HomeಮುಖಪುಟRTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

- Advertisement -
- Advertisement -

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ದೇವಸ್ಥಾನಕ್ಕೆ ಸೇರಿದ ₹24 ಲಕ್ಷ ‘ರಥ ಕಾಣಿಕೆ’ ಹಣವನ್ನು ಕಾನೂನುಬಾಹಿರವಾಗಿ ತಮ್ಮ ಮನೆಗೆ ಒಯ್ದಿದ್ದರು ಎಂಬ ಅಂಶ ನ್ಯಾಯಾಲಯದ ದಾಖಲೆಗಳಿಂದ ಹೊರಬಿದ್ದಿದೆ ಎಂದು ‘ಬಿಎಲ್‌ಆರ್ ಪೋಸ್ಟ್’ ವರದಿ ಮಾಡಿದೆ.

2016ರ ಫೆಬ್ರವರಿಯಲ್ಲಿ ಮಂಗಳೂರಿನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ವಾರ್ಷಿಕ ರಥೋತ್ಸವ ನಡೆದಿತ್ತು. ಈ ವೇಳೆ ಕಾಶಿ ಮಠದ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಗೆ ಸಮರ್ಪಿಸಲು ಭಕ್ತರು ನೀಡಿದ್ದ ₹24 ಲಕ್ಷ ಕಾಣಿಕೆ ಮೊತ್ತವನ್ನು ನರೇಶ್ ಶೆಣೈ ಹಾಗೂ ಅವರ ಬೆಂಬಲಿಗರು ಇನ್ನೋವಾ ಕಾರಿನಲ್ಲಿ ನೇರವಾಗಿ ತಮ್ಮ ಮನೆಗೆ ತೆಗೆದುಕೊಂಡು ಹೋಗಿದ್ದರು.

ದೇವಸ್ಥಾನದ ಸಾರ್ವಜನಿಕ ಹಣವನ್ನು ಈ ರೀತಿ ವ್ಯಕ್ತಿಗತವಾಗಿ ನಿರ್ವಹಿಸಿದ್ದನ್ನು ವಿನಾಯಕ ಬಾಳಿಗಾ ತೀವ್ರವಾಗಿ ಪ್ರಶ್ನಿಸಿದ್ದರು. ನಿಯಮಗಳ ಪ್ರಕಾರ, ಸಂಗ್ರಹವಾದ ಕಾಣಿಕೆ ಹಣವನ್ನು ಮೊದಲು ದೇವಸ್ಥಾನದ ಅಧಿಕೃತ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಮತ್ತು ಆ ನಂತರವೇ ಸ್ವಾಮೀಜಿಯವರಿಗೆ ಚೆಕ್ ಮುಖಾಂತರ ವರ್ಗಾಯಿಸಬೇಕು ಎಂದು ಬಾಳಿಗಾ ಆಗ್ರಹಿಸಿದ್ದರು.

ದೇವಸ್ಥಾನದ ಆಡಳಿತ ಮತ್ತು ಹಣಕಾಸು ವ್ಯವಹಾರದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ತರಲು ಬಾಳಿಗಾ ನಡೆಸಿದ ಈ ಹೋರಾಟವೇ ಅವರ ಹತ್ಯೆಗೆ ಪ್ರಮುಖ ಪ್ರಚೋದನೆಯಾಯಿತು ಎಂದು ನ್ಯಾಯಾಲಯದ ದಾಖಲೆಗಳು ಬೆಟ್ಟುಮಾಡಿವೆ. ಈ ರಥ ಕಾಣಿಕೆ ವಿವಾದಕ್ಕಿಂತ ಮುಂಚೆಯೇ ಬಾಳಿಗಾ ಅವರು ದೇವಸ್ಥಾನದ ಆರ್ಥಿಕ ಲೆಕ್ಕಪತ್ರಗಳ ಮರು ಲೆಕ್ಕಪರಿಶೋಧನೆಗೆ ಆಗ್ರಹಿಸಿ ನ್ಯಾಯಾಲಯದ ಬಾಗಿಲು ತಟ್ಟಿದ್ದರು. ನ್ಯಾಯಾಲಯವು ಮರು ಆಡಿಟ್‌ಗೆ ಆದೇಶಿಸಿ, 2016ರ ಏಪ್ರಿಲ್‌ನಲ್ಲಿ ದಿನಾಂಕವನ್ನೂ ನಿಗದಿಪಡಿಸಿತ್ತು. ಆದರೆ, ಈ ಆಡಿಟ್ ಪ್ರಕ್ರಿಯೆ ಆರಂಭವಾಗಲು ಇನ್ನು ಕೆಲವೇ ವಾರಗಳಿವೆ ಎನ್ನುವಾಗಲೇ, ಅಂದರೆ 2016ರ ಮಾರ್ಚ್ 21ರಂದು ಕೊಡಿಯಾಲಬೈಲ್‌ನಲ್ಲಿರುವ ನಿವಾಸದ ಮುಂಭಾಗದಲ್ಲೇ ಬಾಳಿಗಾ ಅವರನ್ನು ದೈಹಿಕವಾಗಿ ಮುಗಿಸಿಹಾಕಲಾಗಿತ್ತು.

2016ರಲ್ಲಿ ಹತ್ಯೆಯಾದ RTI ಕಾರ್ಯಕರ್ತ ವಿನಾಯಕ ಬಾಳಿಗಾ

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನರೇಶ್ ಶೆಣೈ, ಶ್ರೀಕಾಂತ್, ಶಿವಪ್ರಸಾದ್, ವಿನೀತ್ ಪೂಜಾರಿ, ನಿಶಿತ್ ದೇವಡಿಗ, ಶೈಲೇಶ್ ಮತ್ತು ಮಂಜುನಾಥ್ ಶೆಣೈ ಸೇರಿ ಏಳು ಮಂದಿಯ ವಿರುದ್ಧ ನ್ಯಾಯಾಲಯಕ್ಕೆ ಸುದೀರ್ಘ ಆರೋಪಪಟ್ಟಿ ಸಲ್ಲಿಸಿದ್ದರು. ಸದ್ಯ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಈಗ ನ್ಯಾಯಾಲಯದ ವಿಚಾರಣೆ ವೇಳೆ ಬಹಿರಂಗವಾಗಿರುವ ಈ ಪ್ರಮುಖ ಸಾಕ್ಷ್ಯಗಳು, ಧಾರ್ಮಿಕ ಸಂಸ್ಥೆಗಳ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿಗಾಗಿ ಜೀವ ತೆತ್ತ ವಿನಾಯಕ ಬಾಳಿಗಾ ಅವರ ದಿಟ್ಟ ಹೋರಾಟವನ್ನು ಎತ್ತಿಹಿಡಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...