Homeರಾಷ್ಟ್ರೀಯಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

- Advertisement -
- Advertisement -

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು 22 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಸೊಹ್ರಾಬುದ್ದೀನ್ ಶೇಖ್ ಅವರ ಕಿರಿಯ ಸಹೋದರ ನಯಾಬುದ್ದೀನ್ ಶೇಖ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದು, ಎಲ್ಲಾ ಆರೋಪಿಗಳ ಖುಲಾಸೆಯನ್ನು ಎತ್ತಿಹಿಡಿದು ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಹಾಗೂ ನ್ಯಾಯಮೂರ್ತಿ ಗೌತಮ್ ಅಶ್ವಿನ್ ಅಂಕಡ್ ಅವರಿದ್ದ ಪೀಠ ನೀಡಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಇದರಲ್ಲಿ ಪ್ರಶ್ನಿಸಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, 2005ರಲ್ಲಿ ಹೈದರಾಬಾದ್‌ನಿಂದ ಮಹಾರಾಷ್ಟ್ರಕ್ಕೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸೊಹ್ರಾಬುದ್ದೀನ್ ಶೇಖ್, ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿಯನ್ನು ಪೊಲೀಸ್ ತಂಡವೊಂದು ಅಪಹರಿಸಿತ್ತು. ಬಳಿಕ ಶೇಖ್‌ನನ್ನು ಅಹಮದಾಬಾದ್ ಬಳಿ ಎನ್‌ಕೌಂಟರ್‌ನಲ್ಲಿ ಹಾಗೂ ಅವರ ಪತ್ನಿಯನ್ನು ಮೂರು ದಿನಗಳ ನಂತರ ಹತ್ಯೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ಹಾಗೆಯೇ ಆಪ್ತ ಪ್ರಜಾಪತಿಯನ್ನು 2006ರಲ್ಲಿ ಗುಜರಾತ್-ರಾಜಸ್ಥಾನ ಗಡಿಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಗುಜರಾತ್ ಅಪರಾಧ ತನಿಖಾ ಇಲಾಖೆಯಿಂದ (ಸಿಐಡಿ) ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ನಿರ್ದೇಶನ ನೀಡಿದ್ದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಗುಜರಾತ್‌ನಿಂದ ಮುಂಬೈಗೆ ಸ್ಥಳಾಂತರಿಸುವಂತೆಯೂ ಆದೇಶಿಸಿತ್ತು. ಇದೇ ವೇಳೆ, ಪ್ರಜಾಪತಿ ಎನ್‌ಕೌಂಟರ್ ಹತ್ಯೆ ಪ್ರಕರಣವನ್ನು ಸಹ ಸೊಹ್ರಾಬುದ್ದೀನ್ ಶೇಖ್ ಪ್ರಕರಣದೊಂದಿಗೆ ಒಂದಾಗಿ ಸೇರಿಸಲಾಗಿತ್ತು.

ಒಟ್ಟು 210 ಸಾಕ್ಷಿಗಳಲ್ಲಿ 92 ಸಾಕ್ಷಿಗಳು ವಿಚಾರಣೆ ವೇಳೆ ಉಲ್ಟಾ ಹೊಡೆದಿದ್ದರು. 2018ರಲ್ಲಿ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು, ಶೇಖ್ ಹಾಗೂ ಇತರರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಹೇಳಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

ಈ ಆದೇಶ ಪ್ರಶ್ನಿಸಿ 2019 ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ‘ರುಬಾಬುದ್ದೀನ್ ಶೇಖ್ V/s ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್’ ಪ್ರಕರಣದಲ್ಲಿ ಇತ್ತೀಚೆಗೆ ತೀರ್ಪು ನೀಡಿದ್ದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರಗಳಿಲ್ಲ ಎಂದು ಹೇಳಿ ಮೇಲ್ಮನವಿಯನ್ನು ವಜಾಗೊಳಿಸಿತ್ತು.

ಈ ಪ್ರಕರಣವು ಕೇವಲ ಸಂದರ್ಭೋಚಿತ ಸಾಕ್ಷ್ಯಗಳನ್ನು ಆಧರಿಸಿದ್ದು, ಘಟನೆಗಳನ್ನು ಲಿಂಕ್ ಮಾಡುವ ಸರಿಯಾದ ಸಾಕ್ಷ್ಯಗಳು ದೊರೆತಿಲ್ಲ. ಶೇಖ್ ಮತ್ತು ಅವರ ಪತ್ನಿಯನ್ನು ಪೊಲೀಸರೇ ಅಪಹರಿಸಿದ್ದರು ಎಂಬುದಕ್ಕೆ ಹಾಗೂ ಈ ನಕಲಿ ಎನ್‌ಕೌಂಟರ್ ಮಾಡಲು ಪೊಲೀಸರಿಗೆ ಏನು ಲಾಭ ಅಥವಾ ಉದ್ದೇಶವಿತ್ತು ಎಂಬುದನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್‌ಗೆ ವಿಫಲವಾಗಿದೆ ಎಂದು ಹೈಕೋರ್ಟ್ ಹೇಳಿತ್ತು.

ದೊಡ್ಡ ಸಂಖ್ಯೆಯ ಸಾಕ್ಷಿಗಳು ಉಲ್ಟಾ ಹೊಡೆದ ತಕ್ಷಣಕ್ಕೆ, ವಿಚಾರಣೆಯನ್ನು ಸರಿಯಾಗಿ ನಡೆಸಲಾಗಿಲ್ಲ ಎಂದು ತಾನಾಗಿಯೇ (ಇಪ್ಸೋ ಫ್ಯಾಕ್ಟೋ) ತೀರ್ಮಾನಿಸಲು ಸಾಧ್ಯವಿಲ್ಲ. ಈ ಆರೋಪಿತ ಎನ್‌ಕೌಂಟರ್‌ಗಳ ಹಿಂದೆ ರಾಜಕಾರಣಿ ಹಾಗೂ ಪೊಲೀಸರ ನಡುವೆ ಯಾವುದೇ ರೀತಿಯ ಶಾಮೀಲಾತಿ (ನೆಕ್ಸಸ್) ಇತ್ತು ಎಂಬುದನ್ನು ಸಾಬೀತುಪಡಿಸಲು ಯಾವುದೇ ಆಧಾರಗಳಿಲ್ಲ ಎಂದೂ ತಿಳಿಸಿತ್ತು.

ಆಗಸ್ಟ್ 13, 2026 ರಂದು ಬಾಂಬೆ ಹೈಕೋರ್ಟ್‌ನ ಖುಲಾಸೆ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿದೆ. ಅರ್ಜಿದಾರರ ಪರವಾಗಿ ವಕೀಲ ಅಚಿಂತ್ ಕುಮಾರ್ ಅವರು ವಾದ ಮಂಡಿಸುತ್ತಿದ್ದಾರೆ.

livelaw.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...