HomeಅಂಕಣಗಳುKarnataka against SIRKarnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

- Advertisement -
- Advertisement -

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ.

ಎಸ್‌ಐಆರ್ ಸಲುವಾಗಿ 16 ಜೂನ್ 2026ರಂದು ಕರ್ನಾಟಕದ ಮತದಾರರ ಪಟ್ಟಿಯನ್ನು ಫ್ರೀಝ್ ಮಾಡಲಾಗಿತ್ತು. ಈ ವೇಳೆಗೆ ರಾಜ್ಯದ ಒಟ್ಟು ಮತದಾರರ ಸಂಖ್ಯೆ 5,54,32,314 ಇತ್ತು. ಎನ್ಯುಮರೇಷನ್ ಹಂತಲ್ಲಿ 1,07,96, 415 ಮತದಾರರನ್ನು ಗೈರು ಹಾಜರಿ, ಸ್ಥಳಾಂತರ, ಮರಣ, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿ ಮತ್ತು ಇತರೆ (ಎಎಸ್‌ಡಿಡಿಒ) ಎಂದು ಪಟ್ಟಿ ಮಾಡಲಾಗಿದೆ. ಅಂದರೆ, ಡಿಲೀಟ್ ಮಾಡಲಾಗಿದೆ. ಹಾಗಾಗಿ, ಕರಡು ಪಟ್ಟಿಯಲ್ಲಿ 4,46,35,899 ಮತದಾರರ ಹೆಸರಷ್ಟೇ ಇರಲಿದೆ.

ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಮನೆ–ಮನೆಗೆ ಭೇಟಿ ನೀಡಿದಾಗ ಪತ್ತೆಯಾಗಿಲ್ಲ ಎಂದು 15.17 ಲಕ್ಷ, ಸ್ಥಳಾಂತರ ಎಂದು 65.45 ಲಕ್ಷ, ಮೃತ ಎಂದು 16.39 ಲಕ್ಷ, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿ ಎಂದು 7.09 ಲಕ್ಷ ಹಾಗೂ ಗಣತಿ ನಮೂನೆಗೆ ಸಹಿ ಮಾಡಿಲ್ಲ ಎಂದು 3.83 ಲಕ್ಷ ಮತದಾರರನ್ನು ವರ್ಗೀಕರಿಸಲಾಗಿತ್ತು. ಈ ಮತದಾರರ ಗಣತಿ ನಮೂನೆ ಸಲ್ಲಿಕೆಯಾಗದೇ ಇರುವ ಕಾರಣಕ್ಕೆ, ಇವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ.

ಆದರೆ, ಈ ಹೇಳಿಕೆಯನ್ನು ನಾಗರಿಕ ಮತ ಕಾವಲು ಸಮಿತಿಯಂತಹ ನಾಗರಿಕ ಸಂಘಟನೆಗಳು ತಿರಸ್ಕರಿಸಿವೆ. ಎನ್ಯುಮರೇಷನ್ ಫಾರಂ ಸರಿಯಾಗಿ ಭರ್ತಿ ಮಾಡಿಕೊಟ್ಟ ಮತದಾರರ ಹೆಸರುಗಳೂ ಆಯೋಗದ ತಪ್ಪಿಗೆ ಎಎಸ್‌ಡಿಡಿಒ ಪಟ್ಟಿಯಲ್ಲಿ ಸೇರಿಕೊಂಡಿವೆ ಎಂದು ಆರೋಪಿಸಿವೆ.

ಕರಡು ಪಟ್ಟಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ. ಮತದಾರರು ತಮ್ಮ ಎಪಿಕ್ ನಂಬರ್ (ಮತದಾರರ ಗುರುತಿನ ಚೀಟಿ ಸಂಖ್ಯೆ) ಹಾಕಿ ತಮ್ಮ ಹೆಸರನ್ನು ಪರಿಶೀಲಿಸಬಹುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಅನ್‌ಮ್ಯಾಪಿಂಗ್ ಮತ್ತು ಲಾಜಿಕಲ್ ಡಿಸ್ಕ್ರಿಪೆನ್ಸಿಗೆ ನೋಟಿಸ್

ಕರಡು ಪಟ್ಟಿ ಪ್ರಕಟಗೊಂಡ ಬಳಿಕ ಎನ್ಯುಮರೇಷನ್ ಫಾರಂ ಡಿಜಿಟಲೀಕರಣಗೊಂಡ 43, 80,740 ಮತದಾರರಿಗೆ ಅನ್‌ ಮ್ಯಾಪಿಂಗ್ ಮತ್ತು ಅನಾಮಲಿಸ್ (ಲಾಜಿಕಲ್ ಡಿಸ್ಕ್ರಿಪೆನ್ಸಿ) ಎಂಬ ಕಾರಣಕ್ಕೆ ನೋಟಿಸ್ ಬರಲಿದೆ. 23,45,428 ಮತದಾರರಿಗೆ ಅನ್‌ಮ್ಯಾಪಿಂಗ್ ಮತ್ತು 23,35,312 ಅನಾಮಲಿಸ್ ಕಾರಣಕ್ಕೆ ನೋಟಿಸ್ ನೀಡಲು ಚುನಾವಣಾ ಆಯೋಗ ಸಿದ್ದತೆ ನಡೆಸಿದೆ.

ಪ್ರಸ್ತುತ ಎಎಸ್‌ಡಿಒ ಪಟ್ಟಿಯಲ್ಲಿರುವ 1,07,96, 415 ಮತದಾರರ ಹೆಸರು ಕರಡು ಪಟ್ಟಿಯಲ್ಲಿ ಬರುವುದಿಲ್ಲ. ಇವರನ್ನು ಈಗಾಗಲೇ ಡಿಲಿಟ್ ಎಂದು ತೀರ್ಮಾನಿಸಲಾಗಿದೆ. ಇನ್ನು ನೋಟಿಸ್ ಪಡೆಯಲಿರುವ 43, 80,740 ಮತದಾರರಲ್ಲಿ ವಿಚಾರಣೆ ಹಾಜರಾಗಿ ದಾಖಲೆ ಸಲ್ಲಿಸದ ಕಾರಣಕ್ಕೆ ಎಷ್ಟು ಜನರು ತಮ್ಮ ಹಕ್ಕು ಕಳೆದುಕೊಳ್ಳಲಿದ್ದಾರೆ ಎಂಬುವುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...