Homeಮುಖಪುಟಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಭಾರತೀಯ ವಾಯುಪಡೆ ನೀಡಿದ ದೂರಿನ ಆಧಾರದ ಮೇಲೆ, ಅಧಿಕೃತ ರಹಸ್ಯಗಳ ಕಾಯ್ದೆಯಡಿ (Official Secrets Act) ಪ್ರಕರಣ ದಾಖಲಿಸಿಕೊಂಡು ಮೇ 30 ರಂದು ಅಧಿಕಾರಿಯನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ಪೂರ್ಣಗೊಳಿಸಿ ಜುಲೈ 30 ರಂದು ಸಂಬಂಧಪಟ್ಟ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

ಪಾಕಿಸ್ತಾನದ ಗೂಢಚರ್ಯೆ ಜಾಲಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ, ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯೊಬ್ಬಳು ಈ ಅಧಿಕಾರಿಯನ್ನು ಸಂಪರ್ಕಿಸಿದ್ದರೆಂದು ತಿಳಿದುಬಂದಿದೆ. ನಂತರ ಆಕೆ ವಿಡಿಯೋ ಕರೆಗಳು ಹಾಗೂ ಇತರ ಡಿಜಿಟಲ್ ವೇದಿಕೆಗಳ ಮೂಲಕ ವಾಯುಪಡೆ ಅಧಿಕಾರಿಯೊಂದಿಗೆ ನಿಕಟ ಸಂಪರ್ಕ ಸಾಧಿಸಿ ಮಾಹಿತಿ ಕಲೆಹಾಕಿದ್ದಳು.

ಈ ಮಹಿಳೆಯು ಪಾಕಿಸ್ತಾನ ಮೂಲದ ಗುಪ್ತಚರ ನಿರ್ವಹಣಾಧಿಕಾರಿಗಳ (Intelligence Handlers) ಪರವಾಗಿ ಕೆಲಸ ಮಾಡುತ್ತಿದ್ದಳು ಎಂದು ಶಂಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RSS ಇತಿಹಾಸ ಜಾಲಾಡ್ತಿದೆ ಸರ್ಕಾರ: ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರವು ಸಂಘಟನೆಯ ಸಂಪೂರ್ಣ ಇತಿಹಾಸ ಹಾಗೂ ಹಿನ್ನೆಲೆಯನ್ನು ಕೂಲಂಕಷವಾಗಿ ಅಧ್ಯಯನ ನಡೆಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್...

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...