Homeಮುಖಪುಟಬಿಹಾರ| ಗ್ರಾಮ ತೊರೆಯಿರಿ ಅಥವಾ 'ಘರ್ ವಾಪ್ಸಿ'ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

- Advertisement -
- Advertisement -

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು ‘ಕ್ಲಾರಿಯನ್ ಇಂಡಿಯಾ’ ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. ‘ಘರ್ ವಾಪ್ಸಿ’ಯಾಗಿ ಅಥವಾ ಗ್ರಾಮ ತೊರೆಯುವಂತೆ ಬೆದರಿಕೆ ಹಾಕಿದ್ದು, ಇದು ಅಲ್ಪಸಂಖ್ಯಾತ ಸಮುದಾಯದಲ್ಲಿ ಭಯ ಹುಟ್ಟುಹಾಕಿದೆ.

ಸುದ್ದಿ ಪ್ರಕಾರ, ಆಗಸ್ಟ್ 8 ರಂದು ಹಳ್ಳಿಯಾದ್ಯಂತ ಚಲಿಸುವ ಮೂರು ಚಕ್ರಗಳ ವಾಹನದಲ್ಲಿ ಅಳವಡಿಸಲಾದ ಧ್ವನಿವರ್ಧಕಗಳ ಮೂಲಕ ಬೆದರಿಕೆ ಸಂದೇಶ ಪ್ರಸಾರ ಮಾಡಲಾಯಿತು. ಬೆದರಿಕೆ ಹಾಕುತ್ತಿರುವ ವೀಡಿಯೊಗಳು ಅಂದಿನಿಂದ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ.

ಹಿಂದುತ್ವ ಗುಂಲಿನ ಸದಸ್ಯರು ಕ್ರಿಶ್ಚಿಯನ್ ಕುಟುಂಬಗಳನ್ನು ಸಮಾಜ ದ್ರೋಹಿಗಳು ಕರೆದಿದ್ದಾರೆ. ಸಂಪೂರ್ಣ ಸಾಮಾಜಿಕ ಬಹಿಷ್ಕಾರ ಜಾರಿಗೊಳಿಸುವಂತೆ ಇತರೆ ಸಮುದಾಯದ ನಿವಾಸಿಗಳಿಗೆ ಕರೆ ನೀಡಿದ್ದಾರೆ. ಗೋಪಾಲಪುರವು ಐತಿಹಾಸಿಕವಾಗಿ ಸಂಪೂರ್ಣವಾಗಿ ಹಿಂದೂಗಳಾಗಿದ್ದು, ಭವಿಷ್ಯದಲ್ಲಿ ಹಿಂದೂಗಳು ಮಾತ್ರ ಇಲ್ಲಿ ವಾಸಿಸಬೇಕು ಎಂದು ಹೇಳಿದ್ದಾರೆ. ಕ್ರಿಶ್ಚಿಯನ್ನರು ಪರಿಣಾಮಕಾರಿಯಾಗಿ ತಮ್ಮ ನಂಬಿಕೆಯನ್ನು ತ್ಯಜಿಸಬೇಕು, ಘರ್‌ ವಾಪ್ಸಿಯಾಗದಿದ್ದರೆ ತಮ್ಮ ಮನೆಗಳನ್ನು ತೊರೆಯಬೇಕು ಎಂದು ಬರದರಿಕೆ ಹಾಕುತ್ತಿದ್ದಾರೆ.

ಲೌಡ್‌ಸ್ಪೀಕರ್ ಸಂದೇಶವು ಕ್ರಿಶ್ಚಿಯನ್ ಸಮುದಾಯದ ಪೂಜಾ ಸ್ಥಳಗಳನ್ನು ಸಹ ಗುರಿಯಾಗಿರಿಸಿಕೊಂಡಿದೆ. ಗ್ರಾಮದ ಸಾಮಾಜಿಕ ಸುವ್ಯವಸ್ಥೆಗೆ ಚರ್ಚ್‌ಗಳು ಅಪಾಯಕಾರಿ ಎಂದು ಅವರು ಆರೋಪಿಸಿದ್ದಾರೆ. ಇಂದು ಚರ್ಚ್‌ಗಳಿಗೆ ಅನುಮತಿ ನೀಡಿದರೆ, ನಾಳೆ ಮಸೀದಿಗಳು ನಿರ್ಮಾಣವಾಗುತ್ತವೆ ಎಂದು ಜನರನ್ನು ತಪ್ಪುದಾರಿಗೆ ಎಳೆಯುವ ಕೆಲಸ ಮಾಡಿದ್ದಾರೆ. ಈ ಬೆಳವಣಿಗೆಯು ಭಾರತದ ಅತಿದೊಡ್ಡ ಧಾರ್ಮಿಕ ಅಲ್ಪಸಂಖ್ಯಾತರನ್ನು ಅಪಾಯವೆಂದು ಬಿಂಬಿಸುತ್ತದೆ. ಓರ್ವ ಭಾಷಣಕಾರನು ಕ್ರಿಶ್ಚಿಯನ್ ಅವಕಾಶ ನೀಡುವುದರಿಂದ ಗ್ರಾಮವು “ಹಾಳಾಗುತ್ತದೆ” ಎಂದು ಹೇಳಿದ್ದಾನೆ.

ಗೋಪಾಲಪುರವು ಒಂದು ಸಣ್ಣ ಹೊಸ ಬಡಾವಣೆಯಾಗಿದೆ. 2011 ರಲ್ಲಿ ನಡೆದ ಕೊನೆಯ ಜನಗಣತಿಯಲ್ಲಿ, ಇದು 411 ಕುಟುಂಬಗಳಲ್ಲಿ 2,387 ನಿವಾಸಿಗಳನ್ನು ಹೊಂದಿತ್ತು. ಈಗ ಕ್ರಿಶ್ಚಿಯನ್ ಸಮುದಾಯದ 42 ಕುಟುಂಬಗಳು ನೆಲೆ ನಿಂತಿವೆ.

ಭದ್ರತಾ ಕಾಳಜಿಗಳನ್ನು ಉಲ್ಲೇಖಿಸಿದ ಹೆಸರು ಬಹಿರಂಗಪಡಿಸಲು ಬಯಸದ ಕ್ರಿಶ್ಚಿಯನ್ ನಿವಾಸಿಯೊಬ್ಬರು, ಸಮುದಾಯವು ದೀರ್ಘಕಾಲದಿಂದ ಒತ್ತಡವನ್ನು ಎದುರಿಸುತ್ತಿದೆ ಎಂದು ಹೇಳಿದರು.

ಹಿಂದುತ್ವ ಗುಂಪುಗಳು ಭಾರತೀಯ ಕ್ರೈಸ್ತರು ಮತ್ತು ಮುಸ್ಲಿಮರು ಹಿಂದೂಗಳ ವಂಶಸ್ಥರು, ಅವರನ್ನು ಮತ್ತೆ ಹಿಂದೂ ಧರ್ಮಕ್ಕೆ ತರಬೇಕು ಎಂದು ವಾದಿಸಲು ‘ಘರ್ ವಾಪ್ಸಿ’ ಎಂಬ ಪರಿಕಲ್ಪನೆಯನ್ನು ಬಹಳ ಹಿಂದಿನಿಂದಲೂ ಬಳಸುತ್ತಿವೆ.

ಈ ಘಟನೆಯು ಸಾಂವಿಧಾನಿಕ ಕಳವಳಗಳನ್ನು ಹುಟ್ಟುಹಾಕುತ್ತದೆ ಎಂದು ಮಾನವ ಹಕ್ಕುಗಳ ಪರ ವಕೀಲರು ಹೇಳಿದ್ದಾರೆ. ಜೆಸ್ಯೂಟ್ ಪಾದ್ರಿ ಮತ್ತು ಕಾರ್ಯಕರ್ತ ಫಾದರ್ ಸೆಡ್ರಿಕ್ ಪ್ರಕಾಶ್ ಅವರು, ಇಡೀ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಪ್ರತ್ಯೇಕತೆಗೆ ಕರೆಗಳು ಧಾರ್ಮಿಕ ವಿವಾದವನ್ನು ಮೀರಿ ಭಾರತದ ಸಾಂವಿಧಾನಿಕ ಖಾತರಿಗಳಾದ ಆತ್ಮಸಾಕ್ಷಿಯ ಸ್ವಾತಂತ್ರ್ಯ ಮತ್ತು ಧರ್ಮವನ್ನು ಪ್ರತಿಪಾದಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೇರವಾಗಿ ಪ್ರಶ್ನಿಸುತ್ತವೆ ಎಂದು ಹೇಳಿದರು.

ಈ ದ್ವೇಷ ಭಾಷಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ವಾಷಿಂಗ್ಟನ್ ಮೂಲದ ಇಂಡಿಯಾ ಹೇಟ್ ಲ್ಯಾಬ್ 2025 ರಲ್ಲಿ ದ್ವೇಷ ಭಾಷಣ ಎಂದು ಕರೆಯಲಾದ 1,318 ಪ್ರಕರಣಗಳನ್ನು ದಾಖಲಿಸಿದೆ. ಇದು 2024 ರಲ್ಲಿ 1,165 ಮತ್ತು 2023 ರಲ್ಲಿ 668 ರಷ್ಟಿತ್ತು.

2025 ರ ಘಟನೆಗಳಲ್ಲಿ, 1,164 ಘಟನೆಗಳು, ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ಅದರ ಮಿತ್ರ ಪಕ್ಷಗಳು ಆಡಳಿತ ನಡೆಸುವ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ-ಎನ್‌ಸಿಆರ್‌ನಲ್ಲಿ ಸರಣಿ ಅತ್ಯಾಚಾರ: ‘ವ್ಯವಸ್ಥಿತ ವೈಫಲ್ಯ’ ಎಂದ ಸುಪ್ರೀಂ ಕೋರ್ಟ್, ಸಾರ್ವಜನಿಕ ಸ್ಥಳಗಳು ‘ಅಪಾಯದ ವಲಯ’ವಾಗಲು ಬಿಡಲಾಗದು

ನವದೆಹಲಿ: ದೆಹಲಿ-ಎನ್‌ಸಿಆರ್‌ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿರುವ ಸರಣಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಈ ಪ್ರಕರಣಗಳು ಕೇವಲ ಪ್ರತ್ಯೇಕ ಅಪರಾಧಗಳಾಗಿ ನೋಡಲು ಸಾಧ್ಯವಿಲ್ಲ ಎಂದು...

ಎಲ್‌ಪಿಯು ಕ್ಯಾಂಪಸ್‌ ಹಿಂಸಾಚಾರ: ಹೆಣ್ಣುಮಕ್ಕಳಿಗೆ ‘ಹಾಸ್ಟೆಲ್‌ನೊಳಗೂ ಸುರಕ್ಷತೆ ಇಲ್ಲದಿದ್ದರೆ ಅದು ಗಂಭೀರ ಸಮಸ್ಯೆ’: ಅಭಿಜೀತ್ ದೀಪ್ಕೆ 

ಫಾಗ್ವಾರಾ: ಪಂಜಾಬ್‌ನ ಫಾಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯ (ಎಲ್‌ಪಿಯು) ಕ್ಯಾಂಪಸ್‌ನಲ್ಲಿ ವಾರಾಂತ್ಯದಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಮತ್ತು ಬೆಂಕಿ ಹಚ್ಚಿದ ಘಟನೆಗಳ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ...

ಉಜ್ಜಯಿನಿ ಶಾಹಿ ಮಸೀದಿ ವಿವಾದ: ರಸ್ತೆ ಅಗಲೀಕರಣಕ್ಕಾಗಿ ಭಾಗಶಃ ಕೆಡವುವಿಕೆಯ ವಿರುದ್ಧದ ಮೇಲ್ಮನವಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್ 

ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಶಾಹಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ಸೋಮವಾರ, ಸೆಪ್ಟೆಂಬರ್ 28ರಂದು ವಿಲೇವಾರಿ ಮಾಡಿದೆ. ಮಸೀದಿ...

ಮುಖ್ಯ ಚುನಾವಣಾ ಆಯುಕ್ತ ಹುದ್ದೆಯಿಂದ ಗ್ಯಾನೇಶ್ ಕುಮಾರ್‌ ಅಮಾನತುಗೊಳಿಸಲು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಇತರ ಪರಿಹಾರಗಳ ಜೊತೆಗೆ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಬೇಕು ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಅದರ ಮುಖ್ಯಸ್ಥರು ಏಕಪಕ್ಷೀಯವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂಬುವುದಾಗಿ ಘೋಷಿಸಬೇಕು...

UPI ವಹಿವಾಟುಗಳ ಮೇಲೆ ಶುಲ್ಕ : ಕೇಂದ್ರದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಯುಪಿಐ ಮೂಲಕ ವ್ಯಕ್ತಿಗಳಿಂದ ವ್ಯಾಪಾರಿಗಳಿಗೆ ರೂ. 2,000ಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಶುಲ್ಕ ವಿಧಿಸುವ ಕ್ರಮದ ಆಧಾರವನ್ನು ವಿವರಿಸಿ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.28) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ...

TMC ಪಕ್ಷ ಚಿಹ್ನೆ ಸಂಘರ್ಷ: ಆರು ತಿಂಗಳು ಬೇಕಿಲ್ಲ, ‘ಎಐ’ ಬಳಸಿ 3 ತಿಂಗಳಲ್ಲಿ ಇತ್ಯರ್ಥಗೊಳಿಸಿ ಎಂದ ಸುಪ್ರೀಂ ಕೋರ್ಟ್‌!

ಪಶ್ಚಿಮ ಬಂಗಾಳದ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹೆಸರು ಹಾಗೂ ಅಧಿಕೃತ 'ಹೂವು ಮತ್ತು ಹುಲ್ಲು' (Flowers & Grass) ಚುನಾವಣಾ ಚಿಹ್ನೆಯ ಹಕ್ಕುಸ್ವಾಮ್ಯಕ್ಕೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ಬಂಡಾಯ ಹಾಗೂ...

‘ದೆಹಲಿ-ಎನ್‌ಸಿಆರ್‌ ಅತ್ಯಾಚಾರ ಪ್ರಕರಣಗಳು ಪೊಲೀಸ್ ಮತ್ತು ಆಡಳಿತ ವ್ಯವಸ್ಥೆಯ ವೈಫಲ್ಯವನ್ನು ಎತ್ತಿ ತೋರಿಸುತ್ತವೆ’ : ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ದೆಹಲಿಯ ಉದ್ಯಾನವನವೊಂದರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಚಲಿಸುತ್ತಿದ್ದ ಸ್ಲೀಪರ್ ಬಸ್‌ನೊಳಗೆ ಅಪ್ರಾಪ್ತೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಸೇರಿದಂತೆ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಇತ್ತೀಚೆಗೆ ವರದಿಯಾದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್...

ಆಗ್ರಾದಲ್ಲಿ ಸಿಇಸಿ ಗ್ಯಾನೇಶ್ ಕುಮಾರ್ ನಿವಾಸದ ಮೇಲೆ ‘ಗ್ಯಾನೇಶ್ ಗದ್ದರ್, ವೋಟ್ ಚೋರ್’ ಬರಹ; ಎಸ್‌ಐಆರ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ

ಆಗ್ರಾ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ದೇಶಾದ್ಯಂತ ರಾಜಕೀಯ ಸಂಘರ್ಷ ತೀವ್ರಗೊಳ್ಳುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ನಿವಾಸದ ಹೊರಗೆ...

‘ಇಂತಹ ಸರ್ಕಾರವನ್ನು ಬೆಂಬಲಿಸುವುದಕ್ಕೆ ವಿಷಾದವಿದೆ’: ಬಿಹಾರದ ಕಾನೂನು-ಸುವ್ಯವಸ್ಥೆ ಬಗ್ಗೆ ಚಿರಾಗ್ ಪಾಸ್ವಾನ್ ಬಹಿರಂಗ ಅಸಮಾಧಾನ

ಪಾಟ್ನಾ: ಬಿಹಾರದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಎನ್‌ಡಿಎ ಮೈತ್ರಿಕೂಟದ ಪ್ರಮುಖ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರದ...

ಕೊಲ್ಕತ್ತಾದ SRFTIನಲ್ಲಿ ಆರ್‌ಎಸ್‌ಎಸ್-ಸಂಯೋಜಿತ ಸಭೆಗೆ ವಿರೋಧ: 150ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಭೀಕರ ಹಲ್ಲೆ ಆರೋಪ!

ಕೊಲ್ಕತ್ತಾದ ಪ್ರತಿಷ್ಠಿತ ‘ಸತ್ಯಜಿತ್ ರೇ ಫಿಲ್ಮ್ ಆಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್’ (SRFTI) ಆವರಣದಲ್ಲಿ ಭಾನುವಾರ ವಿದ್ಯಾರ್ಥಿಗಳು ಮತ್ತು ಆರ್‌ಎಸ್‌ಎಸ್‌ ಜೊತೆ ಸಂಪರ್ಕ ಹೊಂದಿರುವ ‘ಅಖಿಲ ಭಾರತೀಯ ಗ್ರಾಹಕ್ ಪಂಚಾಯತ್’ (ABGP) ಸದಸ್ಯರ ನಡುವೆ...