Homeಮುಖಪುಟರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

- Advertisement -
- Advertisement -

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ ಬರ ಪರಿಶೀಲನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸದಾಶಿವನಗರದ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿ ನಾಯಕರು ತಂಡ ರಚಿಸಿ ತೆರಳಿದ್ದರೂ, ಆ ಬಗ್ಗೆ ಸದನದಲ್ಲಿ ಚರ್ಚಿಸಿಲ್ಲ ಹಾಗೂ ಸರ್ಕಾರಕ್ಕೂ ಯಾವುದೇ ವರದಿ ಅಥವಾ ಪತ್ರ ನೀಡಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ರೈತರಿಗೆ ಬೆಳೆ ನಷ್ಟ ಉಂಟಾಗಿದ್ದು, ವಿರೋಧ ಪಕ್ಷದವರು ಈ ಬಗ್ಗೆ ರಚನಾತ್ಮಕ ಸಲಹೆಗಳನ್ನು ನೀಡುವ ಬದಲು ಸದನದಲ್ಲಿ ಕೇವಲ ರಾಜಕೀಯ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿಯನ್ನಾಗಿ ಮಾಡುವಂತೆ ಹೈಕಮಾಂಡ್‌ಗೆ ಒತ್ತಾಯಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಈ ಹಿಂದೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ನನ್ನನ್ನು ಮುಖ್ಯಮಂತ್ರಿ ಮಾಡುವಂತೆ ಅವರು ಹೇಳಿದ್ದರು. ಈಗ ಉಪಮುಖ್ಯಮಂತ್ರಿಯನ್ನಾಗಿಯೂ ಸೂಚಿಸಿದ್ದು, ಆ ಮಾತು ಸತ್ಯವಾಗಿದೆ ಎಂದರು. ಸಚಿವ ನಾಗೇಂದ್ರ ಅವರ ರಾಜೀನಾಮೆ ಮತ್ತು ಸಿಬಿಐ ತನಿಖೆ ವಿಚಾರವಾಗಿ ಮಾತನಾಡಿ, ಯಾವುದೇ ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಅವರ ಹೆಸರಿಲ್ಲ. ಈ ಕುರಿತು ಸಿಬಿಐ ತನಿಖೆ ಬಗ್ಗೆ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಬಿಜೆಪಿ ಪಾದಯಾತ್ರೆ ಮಾಡುವುದು ಕೇವಲ ರಾಜಕೀಯವಷ್ಟೇ ಎಂದರು.

ಉದ್ಯಾನವನಗಳ ಶೇಕಡಾ 5ರಷ್ಟು ಜಾಗದ ಬಳಕೆ ಕುರಿತು ಪ್ರತಿಕ್ರಿಯಿಸಿ, ಸಾರ್ವಜನಿಕ ಉದ್ದೇಶಗಳಿಗಷ್ಟೇ ಈ ಜಾಗ ಬಳಕೆಯಾಗಲಿದ್ದು, ಇದು ಕಾರ್ಪೊರೇಷನ್ ವತಿಯಿಂದ ನಿರ್ಧಾರವಾದಾಗ ಸ್ಪಷ್ಟವಾಗಲಿದೆ ಎಂದರು. ರಸ್ತೆ ಬದಿಯ ವಾಹನ ನಿಲುಗಡೆಗೆ ಶುಲ್ಕದ ಕುರಿತು ಮಾತನಾಡಿ, ರಸ್ತೆಗಳು ಸಾರ್ವಜನಿಕರ ಸಂಚಾರಕ್ಕಾಗಿ ಇವೆ. ಎರಡೂ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಅಲ್ಲದೆ, ಅಸಮಾನತೆ ತೊಲಗಲು ಮೀಸಲಾತಿ ಮತ್ತು ಒಳಮೀಸಲಾತಿ ಅಗತ್ಯ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯಿಸಿ, ಒಳಮೀಸಲಾತಿ ಹೋರಾಟ ಬಹುಕಾಲದ್ದಾಗಿದ್ದು, ನಮ್ಮ ಸರ್ಕಾರ ಅದನ್ನು ಜಾರಿಗೊಳಿಸಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೀಸಲಾತಿ ಮಿತಿ ಶೇಕಡಾ 50ನ್ನು ಮೀರದಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನ್ಯಾಯಾಲಯದಲ್ಲಿಯೂ ಇದು ಪ್ರಶ್ನೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...