Homeಮುಖಪುಟ"ಹತಾಶೆಯ ಸ್ಪಷ್ಟ ಸಂಕೇತ" : ಪ್ರಧಾನಿ ಮೋದಿಯ 'ದಿಮಾಗಿ ನಕ್ಸಲ್ಸ್' ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

“ಹತಾಶೆಯ ಸ್ಪಷ್ಟ ಸಂಕೇತ” : ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

ಪ್ರಧಾನಿ ಮೋದಿಯ ‘ದಿಮಾಗಿ ನಕ್ಸಲ್ಸ್’ (ಮಾನಸಿಕ ನಕ್ಸಲರು) ಹೇಳಿಕೆಗೆ ಶನಿವಾರ (ಆ.15) ತಿರುಗೇಟು ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ‘ಹತಾಶೆಯ ಸ್ಪಷ್ಟ ಸಂಕೇತ’ ಎಂದು ತಿರುಗೇಟು ನೀಡಿದ್ದಾರೆ.

ಮೋದಿಯವರು ಈ ಹಿಂದೆ ತಮ್ಮ ವಿರೋಧಿಗಳನ್ನು ‘ಅರ್ಬನ್ ನಕ್ಸಲ್ಸ್’ (ನಗರ ನಕ್ಸಲರು) ಎಂದು ಕರೆದಿದ್ದರು. ಈಗ ಅವರನ್ನು ‘ದಿಮಾಗಿ ನಕ್ಸಲ್ಸ್’ (ಮಾನಸಿಕ ನಕ್ಸಲರು) ಎಂದು ಸಂಬೋಧಿಸುತ್ತಿದ್ದಾರೆ ಎಂದಿರುವ ಜೈರಾಮ್ ರಮೇಶ್, ಪ್ರಧಾನಿ ರಾಜ್ಯಶಾಸ್ತ್ರದಲ್ಲಿ ‘ನಿಂದನೆಯ ಮಹಾಗುರು’ ವಾಗ್ದಾಳಿ ನಡೆಸಿದ್ದಾರೆ.

ಮೊದಲು ಅವರು ತಮ್ಮ ವಿರೋಧಿಗಳನ್ನು ‘ಅರ್ಬನ್ ನಕ್ಸಲ್ಸ್’ ಎಂದು ಕರೆದರು. ಈಗ ಅವರನ್ನು ‘ದಿಮಾಗಿ ನಕ್ಸಲ್ಸ್’ ಎನ್ನುತ್ತಿದ್ದಾರೆ. ಇದು ಅವರ ಹತಾಶೆಯ ಸ್ಪಷ್ಟ ಸಂಕೇತವಾಗಿದೆ ಎಂದು ರಮೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರು ಅಂತಿಮವಾಗಿ ತಾವು ‘ಅರ್ಬನ್ ನಕ್ಸಲ್ಸ್’ ಅಥವಾ ‘ದಿಮಾಗಿ ನಕ್ಸಲ್ಸ್’ ಎಂದು ಕರೆದವರು ಯಾವುದಕ್ಕಾಗಿ ಒತ್ತಾಯಿಸಿದ್ದರೋ ಅಥವಾ ಪ್ರತಿಪಾದಿಸಿದ್ದರೋ ಅದನ್ನೇ ಮಾಡಿದರು ಎಂಬುವುದು ‘ಬೇರೆ ವಿಷಯ’ ಎಂದು ರಮೇಶ್ ಕುಟುಕಿದ್ಧಾರೆ.

ದೇಶವನ್ನುದ್ದೇಶಿಸಿ ಸತತ 13ನೇ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಿದ ಪ್ರಧಾನಿ ಮೋದಿ, “ದೇಶದಿಂದ ಸಶಸ್ತ್ರ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗಿದೆ ಎಂದು ಹೇಳಿಕೊಂಡಿದ್ದು, ಆದರೆ ಎಚ್ಚರಿಕೆಯನ್ನು ಸಡಿಲಗೊಳಿಸದಂತೆ (ಜಾಗರೂಕರಾಗಿರಲು) ಎಚ್ಚರಿಸಿದ್ದಾರೆ.

“ಸಶಸ್ತ್ರ ನಕ್ಸಲರನ್ನು ಕಾಡುಗಳಿಂದ ಓಡಿಸಲಾಗಿದ್ದರೂ, ‘ದಿಮಾಗಿ ನಕ್ಸಲ್ಸ್’ (ಮಾನಸಿಕ ನಕ್ಸಲರು) ಇಂದಿಗೂ ಹಿಂಸಾಚಾರ ಮತ್ತು ಅಶಾಂತಿಯನ್ನು ಸೃಷ್ಟಿಸಲು ಹಾಗೂ ‘ಸಮಾಜವನ್ನು ತಪ್ಪು ಹಾದಿಗೆಳೆಯಲು’ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ ಎಂದು ಮೋದಿ ಹೇಳಿಕೆ ನೀಡಿದ್ದಾರೆ.

“ಇಂತಹ ‘ಬುದ್ಧಿಜೀವಿ ನಕ್ಸಲರನ್ನು’ ಗುರುತಿಸಿ ಪ್ರತ್ಯೇಕಿಸುವ ಅಗತ್ಯವಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರೇ ಪರಿಸ್ಥಿತಿ ಬದಲಿಸುತ್ತಾರೆ’: ಸುರಕ್ಷತೆ ಹೆಸರಿನಲ್ಲಿ ನಿರ್ಬಂಧ, ಅತ್ಯಾಚಾರ, ಲಿಂಗಾಧಾರಿತ ಹಿಂಸೆ ವಿರುದ್ಧ ದೆಹಲಿ ವಿದ್ಯಾರ್ಥಿನಿಯರ ಪ್ರತಿಭಟನೆ

ನವದೆಹಲಿ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮರುಕಳಿಸುತ್ತಿರುವ ಬೆನ್ನಲ್ಲೇ, ಮಹಿಳೆಯರ ಸುರಕ್ಷತೆಯ ಹೆಸರಿನಲ್ಲಿ ಅವರ ಸ್ವಾತಂತ್ರ್ಯ ಮತ್ತು ಚಲನವಲನದ ಮೇಲೆಯೇ ನಿರ್ಬಂಧ ಹೇರುವ ಕ್ರಮಗಳ ವಿರುದ್ಧ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು ಬೀದಿಗಿಳಿದು...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಅವರ ಮೂರನೇ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ವಿದ್ಯಾರ್ಥಿ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯನ್ನು...

Mysore| SIR ವಿರುದ್ಧ ಸರ್ಕಾರ ವಿಶೇಷ ಅಧಿವೇಶನ ನಡೆಸಲಿ: ಪ್ರಕಾಶ್ ರಾಜ್

ಕೇಂದ್ರ ಚುನಾವಣಾ ಆಯೋಗವು ಜಾರಿಗೆ ತಂದಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಿಂದಾಗಿ ರಾಜ್ಯದಲ್ಲಿ ಲಕ್ಷಾಂತರ ಬಡ ಹಾಗೂ ಅರ್ಹ ಮತದಾರರ ಹಕ್ಕು ಕಸಿಯಲಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ನಾಗರಿಕ ಸಂಘಟನೆಗಳು ಸಂಗ್ರಹಿಸಿರುವ...

SIR: ‘ಫಾರ್ಮ್ 6’ ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ!

ಹೊಸ ಮತದಾರರ ನೋಂದಣಿಗೆ ಕಾಗದಪತ್ರಗಳ ಅಡೆತಡೆ ಒಡ್ಡುತ್ತಿದ್ದ ತನ್ಮೂಲಕ ಹಕ್ಕು ವಂಚಿತಗೊಳಿಸುತ್ತಿದ್ದ ಆರೋಪ ಎದುರಿಸುತ್ತಿದ್ದ ಕೇಂದ್ರ ಚುನಾವಣಾ ಆಯೋಗವು ಸಾರ್ವಜನಿಕ ಮತ್ತು ಕಾನೂನಾತ್ಮಕ ಒತ್ತಡದ ಹಿನ್ನೆಲೆಯಲ್ಲಿ ಭಾಗಶಃ ಹಿಂದೆ ಸರಿದಿದೆ. 'ವಿಶೇಷ ತೀವ್ರ...

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ : ABVPಗೆ ಸೋಲು; ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಆಯ್ಕೆ

ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA), ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್ (ASA), ದಲಿತ ಸ್ಟೂಡೆಂಟ್ಸ್ ಯೂನಿಯನ್ (DSU), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಟ್ರೈಬಲ್ ಸ್ಟೂಡೆಂಟ್ಸ್ ಫೋರಂ (TSF) ಒಳಗೊಂಡ...

CWC ಸಭೆಯಲ್ಲಿ ನಿತೀಶ್ ಕುಮಾರ್ ವಿಚಾರ ಪ್ರಸ್ತಾಪ: ಸೋನಿಯಾ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ನಡುವೆ ಭಿನ್ನಾಭಿಪ್ರಾಯ

ಜೆಡಿಯು ನಾಯಕ ನಿತೀಶ್ ಕುಮಾರ್ 2024ರಲ್ಲಿ 'ಇಂಡಿಯಾ' (INDIA) ಮೈತ್ರಿಕೂಟದಿಂದ ಹೊರಬಂದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಂತರಿಕ ಸಭೆಯಲ್ಲಿ ನಾಯಕರ ನಡುವೆ ಗಂಭೀರ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ...

‘ಇಸಿಐನೆಟ್’ ಸಾಫ್ಟ್‌ವೇರ್ ಲೋಪ: ಸ್ಥಳೀಯ ಅಧಿಕಾರಿಗಳ ಶಾಸನಬದ್ಧ ಅಧಿಕಾರ ಹರಣ ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಮಹಾರಾಷ್ಟ್ರ ಸಿಇಒ ಸುದೀರ್ಘ ಪತ್ರ!

ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಜಾರಿಗೆ ತಂದಿರುವ 'ಇಸಿಐನೆಟ್' (ECINet) ಕೇಂದ್ರೀಕೃತ ಸಾಫ್ಟ್‌ವೇರ್, ಕಾನೂನುಬದ್ಧವಾಗಿ ಸ್ಥಳೀಯ ಮತದಾರ ನೋಂದಣಿ ಅಧಿಕಾರಿಗಳಿಗೆ (ERO) ನೀಡಲಾಗಿರುವ ಶಾಸನಬದ್ಧ ಅಧಿಕಾರಗಳನ್ನು ಕಸಿಯುತ್ತಿದೆ ಎಂಬ ಗಂಭೀರ ಆರೋಪ ಎದುರಾಗಿದೆ....

ಸಂಭಾಲ್ ಹಿಂಸಾಚಾರ ಪ್ರಕರಣ: ಮುಸ್ಲಿಂ ವ್ಯಕ್ತಿಯ NSA ಬಂಧನ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಯುಪಿ ಸರ್ಕಾರಕ್ಕೆ ₹10 ಲಕ್ಷ ದಂಡ

ನವದೆಹಲಿ: ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದ ಪ್ರತಿಭಟನೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಲಾ ಅಫ್ರೋಜ್ ಎಂಬುವರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿ ತಡೆಗಟ್ಟುವ...

ಸಂಭಾಲ್ ಹಿಂಸಾಚಾರ | ಮುಲ್ಲಾ ಅಫ್ರೋಝ್ ಎನ್‌ಎಸ್‌ಎ ಬಂಧನ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ; ಯುಪಿ ಸರ್ಕಾರಕ್ಕೆ 10 ಲಕ್ಷ ರೂ. ದಂಡ

2024ರ ಸಂಭಾಲ್ ಹಿಂಸಾಚಾರದ ರೂವಾರಿ ಎಂದು ಆರೋಪಿಸಲಾದ ಮುಲ್ಲಾ ಅಫ್ರೋಝ್ ಅವರನ್ನು 'ರಾಷ್ಟ್ರೀಯ ಭದ್ರತಾ ಕಾಯ್ದೆ, 1980'ರ ಅಡಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 29) ರದ್ದುಗೊಳಿಸಿದೆ....

ಔಷಧ ಬೆಲೆಗಳ ಹೆಸರಲ್ಲಿ ನಡೆಯುತ್ತಿದೆ ಲೂಟಿ: ಆಸ್ಪತ್ರೆ-ಮೆಡಿಕಲ್‌ಗಳ ವಿರುದ್ಧ ಸುಪ್ರೀಂ ಕೋರ್ಟ್ ಗರಂ

ದೇಶದಲ್ಲಿ ಗರಿಷ್ಠ ಚಿಲ್ಲರೆ ಬೆಲೆ (MRP) ಹೆಸರಿನಲ್ಲಿ ಔಷಧಗಳ ಬೆಲೆಯನ್ನು ಮನಬಂದಂತೆ ಹೆಚ್ಚಿಸಿ ಸಾಮಾನ್ಯ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ 'ಅಮಾನವೀಯ ಲೂಟಿ' ಎಂದು ತೀವ್ರವಾಗಿ ಖಂಡಿಸಿದೆ. ಔಷಧಗಳ ನೈಜ ಖರೀದಿ...