Homeಮುಖಪುಟ'ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್' ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

- Advertisement -
- Advertisement -

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ.

ಸೋಶಿಯಲ್ ಸೈನ್ಸ್ ಕ್ಲಬ್ ಅಸೋಸಿಯೇಷನ್ ವತಿಯಿಂದ ಎಲ್‌ಪಿ ವಿಭಾಗದ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಈ ಕ್ವಿಜ್‌ನಲ್ಲಿ “ಬ್ರಿಟಿಷರಿಂದ ಅತ್ಯಂತ ಕಠಿಣ ಶಿಕ್ಷೆ ಪಡೆದ ಸ್ವಾತಂತ್ರ್ಯ ಹೋರಾಟಗಾರ ಯಾರು?” ಎಂದು ಐದನೇ ಟೈ-ಬ್ರೇಕರ್ ಪ್ರಶ್ನೆಯಾಗಿ ಕೇಳಲಾಗಿತ್ತು. ಇದಕ್ಕೆ ‘ವಿ.ಡಿ. ಸಾವರ್ಕರ್’ ಎಂಬ ಉತ್ತರವನ್ನು ನೀಡಲಾಗಿದ್ದು, “ಅತ್ಯಂತ ಕಠಿಣ ಶಿಕ್ಷೆ” ಎಂಬ ಪದಪ್ರಯೋಗವೇ ಪ್ರಮುಖ ಚರ್ಚೆ ಹಾಗೂ ಆಕ್ಷೇಪಕ್ಕೆ ಕಾರಣವಾಗಿದೆ.

ಈ ಕ್ವಿಜ್‌ಗೆ ಸರ್ಕಾರದ ಅಧಿಕೃತ ಮಾನ್ಯತೆ ಇಲ್ಲದಿದ್ದರೂ, ಪ್ರಶ್ನೆಪತ್ರಿಕೆಗಳು ಸಹಾಯಕ ಶೈಕ್ಷಣಿಕ ಅಧಿಕಾರಿಗಳ (AEO) ಕಚೇರಿಗಳ ಮೂಲಕ ಶಾಲೆಗಳಿಗೆ ವಿತರಣೆಯಾಗಿರುವುದು ತೀವ್ರ ಆಕ್ರೋಶಕ್ಕೆ ದಾರಿಕಲ್ಪಿಸಿದೆ. ಸ್ವಾತಂತ್ರ್ಯ ಹೋರಾಟದ ಸಮಗ್ರ ಇತಿಹಾಸವನ್ನು ಬೋಧಿಸುವ ಬದಲು ಕಿರಿಯ ಮಕ್ಕಳ ಮನಸ್ಸಿನಲ್ಲಿ ನಿರ್ದಿಷ್ಟ ಸೈದ್ಧಾಂತಿಕ ಹಿನ್ನೆಲೆಯ ನಾಯಕರನ್ನು ವೈಭವೀಕರಿಸುವ ಮತ್ತು ಸಾಪೇಕ್ಷ ವಿಚಾರಗಳನ್ನು ನೈಜ ಸತ್ಯವೆಂಬಂತೆ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ವಿವಿಧ ಸಂಘಟನೆಗಳು ಕಟುವಾಗಿ ಆರೋಪಿಸಿವೆ.

ವಿವಾದ ತೀವ್ರಗೊಳ್ಳುತ್ತಿದ್ದಂತೆ ಸಿಪಿಎಂ ಯುವ ಘಟಕ ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಯುಡಿಎಫ್ ಆಡಳಿತಾವಧಿಯಲ್ಲಿ ಶಿಕ್ಷಣ ಇಲಾಖೆಯ ಮೂಲಕ ಸಂಘ ಪರಿವಾರದ ಸಿದ್ಧಾಂತವನ್ನು ತೂರಿಸಲಾಗುತ್ತಿದೆ ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಸಂಜೀವ್ ಕಿಡಿಕಾರಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳದ ಸಾಮಾನ್ಯ ಶಿಕ್ಷಣ ಸಚಿವ ಎನ್. ಶಂಸುದ್ದೀನ್ ಅವರು, ಪ್ರಶ್ನೆಪತ್ರಿಕೆ ಸಿದ್ಧತೆ ಮತ್ತು ವಿತರಣೆಯಲ್ಲಿ ಶೈಕ್ಷಣಿಕ ಅಧಿಕಾರಿಗಳ ಪಾತ್ರದ ಕುರಿತು ಮಹಾನಿರ್ದೇಶಕರಿಂದ ತುರ್ತು ವರದಿ ಕೇಳಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...

‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

'ವಂದೇ ಮಾತರಂ' ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ. ಧಾರ್ಮಿಕ...

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...

SIR ಪರಿಶೋಧ ಹಾಗೂ ಪ್ರತಿರೋಧ ಪ್ರವಾಸಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಚಾಲನೆ: ಸಿಪಿಐ(ಎಂ) ಬೆಂಬಲ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ 'SIR ವಿರೋಧಿ ಕರ್ನಾಟಕ', ನಾಗರಿಕ ಮತಕಾವಲು ಸಮಿತಿ, ಜಾತ್ಯತೀತ ಪಕ್ಷಗಳು ಹಾಗೂ ವಿವಿಧ ನಾಗರಿಕ ಸಂಘಟನೆಗಳ...

ಪಶ್ಚಿಮ ಬಂಗಾಳ: ಸರ್ಕಾರದ ಜೊತೆ ಇರಬೇಕಾದರೆ ಎಲೆಕ್ಷನ್ ‘ಟೆಸ್ಟ್’ನಲ್ಲಿ ಗೆಲ್ಲಿ, ಮುಸ್ಲಿಮರಿಗೆ ಸುವೇಂದು ಅಧಿಕಾರಿ ಎಚ್ಚರಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಮುಂಬರುವ ಉಪಚುನಾವಣೆಯನ್ನು ಅಲ್ಪಸಂಖ್ಯಾತರಿಗೆ ಒಂದು ‘ಪರೀಕ್ಷೆ’ ಎಂದು ಕರೆದಿರುವುದು ರಾಜಕೀಯ ವಲಯದಲ್ಲಿ ತೀವ್ರ ವಿವಾದ ಹಾಗೂ ಕಳವಳಕ್ಕೆ ಕಾರಣವಾಗಿದೆ....

ಮಹಿಳೆಯರ ಮೇಲಿನ ದಾಳಿಗಳು ಮತ್ತಷ್ಟು ಹಿಂಸಾತ್ಮಕವಾಗುತ್ತಿವೆ: ಪ್ರಿಯಾಂಕಾ ಗಾಂಧಿ

ದೆಹಲಿ ಮತ್ತು ಬಿಹಾರದಲ್ಲಿ ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಳವಳ ವ್ಯಕ್ತಪಡಿಸಿದ್ದು, ಇಂತಹ ದಾಳಿಗಳು ಹೆಚ್ಚಾಗುತ್ತಿರುವುದು ಮಾತ್ರವಲ್ಲದೆ ಇನ್ನಷ್ಟು ಹಿಂಸಾತ್ಮಕವಾಗುತ್ತಿವೆ...

ಜಮುಯಿ ಅಪ್ರಾಪ್ತರ ಮೇಲಿನ ದೌರ್ಜನ್ಯ ಪ್ರಕರಣ: ಎನ್‌ಕೌಂಟರ್ ಬಳಿಕ ಪ್ರಮುಖ ಆರೋಪಿ ನಂದನ್ ಯಾದವ್ ಬಂಧನ; 7 ಮಂದಿಯಲ್ಲಿ 5 ಮಂದಿ ವಶಕ್ಕೆ

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ ಕೋಚಿಂಗ್‌ ತರಗತಿಯಿಂದ ಮನೆಗೆ ಮರಳುತ್ತಿದ್ದ ಅಪ್ರಾಪ್ತ ಬಾಲಕಿ ಮತ್ತು ಬಾಲಕನನ್ನು ತಡೆದು ಹಲ್ಲೆ ಮಾಡಿ, ಕಿರುಕುಳ ನೀಡಿದ ಪ್ರಕರಣದಲ್ಲಿ ಪೊಲೀಸರು ಪ್ರಮುಖ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ....

ಬಿಹಾರ|ಸಭ್ಯ ರೀತಿಯಲ್ಲಿ ಅನೈತಿಕ ಪೊಲೀಸ್‌ಗಿರಿ ಮಾಡಿ: ಬಿಜೆಪಿ ಸಚಿವೆ ಶ್ರೇಯಸಿ ಸಿಂಗ್

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಯುವಕ ಮತ್ತು ಯುವತಿಗೆ ಗುಂಪೊಂದು ಸಾರ್ವಜನಿಕವಾಗಿ ಕಿರುಕುಳ ನೀಡಿದ ಘಟನೆಯನ್ನು ಖಂಡಿಸುವ ಭರದಲ್ಲಿ, ‘ಅನೈತಿಕ ಪೊಲೀಸ್‌ಗಿರಿಯನ್ನು ಹೆಚ್ಚು ಸಭ್ಯ ಮತ್ತು ಘನತೆಯುತ ರೀತಿಯಲ್ಲಿ ಮಾಡಬಹುದು’ ಎಂದು ಬಿಹಾರದ ಬಿಜೆಪಿ...