HomeಅಂಕಣಗಳುKarnataka against SIRSIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, ಈ ಕ್ಷೇತ್ರದಲ್ಲಿ ಹುಟ್ಟಿ, ವಿದ್ಯಾಭ್ಯಾಸ ಮಾಡಿ ಮತ್ತು ಬೆಳೆದರೂ, ಲಕ್ಷಾಂತರ ಇತರ ನಾಗರಿಕರ ಜೊತೆಗೆ ನನ್ನ ಹೆಸರನ್ನು ಸದ್ದಿಲ್ಲದೆ ತೆಗೆದುಹಾಕಲಾಗಿದೆ ಎಂದು ಹೇಳಿಕೊಂಡಿದ್ದಾರೆ.

“ಸ್ನೇಹಿತರೇ, ನಿಮಗೆ ಒಂದು ಜೋಕ್ ಹೇಳಬೇಕು, ಎಸ್‌ಐಆರ್ ನಂತರ ಬೆಂಗಳೂರಿನಲ್ಲಿ ಮತದಾನದ ಹಕ್ಕು ಕಳೆದುಕೊಂಡಿರುವ 65 ಲಕ್ಷ ಮತದಾರರಲ್ಲಿ ನಾನೂ ಒಬ್ಬ. ಇದು ಒಳ್ಳೆಯ ಹಾಸ್ಯ ಅಲ್ಲವೇ? ನಾನು ಹುಟ್ಟಿದ್ದು ಇದೇ ಕ್ಷೇತ್ರದಲ್ಲಿ, ಇಲ್ಲೇ ವಾಸಿಸಿದ್ದೇನೆ, ಇಲ್ಲೇ ಶಾಲೆ, ಕಾಲೇಜಿಗೆ ಹೋಗಿದ್ದೇನೆ ಮತ್ತು ರಂಗಭೂಮಿ ಜೀವನ ನಡೆಸಿದ್ದೇನೆ. ನಿಮ್ಮ ಮಾಹಿತಿಗಾಗಿ, ನಾನು ಇದೇ ಕ್ಷೇತ್ರದ ಲೋಕಸಭಾ ಅಭ್ಯರ್ಥಿಯೂ ಆಗಿದ್ದೆ” ಎಂದು ಪ್ರಕಾಶ್ ರಾಜ್ ವಿಡಿಯೋದಲ್ಲಿ ಹೇಳಿದ್ದಾರೆ.

“ಹಾಸ್ಯ ಚೆನ್ನಾಗಿದೆ..ಆಟ ಶುರುವಾಗಲಿ. ನಾನು ಏನೇನು ಪ್ರಕ್ರಿಯೆಗಳನ್ನು ಎದುರಿಸಬೇಕು ಎಂಬುವುದನ್ನು ನೋಡೋಣ. ನನ್ನ ಓಟರ್ ಐಡಿ ವಾಪಸ್ ಪಡೆಯಲು ನಾನು ಯಾವ ಯಾವ ಖಾಗದಗಳನ್ನು ಕೊಡಬೇಕು ಎಂದು ನೋಡೋಣ” ಎಂದಿದ್ದಾರೆ.

ಮುಂದುವರಿದು, “ಸರಿ, ಆಟ ಆರಂಭವಾಗಲಿ, ಆದರೆ ಮೈ ಡಿಯರ್ ಫ್ರೆಂಡ್.. ಒಂದು ಸಣ್ಣ ಮಾತು; ನಿಮ್ಮನ್ನು ಆಯ್ಕೆ ಮಾಡದ ಕೆಲವು ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ನಿಮ್ಮ ಅಧಿಕಾರವನ್ನು ನೀವು ಬಳಸಬಹುದು, ಆದರೆ ನಮ್ಮನ್ನು ತಡೆಯಲು ನಿಮ್ಮಿಂದ ಸಾಧ್ಯವೇ? ಮೈ ಡಿಯರ್ ಫ್ರೆಂಡ್…ನಮ್ಮ ಶಕ್ತಿಯಿಂದ ನಾವು ನಿಮ್ಮನ್ನು ಕೆಳಗಿಳಿಸುತ್ತಿದ್ದೇವೆ. ಸುಮ್ಮನೆ ಕೇಳಿದೆ ಅಷ್ಟೇ ಬೈ” ಎಂದು ಪ್ರಕಾಶ್ ರಾಜ್ ತಿವಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...

ಕರ್ನಾಟಕ ಎಸ್ಐಆರ್: ಅಳಿಸುವಿಕೆಗೆ ಸಂಬಂಧಿಸಿದ ದತ್ತಾಂಶದಿಂದ ಸುಮಾರು 6000 ಮತದಾರರು ನಾಪತ್ತೆ: ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಅಂಕಿಅಂಶಗಳ ವ್ಯತ್ಯಾಸ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ, ಚುನಾವಣಾ ಆಯೋಗದ ಅಂಕಿಅಂಶಗಳಲ್ಲೇ ಸುಮಾರು 6 ಸಾವಿರ ಮತದಾರರ ಅಳಿಸುವಿಕೆಗೆ ಸಂಬಂಧಿಸಿದ ವ್ಯತ್ಯಾಸ ಬೆಳಕಿಗೆ ಬಂದಿದೆ. ಮತದಾರರ...

Breaking News: ಎಸ್‌ಐಆರ್‌ನಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್: ಕರ್ನಾಟಕದ ಅಂಕಿಅಂಶಗಳು ಎತ್ತಿದ ಗಂಭೀರ ಪ್ರಶ್ನೆಗಳು

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದಲ್ಲಿ ಮುಂದುವರಿಯುತ್ತಿರುವ ಬೆನ್ನಲ್ಲೇ, ಅದರ ಲಿಂಗಾನುಪಾತದ ಅಂಕಿಅಂಶಗಳು ಗಂಭೀರವಾದ ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ಮುನ್ನೆಲೆಗೆ ತಂದಿವೆ. ಲಭ್ಯವಿರುವ 34 ಜಿಲ್ಲೆ/ನಗರ ಆಡಳಿತ ಘಟಕಗಳ...