Homeಮುಖಪುಟಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ...

ಬಿಜೆಪಿ ವಿರುದ್ಧ ಹೋರಾಟಕ್ಕೆ ಕರೆ ನೀಡಿದ ತ್ರಿಪುರ ಮಾಜಿ ಸಿಎಂ ಮಾಣಿಕ್ ಸರ್ಕಾರ್ ವಿರುದ್ಧ ಪ್ರಕರಣ ದಾಖಲು: ಬಿಜೆಪಿಯ ಕೀಳು ಮಟ್ಟದ ರಾಜಕೀಯ ಎಂದ ಸಿಪಿಐ(ಎಂ)

- Advertisement -
- Advertisement -

ತ್ರಿಪುರದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಐ(ಎಂ) ಪಾಲಿಟ್‌ಬ್ಯೂರೋ ಹಿರಿಯ ಸದಸ್ಯ ಮಾಣಿಕ್ ಸರ್ಕಾರ್ ಅವರು ಇತ್ತೀಚೆಗೆ ಸಾರ್ವಜನಿಕ ರ್ಯಾಲಿಯೊಂದರಲ್ಲಿ ನೀಡಿದ್ದ ಹೇಳಿಕೆಯನ್ನು ಆಧರಿಸಿ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಸರಣಿ ದೂರುಗಳು ದಾಖಲಾಗಿವೆ. ಈ ಬೆಳವಣಿಗೆಯನ್ನು ಆಡಳಿತಾರೂಢ ಬಿಜೆಪಿ ಸರ್ಕಾರದ ಯೋಜಿತ “ರಾಜಕೀಯ ದುರುದ್ದೇಶ” ಮತ್ತು ದುಷ್ಟ ತಂತ್ರ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ತೀವ್ರವಾಗಿ ಖಂಡಿಸಿದೆ.

ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ “ದುರಾಡಳಿತ, ಜನವಿರೋಧಿ ಮತ್ತು ವಿಭಜಕ ನೀತಿಗಳನ್ನು” ಕಿತ್ತೊಗೆಯಲು ಹಾಗೂ ತೀವ್ರ ಹೋರಾಟ ರೂಪಿಸಲು ಮಾಣಿಕ್ ಸರ್ಕಾರ್ ಅವರು ‘ಜಂಗಿ ಮಾದರಿಯ’ ಪ್ರತಿಭಟನೆಗೆ ಕರೆ ನೀಡಿದ್ದರು. ಬಂಗಾಳಿ ಭಾಷೆಯಲ್ಲಿ ‘ಜಂಗಿ’ ಎಂಬ ಪದವನ್ನು ರಾಜಕೀಯ ನಾಯಕರು ಹಾಗೂ ಹೋರಾಟಗಾರರು ಸಾಮಾನ್ಯ ಭಾಷೆಯಲ್ಲಿ ‘ತೀವ್ರವಾದ, ಹುರುಪಿನ ಅಥವಾ ಜೋರಾದ ಚಳುವಳಿ’ ಎಂಬ ಅರ್ಥದಲ್ಲಿ ದಶಕಗಳಿಂದ ಬಳಸಿಕೊಂಡು ಬಂದಿದ್ದಾರೆ.

ಆದರೆ, ಈ ಪದದ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ, ‘ಜಂಗಿ’ ಎಂದರೆ ಉಗ್ರಗಾಮಿತ್ವ ಮತ್ತು ಹಿಂಸಾಚಾರಕ್ಕೆ ನೀಡಿದ ಕರೆಯಾಗಿದೆ ಎಂದು ಆರೋಪಿಸಿದೆ. ಸಿಪಿಐ(ಎಂ) ಪಕ್ಷವು ಈ ಹಿಂದೆಯೂ ತನ್ನ ರಾಜಕೀಯ ಲಾಭಕ್ಕಾಗಿ ಹಿಂಸಾತ್ಮಕ ಹಾದಿಯನ್ನು ತುಳಿದಿತ್ತು ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದು, ಸರ್ಕಾರ್ ಅವರ ಹೇಳಿಕೆಯು ರಾಜ್ಯದಲ್ಲಿ ಶಾಂತಿ ಭಂಗ ಉಂಟುಮಾಡಲು ಹಾಗೂ ಅಶಾಂತಿಯನ್ನು ಪ್ರಚೋದಿಸಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಆಗಸ್ಟ್ 13 ಮತ್ತು 14 ರಂದು ಪಶ್ಚಿಮ ತ್ರಿಪುರಾ ಜಿಲ್ಲೆಯ ಮೋಹನಪುರ ವ್ಯಾಪ್ತಿಯ ಸಿಧೈ ಮತ್ತು ಲೆಫುಂಗಾ ಪೊಲೀಸ್ ಠಾಣೆಗಳಲ್ಲಿ ಜಯಂತ ದೇಬ್ನಾಥ್, ಇಂದ್ರಜಿತ್ ದತ್ತ ಹಾಗೂ ರಾಜಿಶಿಂಗ್ ದೇಬ್ಬರ್ಮಾ ಎಂಬುವವರು ಮಾಣಿಕ್ ಸರ್ಕಾರ್ ವಿರುದ್ಧ ಮೊದಲ ಮೂರು ದೂರುಗಳನ್ನು ದಾಖಲಿಸಿದ್ದರು.

ಇದರ ಬೆನ್ನಲ್ಲೇ, ರಾಜ್ಯದ ವಿವಿಧ ಉಪವಿಭಾಗಗಳು ಮತ್ತು ಪೊಲೀಸ್ ಠಾಣೆಗಳಾದ ಕಲಾಂಚೌರಾ, ಪೂರ್ವ ಅಗರ್ತಲಾ, ಬಿರ್ಗಂಜ್, ಬಿಶಾಲ್‌ಗಢ, ಕಲ್ಯಾಣಪುರ, ಮಾಂಡ್ವಿ, ಲೆಫುಂಗಾ, ಸಿಧೈ ಮತ್ತು ಖೋವೈ ಸೇರಿದಂತೆ ಒಟ್ಟು ಒಂಬತ್ತಕ್ಕೂ ಹೆಚ್ಚು ಠಾಣೆಗಳಲ್ಲಿ ಇವರ ವಿರುದ್ಧ ದೂರುಗಳು ಸಲ್ಲಿಕೆಯಾಗಿವೆ. ಭಾರತೀಯ ನ್ಯಾಯ ಸಂಹಿತಾ (BNS), 2023 ರ ಸೆಕ್ಷನ್ 147, 148, 152 ಮತ್ತು 353(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ. ಅಲ್ಲದೆ, ತನಿಖೆಯ ವೇಳೆ ಬಹಿರಂಗವಾಗಬಹುದಾದ ಪ್ರಚೋದನೆ, ಕ್ರಿಮಿನಲ್ ಪಿತೂರಿ ಹಾಗೂ ಇತರೆ ಅಪರಾಧಗಳಿಗೆ ಸಂಬಂಧಿಸಿದ ವಿಭಾಗಗಳನ್ನು ಸೇರಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ತಮ್ಮ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿರುವ ಕುರಿತು ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಮಾಣಿಕ್ ಸರ್ಕಾರ್, “ರಾಜ್ಯದಲ್ಲಿ ಪ್ರಸ್ತುತ ಉದ್ಭವಿಸಿರುವ ನೈಜ ಮತ್ತು ತುರ್ತು ಸಾರ್ವಜನಿಕ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಈ ತಂತ್ರ ಹೂಡಿದೆ. ನಮ್ಮ ಪಕ್ಷವು ರಾಜಕೀಯವಾಗಿ, ಸೈದ್ಧಾಂತಿಕವಾಗಿ ಹೋರಾಡುತ್ತಿರುವ ಸಂಕಲ್ಪವನ್ನು ಕಂಡು ಬಿಜೆಪಿ ನಾಯಕರು ಭಯಭೀತರಾಗಿದ್ದಾರೆ. ಆ ಭಯದಿಂದಲೇ ಇಂತಹ ಚಿಲ್ಲರೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ” ಎಂದು ಲೇವಡಿ ಮಾಡಿದರು.

ತ್ರಿಪುರಾ ವಿಧಾನಸಭೆಯ ಮಾಜಿ ಉಪಸಭಾಪತಿ ಹಾಗೂ ಹಿರಿಯ ಸಿಪಿಐ(ಎಂ) ನಾಯಕ ಪಬಿತ್ರ ಕರ್ ಅವರು ಬಿಜೆಪಿಯ ಈ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. “ಬಿಜೆಪಿ ನಾಯಕರು ನಿರಂತರವಾಗಿ ಅತ್ಯಂತ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ವಾಕ್ಚಾತುರ್ಯದಲ್ಲಿ ತೊಡಗುತ್ತಾರೆ. ಆದರೆ ಈಗ ಪ್ರತಿಪಕ್ಷದ ಹಿರಿಯ ನಾಯಕರ ವಿರುದ್ಧ ಇಂತಹ ನಿರರ್ಥಕ ರಾಜಕೀಯ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯದ ಜನತೆಗೆ ಬಿಜೆಪಿಯ ಈ ನಡವಳಿಕೆಯ ಹಿಂದಿರುವ ಸತ್ಯಾಸತ್ಯತೆ ಸ್ಪಷ್ಟವಾಗಿ ಅರ್ಥವಾಗಿದೆ. ಜನರು ಇಂತಹ ಕ್ಷುಲ್ಲಕ ರಾಜಕೀಯ ನಾಟಕಗಳಿಂದ ವಿಚಲಿತರಾಗುವುದಿಲ್ಲ” ಎಂದು ಅವರು ದೃಢವಾಗಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಎಎಲ್‌ಎಸ್‌ಎಆರ್‌ ಘಟಿಕೋತ್ಸವದ ಆಹ್ವಾನವನ್ನು ನಾನು ಸ್ವೀಕರಿಸಿರಲೇ ಇಲ್ಲ: ಸಿಜೆಐ ಸೂರ್ಯ ಕಾಂತ್

ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಮುಂಬರುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ನಾನು ಎಂದಿಗೂ ಒಪ್ಪಿಗೆ ನೀಡಿರಲಿಲ್ಲ ಎಂದು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ವಿರೋಧದ ನಡುವೆಯೂ...

ಎರಡು ವರ್ಷಗಳ ವಿಳಂಬದ ನಂತರ ಹಣಕಾಸು ವರದಿ ಬಿಡುಗಡೆ ಮಾಡಿದ ಪಿಎಂ ಕೇರ್ಸ್

ಎರಡು ವರ್ಷಗಳ ವಿಳಂಬದ ನಂತರ ಪಿಎಂ ಕೇರ್ಸ್ ನಿಧಿಯು ತನ್ನ 2023-24 ಮತ್ತು 2024-25ರ ಹಣಕಾಸು ವರ್ಷಗಳ ಆಡಿಟ್ ವರದಿಗಳನ್ನು (ಲೆಕ್ಕಪರಿಶೋಧನಾ ವರದಿ) ಆಗಸ್ಟ್ 17ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಪಿಎಂ...

ಭಾರತ ಚುನಾವಣಾ ವ್ಯವಸ್ಥೆಯನ್ನು ಹೊಗಳಿದ ಟ್ರಂಪ್: ಜ್ಞಾನೇಶ್ ಕುಮಾರ್ ಜೊತೆಗೆ EVMಅನ್ನು ತೆಗೆದುಕೊಂಡು ಹೊಗಿ ಎಂದು ಕಾಲೆಳೆದ ಕಾಂಗ್ರೆಸ್

ಭಾರತದ ಚುನಾವಣಾ ವ್ಯವಸ್ಥೆ ಹಾಗೂ ಮತದಾರರ ಫೋಟೋ ಗುರುತಿನ ಚೀಟಿ (Voter ID) ಕಡ್ಡಾಯ ನಿಯಮವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಟ್ರಂಪ್ ಅವರ ಈ ಹೇಳಿಕೆಯನ್ನು ಇಟ್ಟುಕೊಂಡು...

ಮುಹಮ್ಮದ್ ದೀಪಕ್‌ಗೆ 2026 ನೇ ಸಾಲಿನ ‘ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿ’

ಆಲ್ ಇಂಡಿಯಾ ಬಾಜ್ಮ್-ಎ-ರೆಹಮತ್-ಎ-ಆಲಂ ಸಂಘಟನೆಯು, ಮುಹಮ್ಮದ್ ದೀಪಕ್ ಎಂದೇ ಜನಪ್ರಿಯರಾಗಿರುವ ದೀಪಕ್ ಕುಮಾರ್ ಅವರಿಗೆ 2026 ರ ರೆಹಮತ್-ಎ-ಆಲಂ ಶಾಂತಿ ಪ್ರಶಸ್ತಿಯನ್ನು ಘೋಷಿಸಿದೆ. ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆಯಾದ ಮಿಲಾದ್-ಉನ್-ನಬಿಯನ್ನು ಗುರುತಿಸಲು ಆಯೋಜಿಸಲಾದ...

ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ...

ಬಿಹಾರ NEET ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧ AK-47 ಬಳಸಿದ್ದನ್ನು ಸುಪ್ರೀಂನಲ್ಲಿ ಒಪ್ಪಿಕೊಂಡ ಬಿಹಾರ ಸರ್ಕಾರ

ಬಿಹಾರದಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು AK-47 ರೈಫಲ್‌ನಿಂದ ಗಾಳಿಯಲ್ಲಿ ನಾಲ್ಕು ಸುತ್ತು ಗುಂಡು ಹಾರಿಸಿರುವುದಾಗಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ...

ಕರಿಯಪ್ಪ ಗುಡಿಮನಿ ಸೇರಿದಂತೆ ಮೂವರು ಹೋರಾಟಗಾರರಿಗೆ ಹಂಪಿ ವಿವಿ ಸನ್ಮಾನ

ಹಂಪಿ ಕನ್ನಡ ವಿಶ್ವವಿದ್ಯಾಲಯ ಆಗಸ್ಟ್‌ 15 ರಂದು ಹಿರಿಯ ದಲಿತ ಹೋರಾಟಗಾರರಾದ ಕರಿಯಪ್ಪ ಗುಡಿಮನೆ, ದೇಸಾಯಿ ಗುಂಡೂರಾವ್‌, ಹೆಚ್.‌ ಪಿ. ಶಿಕಾರಿ ಮತ್ತು ಶೇಖಪ್ಪರನ್ನು ಸಾಮಾಜಿಕ ಹೋರಾಟಕ್ಕೆ ತಮ್ಮ ಜೀವನವನ್ನು ಸವೆಸಿದ ಹಿನ್ನೆಲೆಯಲ್ಲಿ...

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅನ್ಯಾಯ ತಡೆಯಲು ಸರ್ಕಾರ ಮಧ್ಯಪ್ರವೇಶಿಸಬೇಕು; ಮುಖ್ಯಮಂತ್ರಿಗಳಿಗೆ ನಾಗರಿಕ ಸಂಘಟನೆಗಳ ಮನವಿ

"ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಅರ್ಹ ಮತದಾರರಿಗೆ ಅನ್ಯಾಯವಾಗುತ್ತಿದ್ದು, ಈ ಕುರಿತು ತುರ್ತು ಕ್ರಮ ಕೈಗೊಳ್ಳಬೇಕು" ಎಂದು ನಾಗರಿಕ ಸಂಘಟನೆಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ...

SIR: ಕೊಪ್ಪಳದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ‘ಛತ್ರಪ್ಪ’ ಅವರ ಹೆಸರನ್ನೆ ಕೈಬಿಟ್ಟ ಚುನಾವಣಾ ಆಯೋಗ

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳು ದಿಢೀರ್ ನಾಪತ್ತೆಯಾಗುತ್ತಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಗಂಗಾವತಿಯಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಚಿರಪರಿಚಿತರಾಗಿರುವ, ಗಂಗಾವತಿ ಬಸವ ಕೇಂದ್ರದ...

ಮಹಾರಾಷ್ಟ್ರದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ವಿಚಿತ್ರ ವರ್ತನೆ, ಗೆಜ್ಜೆ ಸದ್ದು: ದೆವ್ವದ ಕಾಟವೆಂದು ಹಾಸ್ಟೆಲ್ ತೊರೆದ 600 ಬುಡಕಟ್ಟು ವಿದ್ಯಾರ್ಥಿಗಳು

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ದೂರದ ಮೆಲ್ಘಾಟ್ ಬುಡಕಟ್ಟು ಪ್ರದೇಶದಲ್ಲಿ ಮೂಢನಂಬಿಕೆ ಮತ್ತು ಮಾನಸಿಕ ಭಯದ ವಾತಾವರಣವು ಗಂಭೀರ ಶೈಕ್ಷಣಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಚಿಕಲ್ದಾರಾ ತಾಲ್ಲೂಕಿನ ಡೋಮಾ ಗ್ರಾಮದಲ್ಲಿರುವ ಸರ್ಕಾರಿ ಬುಡಕಟ್ಟು ವಸತಿ ಶಾಲೆಯ...