Homeಮುಖಪುಟಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

- Advertisement -
- Advertisement -

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ.

ಮೀಸಲಾತಿ ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಘೋಷಿಸಲಾದ ಪ್ರತಿಭಟನೆ ಸೇರಿದಂತೆ ಮೀಸಲಾತಿ ವಿರೋಧಿ ಚಳವಳಿಗಳು ಈ ವಿಷಯವನ್ನು ಮತ್ತೆ ಮುನ್ನೆಲೆಗೆ ತಂದಿವೆ ಎಂದು ಅಠಾವಳೆ ಹೇಳಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿಯೂ ಮೀಸಲಾತಿ ವ್ಯವಸ್ಥೆಯನ್ನು ತೆಗೆದುಹಾಕಲು ಅಥವಾ ಬದಲಾಯಿಸಲು ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಮೀಸಲಾತಿಯನ್ನು ವಿರೋಧಿಸುವುದು ಸಂವಿಧಾನವನ್ನು ವಿರೋಧಿಸಿದಂತೆ. ಮೀಸಲಾತಿ ವಿರೋಧಿ ನಿಲುವು ತಳೆಯುವವರು ಸಂವಿಧಾನ ವಿರೋಧಿಗಳು. ಅವರ ವಿರುದ್ಧ ದೇಶದ್ರೋಹದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅಠಾವಳೆ ಹೇಳಿದ್ದಾರೆ.

“ಕೆಲವರು ಮೀಸಲಾತಿಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ, ಮೀಸಲಾತಿಯು ಸಂವಿಧಾನ ನೀಡಿರುವ ಹಕ್ಕಾಗಿರುವುದರಿಂದ ಅದನ್ನು ರದ್ದುಗೊಳಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

ಇನ್ನೊಂದೆಡೆ, “ಮೀಸಲಾತಿ ಸುಧಾರಣೆಗಳ ಕುರಿತು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಅಥವಾ ಸಮಾವೇಶ ನಡೆಸಲು ಯಾವುದೇ ವ್ಯಕ್ತಿ ಅಥವಾ ಸಂಘಟನೆಗೆ ಅನುಮತಿ ನೀಡಿಲ್ಲ” ಎಂದು ದೆಹಲಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣಗಳ ದಾರಿ ತಪ್ಪಿಸುವ ಪೋಸ್ಟ್‌ಗಳನ್ನು ನಂಬಿ ಅಲ್ಲಿ ಸೇರದಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಆದರೂ, ಬ್ಯಾನರ್‌ಗಳು, ಪೋಸ್ಟರ್‌ಗಳು ಮತ್ತು ಕೇಸರಿ ಧ್ವಜಗಳನ್ನು ಹಿಡಿದು ದೊಡ್ಡ ಸಂಖ್ಯೆಯಲ್ಲಿ ಜಂತರ್ ಮಂತರ್‌ನಲ್ಲಿ ನೆರೆದಿದ್ದ ಪ್ರತಿಭಟನಾಕಾರರು, ಜಾತಿ ಆಧಾರಿತ ಮೀಸಲಾತಿಯ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸರ್ಕಾರಿ ನೆರವು ಮತ್ತು ಮೀಸಲಾತಿಯನ್ನು ನಿರ್ಧರಿಸುವಾಗ ಜಾತಿಗಿಂತ ಆರ್ಥಿಕ ಮಾನದಂಡಗಳಿಗೆ ಆದ್ಯತೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...