Homeಮುಖಪುಟಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

- Advertisement -
- Advertisement -

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು ಗುರುತಿಸಲಾಗಿದೆ. ಅವರು ಪತ್ನಿ ನಿರ್ಮಲ ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಅತ್ಯಂತ ದಯನೀಯ ಸ್ಥಿತಿಯಲ್ಲಿ ಕುಟುಂಬ:

ಕೂಲಿ ನೇಕಾರ ವೃತ್ತಿ ಮಾಡುತ್ತಿದ್ದ ವಿಠ್ಠಲ ಲೋಕರಿ ಅವರು, ಮಗ್ಗದ ಕೆಲಸದಲ್ಲಿ ಸೂಕ್ತ ಆದಾಯವಿಲ್ಲದೆ ಹಾಗೂ ಕುಟುಂಬ ನಿರ್ವಹಣೆಗೆ ಮಾಡಿಕೊಂಡಿದ್ದ ಸಾಲದ ಒತ್ತಡ ತಾಳಲಾಗದೆ ಆಗಸ್ಟ್‌ 16, 2026ರಂದು ಆತ್ಮಹತ್ಯೆಗೆ ಶರಣಾಗಿದ್ದು ಕುಟುಂಬವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ.

ಮೃತ ವಿಠ್ಠಲ ಲೋಕರಿ ಪತ್ನಿ ಮತ್ತು ಮೂವರು ಮಕ್ಕಳು

ಇದರ ನಡುವೆ, ಅವರ ಪತ್ನಿ ಮಂಜುಳಾ ಅವರು ಕಳೆದ ಕೆಲವು ಸಮಯದಿಂದ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಪೌಷ್ಟಿಕಾಂಶದ ಕೊರತೆ (ಅಪೌಷ್ಟಿಕತೆ) ಯಿಂದ ಶಕ್ತಿಹೀನರಾಗಿದ್ದಾರೆ. ಪತ್ನಿಯ ವೈದ್ಯಕೀಯ ವೆಚ್ಚ ಹಾಗೂ ಸಂಸಾರದ ನಿರ್ವಹಣೆಗಾಗಿ ವಿಠ್ಠಲ ಅವರು ಸುಮಾರು 6 ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.

ನಮ್ಮ ಶಿಕ್ಷಣ ಮುಂದುವರೆಯಲು ಸಹಾಯ ಮಾಡಿ ಮಕ್ಕಳ ಅಳಲು:

ತಂದೆಯನ್ನು ಕಳೆದುಕೊಂಡು ದಿಕ್ಕು ತೋಚದಂತಾಗಿರುವ ಕುಟುಂಬಕ್ಕೆ ಸದ್ಯ ಆರ್ಥಿಕ ಸಹಾಯ ಅಗತ್ಯವಾಗಿ ಆಗಬೇಕಿದೆ. ಸರ್ಕಾರ ಹಾಗೂ ಸ್ಥಳೀಯ ಆಡಳಿತ ಕೂಡಲೆ ತಮ್ಮ ಶಿಕ್ಷಣಕ್ಕೆ ಮತ್ತು ಕುಟುಂಬ ನಿರ್ವಹಣೆಗೆ ಆಸರೆಯಾಗಬೇಕೆಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ‘ನಾನು ಗೌರಿ.ಕಾಮ್’ ಜೊತೆ ಮಾತನಾಡಿದ ಮೃತ ವಿಠ್ಠಲ ಲಿಂಗಪ್ಪ ಲೋಕರಿ ಹಿರಿಯ ಮಗಳು ಶಾಂತ (ಪ್ರಥಮ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿ), “ನಮ್ಮ ಅಪ್ಪ ಸಾಲದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಮ್ಮ ಅಮ್ಮನಿಗೆ ತೀವ್ರ ಅನಾರೋಗ್ಯವಿದ್ದು, ಸಂಸಾರದ ನಿರ್ವಹಣೆಗೆ ಸುಮಾರು 6 ಲಕ್ಷ ರೂಪಾಯಿ ಸಾಲವಾಗಿದೆ. ನಾವಿನ್ನೂ ಸಣ್ಣ ಮಕ್ಕಳು, ನಮಗೆ ಓದಿ ಸ್ವಾವಲಂಬಿಯಾಗುವ ಆಸೆಯಿದೆ. ದಯವಿಟ್ಟು ನಮ್ಮ ಭವಿಷ್ಯ ರೂಪಿಸಲು ಮತ್ತು ಅಮ್ಮನ ಜೀವ ಉಳಿಸಲು ಯಾರಾದರೂ ನೆರವು ನೀಡಿ” ಎಂದು ಕಣ್ಣೀರು ಹಾಕುತ್ತಾ ಕರುಣಾಜನಕವಾಗಿ ಮನವಿ ಮಾಡಿದ್ದಾಳೆ.

ಮೃತನ ಪತ್ನಿ ನಿರ್ಮಲ ಹಾಗೂ ಮಕ್ಕಳಾದ ಶಾಂತ (ಪ್ರಥಮ ಪಿಯುಸಿ), ಪ್ರೀತಿ (8ನೇ ತರಗತಿ) ಮತ್ತು ಭೂಮಿಕಾ (3ನೇ ತರಗತಿ) ಪ್ರಸ್ತುತ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಒಂದೆಡೆ ತಂದೆಯನ್ನು ಕಳೆದುಕೊಂಡ ಅನಾಥ ಪ್ರಜ್ಞೆ, ಮತ್ತೊಂದೆಡೆ ತಾಯಿಯ ಭೀಕರ ಅನಾರೋಗ್ಯ ಹಾಗೂ ಬೆಟ್ಟದಷ್ಟಿರುವ ಸಾಲದ ಹೊರೆ ಈ ಕಂದಮ್ಮಗಳನ್ನು ಕತ್ತಲಿಗೆ ತಳ್ಳಿದೆ. ತಮ್ಮ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಮತ್ತು ತಾಯಿಯ ವೈದ್ಯಕೀಯ ಚಿಕಿತ್ಸೆಗೆ ತಕ್ಷಣವೇ ಆರ್ಥಿಕ ನೆರವು ನೀಡುವಂತೆ ಈ ಬಡ ಕುಟುಂಬವು ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಮನವಿ ಮಾಡಿದೆ.

ನೇಕಾರ ಕಾರ್ಮಿಕರ ದಶಕಗಳ ಹೋರಾಟ:

ವಿದ್ಯುತ್ ಚಾಲಿತ ಮಗ್ಗ ಹಾಗೂ ಕೈಮಗ್ಗಗಳ ಮೇಲೆ ನಿರಂತರವಾಗಿ 10 ರಿಂದ 12 ಗಂಟೆಗಳ ಕಾಲ ಶ್ರಮಿಸುವ ಕೂಲಿ ನೇಕಾರರಿಗೆ ಯಾವುದೇ ಸೂಕ್ತ ಸಾಮಾಜಿಕ ಭದ್ರತೆ, ಕನಿಷ್ಠ ವೇತನ ಅಥವಾ ಕಾರ್ಮಿಕ ಕಾಯ್ದೆಯಡಿ ಸೌಲಭ್ಯಗಳು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಆಡಳಿತದಲ್ಲಿದ್ದ ಸರ್ಕಾರಗಳು ನೇಕಾರ ಉದ್ಯಮಿಗಳಿಗೆ, ಸಾಲ ಮನ್ನಾ, ವಿದ್ಯುತ್ ಸಬ್ಸಿಡಿ ಹಾಗೂ ಶೇಕಡಾ 3 ರ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತವೆಯೇ ಹೊರತು, ದಿನವಿಡೀ ದುಡಿಯುವ ನೈಜ ‘ಕೂಲಿ ನೇಕಾರರಿಗೆ’ ಯಾವುದೇ ನೇರ ಸೌಲಭ್ಯಗಳು ತಲುಪುತ್ತಿಲ್ಲ.

ಕೂಲಿ ನೇಕಾರರನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿ ‘ಪ್ರತ್ಯೇಕ ಕೂಲಿ ನೇಕಾರ ಕಲ್ಯಾಣ ಮಂಡಳಿ’ ಸ್ಥಾಪಿಸಬೇಕು, ಅವರಿಗೂ ಕಟ್ಟಡ ಕಾರ್ಮಿಕರ ಮಾದರಿಯಲ್ಲೇ ಗುರುತಿನ ಚೀಟಿ (ಲೇವರ್ ಕಾರ್ಡ್) ವಿತರಿಸಿ ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ನೇಕಾರರ ಸಂಘಟನೆಗಳು ಹಾಗೂ ಕಾರ್ಮಿಕರು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ಮಟ್ಟದಲ್ಲಿ, ಬೆಳಗಾವಿ ಅಧಿವೇಶನದ ವೇಳೆಯೂ ಸರಣಿ ಪ್ರತಿಭಟನೆ ಹಾಗೂ ಮನವಿಗಳ ಮೂಲಕ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದಾಗ್ಯೂ, ಸರ್ಕಾರಗಳು ನೇಕಾರ ಮಾಲೀಕರು ಮತ್ತು ಕೂಲಿ ನೇಕಾರರ ನಡುವಿನ ವ್ಯತ್ಯಾಸವನ್ನು ಪರಿಗಣಿಸದೆ ನಿರ್ಲಕ್ಷಿಸುತ್ತಿರುವುದೇ ಇಂತಹ ಸಾಲು ಸಾಲು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಕಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೂ.10 ಲಕ್ಷ ಪರಿಹಾರಕ್ಕೆ ಒತ್ತಾಯ

ಕಳೆದ ಹತ್ತು ವರ್ಷಗಳಿಂದ ಇಲ್ಲಿನ ವಿದ್ಯುತ್ ಚಾಲಿತ ಮಗ್ಗಗಳಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೂಲಿ ನೇಕಾರ ಕಾರ್ಮಿಕರಿಗೆ ಇದುವರೆಗೂ ಕೂಲಿ/ಮಜೂರಿ ಹೆಚ್ಚಳವಾಗಿಲ್ಲ. ಸರ್ಕಾರದ ಸೌಲಭ್ಯಗಳಾದ ಕನಿಷ್ಠ ವೇತನ, ಬೋನಸ್, ಪಿಎಫ್ (PF), ಇಎಸ್‌ಐ (ESI) ಅಥವಾ ಯಾವುದೇ ತರಹದ ಆರ್ಥಿಕ ನೆರವು ಈ ಬಡ ಕಾರ್ಮಿಕರಿಗೆ ಸಿಗುತ್ತಿಲ್ಲ. ಅವರು ಪಡುವ ಕಠಿಣ ಶ್ರಮಕ್ಕೆ ಸಿಗುವ ಅಲ್ಪ ಸಂಬಳವೇ ಅವರಿಗೆ ಏಕೈಕ ಆಸರೆಯಾಗಿದೆ.

ಮತ್ತೊಂದೆಡೆ, ಸರ್ಕಾರದಿಂದ ಸಿಗುವ ಸಾಲ ಸೌಲಭ್ಯ, ಸಾಲ ಮನ್ನಾ, ಸಬ್ಸಿಡಿ, ಕಂಪ್ಯೂಟರ್ ಮಗ್ಗ ಹಾಗೂ ಅತ್ಯಾಧುನಿಕ ರೇಪಿಯರ್ (Rapier) ಮಗ್ಗಗಳ ಯೋಜನೆಗಳ ಎಲ್ಲಾ ಲಾಭಗಳನ್ನು ಕೇವಲ ಮಗ್ಗದ ಮಾಲೀಕ ವರ್ಗವೇ ಪಡೆಯುತ್ತಿದೆ. ಕೂಲಿ ನೇಕಾರರು ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಾಗಲೂ, ಅದರ ಹೆಸರಿನಲ್ಲಿ ಸಿಗುವ ಸರ್ಕಾರದ ಸೌಲಭ್ಯಗಳನ್ನು ಮಾಲೀಕರೇ ತಮ್ಮದಾಗಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಸಾಲು ಸಾಲಾಗಿ ಎದುರಾಗುತ್ತಿರುವ ಆರ್ಥಿಕ ಬಿಕ್ಕಟ್ಟು ಹಾಗೂ ನೇಕಾರರ ಸಂಕಷ್ಟಕ್ಕೆ ಈ ಘಟನೆ ಸಾಕ್ಷಿಯಾಗಿದ್ದು, ದುರಂತಕ್ಕೀಡಾದ ಈ ಬಡ ಕುಟುಂಬಕ್ಕೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಹಾಗೂ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಬೇಕಿದೆ. ತಂದೆಯನ್ನು ಕಳೆದುಕೊಂಡು ದಿಕ್ಕು ತೋಚದಂತಾಗಿರುವ ಈ ಬಡ ಕುಟುಂಬದ ಉಳಿವಿಗಾಗಿ, ತಾಯಿಯ ವೈದ್ಯಕೀಯ ಚಿಕಿತ್ಸೆ ಹಾಗೂ ಹೆಣ್ಣುಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ 10 ಲಕ್ಷ ರೂಪಾಯಿ ಪರಿಹಾರ ಧನ ಘೋಷಣೆ ಮಾಡಬೇಕು ಎಂದು ನೇಕಾರರ ಕಾರ್ಮಿಕ ಮುಖಂಡರಾದ ರವಿ ಪಾಟೀಲ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...

“ದಲಿತ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ..’ ಬಿಜೆಪಿಯ ರಾಜೀನಾಮೆ ಬೇಡಿಕೆಗೆ ಸಚಿವ ಬಿ. ನಾಗೇಂದ್ರ ತಿರುಗೇಟು

"ನಾನು ದಲಿತ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಸಚಿವ ಬಿ. ನಾಗೇಂದ್ರ ಅವರು ತಮ್ಮ ರಾಜೀನಾಮೆ ಪಟ್ಟು ಹಿಡಿದಿರುವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. "ಕೇಂದ್ರ ಸಚಿವರು...