HomeಅಂಕಣಗಳುKarnataka against SIRಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

- Advertisement -
- Advertisement -

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ ನೋಟಿಸ್ ಬರಲಿದೆ.

ಎನ್ಯುಮರೇಷನ್ ಫಾರಂ ತುಂಬಿ ಕೊಡುವ ಅವಧಿ ಆಗಸ್ಟ್ 17ರಂದು ಮುಕ್ತಾಯಗೊಂಡಿದೆ. ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ ಬಳಿಕ ನೋಟಿಸ್‌ಗಳನ್ನು ನೀಡಲಾಗುತ್ತದೆ.

ನೋಟಿಸ್ ಪಡೆಯಲಿರುವ 43,80, 740 ಮತದಾರರ ಪೈಕಿ 23,45,428 ಪ್ರೊಜೆನಿ ಮ್ಯಾಪಿಂಗ್ ಮಾಡದವರು ಮತ್ತು 20,35,312 ಅನಾಮಲಿಸ್ ಇರುವ (ಲಾಜಿಕಲ್ ಡಿಸ್ಕ್ರಿಪೆನ್ಸಿ ಅಥವಾ ತಾರ್ಕಿಕ ವೈರುದ್ಯ) ಮತದಾರರು ಒಳಗೊಂಡಿದ್ದಾರೆ.

ಒಟ್ಟು ಮತದಾರರಲ್ಲಿ ನೋಟಿಸ್ ಪಡೆಯಲಿರುವವರ ಪ್ರಮಾಣ ಶೇಕಡ 9.81 ಇದೆ. ಈ ಪೈಕಿ ಬಿಬಿಎಂಪಿ ಉತ್ತರ ಜಿಲ್ಲೆಯ ಮತದಾರರು ಅತಿ ಹೆಚ್ಚು, ಅಂದರೆ ಶೇ.47.89ರಷ್ಟು ನೋಟಿಸ್‌ಗಳನ್ನು ಪಡೆಯಲಿದ್ದಾರೆ. ನಂತರ ಸ್ಥಾನದಲ್ಲಿ ಬಿಬಿಎಂಪಿ ಕೇಂದ್ರ ಜಿಲ್ಲೆ ಇದೆ. ಇಲ್ಲಿ ಶೇ.41.72ರಷ್ಟು ಮತದಾರರಿಗೆ ನೋಟಿಸ್ ನೀಡಲಾಗುತ್ತದೆ. ದಾವಣಗೆರೆ ಜಿಲ್ಲೆಯ ಮತದಾರರು ಅತಿ ಕಡಿಮೆ, ಅಂದರೆ ಶೇ.0.55ರಷ್ಟು ನೋಟಿಸ್‌ಗಳನ್ನು ಪಡೆಯಲಿದ್ದಾರೆ.

ನೋಟಿಸ್ ಪಡೆಯಲಿರುವ ಇಡೀ ರಾಜ್ಯದ 43,80,740 ಮತದಾರರ ಪೈಕಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲೇ 24, 05,990 (ಶೇ. 42.21) ಮತದಾರರಿದ್ದಾರೆ. ಬಿಬಿಎಂಪಿ ಉತ್ತರ ಜಿಲ್ಲೆಯ 12, 80,085 ಮತದಾರರ ಪೈಕಿ 6, 13, 003 (ಶೇ.47.89), ಬಿಬಿಎಂಪಿ ಕೇಂದ್ರ ಜಿಲ್ಲೆಯ 10,29,190 ಮತದಾರರ ಪೈಕಿ 4,29,364 (ಶೇ.41.72), ಬಿಬಿಎಂಪಿ ದಕ್ಷಿಣ ಜಿಲ್ಲೆಯ 10, 86, 750 ಮತದಾರರ ಪೈಕಿ 4,17,625 (ಶೇ.38.43) ಬೆಂಗಳೂರು ನಗರ ಜಿಲ್ಲೆಯ 23,03,594 ಮತದಾರರ ಪೈಕಿ 9,45,998 (ಶೇ.41.07) ನೋಟಿಸ್‌ ಪಡೆಯಲಿದ್ದಾರೆ.

ನೋಟಿಸ್ ನೀಡುವುದು ಮತ್ತು ದಾಖಲೆ ಸಲ್ಲಿಕೆ ಹೇಗೆ?

ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಂಡ ಬಳಿಕ ಮ್ಯಾಪಿಂಗ್ ಮಾಡದವರು ಮತ್ತು ಲಾಜಿಕಲ್ ಡಿಸ್ಕ್ರಿಪೆನ್ಸಿ ಇರುವವರಿಗೆ ಬಿಎಲ್‌ಒಗಳ ಮೂಲಕ ನೋಟಿಸ್‌ ನೀಡಲಾಗುತ್ತದೆ. ಬಿಎಲ್‌ಒ ಮತದಾರರ ಮನೆಗೆ ತೆರಳಿ ನೋಟಿಸ್ ತಲುಪಿಸಬೇಕು. ಮತದಾರರ ಪರವಾಗಿ ಸಂಬಂಧಿಕರು ನೋಟಿಸ್ ಸ್ವೀಕರಿಸಬಹುದು. ಆದರೆ, ವಿಚಾರಣೆಗೆ ಮತದಾರರ ಖುದ್ದಾಗಿ ಇಆರ್‌ಒ ಅಥವಾ ಎಇಆರ್‌ಒ ಮುಂದೆ ಹಾಜರಾಗಬೇಕು.

ಬಿಎಲ್‌ಒ ಮುಖಾಂತರ ನೀಡುವ ನೋಟಿಸ್‌ನಲ್ಲಿ ದಾಖಲೆ ಸಲ್ಲಿಕೆ ಮತ್ತು ವಿಚಾರಣೆಯ ದಿನಾಂಕ, ಸ್ಥಳ ಮತ್ತು ಸಮಯ ಉಲ್ಲೇಖಿಸಿರುತ್ತದೆ. ಇಆರ್‌ಇ ಅಥವಾ ಎಇಆರ್‌ಒ ಮತದಾರರಿಂದ ದಾಖಲೆಗಳನ್ನು ಪಡೆದು ವಿಚಾರಣೆ ನಡೆಸಲು ಸ್ಥಳೀಯ ಗ್ರಾಮ ಪಂಚಾಯತ್, ವಾರ್ಡ್‌ ಕಚೇರಿ, ಮತಗಟ್ಟೆಗೆ ಬರಲಿದ್ದಾರೆ.

ನೋಟಿಸ್‌ನಲ್ಲಿ ಹೇಳಿದ ದಿನಾಂಕದಂದು ಸಮಯಕ್ಕೆ ಸರಿಯಾಗಿ ಮತದಾರರು ದಾಖಲೆ ಸಮೇತ ಇಆರ್‌ಒ ಮುಂದೆ ವಿಚಾರಣೆಗೆ ಹಾಜರಾಗಬೇಕು. ಚುನಾವಣಾ ಆಯೋಗ ಹೇಳಿದ 11 ದಾಖಲೆಗಳ ಪೈಕಿ ಕನಿಷ್ಠ ಒಂದು ಜೊತೆಗೆ ಗುರುತಿನ ದಾಖಲೆಯಾಗಿ ಆಧಾರ್ ಕಾರ್ಡ್ ಸಲ್ಲಿಸಬೇಕು. ಇಆರ್‌ಒ ಮತದಾರರಿಂದ ಒಂದಕ್ಕಿಂತ ಹೆಚ್ಚು ದಾಖಲೆ, ಅಂದರೆ ಗರಿಷ್ಠ ಮೂರರವರೆಗೆ ದಾಖಲೆಗಳನ್ನು ಕೇಳಬಹುದು.

ಲಾಜಿಕಲ್ ಡಿಸ್ಕ್ರಿಪೆನ್ಸಿ ಬಂದವರು ಸಲ್ಲಿಸುವ ದಾಖಲೆಗಳನ್ನು ಇಆರ್‌ಒ ಸ್ವತಃ ಪರಿಶೀಲಿಸಿ, ಅದು ಸರಿಯಾಗಿದ್ದರೆ ಅವರನ್ನು ಮತದಾರರ ಪಟ್ಟಿಗೆ ಸೇರಿಸುತ್ತಾರೆ. ಮತದಾರರ ಕೊಟ್ಟ ಅಧಿಕೃತ ದಾಖಲೆಯನ್ನು ಇಆರ್‌ಒ ತಿರಸ್ಕರಿಸಿದರೆ, 15 ದಿನಗಳ ಒಳಗಾಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ (ಡಿಇಒ) ಮೇಲ್ಮನವಿ ಸಲ್ಲಿಸಬಹುದು. ಡಿಇಒ ಕೂಡ ತಿರಸ್ಕರಿಸಿದರೆ 30 ದಿನಗಳ ಒಳಗಾಗಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಒ) ಮೇಲ್ಮನವಿ ಸಲ್ಲಿಸಬಹುದು.

ಮ್ಯಾಪಿಂಗ್ ಆಗದ ಕಾರಣಕ್ಕೆ ನೋಟಿಸ್ ಪಡೆದರೆ, ಅವರು ನೀಡುವ ದಾಖಲೆಗಳನ್ನು ಇಆರ್‌ಒ ಡಿಇಒಗೆ ವರ್ಗಾಯಿಸುತ್ತಾರೆ. ಡಿಇಒ ಅದರ ಸತ್ಯಾಸತ್ಯತೆ ಪರಿಶೀಲಿಸಿ ಮೂರು ದಿನಗಳ ಒಳಗಾಗಿ ಇಆರ್‌ಒಗೆ ಪ್ರತಿಕ್ರಿಯೆ ನೀಡಲಿದ್ದಾರೆ. ಆ ಬಳಿಕ ಅವರನ್ನು ಮತದಾರರ ಪಟ್ಟಿಗೆ ಸೇರಿಸುವ ಅಥವಾ ಹೊರಗಿಡುವ ತೀರ್ಮಾನವನ್ನು ಇಆರ್‌ಒ ಮಾಡಲಿದ್ದಾರೆ. ಡಿಇಒ ಕೇವಲ ದಾಖಲೆ ಪರಿಶೀಲನೆ ಮಾತ್ರ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ರಾಜಸ್ಥಾನ: ವರದಿಗಾರಿಕೆಯಲ್ಲಿ ನಿರತರಾಗಿದ್ದ ದಲಿತ ಪತ್ರಕರ್ತನ ಮೇಲೆ ಜಾತಿ ಆಧಾರಿತ ದಾಳಿ, ಭೀಕರ ಹಲ್ಲೆ, ಜಾತಿ ನಿಂದನೆ 

ಉದಯಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಗೋಗುಂಡದಲ್ಲಿ ಕರ್ತವ್ಯನಿರತ ದಲಿತ ಪತ್ರಕರ್ತರೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಜಾತ್ಯಾತೀತ ಸಮಾಜ ತಲೆತಗ್ಗಿಸುವಂತೆ ಜಾತಿ ಆಧಾರಿತವಾಗಿ ನಿಂದಿಸಿರುವ ಘಟನೆ ವರದಿಯಾಗಿದೆ. ಸಾರ್ವಜನಿಕ ಕುಂದುಕೊರತೆ ಆಲಿಕೆ ಕಾರ್ಯಕ್ರಮದ...

ನಕಲಿ ಔಷಧ ಮಾಫಿಯಾ: 5 ರಾಜ್ಯಗಳಿಗೆ ಹರಡಿದ ಜಾಲ, ತೀವ್ರ ಶೋಧ

ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ನಕಲಿ ಔಷಧ ತಯಾರಿಕೆ ಹಾಗೂ ವಿತರಣೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಈ ಅಕ್ರಮ ಜಾಲವು ಕರ್ನಾಟಕ ಮಾತ್ರವಲ್ಲದೆ ದೇಶದ ಇತರ ಐದು ರಾಜ್ಯಗಳಿಗೂ ಹರಡಿರುವುದು ಬೆಳಕಿಗೆ...

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...