Homeಮುಖಪುಟಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ 'ಪಾಕೆಟ್ ಸ್ಕ್ವೇರ್' ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

ಪ್ರಧಾನಿ ಮೋದಿ ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಉಲ್ಟಾ, ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ತ್ರಿವರ್ಣದ ‘ಪಾಕೆಟ್ ಸ್ಕ್ವೇರ್’ ಬಣ್ಣಗಳ ಸರಣಿಯನ್ನು ಬೆಟ್ಟು ಮಾಡಿರುವ ಕಾಂಗ್ರೆಸ್ ಪಕ್ಷ, ಪ್ರಧಾನಿಯವರು ಭಾರತದ ಬದಲು ಐರ್ಲೆಂಡ್‌ನ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಂತೆ ಭಾಸವಾಗುತ್ತಿದೆ ಎಂದು ತೀವ್ರವಾಗಿ ವ್ಯಂಗ್ಯವಾಡಿದೆ.

ಪ್ರಧಾನಿ ಮೋದಿ ಅವರು ಕೆಂಪುಕೋಟೆಯ ಮೇಲೆ ಸಾಂಪ್ರದಾಯಿಕ ಕೆಂಪು ಬಣ್ಣದ ರಾಜಸ್ಥಾನಿ ಹಾಗೂ ಗುಜರಾತಿ ಶೈಲಿಯ ‘ಟೈ-ಅಂಡ್-ಡೈ’ (ಬಂಧನಿ) ಪೇಟ ತೊಟ್ಟು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಬಿಳಿ ಕುರ್ತಾ ಹಾಗೂ ಚಾಕೊಲೇಟ್ ಕಂದು ಬಣ್ಣದ ವೆಸ್ಟ್ ಕೋಟ್ ಧರಿಸಿದ್ದ ಅವರು, ಜೇಬಿನಲ್ಲಿ ಕೇಸರಿ, ಬಿಳಿ ಮತ್ತು ಹಸಿರು ಬಣ್ಣದ ಮೂರು ‘ಪಾಕೆಟ್ ಸ್ಕ್ವೇರ್’ಗಳನ್ನು ಇರಿಸಿಕೊಂಡಿದ್ದರು.

ಆದರೆ, ಭಾರತದ ತ್ರಿವರ್ಣ ಧ್ವಜವನ್ನು ಪ್ರತಿನಿಧಿಸಬೇಕಿದ್ದ ಈ ಬಣ್ಣಗಳ ಕ್ರಮ ಸರಿಯಾದ ಸರಣಿಯಲ್ಲಿರಲಿಲ್ಲ ಎಂಬುದನ್ನು ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಕ್ಷಣವೇ ಗುರುತಿಸಿದರು.

ಈ ಕುರಿತು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಪ್ರಧಾನಿ ಮೋದಿಯವರ ಫೋಟೋ ಹಂಚಿಕೊಂಡು, “ಸಾಹೇಬರು ಉರ್ದು ಶೈಲಿಯಲ್ಲಿ ತ್ರಿವರ್ಣ ಧ್ವಜ ಧರಿಸಿದಂತಿದೆ. ಇಲ್ಲವೇ ಭಾರತದ ಬದಲು ಐರ್ಲೆಂಡ್ ದೇಶದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದಂತಿದೆ” ಎಂದು ತಿರುಗೇಟು ನೀಡಿದ್ದಾರೆ.

ಜೇಬಿನಲ್ಲಿದ್ದ ಬಣ್ಣಗಳ ಸರಣಿಯು ಹಸಿರು, ಬಿಳಿ ಮತ್ತು ಕೇಸರಿ ರೂಪದಲ್ಲಿ ಜೋಡಣೆಯಾಗಿದ್ದು, ಇದು ಐರ್ಲೆಂಡ್ ದೇಶದ ರಾಷ್ಟ್ರಧ್ವಜದ ಬಣ್ಣದ ವಿನ್ಯಾಸವನ್ನು ಹೋಲುತ್ತಿತ್ತು ಎಂಬುದನ್ನು ಪವನ್ ಖೇರಾ ತಮ್ಮ ಪೋಸ್ಟ್ ಮೂಲಕ ಮಾರ್ಮಿಕವಾಗಿ ಬೆಟ್ಟು ಮಾಡಿದ್ದಾರೆ. ಇದನ್ನೆ ಬೇರೆ ಯಾರಾದರೂ ಮಾಡಿರುತ್ತಿದ್ದರೆ ಇಷ್ಟರಲ್ಲಿ ಬಿಜೆಪಿ ಬೊಬ್ಬೆ ಹೊಡೆದುಕೊಳ್ಳುತ್ತಿತ್ತು. ಮತ್ತೊಬ್ಬರ ದೇಶ ಪ್ರೇಮವನ್ನು ಪ್ರಶ್ನಿಸುವ ಬಿಜೆಪಿ ಇದಕ್ಕೆ ಏನು ಪ್ರತಿಕ್ರಿಯೆ ನೀಡುತ್ತದೆ? ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿಯವರ ಸ್ವಾತಂತ್ರ್ಯ ದಿನದಂದು ಧರಿಸುವ ಪೇಟಗಳ ಶೈಲಿಯು ಕಳೆದ ಕೆಲವು ವರ್ಷಗಳಿಂದ ಬಣ್ಣ ಬಣ್ಣದ ಸಾಂಪ್ರದಾಯಿಕ ವಿನ್ಯಾಸಗಳಿಂದ ಸುದ್ದಿಯಾಗುತ್ತಾ ಬಂದಿದೆ. 2024ರಲ್ಲಿ ಅವರು ಕಿತ್ತಳೆ, ಹಳದಿ ಮತ್ತು ಹಸಿರು ಬಣ್ಣಗಳ ‘ಲೆಹರಿಯಾ’ ಪೇಟ ಧರಿಸಿದ್ದರೆ, 2023ರಲ್ಲಿ ಹಳದಿ, ಹಸಿರು ಮತ್ತು ಕೆಂಪು ಬಣ್ಣದ ಪೇಟದ ಜೊತೆ ಕಪ್ಪು ಬಣ್ಣದ ಜಾಕೆಟ್ ಧರಿಸಿದ್ದರು.

ಅದೇ ರೀತಿ, 2022ರಲ್ಲಿ ಕೆಂಪು ವಿನ್ಯಾಸದ ಕೇಸರಿ ಪೇಟ ಹಾಗೂ 2021ರಲ್ಲಿ ತಿಳಿ-ಕೇಸರಿ ಬಣ್ಣದ ಪೇಟದಲ್ಲಿ ಕಂಗೊಳಿಸಿದ್ದರು. 2020ರಲ್ಲಿ ಕೋವಿಡ್ ಸಾಂಕ್ರಾಮಿಕದ ನಡುವೆ ಕೇಸರಿ ಅಂಚಿನ ಬಿಳಿ ಸ್ಕಾರ್ಫ್ ಧರಿಸಿದ್ದ ಮೋದಿ, 2014ರಲ್ಲಿ ಪ್ರಧಾನಿಯಾಗಿ ತಮ್ಮ ಚೊಚ್ಚಲ ಸ್ವಾತಂತ್ರ್ಯ ದಿನದಂದು ಕೆಂಪು ಬಣ್ಣದ ಜೋಧ್‌ಪುರಿ ಬಂಧೇಜ್ ಪೇಟವನ್ನು ಆಯ್ಕೆ ಮಾಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Mangaluru| MRPLನಲ್ಲಿ ಭಾರಿ ಸ್ಫೋಟ: 8 ಮಂದಿಗೆ ಗಾಯ, ಕಂಪಿಸಿದ ಜೋಕಟ್ಟೆಯ ಮನೆಗಳು-ಅಂಗನವಾಡಿ

ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ಇರುವ ಮಂಗಳೂರು ರಿಫೈನರಿ ಅಂಡ್‌ ಪೆಟ್ರೋಕೆಮಿಕಲ್ಸ್‌‌ ಲಿಮಿಟೆಡ್‌ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ (ಸಿಎಚ್‌ಟಿ) ಬುಧವಾರ ಮಧ್ಯಾಹ್ನ 12:15 ರ ಸುಮಾರಿಗೆ ಭಾರಿ...

ಎಸ್‌ಐಆರ್ ಪೂರ್ಣಗೊಂಡ ರಾಜ್ಯಗಳ ಫಾರ್ಮ್-6 ರಲ್ಲಿನ ‘ಸ್ವಘೋಷಣೆ’ ನಿಯಮಕ್ಕೆ ಬ್ರೇಕ್‌; ವಿವಾದದ ಬೆನ್ನಲ್ಲೇ ಚುನಾವಣಾ ಆಯೋಗದ ನಿರ್ಧಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪೂರ್ಣಗೊಂಡಿರುವ ರಾಜ್ಯಗಳಲ್ಲಿ, ಆನ್‌ಲೈನ್ ಮತದಾರರ ನೋಂದಣಿ 'ಫಾರ್ಮ್ 6' ರಲ್ಲಿದ್ದ ಹೆಚ್ಚುವರಿ ಎಸ್‌ಐಆರ್-ಸಂಬಂಧಿತ ಸ್ವಯಂಘೋಷಣಾ ಪತ್ರವನ್ನು ಚುನಾವಣಾ ಆಯೋಗವು ಹಿಂಪಡೆದಿದೆ. ಈ ನಿಯಮವು ಎಸ್‌ಐಆರ್...

‘ಇವಿಎಂ ಬಿಜೆಪಿ ಬಳಸುವ ಸಾಧನ’: ಬ್ಯಾಲೆಟ್ ಪೇಪರ್‌ಗೆ ಮರಳಲು ಖರ್ಗೆ ಒತ್ತಾಯ; ಗ್ಯಾನೇಶ್ ಕುಮಾರ್ ವಿರುದ್ಧ ವಾಗ್ದಾಳಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಕಾಂಗ್ರೆಸ್ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ...

‘ಮಹಿಳೆಯರೇ ಪರಿಸ್ಥಿತಿ ಬದಲಿಸುತ್ತಾರೆ’: ಸುರಕ್ಷತೆ ಹೆಸರಿನಲ್ಲಿ ನಿರ್ಬಂಧ, ಅತ್ಯಾಚಾರ, ಲಿಂಗಾಧಾರಿತ ಹಿಂಸೆ ವಿರುದ್ಧ ದೆಹಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ನವದೆಹಲಿ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿರುವ ಬೆನ್ನಲ್ಲೇ, ಮಹಿಳೆಯರ ಸುರಕ್ಷತೆಯ ಹೆಸರಿನಲ್ಲಿ ಅವರ ಸ್ವಾತಂತ್ರ್ಯ ಮತ್ತು ಚಲನವಲನದ ಮೇಲೆಯೇ ನಿರ್ಬಂಧ ಹೇರುವ ಕ್ರಮಗಳ ವಿರುದ್ಧ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಬೀದಿಗಿಳಿದು...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಅವರ ಮೂರನೇ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು...

Mysore| SIR ವಿರುದ್ಧ ಸರ್ಕಾರ ವಿಶೇಷ ಅಧಿವೇಶನ ನಡೆಸಲಿ: ಪ್ರಕಾಶ್ ರಾಜ್

ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹಕ್ಕು ಕಸಿಯಲಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ನಾಗರಿಕ ಸಂಘಟನೆಗಳು ಸಂಗ್ರಹಿಸಿರುವ...

SIR: ‘ಫಾರ್ಮ್ 6’ ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ!

ಹೊಸ ಮತದಾರರ ನೋಂದಣಿಗೆ ಕಾಗದಪತ್ರಗಳ ಅಡೆತಡೆ ಒಡ್ಡುತ್ತಿದ್ದ ತನ್ಮೂಲಕ ಹಕ್ಕು ವಂಚಿತಗೊಳಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಕೇಂದ್ರ ಚುನಾವಣಾ ಆಯೋಗವು ಸಾರ್ವಜನಿಕ ಮತ್ತು ಕಾನೂನಾತ್ಮಕ ಒತ್ತಡದ ಹಿನ್ನೆಲೆಯಲ್ಲಿ ಭಾಗಶಃ ಹಿಂದೆ ಸರಿದಿದೆ. 'ವಿಶೇಷ ತೀವ್ರ...

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ : ABVPಗೆ ಸೋಲು; ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಆಯ್ಕೆ

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA), ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ASA), ದಲಿತ ಸ್ಟೂಡೆಂಟ್ಸ್ ಯೂನಿಯನ್ (DSU), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಟ್ರೈಬಲ್ ಸ್ಟೂಡೆಂಟ್ಸ್ ಫೋರಂ (TSF) ಒಳಗೊಂಡ...

CWC ಸಭೆಯಲ್ಲಿ ನಿತೀಶ್ ಕುಮಾರ್ ವಿಚಾರ ಪ್ರಸ್ತಾಪ: ಸೋನಿಯಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ನಡುವೆ ಭಿನ್ನಾಭಿಪ್ರಾಯ

ಜೆಡಿಯು ನಾಯಕ ನಿತೀಶ್ ಕುಮಾರ್ 2024ರಲ್ಲಿ 'ಇಂಡಿಯಾ' (INDIA) ಮೈತ್ರಿಕೂಟದಿಂದ ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ನಾಯಕರ ನಡುವೆ ಗಂಭೀರ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...

‘ಇಸಿಐನೆಟ್’ ಸಾಫ್ಟ್‌ವೇರ್ ಲೋಪ: ಸ್ಥಳೀಯ ಅಧಿಕಾರಿಗಳ ಶಾಸನಬದ್ಧ ಅಧಿಕಾರ ಹರಣ ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಮಹಾರಾಷ್ಟ್ರ ಸಿಇಒ ಸುದೀರ್ಘ ಪತ್ರ!

ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ ತಂದಿರುವ 'ಇಸಿಐನೆಟ್' (ECINet) ಕೇಂದ್ರೀಕೃತ ಸಾಫ್ಟ್‌ವೇರ್, ಕಾನೂನುಬದ್ಧವಾಗಿ ಸ್ಥಳೀಯ ಮತದಾರ ನೋಂದಣಿ ಅಧಿಕಾರಿಗಳಿಗೆ (ERO) ನೀಡಲಾಗಿರುವ ಶಾಸನಬದ್ಧ ಅಧಿಕಾರಗಳನ್ನು ಕಸಿಯುತ್ತಿದೆ ಎಂಬ ಗಂಭೀರ ಆರೋಪ ಎದುರಾಗಿದೆ....