Homeದಲಿತ್ ಫೈಲ್ಸ್ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

- Advertisement -
- Advertisement -

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, “ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಆಗಸ್ಟ್ 15 ರಿಂದ ತಿರೂರಿನ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನಘಾ ಶಶಿ, ತಮ್ಮ ಸಂಶೋಧನಾ ಮಾರ್ಗದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ತಾರತಮ್ಯ ಹಾಗೂ ಶೈಕ್ಷಣಿಕ ಸಂಕಷ್ಟಗಳನ್ನು ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಸಹಾಯಕ ಪ್ರಾಧ್ಯಾಪಕ ಅರುಣ್ ಬಾಬು ವಿ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಆದರೆ, ಅರುಣ್ ಬಾಬು ಈ ಆರೋಪಗಳನ್ನು ನಿರಾಕರಿಸಿದ್ದು, ತಾವು ಅವರ ಅಧಿಕೃತ ಸಂಶೋಧನಾ ಮಾರ್ಗದರ್ಶಕರಲ್ಲ ಎಂದು ಹೇಳಿದ್ದಾರೆ.

ಸಂಶೋಧನೆಗೆ ಅಡ್ಡಿಪಡಿಸಿದ ಆರೋಪ

ಅನಘಾ, ಮಾರ್ಚ್ 2024 ರಲ್ಲಿ ಪರಿಸರ ವಿಜ್ಞಾನ ವಿಭಾಗದಲ್ಲಿ ಡಾಕ್ಟರೇಟ್ ಕೋರ್ಸ್‌ಗೆ ಸೇರಿಕೊಂಡರು. ಪರಿಸರ ವಿಜ್ಞಾನ ಮತ್ತು ನಿರ್ವಹಣೆಯಲ್ಲಿ ಎಂಎಸ್ಸಿ ಮುಗಿಸಿರುವ ಅವರು ಮೈಕ್ರೋಪ್ಲಾಸ್ಟಿಕ್ಸ್‌ ಕುರಿತು ಸಂಶೋಧನೆ ನಡೆಸುತ್ತಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಆನ್‌ಲೈನ್ ಮಾಧ್ಯಮದೊಂದಿಗಿನ ಮಾತುಕತೆಯಲ್ಲಿ ಅನಘಾ, ತಮಗೆ ಎರಡು ವರ್ಷಗಳಿಗೂ ಹೆಚ್ಚು ಕಾಲ ಪ್ರಯೋಗಾಲಯಕ್ಕೆ ಪ್ರವೇಶ ನೀಡಲಿಲ್ಲ, ಸಿನೋಪ್ಸಿಸ್ (ಸಂಶೋಧನಾ ಪ್ರಬಂಧದ ಸಾರಾಂಶ) ಪರಿಶೀಲಿಸಲಿಲ್ಲ, ಡಾಕ್ಟರಲ್ ಸಮಿತಿಯನ್ನು ರಚಿಸಲಿಲ್ಲ ಎಂದು ಹೇಳಿದ್ದಾರೆ. ಬದಲಾಗಿ, ಪ್ರಯೋಗಾಲಯ ಮತ್ತು ತರಗತಿ ಕೊಠಡಿಗಳನ್ನು ಸ್ವಚ್ಛಗೊಳಿಸುವಂತೆ ತಮ್ಮಿಂದ ಕೆಲಸ ಮಾಡಿಸಿಕೊಳ್ಳಲಾಯಿತು ಎಂದು ಅವರು ಆರೋಪಿಸಿದ್ದಾರೆ.

ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ ನಂತರ ಸ್ವಚ್ಛಗೊಳಿಸುವ ಕೆಲಸವನ್ನು ನಿಲ್ಲಿಸಿದೆ. ಪ್ರಯೋಗಾಲಯದ ಸಹಾಯಕನನ್ನು ಒದಗಿಸುವಂತೆ ಅರುಣ್ ಬಾಬು ಅವರಲ್ಲಿ ವಿನಂತಿಸಿದೆ; ಆದರೆ ಅದನ್ನು ನಿರಾಕರಿಸಲಾಯಿತು ಎಂದು ಅನಘಾ ತಿಳಿಸಿದ್ದಾರೆ.

“ಪಿಎಚ್‌ಡಿ ವಿದ್ಯಾರ್ಥಿಗಳ ಕ್ಯಾಬಿನ್‌ನಲ್ಲಿ ನನಗೆ ಕುರ್ಚಿ ನೀಡಲಿಲ್ಲ, ಇತರ ಸಂಶೋಧಕರು ಕ್ಯಾಬಿನ್ ಬಳಸುವಾಗ ನಾನು ಹೊರಗೆ ಕುಳಿತುಕೊಳ್ಳಬೇಕಾಯಿತು” ಎಂದು ಅವರು ಹೇಳಿದ್ದಾರೆ.

2024 ರಲ್ಲಿ ನಡೆದ ಲಿಖಿತ ಪರೀಕ್ಷೆಯ ನಂತರ ಅನಘಾ ಅವರಿಗೆ ಪರಿಸರ ವಿಜ್ಞಾನದಲ್ಲಿ ‘ಕೇರಳ ರಾಜ್ಯ ವಿಜ್ಞಾನ, ತಂತ್ರಜ್ಞಾನ ಮತ್ತು ಪರಿಸರ ಮಂಡಳಿ’ (KSCSTE) ಫೆಲೋಶಿಪ್ ಲಭಿಸಿತ್ತು.

“ನಾನು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದವಳು ಎಂಬ ಕಾರಣಕ್ಕೆ ಈ ಫೆಲೋಶಿಪ್ ಸಿಕ್ಕಿದೆ ಎಂದು ಅವರು ಹೇಳಿದರು. ಫೆಲೋಶಿಪ್ ತಡೆಹಿಡಿಯುವುದಾಗಿ ಬೆದರಿಕೆ ಹಾಕಿದರು” ಎಂದು ಅನಘಾ ಆರೋಪಿಸಿದ್ದಾರೆ.

“ಆಗಸ್ಟ್ 2025 ರಲ್ಲಿ ವಿಶ್ವವಿದ್ಯಾಲಯಕ್ಕೆ ಹಲವು ದೂರುಗಳನ್ನು ಸಲ್ಲಿಸಿದರೂ ಯಾವುದೇ ಸೂಕ್ತ ಪರಿಹಾರ ಸಿಗಲಿಲ್ಲ. 2025 ರಲ್ಲಿ, ಸುದೀರ್ಘ ಅಡಚಣೆ, ಕಿರುಕುಳ ಮತ್ತು ಶೈಕ್ಷಣಿಕ ನಿರ್ಲಕ್ಷ್ಯದ ವಿರುದ್ಧ ಅವರು ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರಿಗೆ ದೂರು ನೀಡಿದ್ದು, ಇದರಿಂದ ತಮಗೆ ತೀವ್ರ ಮಾನಸಿಕ ಸಮಸ್ಯೆ ಉಂಟಾಗಿದೆ” ಎಂದು ತಿಳಿಸಿದ್ದರು.

ಈ ವರ್ಷ, ಅವರು ಕೇರಳ ಮುಖ್ಯಮಂತ್ರಿಗಳ ಕಚೇರಿಗೆ ದೂರು ಸಲ್ಲಿಸಿದ್ದು, ಅದರ ಬೆನ್ನಲ್ಲೇ ಈ ವಿಷಯದ ಕುರಿತು ತನಿಖೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗಿದೆ.

ಆರೋಪಗಳನ್ನು ನಿರಾಕರಿಸಿದ ಪ್ರಾಧ್ಯಾಪಕ

ಆರೋಪಗಳನ್ನು ತಳ್ಳುಹಾಕಿದ ಅರುಣ್ ಬಾಬು, ಅನಘಾ ಅವರಿಗೆ ಪ್ರಯೋಗಾಲಯ ಬಳಸಲು ಯಾವುದೇ ನಿರ್ಬಂಧ ಇರಲಿಲ್ಲ. ಪ್ರಯೋಗಾಲಯ ಅಥವಾ ತರಗತಿಗಳನ್ನು ಸ್ವಚ್ಛಗೊಳಿಸಲು ಬಲವಂತಪಡಿಸಿಲ್ಲ ಎಂದು ಹೇಳಿದರು.

ಅವರ ಸಿನೋಪ್ಸಿಸ್ ತಿದ್ದುಪಡಿ ಮಾಡಲು ವಿಫಲರಾಗಿದ್ದಾರೆ ಎಂಬ ಆರೋಪವನ್ನೂ ಅವರು ಅಲ್ಲಗಳೆದಿದ್ದಾರೆ. ಅವರ ಪ್ರಕಾರ, ತಾವು ಅನಘಾ ಅವರ ಅಧಿಕೃತ ಸಂಶೋಧನಾ ಮಾರ್ಗದರ್ಶಕರಲ್ಲ. ಆದರೂ, ಜುಲೈ 25, 2024 ರಂದು ಪ್ರಭಾರ ರಿಜಿಸ್ಟ್ರಾರ್ ನೀಡಿದ ಸೇರ್ಪಡೆ ವರದಿಯಲ್ಲಿ ಅರುಣ್ ಬಾಬು ಅವರನ್ನು ಅನಘಾ ಅವರ ಮಾರ್ಗದರ್ಶಕರೆಂದು ಪಟ್ಟಿ ಮಾಡಲಾಗಿದೆ.

ಸಮಯ ವಿಸ್ತರಣೆ ನೀಡಿದ್ದರೂ ಅಂತಿಮ ಸಿನೋಪ್ಸಿಸ್ ಸಲ್ಲಿಸದ ಕಾರಣ ಅನಘಾ ಅವರು ಎರಡು ಡಾಕ್ಟರಲ್ ಸಮಿತಿ ಸಭೆಗಳಿಗೆ ಗೈರುಹಾಜರಾಗಿದ್ದರು ಎಂದು ಅರುಣ್ ಬಾಬು ತಿಳಿಸಿದ್ದಾರೆ.

ಅಧಿಕಾರಿಗಳು ಈ ವಿಷಯದ ತನಿಖೆಯನ್ನು ಮುಂದುವರಿಸಿದ್ದು, ಆರೋಪ ಮತ್ತು ಪ್ರತ್ಯಾರೋಪಗಳ ಪರಿಶೀಲನೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...