Homeಮುಖಪುಟಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

- Advertisement -
- Advertisement -

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ ಲೀಗಲ್ ನೋಟಿಸ್ ನೀಡಿದ್ದು, ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು, ಪ್ರಸಾರ ಮಾಡಿರುವ ಸುದ್ದಿ, ವಿಡಿಯೋಗಳನ್ನು ತೆಗೆದುಹಾಕಬೇಕು ಮತ್ತು 100 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಚೆನ್ನೈ ಮೂಲದ ಕಾನೂನು ಸಂಸ್ಥೆಯ ಮೂಲಕ ಎರಡು ಚಾನೆಲ್‌ಗಳು (ಎನ್‌ಡಿಟಿವಿ ಮತ್ತು ಇಂಡಿಯಾ ಟುಡೇ ಎಂದು ವರದಿಯಾಗಿದೆ), ಅವುಗಳ ಮಾತೃ ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ಆಗಸ್ಟ್ 6ರಂದು ಲೀಗಲ್ ನೋಟಿಸ್‌ಗಳನ್ನು ಕಳುಹಿಸಲಾಗಿದೆ.

ನೋಟಿಸ್‌ಗಳ ಪ್ರಕಾರ, ಎರಡು ಚಾನೆಲ್‌ಗಳು ಆಗಸ್ಟ್ 3ರಂದು ಉದಯನಿಧಿ ಅವರು ಮಾಡಿದ ಭಾಷಣವನ್ನು ತಪ್ಪಾಗಿ ಬಿಂಬಿಸಿ ಪ್ರಸಾರ ಮಾಡುವ ಮೂಲಕ ಅವರ ಹೆಸರಿಗೆ ಕಳಂಕ ತಂದಿವೆ. ಈ ಚಾನೆಲ್‌ಗಳು ಉದಯನಿಧಿ ಮಾತುಗಳನ್ನು ಅರ್ಥೈಸಿದ ರೀತಿಗೆ ಇತರ ರಾಷ್ಟ್ರೀಯ ಮತ್ತು ಪ್ರಾದೇಶಿಕ ಮಾಧ್ಯಮ ಸಂಸ್ಥೆಗಳು ಕೂಡ ಪುಷ್ಠಿ ನೀಡಿವೆ ಎಂದು ಆರೋಪಿಸಲಾಗಿದೆ.

ಮಾಧ್ಯಮ ಸಂಸ್ಥೆಗಳು ತಮ್ಮ ಟೆಲಿವಿಷನ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡುವ ಮೂಲಕ ಹಾಗೂ ತಮ್ಮ ಅಧಿಕೃತ ಮತ್ತು ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮೂಲಕ ಬೇಷರತ್ ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ನೋಟಿಸ್‌ನಲ್ಲಿ ಆಗ್ರಹಿಸಿಲಾಗಿದೆ. ಅಲ್ಲದೆ, ಯೂಟ್ಯೂಬ್ ಮತ್ತು ಇತರ ಎಲ್ಲಾ ಅಧಿಕೃತ ಹಾಗೂ ವೈಯಕ್ತಿಕ ಸಾಮಾಜಿಕ ಜಾಲತಾಣ ವೇದಿಕೆಗಳಿಂದ ನಿರ್ದಿಷ್ಟ ವಿಡಿಯೋಗಳನ್ನು ತಕ್ಷಣವೇ ತೆಗೆದುಹಾಕುವಂತೆ ಒತ್ತಾಯಿಸಲಾಗಿದೆ.

ಇದರ ಜೊತೆಗೆ, ಭವಿಷ್ಯದಲ್ಲಿ ಯಾವುದೇ ರೂಪದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ಈ ರೀತಿಯ ಸುದ್ದಿ ಪ್ರಕಟಿಸದಂತೆ ಅಥವಾ ಹರಡದಂತೆ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್‌ಗಳಲ್ಲಿ ಎಚ್ಚರಿಕೆ ನೀಡಲಾಗಿದೆ.

ಲೀಗಲ್ ನೋಟಿಸ್‌ಗಳು 100 ಕೋಟಿ ರೂಪಾಯಿಗಳ ಪರಿಹಾರವನ್ನು ಸಹ ಕೋರಿದ್ದು, ಈ ಮೊತ್ತವು ವಸೂಲಿಯಾದರೆ, ಪ್ರಸ್ತುತ ಕೃಷಿ ಹಂಗಾಮಿನಲ್ಲಿ ಕುರುವೈ ಬೆಳೆ ಹಾನಿಯಿಂದ ಸಂಕಷ್ಟಕ್ಕೀಡಾದ ರೈತರಿಗೆ ದೇಣಿಗೆಯಾಗಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ಈ ಬೇಡಿಕೆಗಳನ್ನು ಈಡೇರಿಸಲು ಮಾಧ್ಯಮ ಸಂಸ್ಥೆಗಳಿಗೆ ಅಥವಾ ಚಾನೆಲ್‌ಗಳಿಗೆ 48 ಗಂಟೆಗಳ ಕಾಲಾವಕಾಶ ನೀಡಲಾಗಿದ್ದು, ತಪ್ಪಿದಲ್ಲಿ ಸೂಕ್ತ ಸಿವಿಲ್ ಮತ್ತು ಕ್ರಿಮಿನಲ್ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.

ಆಗಸ್ಟ್ 3 ಮತ್ತು ಆಗಸ್ಟ್ 4 ರಂದು ಪ್ರಕಟವಾದ ವಿಡಿಯೋಗಳು ಮತ್ತು ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಈ ನೋಟಿಸ್‌ಗಳನ್ನು ನೀಡಲಾಗಿದ್ದು, ವಿವಾದಕ್ಕೆ ಕಾರಣವಾದ ನಿರ್ದಿಷ್ಟ ಯೂಟ್ಯೂಬ್ ಲಿಂಕ್‌ಗಳನ್ನು ಹಾಕಲಾಗಿದೆ.

ವರದಿಗಳ ಪ್ರಕಾರ, ಶುಕ್ರವಾರದ ವೇಳೆಗೆ ಕಾನೂನು ನೋಟಿಸ್‌ಗಳಿಗೆ ಸಂಬಂಧಿಸಿದಂತೆ ಚಾನೆಲ್‌ಗಳಿಂದ ಯಾವುದೇ ತಕ್ಷಣದ ಸಾರ್ವಜನಿಕ ಪ್ರತಿಕ್ರಿಯೆ ಬಂದಿಲ್ಲ.

ಈ ಪ್ರಕರಣ ಮತ್ತು ಲೀಗಲ್‌ ನೋಟಿಸ್‌ಗಳು ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ಉದಯನಿಧಿ ನೀಡಿದ ಹೇಳಿಕೆಗೆ ಸಂಬಂಧಿಸಿದೆ. ಇದೇ ವಿಚಾರವಾಗಿ ಉದಯನಿಧಿ ಮೇಲೆ ಪ್ರಕರಣಗೊಂಡು ಅವರ ಬಂಧನವೂ ಆಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...