HomeಅಂಕಣಗಳುKarnataka against SIRSIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

- Advertisement -
- Advertisement -

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ ‘SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ’, ಮತದಾರರ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 1 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಎಲೆಕ್ಷನ್ ಕಮಿಷನ್ ಚಲೋ’ ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಉಂಟಾಗಿರುವ ಗೊಂದಲಗಳು ಮತ್ತು ಬಡವರು, ಕಾರ್ಮಿಕರ ಮೇಲೆ ಬೀರುತ್ತಿರುವ ವ್ಯತಿರಿಕ್ತ ಪರಿಣಾಮಗಳ ಕುರಿತು ಒಕ್ಕೂಟದ ಪ್ರಮುಖರಾದ ಜೆ.ಎಂ. ವೀರಸಂಗಯ್ಯ, ಕೆ.ಎಲ್. ಅಶೋಕ್ ಮತ್ತು ಮುಹಮ್ಮದ್ ಯೂಸುಫ್ ಕನ್ನಿ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ಸರ್ಕಾರದ ಗಮನ ಸೆಳೆದಿದ್ದಾರೆ.

ರಾಜ್ಯ ಸರ್ಕಾರದ ನಿಲುವಿಗೆ ಸ್ವಾಗತ, ಆದರೆ ಹೋರಾಟ ನಿಲ್ಲದು

SIR ಪ್ರಕ್ರಿಯೆ ಕುರಿತು ರಾಜ್ಯ ಸರ್ಕಾರದ ವತಿಯಿಂದ ವ್ಯಕ್ತವಾಗಿರುವ ನಿಲುವು ಮತ್ತು ಕಾಳಜಿಯ ಆಶಯವನ್ನು SIR ವಿರೋಧಿ ಕರ್ನಾಟಕ ಒಕ್ಕೂಟವು ಸ್ವಾಗತಿಸಿ ಅಭಿನಂದಿಸಿದೆ. ಆದರೆ ಸರ್ಕಾರದ ಈ ನಿಲುವು ಕೇವಲ ಹೇಳಿಕೆಗೆ ಮಾತ್ರ ಸೀಮಿತವಾಗಬಾರದು. ಚುನಾವಣಾ ಆಯೋಗದಿಂದ ನಾಗರಿಕರ ಹಕ್ಕೊತ್ತಾಯಗಳನ್ನು ಈಡೇರಿಸುವವರೆಗೂ ರಾಜ್ಯ ಸರ್ಕಾರ ನಿರಂತರ ಹೋರಾಟ ಮುಂದುವರಿಸಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.

ಒಕ್ಕೂಟದ ಪ್ರಮುಖ ಬೇಡಿಕೆಗಳು ಮತ್ತು ಆಕ್ಷೇಪಣೆಗಳು:
  • ಎಎಸ್‌ಡಿಡಿಒ (ASDDO) ಪಟ್ಟಿಗೂ ಹಕ್ಕು-ಆಕ್ಷೇಪಣೆಗೆ ಅವಕಾಶವಿರಲಿ:

    ಅನ್‌ಮ್ಯಾಪ್ಡ್ ಮತ್ತು ಲಾಜಿಕಲ್ ಡಿಸ್ಕ್ರಿಪೆನ್ಸಿ ಪಟ್ಟಿಯಲ್ಲಿರುವವರಿಗೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿರುವ ರೀತಿಯಲ್ಲೇ, ಎಎಸ್‌ಡಿಡಿಒ ಪಟ್ಟಿಯಲ್ಲಿರುವ ‘ಗೈರು ಮತ್ತು ಇತರರು’ (Absent and Others) ವರ್ಗದವರಿಗೂ ಅವಕಾಶ ಕಲ್ಪಿಸಬೇಕು. ಈ ಹಿಂದೆ ಮತಪಟ್ಟಿಯಲ್ಲಿದ್ದವರನ್ನು ಯಾವುದೇ ಮುನ್ಸೂಚನೆ ಅಥವಾ ಸಮರ್ಪಕ ಕಾರಣವಿಲ್ಲದೆ ಏಕಾಏಕಿ ಪಟ್ಟಿಯಿಂದ ಕೈಬಿಡುವುದು ಮತ್ತು ಹೊಸದಾಗಿ ನಮೂನೆ-6 ಸಲ್ಲಿಸುವಂತೆ ಒತ್ತಾಯಿಸುವುದು ಕಾನೂನುಬಾಹಿರ ಹಾಗೂ ನ್ಯಾಯಸಮ್ಮತವಲ್ಲ.
  • ಸಮಯಾವಕಾಶವನ್ನು 6 ತಿಂಗಳಿಗೆ ವಿಸ್ತರಿಸಿ:

    ಕೇವಲ 7 ದಿನಗಳ ಅಲ್ಪಾವಧಿಯಲ್ಲಿ ಲಾಜಿಕಲ್ ಡಿಸ್ಕ್ರಿಪೆನ್ಸಿ ಮತ್ತು ಅನ್‌ಮ್ಯಾಪ್ಡ್ ಪಟ್ಟಿಯಲ್ಲಿರುವ ಪ್ರತಿಯೊಬ್ಬರೂ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸಲ್ಲಿಸುವುದು ಪ್ರಾಯೋಗಿಕವಾಗಿ ಅಸಾಧ್ಯ. ಗ್ರಾಮೀಣ ಭಾಗದ ಬಡವರು, ವೃದ್ಧರು, ಮತ್ತು ಕಾರ್ಮಿಕ ವರ್ಗದ ಜನರಿಗೆ ಇದು ತೀವ್ರ ಸಂಕಷ್ಟ ತಂದೊಡ್ಡಲಿದೆ. ಆದ್ದರಿಂದ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ ಅವಧಿಯನ್ನು ಆರು ತಿಂಗಳಿಗೆ ವಿಸ್ತರಿಸಬೇಕು.
  • ಗ್ರಾಮ ಹಾಗೂ ವಾರ್ಡ್ ಸಭೆಗಳು ಕೇವಲ ನಾಮಕಾವಸ್ತೆಯಾಗಬಾರದು:

    ಗ್ರಾಮಸಭೆ ಮತ್ತು ವಾರ್ಡ್ ಸಭೆಗಳನ್ನು ಕೇವಲ ಪ್ರಕ್ರಿಯೆ ಪೂರ್ಣಗೊಳಿಸುವ ದೃಷ್ಟಿಯಿಂದ ಆಯೋಜಿಸದೆ, ಸಭೆಗೂ ಕನಿಷ್ಠ ಒಂದು ವಾರ ಮುನ್ನವೇ ಮತದಾರರ ಪಟ್ಟಿಯಿಂದ ಹೊರಗುಳಿದವರ ಹಾಗೂ ‘ಇತರರು’ ವರ್ಗದಲ್ಲಿರುವವರ ವಿವರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಮನೆಮನೆಗೆ ತೆರಳಿ ವ್ಯಾಪಕ ಪ್ರಚಾರ ನಡೆಸಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅರ್ಥಪೂರ್ಣವಾಗಿ ಸಭೆಗಳನ್ನು ನಡೆಸಬೇಕು.
ಮುಖ್ಯ ಚುನಾವಣಾಧಿಕಾರಿ ರಾಜೀನಾಮೆಗೆ ಆಗ್ರಹ

ಚುನಾವಣಾ ಆಯೋಗ ರೂಪಿಸಿರುವ SIR ಪ್ರಕ್ರಿಯೆಯು ಸಂಪೂರ್ಣವಾಗಿ ದೋಷಭರಿತವಾಗಿದ್ದು, ಇದರ ಹಿಂದೆ ದುರುದ್ದೇಶವಿದೆ ಎಂದು ಒಕ್ಕೂಟ ಗಂಭೀರವಾಗಿ ಆರೋಪಿಸಿದೆ. ಈ ಅನಾಗರಿಕ ಮತ್ತು ಅವೈಜ್ಞಾನಿಕ ಪ್ರಕ್ರಿಯೆಗೆ ಕಾರಣರಾಗಿರುವ ಕೇಂದ್ರ ಚುನಾವಣಾ ಆಯೋಗ ಮತ್ತು ಅದರ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಸೆಪ್ಟೆಂಬರ್ 1 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಸಂತ್ರಸ್ತರ ಸಾಕ್ಷ್ಯಗಳೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಬೃಹತ್ ‘ಎಲೆಕ್ಷನ್ ಕಮಿಷನ್ ಚಲೋ’ ಹೋರಾಟದಲ್ಲಿ ಪ್ರಜ್ಞಾವಂತ ಸಮಾಜದ ಪ್ರತಿಯೊಬ್ಬ ಮತದಾರರೂ ಭಾಗವಹಿಸಿ, ಮತದಾನದ ಹಕ್ಕಿನ ರಕ್ಷಣೆಗಾಗಿ ಕೈಜೋಡಿಸುವಂತೆ ಒಕ್ಕೂಟದ ನಾಯಕರು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...