Homeಮುಖಪುಟಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: 'ದಳಪತಿ' ವಿಜಯ್ ಟಿವಿಕೆ ಪಕ್ಷ ಸೇರಲು...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

- Advertisement -
- Advertisement -

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದೇವನ್, ತಮ್ಮ ರಾಜೀನಾಮೆಯ ನಂತರ ಟಿವಿಕೆ ಪ್ರತಿನಿಧಿಗಳು ತಮ್ಮನ್ನು ಸಂಪರ್ಕಿಸಿದ್ದು, ಪ್ರಾಥಮಿಕ ಚರ್ಚೆಗಳ ನಂತರ ಈ ಆಹ್ವಾನವನ್ನು ಸ್ವೀಕರಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಸೆಪ್ಟೆಂಬರ್ 10ರಂದು ನಟ ವಿಜಯ್ ಅವರನ್ನು ಭೇಟಿಯಾದ ನಂತರ ಪಕ್ಷ ಸೇರ್ಪಡೆಯ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ. ಟಿವಿಕೆ ಪಕ್ಷವು ತಮಗೆ ಕೇರಳ ಘಟಕದ ಅಧ್ಯಕ್ಷ ಸ್ಥಾನವನ್ನು ಆಫರ್ ಮಾಡಿದೆ ಎಂದು ದೇವನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ನಾನು 2004ರಲ್ಲಿ ಎತ್ತಿದ್ದ ಕೆಲವು ವಿಷಯಗಳನ್ನೇ ವಿಜಯ್ ಕೂಡ ಈಗ ಎತ್ತುತ್ತಿದ್ದಾರೆ. ರಾಜಕೀಯದಲ್ಲಿ ನಮ್ಮಿಬ್ಬರ ನಡುವೆ ಕೆಲವು ಸಮಾನ ಆಲೋಚನೆಗಳಿದ್ದು, ಇದುವೇ ನನ್ನನ್ನು ಅವರತ್ತ ಆಕರ್ಷಿಸಿತು ಎಂದು ದೇವನ್ ಹೇಳಿದ್ದಾರೆ. ಭ್ರಷ್ಟಾಚಾರ ಮತ್ತು ಕೋಮುವಾದದ ವಿರುದ್ಧ ಹೋರಾಡುವ ಹಾಗೂ ಹೊಸ ರಾಜಕೀಯ ಸಂಸ್ಕೃತಿಯನ್ನು ಹುಟ್ಟುಹಾಕುವ ಉದ್ದೇಶದಿಂದ ತಾವು ರಾಜಕೀಯಕ್ಕೆ ಬಂದಿದ್ದಾಗಿ ಅವರು ತಿಳಿಸಿದ್ದಾರೆ.

2004ರಲ್ಲಿ ತಾವು ದಕ್ಷಿಣ ಭಾರತದಲ್ಲೇ ಅತ್ಯಂತ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಖಳನಟನಾಗಿದ್ದಾಗ, ರಾಜಕೀಯ ಪ್ರವೇಶದಿಂದ ಸಿನಿಮಾ ವೃತ್ತಿಜೀವನಕ್ಕೆ ಧಕ್ಕೆಯಾಗುತ್ತದೆ ಎಂದು ಗೊತ್ತಿದ್ದರೂ, ರಾಜಕೀಯಕ್ಕೆ ಬಂದಿದ್ದಾಗಿ ದೇವನ್ ನೆನಪಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕವಾದ ಕೇರಳ ಸ್ಟೂಡೆಂಟ್ಸ್ ಯೂನಿಯನ್ (ಕೆಎಸ್‌ಯು) ಮೂಲಕ ತಮ್ಮ ರಾಜಕೀಯ ರಂಗಪ್ರವೇಶ ಮಾಡಿದ್ದ ಅವರು, 2004ರಲ್ಲಿ ‘ಕೇರಳ ಪೀಪಲ್ಸ್ ಪಾರ್ಟಿ’ ಸ್ಥಾಪಿಸುವ ಮೂಲಕ ಸಕ್ರಿಯ ರಾಜಕೀಯಕ್ಕೆ ಧುಮುಕಿದ್ದರು. 2004ರ ವಡಕ್ಕಂಚೇರಿ ಉಪಚುನಾವಣೆ ಮತ್ತು 2006ರ ತಿರುವನಂತಪುರಂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಬಳಿಕ 2020ರಲ್ಲಿ ತಮ್ಮ ಪಕ್ಷವನ್ನು ‘ನವ ಕೇರಳ ಪೀಪಲ್ಸ್ ಪಾರ್ಟಿ’ ಎಂದು ಮರುನಾಮಕರಣ ಮಾಡಿ ಮರುಚಾಲನೆ ನೀಡಿದ್ದರು. 2021ರಲ್ಲಿ ಈ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಾಯಿತು ಮತ್ತು ದೇವನ್ ಅವರಿಗೆ ಕೇರಳ ಬಿಜೆಪಿ ಘಟಕದ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ, ಬಿಜೆಪಿಯಲ್ಲಿ ಸುಮಾರು 5 ವರ್ಷಗಳ ಕಾಲ ಇದ್ದರೂ ತಮಗೆ ಸೂಕ್ತ ‘ಅವಕಾಶ’ ಮತ್ತು ಕೆಲಸ ಮಾಡಲು ಸೂಕ್ತ ವಾತಾವರಣ ಸಿಗಲಿಲ್ಲ ಎಂದು ಆರೋಪಿಸಿ ಅವರು ಆಗಸ್ಟ್ 15ರಂದು ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಬಿಜೆಪಿ ಘಟಕವು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಸಾಮಾಜಿಕ ನ್ಯಾಯದ ಆದರ್ಶಗಳಿಂದ ದೂರ ಸರಿಯುತ್ತಿದೆ ಎಂದೂ ಅವರು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...