Homeಮುಖಪುಟಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.

ಟಿಎಂಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠವು ಈ ನೋಟಿಸ್ ಜಾರಿಗೊಳಿಸಿದೆ. 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಟಿಎಂಸಿ ನೀಡಿರುವ ಅರ್ಜಿಗಳ ಕುರಿತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅಭಿಷೇಕ್ ಬ್ಯಾನರ್ಜಿ ತಮ್ಮ ಅರ್ಜಿಯಲ್ಲಿ ಕೋರಿದ್ದರು.

ಆರಂಭದಲ್ಲಿ ಸುಪ್ರೀಂ ಕೋರ್ಟ್ ಸ್ಪೀಕರ್ ಅವರಿಗೂ ನೋಟಿಸ್ ಜಾರಿ ಮಾಡುವ ಸುಳಿವು ನೀಡಿತ್ತಾದರೂ, ಸ್ಪೀಕರ್ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಮನವಿಯ ಮೇರೆಗೆ ನೋಟಿಸ್ ಜಾರಿಯನ್ನು ತಡೆಹಿಡಿಯಿತು. ವಿಚಾರಣೆ ವೇಳೆ ತುಷಾರ್ ಮೆಹ್ತಾ ಅವರು, ಅನರ್ಹತೆ ಅರ್ಜಿಗಳ ಕುರಿತು ಸ್ಪೀಕರ್ ಈಗಾಗಲೇ ನೋಟಿಸ್‌ಗಳನ್ನು ಜಾರಿ ಮಾಡಿದ್ದಾರೆ ಎಂಬ ಮಾಹಿತಿ ನನಗಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಬಾಗ್ಚಿ, ಇಲ್ಲಿ ಕೇವಲ ನೋಟಿಸ್ ಜಾರಿ ಮಾಡುವುದು ವಿಷಯವಲ್ಲ, ನಿಗದಿತ ಕಾಲಮಿತಿಯೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಮುಖ್ಯ ಎಂದು ಹೇಳಿದರು.

ಅನರ್ಹತೆ ಅರ್ಜಿಗಳ ತೀರ್ಮಾನದಲ್ಲಿ ಅನಗತ್ಯ ವಿಳಂಬವಾಗುತ್ತಿದೆ ಎಂದು ಬ್ಯಾನರ್ಜಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು. ನ್ಯಾಯಾಲಯದ ಈ ನಡಾವಳಿಯ ಬಗ್ಗೆ ಪ್ರತಿಕ್ರಿಯಿಸಿದ ಟಿಎಂಸಿ ಪರ ವಕೀಲ ಕಲ್ಯಾಣ್ ಬ್ಯಾನರ್ಜಿ, ಇದು ತೃಣಮೂಲ ಕಾಂಗ್ರೆಸ್‌ಗೆ ಸಿಕ್ಕ ದೊಡ್ಡ ಜಯವಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸಲಿದೆ ಎಂದಿದ್ದಾರೆ.

ಟಿಎಂಸಿ ಸಂಸದೀಯ ಪಕ್ಷದಲ್ಲಿ ಎದ್ದ ದಂಗೆಯ ನಂತರ 20 ಲೋಕಸಭಾ ಸಂಸದರು ತ್ರಿಪುರಾ ಮೂಲದ ‘ನ್ಯಾಷನಲ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (ಎನ್‌ಸಿಪಿಐ) ಎಂಬ ರಾಜಕೀಯ ಪಕ್ಷದೊಂದಿಗೆ ವಿಲೀನಗೊಂಡಿರುವುದಾಗಿ ಘೋಷಿಸಿಕೊಂಡು, ಸದನದಲ್ಲಿ ಪ್ರತ್ಯೇಕ ಗುರುತಿಸುವಿಕೆಯನ್ನು ಕೋರಿದ್ದರು. ಅಂದಿನಿಂದ ಈ ಬಂಡಾಯ ಸಂಸದರನ್ನು ಸಂಸತ್ತಿನಲ್ಲಿ ಎನ್‌ಸಿಪಿಐ ಗುಂಪು ಎಂದು ಪರಿಗಣಿಸಲಾಗಿದ್ದು, ಇವರು ಎನ್‌ಡಿಎ ಮೈತ್ರಿಕೂಟದ ಸಭೆಗಳಲ್ಲೂ ಭಾಗವಹಿಸುತ್ತಿದ್ದಾರೆ. ಆದರೆ, ಈ ಸಂಸದರು ಟಿಎಂಸಿ ಚಿಹ್ನೆಯಡಿ ಗೆದ್ದಿದ್ದು, ಇನ್ನೊಂದು ರಾಜಕೀಯ ಪಕ್ಷದೊಂದಿಗೆ ಗುರುತಿಸಿಕೊಂಡಿರುವುದು ಪಕ್ಷದ ಸದಸ್ಯತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದಂತೆ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯಡಿ ಇವರನ್ನು ಅನರ್ಹಗೊಳಿಸಬೇಕು ಎಂದು ಟಿಎಂಸಿ ವಾದಿಸುತ್ತಿದೆ. ಆದರೆ, ಬಂಡಾಯ ಬಣವು ತಮ್ಮ ನಡೆ ಕಾನೂನುಬದ್ಧ ವಿಲೀನವಾಗಿದೆ ಎಂದು ಸಮರ್ಥಿಸಿಕೊಂಡಿದೆ.

ಈ ಅರ್ಜಿಯಲ್ಲಿ ಲೋಕಸಭಾ ಸ್ಪೀಕರ್ ಮತ್ತು ಕಾರ್ಯದರ್ಶಿಯವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದ್ದು, ಅನರ್ಹತೆ ಬೆದರಿಕೆ ಎದುರಿಸುತ್ತಿರುವ 20 ಸಂಸದರ ಪಟ್ಟಿ ಈ ಕೆಳಗಿನಂತಿದೆ. ಕಾಕೋಲಿ ಘೋಷ್ ದಸ್ತಿದಾರ್, ಸುದೀಪ್ ಬಂಡೋಪಾಧ್ಯಾಯ, ಶತಾಬ್ದಿ ರಾಯ್, ಪ್ರಸೂನ್ ಬ್ಯಾನರ್ಜಿ, ರಚನಾ ಬ್ಯಾನರ್ಜಿ, ಜಗದೀಶ್ ಚಂದ್ರ ಬರ್ಮಾ ಬಸುನಿಯಾ, ಪಾರ್ಥ ಭೌಮಿಕ್, ಅರೂಪ್ ಚಕ್ರವರ್ತಿ, ಅಧಿಕಾರಿ ದೀಪಕ್ ದೇವ್, ಸಾಯನಿ ಘೋಷ್, ಬಾಪಿ ಹಲ್ದಾರ್, ಮೊಹಮ್ಮದ್ ಅಬು ತಾಹಿರ್ ಖಾನ್, ಕಾಳಿಪಾದ ಸೊರೇನ್ ಖೇರ್ವಾಲ್, ಅಸಿತ್ ಕುಮಾರ್ ಮಾಲ್, ಜೂನ್ ಮಲಿಯಾ, ಮಿತಾಲಿ ಬಾಗ್, ಖಲೀಲುರ್ ರಹಮಾನ್, ಮಾಲಾ ರಾಯ್, ಶರ್ಮಿಳಾ ಸರ್ಕಾರ್ ಮತ್ತು ಯುಸೂಫ್ ಪಠಾಣ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...