HomeಅಂಕಣಗಳುKarnataka against SIRSIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

- Advertisement -
- Advertisement -

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಅರ್ಹ ಮತದಾರರನ್ನೇ ಪಟ್ಟಿಯಿಂದ ಹೊರಗಿಡುತ್ತಿರುವಾಗ, ಈ ಹೊಸ ಮತಗಟ್ಟೆಗಳನ್ನು ಯಾರಿಗಾಗಿ ಸ್ಥಾಪಿಸಲಾಗುತ್ತಿದೆ? ಮತದಾರರ ಸಂಖ್ಯೆಯೇ ಕಮ್ಮಿಯಾಗುತ್ತಿರುವಾಗ ಹೊಸ ಬೂತ್‌ಗಳು ಯಾವ ಪುರುಷಾರ್ಥಕ್ಕೆ?’ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಸೃಷ್ಟಿಯಾಗಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ನೀಡಿರುವ ಮಾಹಿತಿಯಂತೆ, ಪ್ರತಿ ಮತಗಟ್ಟೆಗೆ ಗರಿಷ್ಠ 1,200 ಮತದಾರರು ಹಾಗೂ 2 ಕಿ.ಮೀ. ಅಂತರದ ನಿಯಮಾವಳಿಯಂತೆ ಈ ಪುನರ್ ವಿಂಗಡಣೆ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಮತದಾರರಿರುವ ಕಡೆ 1,803 ಹೊಸ ಬೂತ್‌ಗಳು ಮತ್ತು 2 ಕಿ.ಮೀ.ಗಿಂತ ಹೆಚ್ಚು ಅಂತರವಿರುವ ಕಡೆ 60 ಹೊಸ ಮತಗಟ್ಟೆಗಳನ್ನು ಸೃಜಿಸಲಾಗುತ್ತಿದ್ದು, ಅತ್ಯಲ್ಪ ಮತದಾರರಿರುವ ಮತಗಟ್ಟೆಗಳನ್ನು ವಿಲೀನಗೊಳಿಸಲಾಗುತ್ತಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಅದೇ ದಿನ ಈ ಹೊಸ ಮತಗಟ್ಟೆಗಳ ವಿಂಗಡಣೆ ಜಾರಿಗೆ ಬರಲಿದೆ.

ಮತ್ತೊಂದೆಡೆ, SIR ಗಡುವು ವಿಸ್ತರಣೆಯಾದ ನಂತರ ಕಳೆದ ಒಂದೇ ವಾರದಲ್ಲಿ 2.41 ಲಕ್ಷಕ್ಕೂ ಹೆಚ್ಚು ಜನರು ನಮೂನೆ ಭರ್ತಿ ಮಾಡಿಕೊಟ್ಟು ‘ಎಎಸ್‌ಡಿಡಿಒ’ (ಅನುಮಾನಾಸ್ಪದ/ಸ್ಥಳಾಂತರ/ಮೃತ/ದ್ವಿಪ್ರತಿ) ಪಟ್ಟಿಯಿಂದ ಹೊರಬಂದಿದ್ದಾರೆ. ಇದರಿಂದಾಗಿ ಆಗಸ್ಟ್ 5ರಂದು 1.11 ಕೋಟಿಯಷ್ಟಿದ್ದ ಎಎಸ್‌ಡಿಡಿಒ ಮತದಾರರ ಸಂಖ್ಯೆ 1.08 ಕೋಟಿಗೆ ಇಳಿಕೆಯಾಗಿದೆ. ಶಾಶ್ವತವಾಗಿ ಸ್ಥಳಾಂತರಗೊಂಡಿದ್ದರೆನ್ನಲಾದ 95,037 ಜನರು, ಪತ್ತೆಯಾಗದಿದ್ದ 85,267 ಜನರು, ಅರ್ಜಿ ನೀಡಲು ನಿರಾಕರಿಸಿದ್ದ 80,000 ಜನರು ಹಾಗೂ ದ್ವಿಪ್ರತಿಯಲ್ಲಿದ್ದ 13,000 ಜನರು ಬಿಎಲ್‌ಒಗಳಿಗೆ ವಿವರ ನೀಡಿ ಪಟ್ಟಿಯಲ್ಲಿ ಹೆಸರು ಉಳಿಸಿಕೊಂಡಿದ್ದಾರೆ.

SIR ಪ್ರಕ್ರಿಯೆಯ ಸಮಯಾವಕಾಶ ವಿಸ್ತರಿಸಿದ್ದರಿಂದ ಕಳೆದ ಒಂದೇ ವಾರದಲ್ಲಿ 2.41 ಲಕ್ಷ ಮತದಾರರು ಅಗತ್ಯ ದಾಖಲೆ ನೀಡಿ ಎಎಸ್‌ಡಿಡಿಒ (ASDDO) ಪಟ್ಟಿಯಿಂದ ಹೊರಬಂದಿದ್ದಾರೆ. ಬುಧವಾರದ ಅಂತ್ಯದ ವೇಳೆಗೆ ರಾಜ್ಯದಲ್ಲಿ ಎಎಸ್‌ಡಿಡಿಒ ಪಟ್ಟಿಯಲ್ಲಿರುವ ಮತದಾರರ ಸಂಖ್ಯೆ 1.08 ಕೋಟಿಗೆ ಇಳಿಕೆಯಾಗಿದೆ. ಹಾಗಾಗಿ ಸೆಪ್ಟೆಂಬರ್ ವರೆಗೆ ಸಮಯವನ್ನು ವಿಸ್ತರಿಸಬೇಕೆಂ ಒತ್ತಾಯಗಳು ಕೇಳಿಬಂದಿದೆ.

ಈ 1.08 ಕೋಟಿ ಎಎಸ್‌ಡಿಡಿಒ ಮತದಾರರ ಸಂಪೂರ್ಣ ಪಟ್ಟಿಯನ್ನು ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳಿಗೆ ಹಸ್ತಾಂತರಿಸಲಾಗಿದೆ ಹಾಗೂ ಸಾರ್ವಜನಿಕರ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ನಲ್ಲೂ ಪ್ರಕಟಿಸಲಾಗಿದೆ. ಗಡುವು ಮುಗಿಯಲು 2 ದಿನಗಳಿರುವಾಗ, ಅಂದರೆ ಆಗಸ್ಟ್ 15 ರಂದು ಎಎಸ್‌ಡಿಡಿಒ ಪಟ್ಟಿಯನ್ನು ಮತ್ತೊಮ್ಮೆ ಅಂತಿಮವಾಗಿ ನವೀಕರಿಸಿ (Update) ಪ್ರಕಟಿಸಲಾಗುತ್ತದೆ.

ಸಾರ್ವಜನಿಕರು ತಕ್ಷಣವೇ ವೆಬ್‌ಸೈಟ್‌ನಲ್ಲಿ ತಮ್ಮ ಹೆಸರು ಎಎಸ್‌ಡಿಡಿಒ ಪಟ್ಟಿಯಲ್ಲಿದೆಯೇ ಎಂದು ಪರಿಶೀಲಿಸಬೇಕು. ಒಂದು ವೇಳೆ ಹೆಸರಿದ್ದರೆ, ಸಂಬಂಧಪಟ್ಟ ಬಿಎಲ್‌ಒ (BLO – ಬೂತ್ ಮಟ್ಟದ ಅಧಿಕಾರಿ) ಅವರನ್ನು ಸಂಪರ್ಕಿಸಿ ಅಗತ್ಯ ದಾಖಲೆ ಒದಗಿಸುವ ಮೂಲಕ ತಮ್ಮ ಹೆಸರನ್ನು ಮುಖ್ಯ ಮತದಾರರ ಪಟ್ಟಿಗೆ ಮರುಸೇರ್ಪಡೆ (Rollback) ಮಾಡಿಸಿಕೊಳ್ಳಬಹುದು.

ಆಗಸ್ಟ್ 15ರಂದು ನವೀಕರಿಸಿದ ಎಎಸ್‌ಡಿಡಿಒ ಪಟ್ಟಿ ಮತ್ತೆ ಪ್ರಕಟವಾಗಲಿದ್ದು, ಸಾರ್ವಜನಿಕರು ಆನ್‌ಲೈನ್‌ನಲ್ಲಿ ಹೆಸರು ಪರಿಶೀಲಿಸಿಕೊಳ್ಳಬಹುದು. ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ತಕ್ಷಣವೇ ಬಿಎಲ್‌ಒಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ಒದಗಿಸಿ ‘ರೋಲ್‌ಬ್ಯಾಕ್’ ಮಾಡಿಸಿಕೊಳ್ಳಲು ಆಯೋಗ ಕೋರಿದೆ.

ಆಯೋಗವು ಹೊಸ 1,848 ಮತಗಟ್ಟೆಗಳನ್ನುಸ್ಥಾಪಿಸಲು ಉದ್ದೇಶಿಸಿರುವುದನ್ನು ಯಾರೂ ಪ್ರಶ್ನಿಸುತ್ತಿಲ್ಲ, ಅದು ಸ್ವಾಗತಾರ್ಹವೆ, ಆದರೆ ಅದಕ್ಕೂ ಮೊದಲು ಅರ್ಹ ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆ ನಿಲ್ಲಬೇಕು ಎಂದು ನಾಗರಿಕ ಮತ ಕಾವಲು ಸಮಿತಿ ಹಾಗೂ ಸಂಘ ಸಂಸ್ಥೆಗಳ ಒತ್ತಾಯಿಸಿವೆ.

ಎನ್ಯೂಮರೇಷನ್ ಫಾರಂಗಳನ್ನು ಮರಳಿಸುವ ಕಾಲಾವಧಿಯನ್ನು ಚುನಾವಣಾ ಅಯೋಗ ವಿಸ್ತರಿಸಿದರಿಂದ ಆಗಸ್ಟ್ 5ರಂದು 1.11 ಕೋಟಿಯಷ್ಟಿದ್ದ ಎಎಸ್‌ಡಿಡಿಒ ಮತದಾರರ ಸಂಖ್ಯೆ 1.08 ಕೋಟಿಗೆ ಇಳಿಕೆಯಾಗಿದೆ, ಈ ಸಂಖ್ಯೆ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದ್ದು ಗಡುವನ್ನು ಸೆಪ್ಟಂಬರ್ ವರಗೆ ವಿಸ್ತರಿಸಬೇಕು, ಆಮೂಲಕ ಯಾವುದೇ ಅರ್ಹ ಮತದಾರರ ಹೆಸರು ಮತ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದಿದೆ.

ಇದಲ್ಲದೆ  ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ (ತಾರ್ಕಿಕ ವೈರುದ್ಯ) ಎಂಬ ಮತ್ತೊಂದು ವಿಧಾನದಿಂದ ಮತದಾರರು ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡಬೇಕಿದೆ. ಹಾಗಾಗಿ ಈ ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಎಂಬ ವರ್ಗವನ್ನು ಚುನಾವಣಾ ಆಯೋಗ ಕೈಬಿಡಬೇಕು, ಆಗ ಮಾತ್ರವೇ ಆಯೋಗ ಹೊಸ ಮತಗಟ್ಟೆ ಸ್ಥಾಪಿಸುವ ಉದ್ದೇಶ ಸಾರ್ಥಕವಾಗುತ್ತದೆ ಎಂದು ನಾಗರಿಕ ಮತ ಕಾವಲು ಸಮಿತಿ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವಜನಿಕರ ಆಕ್ರೋಶಕ್ಕೆ ಮಣಿದು RTI ವಿನಾಯಿತಿ ಆದೇಶ ರದ್ದು ಮಾಡಿದ ತಮಿಳುನಾಡು ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ಹಿಂಪಡೆದುಕೊಂಡಿದೆ. ಸಾರ್ವಜನಿಕ (ಕಾನೂನು...

‘ಕೊಂದವರು ಯಾರು?’: ಧರ್ಮಸ್ಥಳ ಪ್ರಕರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹ, ಅ.2 ರಂದು ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ ಎನ್ನಲಾದ ಮಹಿಳೆಯರ ಮೇಲಿನ ವ್ಯವಸ್ಥಿತ ಲೈಂಗಿಕ ದೌರ್ಜನ್ಯ, ನಿಗೂಢ ಕೊಲೆಗಳು ಹಾಗೂ ಸಂತ್ರಸ್ತ ಕುಟುಂಬಗಳ ಸುದೀರ್ಘ ನ್ಯಾಯದ ಹೋರಾಟಕ್ಕೆ ಬೆಂಬಲವಾಗಿ...

2016ರಲ್ಲೇ ತಮ್ಮನ್ನು ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ IAS ಜಿಜಿ ಥಾಮ್ಸನ್

ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗಲೇ ಬಿಜೆಪಿ ಪರವಾಗಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದರು ಎಂಬ ಕಟು ಸತ್ಯವೊಂದು ಈಗ ಬಹಿರಂಗವಾಗಿದೆ. ಅವರು ನನಗೆ...

ಚಿಕ್ಕಮಗಳೂರು : ಚುನಾವಣಾ ಆಯೋಗದ ವಿರುದ್ಧ ಜನಾಂದೋಲನಕ್ಕೆ ಪ್ರಕಾಶ್ ರಾಜ್ ಕರೆ

ನ್ಯಾಯಾಂಗದ ಮೂಲಕ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಕೆಳಗಿಳಿಸುವುದು ಸಾಧ್ಯವಾಗದಿರಬಹುದು, ಆದರೆ ಜನರ ಹಕ್ಕುಗಳಿಗಾಗಿ ಬೀದಿ ಚಳವಳಿ ನಡೆಯಬೇಕು ಎಂದು ಪ್ರಕಾಶ್ ರಾಜ್ ಕರೆ ನೀಡಿದರು. ಎಸ್‌ಐಆರ್ ಪರಿಶೋಧನೆ ಮತ್ತು...

ಬೆಳಗಾವಿ| ಕೂಲಿ ನೇಕಾರರಿಗೆ ಕಾರ್ಮಿಕ ಇಲಾಖೆ ನೀಡುವ ‘ಸ್ಮಾರ್ಟ್ ಕಾರ್ಡ್’ನಲ್ಲಿ ಲೋಪ, ಅನ್ಯಾಯ ಸರಿಪಡಿಸಲು ಆಗ್ರಹ

ಹಗಲಿರುಳೆನ್ನದೆ ಮಗ್ಗಗಳ ಮುಂದೆ ಕುಳಿತು ಬಟ್ಟೆ ನೇಯುವ ಬೆಳಗಾವಿ ಭಾಗದ ಲಕ್ಷಾಂತರ ಕೂಲಿ ನೇಕಾರರ ಬದುಕು ಇಂದು ಭರವಸೆಯಿಲ್ಲದ ತೂಗುಯ್ಯಾಲೆಯಲ್ಲಿದೆ. ಒಂದೆಡೆ ಕಳೆದ ಒಂದು ದಶಕದಿಂದ (10 ವರ್ಷ) ಮಾಲೀಕರಿಂದ ಶ್ರಮಕ್ಕೆ ತಕ್ಕಂತೆ...

ಅಧಿಕಾರಿಯ ಡೆತ್‌ ನೋಟ್‌ನಲ್ಲಿ ಗ್ಯಾನೇಶ್ ಕುಮಾರ್ ಹೆಸರು!: ಮತ್ತೆ ಮುನ್ನೆಲೆಗೆ ಬಂದ ಹಳೆ ಕೇಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ದೇಶದಾದ್ಯಂತ ಆಕ್ರೋಶದ ಅಲೆ ಎದ್ದಿರುವ ಈ ಸಂದರ್ಭದಲ್ಲಿ, ಸುಮಾರು ಎರಡು ದಶಕಗಳ ಹಿಂದೆ, ಮಲೇಷ್ಯಾದ ಯೋಜನಾ ಅಧಿಕಾರಿಯೊಬ್ಬರ ಆತ್ಮಹತ್ಯೆ ಪತ್ರದಲ್ಲಿ ಗ್ಯಾನೇಶ್ ಕುಮಾರ್...

ಹಾಸನ| SIR ಅಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ನಟ ಪ್ರಕಾಶ್ ರಾಜ್ ಪಟ್ಟು

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯ ನೆಪದಲ್ಲಿ ಲಕ್ಷಾಂತರ ನಾಗರಿಕರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಕೇವಲ ಮತದಾರರ ವೈಯಕ್ತಿಕ ಸಮಸ್ಯೆಯಲ್ಲ, ಬದಲಿಗೆ ದೇಶದ ಸಂವಿಧಾನ...

SIR ರದ್ದುಗೊಳಿಸಿ, ಗ್ಯಾನೇಶ್ ಕುಮಾರ್‌ನನ್ನು ವಜಾಗೊಳಿಸುವಂತೆ ಆಗ್ರಹಿಸಿ ಎಡಪಕ್ಷಗಳಿಂದ ಪ್ರತಿಭಟನೆ

ದೇಶಾದ್ಯಂತ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಸಂಪೂರ್ಣ ಅಪ್ರಜಾಸತ್ತಾತ್ಮಕವಾಗಿದ್ದು, ಲಕ್ಷಾಂತರ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಅವರ ಸಂವಿಧಾನಾತ್ಮಕ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಎಡಪಕ್ಷಗಳು ಆರೋಪಿಸಿವೆ. ಈ ಪ್ರಕ್ರಿಯೆಯನ್ನು...

ಗುವಾಹಟಿಯಲ್ಲಿ ಸಿಜೆಪಿ ಸಭೆಗೆ ಪೊಲೀಸರಿಂದ ಅಡ್ಡಿ; ಅಶುತೋಷ್ ರಾಂಕಾ ಮತ್ತು ತಂಡ ವಶಕ್ಕೆ

ಅಸ್ಸಾಂ ಪೊಲೀಸರು ಭಾನುವಾರ (ಸೆ.27) ಬೆಳಿಗ್ಗೆ ಗುವಾಹಟಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ'ಯ (ಸಿಜೆಪಿ) ಸಹ-ಸಂಯೋಜಕ ಅಶುತೋಷ್ ರಾಂಕಾ ಮತ್ತು ಸಂಘಟನೆಯ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅಸ್ಸಾಂ ಸಚಿವಾಲಯದ ಸಮೀಪದಲ್ಲಿ...

ಬಿಜೆಪಿಯಿಂದ ಸ್ಪರ್ಧಿಸುವಂತೆ ಗ್ಯಾನೇಶ್ ಕುಮಾರ್ ಈ ಹಿಂದೆ ನನಗೆ ಆಫರ್ ನೀಡಿದ್ದರು! — ಕೇರಳದ ಮಾಜಿ ಚೀಫ್ ಸೆಕ್ರೆಟರಿ ಜಿಜಿ ತೋಮ್ಸನ್ ಸ್ಪೋಟಕ ಹೇಳಿಕೆ!

ಚುನಾವಣಾ ಆಯೋಗದಲ್ಲಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಮತ ಕಡಿತ ಹಾಗೂ ಏಕಪಕ್ಷೀಯ ನಿರ್ಧಾರಗಳ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿರುವ ಬೆನ್ನಲ್ಲೇ, ಹಾಲಿ ಮುಖ್ಯ ಚುನಾವಣಾ ಆಯುಕ್ತ...