Homeಮುಖಪುಟಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ...

ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ

- Advertisement -
- Advertisement -

ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ.

ವರದಿಗಳ ಪ್ರಕಾರ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಭಾಗವಾಗಿ ಉತ್ತರ ಪ್ರದೇಶದ ರಾಂಪುರ ಮತ್ತು ಸಹಾರನ್‌ಪುರ ಹಾಗೂ ದೆಹಲಿಯ ಸುಮಾರು 10 ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

ಸರ್ಕಾರಿ ಗುತ್ತಿಗೆಯ ಹಣವನ್ನು ಖಾಸಗಿ ಗುತ್ತಿಗೆದಾರರ ಮೂಲಕ ದುರುಪಯೋಗಪಡಿಸಿಕೊಂಡ ಆರೋಪ ಮತ್ತು ಆ ಹಣವನ್ನು ನಂತರದ ದಿನಗಳಲ್ಲಿ ವಿಶ್ವವಿದ್ಯಾಲಯ ಹಾಗೂ ಟ್ರಸ್ಟ್‌ನ ಆಸ್ತಿಗಳನ್ನು ಸೃಜಿಸಲು ಒಳಗೊಂಡಂತೆ ಇತರೆ ಉದ್ದೇಶಗಳಿಗಾಗಿ ಬಳಕೆ ಮಾಡಿರುವ ಕುರಿತು ತನಿಖೆ ನಡೆಯುತ್ತಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಕೆಲವು ಗುತ್ತಿಗೆದಾರರು ಮತ್ತು ಟ್ರಸ್ಟ್ ನಡುವೆ ಹಣಕಾಸಿನ ವಹಿವಾಟುಗಳು ನಡೆದಿರುವುದು ತನಿಖೆಯಿಂದ ತಿಳಿದುಬಂದಿದೆ. ಸರ್ಕಾರಿ ಗುತ್ತಿಗೆಗಳಿಂದ ಲಾಭ ಪಡೆದ ಗುತ್ತಿಗೆದಾರರು, ಆ ಹಣವನ್ನು ಟ್ರಸ್ಟ್ ಮತ್ತು ವಿಶ್ವವಿದ್ಯಾಲಯಕ್ಕೆ ಗಣನೀಯ ಪ್ರಮಾಣದ ದೇಣಿಗೆಗಳು ಮತ್ತು ನಿರ್ಮಾಣ ಕಾಮಗಾರಿಗಳ ರೂಪದಲ್ಲಿ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಉತ್ತರ ಪ್ರದೇಶದ ಮಾಜಿ ಸಚಿವ ಆಝಂ ಖಾನ್, ಅವರ ಕುಟುಂಬ ಸದಸ್ಯರು ಮತ್ತು ಆಪ್ತರು ಪ್ರಮುಖ ಟ್ರಸ್ಟಿಗಳಾಗಿರುವ ಲಕ್ನೋ ಮೂಲದ ಮೌಲಾನಾ ಮೊಹಮ್ಮದ್ ಅಲಿ ಜೌಹರ್ ಟ್ರಸ್ಟ್, ರಾಂಪುರ ಜಿಲ್ಲೆಯಲ್ಲಿ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯ ಮತ್ತು ಸಾರ್ವಜನಿಕ ಶಾಲೆಯೊಂದನ್ನು ನಡೆಸುತ್ತಿದೆ.

ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಜುಲೈ 15ರಂದು ವರದಿಯಾಗಿತ್ತು. ಈ ಎಲ್ಲಾ ಕಟ್ಟಡಗಳನ್ನು ಯಾವುದೇ ಅನುಮೋದಿತ ಕಟ್ಟಡ ಯೋಜನೆಗಳಿಲ್ಲದೆ (ನಕ್ಷೆ ಮಂಜೂರಾತಿ ಇಲ್ಲದೆ) ಕಾನೂನುಬಾಹಿರವಾಗಿ ನಿರ್ಮಿಸಲಾಗಿದೆ ಎಂದು ಪ್ರಾಧಿಕಾರ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಉಲ್ಲೇಖಿಸಿತ್ತು.

ಮೊಹಮ್ಮದ್ ಅಲಿ ಜೌಹರ್ ವಿವಿಯ ಕಟ್ಟಡಗಳನ್ನು ಕೆಡವುವ ವಿಚಾರ ದೇಶದಾದ್ಯಂತ ದೊಡ್ಡ ಆಕ್ರೋಶಕ್ಕೆ ಕಾರಣವಾಗಿದೆ. ರಾಜಕೀಯ ದ್ವೇಷದಿಂದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಆಝಂ ಖಾನ್ ಅವರ ವಿವಿಯನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಲಾಗಿದೆ.

ವಿವಿ ಕಟ್ಟಡಗಳನ್ನು ಕೆಡವುವ ಆದೇಶದ ವಿರುದ್ದ ತೀವ್ರ ಪ್ರತಿಭಟನೆಗಳು ವ್ಯಕ್ತವಾದ ಬಳಿಕ, ಆದೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಈ ಬೆನ್ನಲ್ಲೇ ಆಝಂ ಖಾನ್ ಮತ್ತು ವಿವಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ದಾಳಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ರದ್ದು: ಹೈಕೋರ್ಟ್‌ನಿಂದ ಮರುನೇಮಕಕ್ಕೆ ಆದೇಶ

ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಅಮಾನತು ಆದೇಶವನ್ನು ಪ್ರಶ್ನಿಸಿ ಶಿವಶಂಕರಪ್ಪ...

ಗೋಡ್ಸೆ ಹೊಗಳಿಕೆ, ದಲಿತದ್ವೇಷ, ಸ್ತ್ರೀದ್ವೇಷ ಮತ್ತು ಮುಸ್ಲಿಂ ದ್ವೇಷ: ತೀವ್ರ ಪರಿಶೀಲನೆಯಲ್ಲಿರುವ ಬಿಜೆಪಿಯ ಹೊಸ ಸಾಮಾಜಿಕ ಮಾಧ್ಯಮ ತಂಡದ ವಿರುದ್ಧ ಜನಾಕ್ರೋಶ

ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ ಹಳೆಯ ಪೋಸ್ಟ್‌ಗಳು, ಇಸ್ಲಾಮೋಫೋಬಿಕ್ ಹಾಗೂ ಜನಾಂಗೀಯ ಹತ್ಯೆಯ ಹೇಳಿಕೆಗಳು, ದಲಿತ ಹಾಗೂ ಮೀಸಲಾತಿ ವಿರೋಧಿ ಮಾತುಗಳು ಮತ್ತು ಮಹಿಳೆಯರ ವಿರುದ್ಧ ಬಳಸಿರುವ ಸ್ತ್ರೀದ್ವೇಷದ ಭಾಷೆಯ ಕಾರಣಕ್ಕಾಗಿ...