Homeಅಂತರಾಷ್ಟ್ರೀಯಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ ಒತ್ತಾಯಿಸಿವೆ ಎಂದು ವರದಿಯಾಗಿದೆ.

ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಮೋಹನ್ ಭಾಗವತ್ ಕೆನಡಾ ಭೇಟಿ ನಿಗದಿಯಾಗಿದೆ. ಈ ಹಿನ್ನೆಲೆ ಸಂಘಟನೆಗಳು ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.

ಕೆನಡಾದ ಸಾರ್ವಜನಿಕ ಸುರಕ್ಷತಾ ಸಚಿವ ಗ್ಯಾರಿ ಆನಂದಸಂಗರಿ ಅವರಿಗೆ ಬರೆದ ಪತ್ರದಲ್ಲಿ ಸಂಘಟನೆಗಳು, ಮೋಹನ್ ಭಾಗವತ್ ಅವರ ಪ್ರಸ್ತಾವಿತ ಭೇಟಿಯು ಸಾರ್ವಜನಿಕ ಸುರಕ್ಷತೆ ಮತ್ತು ರಾಷ್ಟ್ರೀಯ ಭದ್ರತೆಗೆ ಕಳವಳ ತಂದೊಡ್ಡುತ್ತದೆ ಎಂದು ಹೇಳಿವೆ.

ಆರ್‌ಎಸ್‌ಎಸ್‌ ಧಾರ್ಮಿಕ ಬಹುಸಂಖ್ಯಾತವಾದ, ಬೆದರಿಕೆ ಹಾಗೂ ಗಡಿಯಾಚೆಗಿನ ದಬ್ಬಾಳಿಕೆಯೊಂದಿಗೆ ನಂಟನ್ನು ಹೊಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿರುವ ಸಂಘಟನೆಗಳು, ಈ ಕಾರಣಗಳಿಗಾಗಿ ಭಾಗವತ್ ಭೇಟಿಯನ್ನು ವಿರೋಧಿಸಿವೆ.

ಕೆನಡಾದ ವಲಸಿಗ ಸಮುದಾಯಗಳಲ್ಲಿನ ಹೋರಾಟಗಾರರು, ಶಿಕ್ಷಣ ತಜ್ಞರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರ ಮೇಲಿನ ಕಿರುಕುಳ ಹಾಗೂ ಆರ್‌ಎಸ್‌ಎಸ್‌ ನಂಟು ಹೊಂದಿರುವ ನೆಟ್‌ವರ್ಕ್‌ಗಳ ನಡುವಿನ ಸಂಬಂಧವನ್ನು ಉಲ್ಲೇಖಿಸಿರುವ ಸಂಘಟನೆಗಳು, ಕೆನಡಾದ ಕಾನೂನುಗಳ ಅಡಿಯಲ್ಲಿ ಮೋಹನ್ ಭಾಗವತ್ ಅವರ ಪ್ರವೇಶಾರ್ಹತೆಯನ್ನು ಪರಿಶೀಲಿಸಬೇಕು ಎಂದು ಸಚಿವರಿಗೆ ಆಗ್ರಹಿಸಿವೆ.

ಸಚಿವರಿಗೆ ಮನವಿ ಸಲ್ಲಿಸಿದ ಸಂಘಟನೆಗಳಲ್ಲಿ ಕೆನಡಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ & ಡೆಮಾಕ್ರಸಿ ಇನ್ ಇಂಡಿಯಾ, ಕೆನಡಿಯನ್ ಕೌನ್ಸಿಲ್ ಆಫ್ ಇಂಡಿಯನ್ ಮುಸ್ಲಿಮ್ಸ್, ಕೆನಡಿಯನ್ಸ್ ಫಾರ್ ಇಂಡಿಯನ್ ಡೆಮಾಕ್ರಸಿ, ಸೌತ್ ಏಷ್ಯನ್ ದಲಿತ್ ಆದಿವಾಸಿ ನೆಟ್‌ವರ್ಕ್, ವರ್ಲ್ಡ್ ಸಿಖ್ ಆರ್ಗನೈಸೇಶನ್, ಕೆನಡಿಯನ್ ಕೌನ್ಸಿಲ್ ಆಫ್ ಮುಸ್ಲಿಂ ವುಮೆನ್, ಇಂಡಿಪೆಂಡೆಂಟ್ ಯಹೂದಿ ವಾಯ್ಸಸ್ ಕೆನಡಾ, ಜಸ್ಟ್ ಪೀಸ್ ಅಡ್ವೊಕೇಟ್ಸ್, ಸೌತ್ ಏಷ್ಯನ್ ವುಮೆನ್ಸ್ & ಇಮ್ಮಿಗ್ರಂಟ್ಸ್ ಸರ್ವೀಸಸ್, ಫೆಡರೇಶನ್ ಡೆಸ್ ಫೆಮ್ಮೆಸ್ ಡು ಕ್ವಿಬೆಕ್, ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಮಿಷನ್, ಟೊರೊಂಟೊ ಈಸ್ಟ್ ಆಂಟಿ-ಹೇಟ್ ಮೊಬಿಲೈಸೇಶನ್ ಮತ್ತು ಏಷ್ಯನ್ ಕೆನಡಿಯನ್ ಲೇಬರ್ ಅಲೈಯನ್ಸ್, ಇತರವು ಸೇರಿವೆ.

“ನಮ್ಮ ಸಮುದಾಯಗಳನ್ನು ಬಲಪಂಥೀಯ ಉಗ್ರವಾದ, ದ್ವೇಷ ಭಾಷಣ ಮತ್ತು ವಿದೇಶಿ ಬೆದರಿಕೆಗಳಿಂದ ರಕ್ಷಿಸಲು ಸಚಿವ ಆನಂದಸಂಗರಿ ಅವರು ಕೆನಡಾದ ಕಾನೂನನ್ನು ಜಾರಿಗೊಳಿಸಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

“ಹಿಂಸಾತ್ಮಕ ಅರೆಸೇನಾ ಸಂಘಟನೆಯ ಮುಖ್ಯಸ್ಥರಿಗೆ ಕೆನಡಾಕ್ಕೆ ಪ್ರವೇಶಿಸಲು ಅನುವು ಮಾಡಿಕೊಡುವುದು ಮುಸ್ಲಿಮರು, ಸಿಖ್ಖರು, ಕ್ರಿಶ್ಚಿಯನ್ನರು, ಯಹೂದಿಗಳು ಮತ್ತು ದಲಿತರು ಸೇರಿದಂತೆ ದುರ್ಬಲ ಅಲ್ಪಸಂಖ್ಯಾತ ಜನಸಂಖ್ಯೆಗೆ ಬೆದರಿಕೆಯೊಡ್ಡುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಸಂಘಟನೆಯ ಜಾಗತಿಕ ವಿಸ್ತರಣಾ ಪ್ರಯತ್ನಗಳ ಭಾಗವಾಗಿ ಅಮೆರಿಕಕ್ಕೆ ಭೇಟಿ ನೀಡಿದ ಬಳಿಕ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕೆನಡಾಕ್ಕೆ ತಮ್ಮ ಮೊಟ್ಟಮೊದಲ ಭೇಟಿಗೆ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲೇ ಈ ಸಂಘಟನೆಗಳ ಒಕ್ಕೂಟವು ಸಚಿವರಿಗೆ ಮನವಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...