Homeಮುಖಪುಟಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

- Advertisement -
- Advertisement -

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ ಶಾಕ್ ನೀಡಿದೆ. ಆಹಾರ ಸುರಕ್ಷತಾ ನಿಯಮಗಳ ತೀವ್ರ ಉಲ್ಲಂಘನೆ, ಅವಧಿ ಮುಗಿದ ಆಹಾರ ಪದಾರ್ಥಗಳ ಬಳಕೆ ಹಾಗೂ ನೈರ್ಮಲ್ಯ ಕೊರತೆ ಹಿನ್ನೆಲೆಯಲ್ಲಿ ಬರೋಬ್ಬರಿ 250 ಕೆಜಿಗೂ ಹೆಚ್ಚು ಮಾಂಸ, 207 ಕೆಜಿ ಕೊಳೆತ ತರಕಾರಿ, 32 ಲೀಟರ್ ಅವಧಿ ಮುಗಿದ ಹಾಲು ಹಾಗೂ 3 ಕೆಜಿ ಬೇಕರಿ ಉತ್ಪನ್ನಗಳನ್ನು ಜಪ್ತಿ ಮಾಡಿ ತಕ್ಷಣವೇ ನಾಶಪಡಿಸಲಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಮಾರ್ಗದರ್ಶನದಲ್ಲಿ, ಆಹಾರ ಸುರಕ್ಷತಾ ಆಯುಕ್ತರ ಕಚೇರಿಯಿಂದ ನಿಯೋಜನೆಗೊಂಡ 30 ಅಧಿಕಾರಿಗಳ ತಂಡವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿದ್ದ ಪಂಚ ತಾರಾ ಮತ್ತು ತ್ರಿ-ಸ್ಟಾರ್ ಸೇರಿದಂತೆ ಒಟ್ಟು 26 ಹೋಟೆಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಈ ಪರಿಶೀಲನೆ ನಡೆಸಿದೆ.

ಈ ಪರಿಶೀಲನೆಯ ವೇಳೆ ದಿ ಲಲಿತ್ ಅಶೋಕ್‌ನಲ್ಲಿ 76 ಕೆಜಿ ಮಾಂಸ, 200 ಕೆಜಿ ಕಳಪೆ ತರಕಾರಿ ಹಾಗೂ 32 ಲೀಟರ್ ಎಕ್ಸ್‌ಪೈರ್ಡ್ ಹಾಲು ಪತ್ತೆಯಾಗಿದ್ದರೆ, ಶಂಗ್ರಿ-ಲಾದಲ್ಲಿ 15 ಕೆಜಿ ಮಾಂಸ, ಫೋರ್ ಸೀಸನ್ಸ್‌ನಲ್ಲಿ 19 ಕೆಜಿ ಮಾಂಸ, ವಿವಾಂತ ವೈಟ್‌ಫೀಲ್ಡ್‌ನಲ್ಲಿ 3 ಕೆಜಿ ಅವಧಿ ಮುಗಿದ ಬೇಕರಿ ಉತ್ಪನ್ನಗಳು, ತಾಜ್ ಯಶವಂತಪುರದಲ್ಲಿ 72 ಕೆಜಿ ಮಾಂಸ/ಮೀನು ಹಾಗೂ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ 50 ಕೆಜಿ ಚಿಕನ್, 25 ಕೆಜಿ ಮಾಂಸ, 23 ಕೆಜಿ ಮೀನು ಮತ್ತು 7 ಕೆಜಿ ಕಳಪೆ ತರಕಾರಿ ಜಪ್ತಿಯಾಗಿದೆ.

ಕ್ರ.ಸಂ.ಹೋಟೆಲ್ ಹೆಸರುಜಪ್ತಿ ಮಾಡಲಾದ ಕಳಪೆ / ಅವಧಿ ಮುಗಿದ ಪದಾರ್ಥಗಳು
1ದಿ ಲಲಿತ್ ಅಶೋಕ್ (South Annexe)76 ಕೆಜಿ ಮಾಂಸ, 200 ಕೆಜಿ ಕಳಪೆ ತರಕಾರಿ ಮತ್ತು 32 ಲೀಟರ್ ಎಕ್ಸ್‌ಪೈರ್ಡ್ ಹಾಲು
2ಶಂಗ್ರಿ-ಲಾ (Shangri-La)15 ಕೆಜಿ ಕಳಪೆ ಮಾಂಸ
3ಫೋರ್ ಸೀಸನ್ಸ್ (Four Seasons)19 ಕೆಜಿ ಕಳಪೆ ಮಾಂಸ
4ವಿವಾಂತ ವೈಟ್‌ಫೀಲ್ಡ್ (Vivanta Whitefield)3 ಕೆಜಿ ಅವಧಿ ಮುಗಿದ ಬೇಕರಿ ಉತ್ಪನ್ನಗಳು
5ತಾಜ್ ಯಶವಂತಪುರ (Taj Yeshwantpur)72 ಕೆಜಿ ಹಾಳಾದ ಮಾಂಸ ಮತ್ತು ಮೀನು
6ರ್ಯಾಡಿಸನ್ ಬ್ಲೂ (Radisson Blu)50 ಕೆಜಿ ಚಿಕನ್, 25 ಕೆಜಿ ಮಾಂಸ, 23 ಕೆಜಿ ಮೀನು ಹಾಗೂ 7 ಕೆಜಿ ತರಕಾರಿ

ಹೋಟೆಲ್ ಅಡುಗೆ ಮನೆ ಹಾಗೂ ಸಂಗ್ರಹಣಾ ಕೊಠಡಿಗಳಲ್ಲಿ ನೈರ್ಮಲ್ಯ ಸಂಪೂರ್ಣ ಹಾಳಾಗಿದ್ದು, ತರಕಾರಿಗಳ ಮೇಲೆ ಬೂಷ್ಟು ಬಂದಿದ್ದರೂ ಅದನ್ನು ಅಡುಗೆಗೆ ಬಳಸಲಾಗುತ್ತಿತ್ತು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪದಾರ್ಥಗಳನ್ನು ಒಂದೇ ಕಡೆ ಇಡಲಾಗಿತ್ತು ಹಾಗೂ ಎಫ್‌ಎಸ್‌ಎಸ್‌ಎಐ ನಿಯಮಾವಳಿಗಳಿಗೆ ವಿರುದ್ಧವಾಗಿ ಲೇಬಲಿಂಗ್ ನಿರ್ವಹಿಸಲಾಗಿತ್ತು.

ಪರಿಶೀಲನೆಯ ವೇಳೆ ಪತ್ತೆಯಾದ ಟೀ ಪುಡಿ, ಚಿಕನ್, ಮಟನ್, ಮೀನು, ಅಡುಗೆ ಎಣ್ಣೆ, ಖಾರದ ಪುಡಿ, ಅರಿಶಿನ, ಸಾಸ್, ಚೀಸ್, ಮಸಾಲೆ ಪದಾರ್ಥಗಳು ಹಾಗೂ ಹಾಲಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಲ್ಯಾಬ್ ವರದಿ ಬಂದ ತಕ್ಷಣವೇ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ತಪ್ಪಿತಸ್ಥ ಐಷಾರಾಮಿ ಹೋಟೆಲ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಸುರಕ್ಷತಾ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...

ಭೋಪಾಲ್: ಮಕ್ಕಳ ಸಾವಿನ ಬಗ್ಗೆ ವರದಿ ಮಾಡುತ್ತಿದ್ದಾಗ ಪೊಲೀಸರು ಹೋಟೆಲ್‌ಗಳಿಂದ ಹೊರಹಾಕಿದರು ಎಂದು ಖ್ಯಾತ ಯೂಟ್ಯೂಬರ್ ಕಾವ್ಯ ಕರ್ನಾಟಕ್ ಆರೋಪ

ಭೋಪಾಲ್: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಮಕ್ಕಳ ಸಾವಿನ ಕುರಿತು ವರದಿ ಮಾಡಲು ತೆರಳಿದ್ದ ತಮ್ಮ ತಂಡವನ್ನು ಎರಡು ಹೋಟೆಲ್‌ಗಳಿಂದ ಹೊರಹೋಗುವಂತೆ ಒತ್ತಾಯಿಸಲಾಯಿತು. ಪೊಲೀಸರು ಹೋಟೆಲ್‌ಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ದೆಹಲಿಯಿಂದ ಬಂದ ಪತ್ರಕರ್ತರನ್ನು ಅಲ್ಲಿಂದ...

DELHI SIR |’ನೋಟಿಸ್‌ಗಳನ್ನು ಯಾಂತ್ರಿಕವಾಗಿ ನೀಡಿದಂತಿದೆ, ಲಾಜಿಕಲ್ ಡಿಸ್ಕ್ರಿಪೆನ್ಸಿ ಬಗ್ಗೆ ಸ್ಪಷ್ಟನೆ ಅಗತ್ಯ : ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಮಯದಲ್ಲಿ ಮತದಾರರಿಗೆ ನೀಡಲಾದ ನೋಟಿಸ್‌ಗಳು 'ಬಹುತೇಕ ಯಾಂತ್ರಿಕವಾಗಿ' ಜಾರಿಯಾದಂತೆ ಕಂಡುಬರುತ್ತಿವೆ ಮತ್ತು 'ತಾರ್ಕಿಕ ವ್ಯತ್ಯಾಸ'ವನ್ನು ಗುರುತಿಸಲು ಬಳಸಲಾದ ಆಧಾರದ ಬಗ್ಗೆ ಸ್ಪಷ್ಟೀಕರಣದ ಅಗತ್ಯವಿದೆ...