Homeಮುಖಪುಟಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

- Advertisement -
- Advertisement -

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಎನ್ನಲಾದ ಆರೋಪಿಗಳನ್ನು ಬಂಧಿಸಲು ಮತ್ತು ಶಾಲೆಯ ಮೂಲಸೌಕರ್ಯ ಸುಧಾರಿಸಲು ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 48 ಗಂಟೆಗಳ ಗಡುವನ್ನು ನೀಡಿದ್ದಾರೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಜಂತರ್ ಮಂತರ್ ರೀತಿಯ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ.

ಜೈಪುರ ಜಿಲ್ಲೆಯ ಬಾಗ್ರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕನ್ವರಪುರದಲ್ಲಿರುವ ರಾಂಪುರ ಸರ್ಕಾರಿ ಶಾಲೆಯು ಕಳೆದ ಹಲವು ವರ್ಷಗಳಿಂದ ಸೂಕ್ತ ಕಟ್ಟಡವಿಲ್ಲದೆ, ದನದ ಕೊಟ್ಟಿಗೆಯಲ್ಲಿ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಶಾಲೆಯ ವಾಸ್ತವ ಸ್ಥಿತಿಯನ್ನು ಸಾರ್ವಜನಿಕರಿಗೆ ತೋರಿಸಲು ಶುಕ್ರವಾರ (ಆ.21) ಸಿಜೆಪಿ ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿ ವಿಡಿಯೋ ಚಿತ್ರೀಕರಣ ನಡೆಸುತ್ತಿತ್ತು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಎನ್ನಲಾದ ಗುಂಪೊಂದು, ಸಿಜೆಪಿ ಸ್ವಯಂಸೇವಕರ ಮೇಲೆ ಏಕಾಏಕಿ ಮಾರಣಾಂತಿಕ ದಾಳಿ ನಡೆಸಿದೆ. ಮನಸೋಇಚ್ಛೆ ಥಳಿಸಿ, ಅವರ ವಾಹನಗಳ ಗಾಜುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅಭಿಜೀತ್ ದೀಪ್ಕೆ, ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ನೇತೃತ್ವದ ಸರ್ಕಾರ ಮತ್ತು ರಾಜಸ್ಥಾನ ಪೊಲೀಸರ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ.

ಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ, ಆಸ್ತಿ ಪಾಸ್ತಿ ನಷ್ಟ ಉಂಟುಮಾಡಿದ ಎಲ್ಲ ಆರೋಪಿಗಳನ್ನು 48 ಗಂಟೆಗಳ ಒಳಗೆ ಗುರುತಿಸಿ ಬಂಧಿಸಬೇಕು. ದನದ ಕೊಟ್ಟಿಗೆಯಲ್ಲಿ ನಡೆಯುತ್ತಿರುವ ರಾಂಪುರ ಸರ್ಕಾರಿ ಶಾಲೆಗೆ ತಕ್ಷಣವೇ ಪರ್ಯಾಯ ಸುಸಜ್ಜಿತ ಕಟ್ಟಡದ ವ್ಯವಸ್ಥೆ ಕಲ್ಪಿಸಬೇಕು ಮತ್ತು ಶಾಲಾ ದುರಸ್ತಿ ಕಾರ್ಯವನ್ನು ಆರಂಭಿಸಬೇಕು ಮತ್ತು ಸರ್ಕಾರಿ ಶಾಲೆಗಳ ಅವ್ಯವಸ್ಥೆಗಳು ಬಯಲಾಗದಂತೆ ತಡೆಯಲು, ಶಾಲೆಯ ಆವರಣದೊಳಗೆ ಸಾರ್ವಜನಿಕರು ಮತ್ತು ಮಾಧ್ಯಮಗಳು ವಿಡಿಯೋ ಮಾಡುವುದನ್ನು ನಿಷೇಧಿಸಿ ಇತ್ತೀಚೆಗೆ ಸರ್ಕಾರ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ದೀಪ್ಕೆ ಒತ್ತಾಯಿಸಿದ್ದಾರೆ.

ರಾಜಸ್ಥಾನ ಸರ್ಕಾರವು ಈ 48 ಗಂಟೆಗಳ ಗಡುವಿನೊಳಗೆ ಸೂಕ್ತ ಕಾನೂನು ಕ್ರಮ ಜರುಗಿಸದಿದ್ದರೆ, ತಾವು ತಕ್ಷಣವೇ ಜೈಪುರಕ್ಕೆ ಭೇಟಿ ನೀಡುವುದಾಗಿ ದೀಪ್ಕೆ ಘೋಷಿಸಿದ್ದಾರೆ. ಅಲ್ಲದೆ, ದೆಹಲಿಯ ಜಂತರ್ ಮಂತರ್ ಮಾದರಿಯಲ್ಲೇ ಜೈಪುರದಲ್ಲಿ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...