶೀಟ್‌ಗಳೇ ಸೋರಿಕೆಯಾಗಿವೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ, ಆದರೆ ನಮಗೆ ಇದರಲ್ಲಿ ತೃಪ್ತಿಯಿಲ್ಲ” ಎಂದು ಹೇಳಿರುವುದಾಗಿ ಪಿಟಿಐ ವರದಿ ಉಲ್ಲೇಖಿಸಿದೆ.

ಜೆಎಸ್‌ಎಸ್‌ಸಿ-ಸಿಜಿಎಲ್ ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ತನಿಖೆಗಳು ಯಾವುದೇ ಫಲಿತಾಂಶವನ್ನು ನೀಡಿಲ್ಲ ಎಂದು ಆರೋಪಿಸಿದ ಅವರು, ಪ್ರಸ್ತುತ ನಡೆಯುತ್ತಿರುವ ತನಿಖೆಯೂ ಸಹ ಅಂತಿಮವಾಗಿ ಮೂಲೆಗುಂಪಾಗಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಕ್ರಾಂತಿ ಅವರು ಮುಂದುವರಿದು, “ಪ್ರಸ್ತುತ ನಡೆಯುತ್ತಿರುವ ಸಿಐಡಿ ತನಿಖೆಯ ಮೇಲಿನ ನಂಬಿಕೆಯನ್ನು ನಾವು ಸಂಪೂರ್ಣವಾಗಿ ಕಳೆದುಕೊಂಡಿದ್ದೇವೆ. ಕಳೆದ ಏಳು ವರ್ಷಗಳಲ್ಲಿ ಜೆಪಿಎಸ್‌ಸಿ ಮತ್ತು ಜೆಎಸ್‌ಎಸ್‌ಸಿ ನಡೆಸಿದ ಎಲ್ಲಾ ನೇಮಕಾತಿ ಪರೀಕ್ಷೆಗಳ ಬಗ್ಗೆ ನಮಗೆ ಸಿಬಿಐ ತನಿಖೆಯಾಗಬೇಕು. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳೂ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿರುವ ಮತ್ತೊಬ್ಬ ವಿದ್ಯಾರ್ಥಿ ಗಿರಿದಿಹ್‌ನ ಅಂಕಿತ್ ಕುಮಾರ್, “ಎರಡೂ ಆಯೋಗಗಳಲ್ಲಿ ನಡೆದಿರುವ ಭ್ರಷ್ಟಾಚಾರದ ಕಾರಣದಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವು ಅಪಾಯದಲ್ಲಿದೆ. ನಮ್ಮಲ್ಲಿ ಬಹುಪಾಲು ಜನರು ರೈತಾಪಿ ಕುಟುಂಬಗಳಿಂದ ಬಂದವರಾಗಿದ್ದಾರೆ. ನಮಗೆ ಕೇವಲ ಅರ್ಹತೆಯ ಆಧಾರದ ಮೇಲೆ ನ್ಯಾಯಯುತವಾದ ಅವಕಾಶ ಸಿಗಬೇಕಷ್ಟೇ ಎಂಬುದು ನಮ್ಮ ಆಶಯವಾಗಿದೆ” ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಂಚಿಯ ಸ್ನೇಹಾ ಎಂಬ ವಿದ್ಯಾರ್ಥಿನಿ ಪಿಟಿಐ ಜೊತೆ ಮಾತನಾಡಿ, “ಆಪಾದಿತ ಅಕ್ರಮಗಳಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು 14ನೇ ಜೆಪಿಎಸ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ನಾನು 2023ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದೇನೆ. ನಮಗೆ ಸಮಾನ ಮತ್ತು ನ್ಯಾಯಯುತ ಅವಕಾಶ ನೀಡದಿದ್ದರೆ, ನಮಗೆ ಕೆಲಸ ಸಿಗುವುದು ಹೇಗೆ? ನಮ್ಮ ಬೇಡಿಕೆಗಳನ್ನು ಆಲಿಸುವಂತೆ ನಾನು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...