Homeಮುಖಪುಟಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

- Advertisement -
- Advertisement -

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.

ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿತ್ತು ಎನ್ನಲಾಗಿದೆ.

ದೂರುಗಳ ನಂತರ, ಉಪ ವಿಭಾಗಾಧಿಕಾರಿ (ಎಸ್‌ಡಿಎಂ), ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಉತ್ಪನ್ನಗಳನ್ನು ಪರಿಶೀಲಿಸಲು ಮತ್ತು ಮಾದರಿಗಳನ್ನು ಸಂಗ್ರಹಿಸಲು ಅಂಗಡಿಗೆ ಭೇಟಿ ನೀಡಿದರು. ಪರಿಶೀಲನೆಯ ವಿಡಿಯೋವೊಂದರಲ್ಲಿ ಅಧಿಕಾರಿಯೊಬ್ಬರು ಅಂಗಡಿಯವನಿಗೆ ಸಿಹಿತಿಂಡಿಯನ್ನು ನೀಡಿ ತಿನ್ನುವಂತೆ ಕೇಳಿಕೊಳ್ಳುವುದು ಕಂಡುಬರುತ್ತದೆ. ಆದರೆ, ಅಂಗಡಿ ಮಾಲೀಕ ಕೈ ಮುಗಿದು ಅದನ್ನು ತಿನ್ನಲು ನಿರಾಕರಿಸಿದ್ದಾನೆ.

ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿದ್ದ ಅದೇ ಸಿಹಿತಿಂಡಿಗಳನ್ನು ತಿನ್ನಲು ಮಾಲೀಕನೇ ನಿರಾಕರಿಸಿದ ಈ ಘಟನೆಯು ಎಲ್ಲರ ಗಮನ ಸೆಳೆದಿದೆ. ನಂತರ ಅಧಿಕಾರಿಗಳು ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದರು. ಸುರಕ್ಷತೆಯ ಕಾಳಜಿಯಿಂದಾಗಿ ಎಸ್‌ಡಿಎಂ ಅವರು ಆ ಸಿಹಿತಿಂಡಿಗಳನ್ನು ವಿಲೇವಾರಿ ಮಾಡಲು (ಚೆಲ್ಲಲು) ಆದೇಶಿಸಿದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಂಗಡಿ ಮಾಲೀಕನೇ ತನ್ನದೇ ಉತ್ಪನ್ನಗಳನ್ನು ಸೇವಿಸಲು ನಿರಾಕರಿಸಿದ ವಿಪರ್ಯಾಸದ ಕುರಿತು ಜನರು ಚರ್ಚೆ ಮಾಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...