Homeಕರ್ನಾಟಕ‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

- Advertisement -
- Advertisement -

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಬಹಿರಂಗ ಸವಾಲು ಹಾಕುವ ಮೂಲಕ ತೀವ್ರ ತಿರುಗೇಟು ನೀಡಿದ್ದಾರೆ. ತಮ್ಮ ಕುಟುಂಬದ ಅಡಿಯಲ್ಲಿರುವ ಟ್ರಸ್ಟ್‌ನ ಎಲ್ಲಾ ಆರ್ಥಿಕ ದಾಖಲೆಗಳನ್ನು ಸಾರ್ವಜನಿಕರ ಮುಂದಿಡಲು ತಾವು ಸಿದ್ಧವೆಂದಿರುವ ಅವರು, ಅದೇ ವೇದಿಕೆಯಲ್ಲಿ ಆರ್‌ಎಸ್‌ಎಸ್ ಹಾಗೂ ಅಯೋಧ್ಯೆ ರಾಮಮಂದಿರದ ಲೆಕ್ಕಪತ್ರಗಳನ್ನು ಬಹಿರಂಗಪಡಿಸಲು ಬಿಜೆಪಿ ಸಿದ್ಧವಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತನಿಖೆಗೆ ಆದೇಶಿಸಿದೆ ಎಂದು ಪ್ರತಿಪಾದಿಸಿ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಖರ್ಗೆ ಕುಟುಂಬವನ್ನು ಗುರಿಯಾಗಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿತ್ತು. ನಿರಂತರವಾಗಿ ಆರ್‌ಎಸ್‌ಎಸ್ ನೋಂದಣಿ, ದೇವಸ್ಥಾನಗಳ ಹಾಗೂ ವಿವಿಧ ಹಿಂದೂ ಸಂಘಟನೆಗಳ ಲೆಕ್ಕಪತ್ರ ಹಾಗೂ ದಾಖಲೆಗಳನ್ನು ಕೇಳುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ತಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಭೂ ಅಕ್ರಮದ ಆರೋಪದ ಕುರಿತು ಬಾಯ್ಬಿಡಲಿ ಎಂದು ಬಿಜೆಪಿ ಸವಾಲೆಸೆದಿತ್ತು.

ಬಿಜೆಪಿಯ ಈ ಆರೋಪಕ್ಕೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಪ್ರತ್ಯುತ್ತರ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕಮಲ ಪಾಳೆಯದ ರಾಜಕೀಯ ತಂತ್ರಗಾರಿಕೆಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಾನು ಆರ್‌ಎಸ್‌ಎಸ್ ಲೆಕ್ಕ ಕೇಳಿದರೆ ನೀವು ನನ್ನ ಲೆಕ್ಕ ಕೇಳುತ್ತೀರಿ, ಜನರು ಶ್ರೀರಾಮನ ಲೆಕ್ಕ ಕೇಳಿದರೆ ನೀವು ಬುದ್ಧನ ಲೆಕ್ಕ ಕೇಳುತ್ತೀರಿ ಎಂದು ವಾಗ್ದಾಳಿ ನಡೆಸಿರುವ ಅವರು, ಖಂಡಿತವಾಗಿಯೂ ತಂದೆಯಿಂದ ಹಿಡಿದು ತಮ್ಮವರೆಗೆ ನಾವು ಲೆಕ್ಕ ಕೊಡಲು ತಯಾರಿದ್ದೇವೆ, ಆದರೆ ನಮ್ಮನ್ನು ಪ್ರಶ್ನಿಸುವ ನೀವು ಲೆಕ್ಕ ನೀಡಲು ತಯಾರಿದ್ದೀರಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಬೌದ್ಧ ಮಂದಿರವನ್ನು ನಿರ್ವಹಿಸುತ್ತಿರುವ ಸಿದ್ದಾರ್ಥ ವಿಹಾರ ಟ್ರಸ್ಟ್ ಒಂದು ಸಂಪೂರ್ಣ ನಿಯಮಾನುಸಾರ ನೋಂದಾಯಿತ ಸಂಸ್ಥೆಯಾಗಿದ್ದು, ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸರ್ಕಾರಕ್ಕೆ ನಿಯಮಿತವಾಗಿ ತೆರಿಗೆಯನ್ನೂ ಪಾವತಿಸುತ್ತಿದೆ. ಹೀಗಾಗಿ ಟ್ರಸ್ಟ್‌ನ ಪ್ರತಿಯೊಂದು ಲೆಕ್ಕಪತ್ರಗಳೊಂದಿಗೆ ಸಾರ್ವಜನಿಕರೆದುರು ಬಹಿರಂಗ ಚರ್ಚೆಗೆ ಬರಲು ತಾವು ಸಿದ್ಧರಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಬಿಜೆಪಿಗೆ ಸವಾಲು ಹಾಕಿರುವ ಅವರು, ನಿಮ್ಮ ಪಿತೃಸಂಸ್ಥೆಯಾಗಿರುವ ಆರ್‌ಎಸ್‌ಎಸ್‌ನ ಲೆಕ್ಕಪತ್ರಗಳು ಹಾಗೂ ಅಯೋಧ್ಯೆ ರಾಮಮಂದಿರದ ಲೆಕ್ಕಪತ್ರಗಳೊಂದಿಗೆ ನೀವು ಬಹಿರಂಗ ಚರ್ಚೆಗೆ ಬರುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್‌ನ ಹಣದ ಮೂಲ ಯಾವುದು ಮತ್ತು ಸಿದ್ದಾರ್ಥ ವಿಹಾರ ಟ್ರಸ್ಟಿನ ಆದಾಯ ಯಾವುದು ಎಂಬುದನ್ನು ಇಡೀ ಜನತೆಯ ಎದುರು ಬಹಿರಂಗಪಡಿಸೋಣ ಬನ್ನಿ ಎಂದು ನೇರ ಸವಾಲೆಸೆದಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಮೊದಲಿನಿಂದಲೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾನೂನಾತ್ಮಕ ಅಸ್ತಿತ್ವ ಹಾಗೂ ಅದರ ನಿಧಿ ಸಂಗ್ರಹಣೆಯ ಮೂಲಗಳನ್ನು ಪ್ರಶ್ನಿಸುತ್ತಲೇ ಬಂದಿದ್ದಾರೆ. ಶತಮಾನ ಪೂರೈಸುತ್ತಾ ಬಂದಿದ್ದರೂ ಆರ್‌ಎಸ್‌ಎಸ್ ಅಧಿಕೃತವಾಗಿ ನೋಂದಣಿಯಾಗದಿರುವುದು ಮತ್ತು ಅದರ ಆರ್ಥಿಕ ವ್ಯವಹಾರಗಳು ಸಾರ್ವಜನಿಕ ಪರಿಶೀಲನೆಗೆ ಲಭ್ಯವಿಲ್ಲದಿರುವುದನ್ನು ಅವರು ಈ ಹಿಂದೆಯೂ ಬಹಿರಂಗ ವೇದಿಕೆಗಳಲ್ಲಿ ಪ್ರಸ್ತಾಪಿಸಿದ್ದರು.

ಅದೇ ವಿಚಾರವನ್ನು ಪೋಸ್ಟ್‌ನಲ್ಲಿ ಮತ್ತೊಮ್ಮೆ ನೆನಪಿಸಿರುವ ಅವರು, ಸಿದ್ದಾರ್ಥ ವಿಹಾರ ಟ್ರಸ್ಟ್ ಪಾರದರ್ಶಕವಾಗಿ ತೆರಿಗೆ ಪಾವತಿಸುವ ಸಂಸ್ಥೆಯಾಗಿದೆ. ಆದರೆ ಬಿಜೆಪಿ ಉತ್ತರಿಸಬೇಕಾದ ಮೂಲಭೂತ ಪ್ರಶ್ನೆಗಳು ಹಾಗೆಯೇ ಬಾಕಿ ಇವೆ. ನಿಮ್ಮ ಯಜಮಾನಿಕೆಯ ಸಂಸ್ಥೆಯಾಗಿರುವ ಆರ್‌ಎಸ್‌ಎಸ್ ಇಂದಿಗೂ ಏಕೆ ನೋಂದಾವಣೆಯಾಗಿಲ್ಲ? ಅದನ್ನು ಯಾವಾಗ ನೋಂದಣಿ ಮಾಡಿಕೊಳ್ಳುವಿರಿ? ಆರ್‌ಎಸ್‌ಎಸ್‌ನ ಆರ್ಥಿಕ ಚಟುವಟಿಕೆಗಳು ಮತ್ತು ಹಣದ ಮೂಲಗಳ ಬಗ್ಗೆ ಪಾರದರ್ಶಕ ದಾಖಲೆಗಳೊಂದಿಗೆ ಯಾವಾಗ ಸಾರ್ವಜನಿಕವಾಗಿ ಚರ್ಚಿಸುತ್ತೀರಿ ಎಂದು ಸಚಿವ ಖರ್ಗೆ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...