Homeಮುಖಪುಟ101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350 ಕೋಟಿ ಅನುದಾನವನ್ನು ಮೀಸಲಿಟ್ಟಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ್ ಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಕುಸಿದಿರುವುದರ ಕುರಿತು ಕಳವಳ ವ್ಯಕ್ತಪಡಿಸಿದರು. ಕಳೆದ ವರ್ಷ ಇದೇ ಅವಧಿಯಲ್ಲಿ ರಾಜ್ಯದ ಜಲಾಶಯಗಳಲ್ಲಿ ಒಟ್ಟು 815 ಟಿಎಂಸಿ ಅಡಿ ನೀರು ಸಂಗ್ರಹವಿತ್ತು. ಆದರೆ, ಈ ಬಾರಿ ಮಳೆ ಕೈಕೊಟ್ಟಿರುವ ಪರಿಣಾಮ ನೀರಿನ ಪ್ರಮಾಣ 684 ಟಿಎಂಸಿ ಅಡಿಗೆ ಕುಸಿದಿದೆ. ನೀರಿನ ಸಂಗ್ರಹ ಕಡಿಮೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ರಾಜ್ಯದ 2,069 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಹಾಹಾಕಾರ ಎದುರಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದ್ದಾರೆ.

ಕುಡಿಯುವ ನೀರ ಪೂರೈಕೆಗೆ ಕ್ರಮ:

ಜನರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಡಿಸಿಎಂ, ಸದ್ಯದ ಪರಿಸ್ಥಿತಿಯಲ್ಲಿ ತೀವ್ರ ನೀರಿನ ಅಭಾವ ಎದುರಿಸುತ್ತಿರುವ 758 ಗ್ರಾಮಗಳಿಗೆ 149 ಟ್ಯಾಂಕರ್‌ಗಳ ಮೂಲಕ ಹಾಗೂ ಬಾಡಿಗೆಗೆ ಪಡೆಯಲಾದ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೃಷಿ ವಲಯಕ್ಕೆ ಭಾರಿ ಹೊಡೆತ:

ರಾಜ್ಯಾದ್ಯಂತ ವಾಡಿಕೆ ಮಳೆಯಾಗದ ಕಾರಣ ಕೃಷಿ ವಲಯ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಭೌಗೋಳಿಕ ವಲಯವಾರು ಮಳೆ ಕೊರತೆಯ ಅಂಕಿ-ಅಂಶಗಳನ್ನು ಹಂಚಿಕೊಂಡ ಅವರು, ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಅಂದರೆ ಶೇ. 41ರಷ್ಟು ಮಳೆ ಕೊರತೆ ದಾಖಲಾಗಿದೆ. ಉಳಿದಂತೆ ಮಲೆನಾಡಿನಲ್ಲಿ ಶೇ. 35, ಉತ್ತರ ಒಳನಾಡಿನಲ್ಲಿ ಶೇ. 31 ಹಾಗೂ ಕರಾವಳಿ ಭಾಗದಲ್ಲಿ ಶೇ. 24ರಷ್ಟು ಮಳೆ ಕೊರತೆಯಾಗಿದೆ ಎಂದು ತಿಳಿಸಿದರು.

ಬರ ಕೈಪಿಡಿಯ ಪ್ರಕಾರ, ಸತತ ಕನಿಷ್ಠ ಮೂರು ವಾರಗಳ ಕಾಲ ಒಣ ಹವೆ ಅನುಭವಿಸುವ ಪ್ರದೇಶಗಳಿಗೆ ‘ಟ್ರಿಗರ್-1’ ಅನ್ವಯಿಸುತ್ತದೆ. ಇನ್ನು ‘ಟ್ರಿಗರ್-2’ ಅಡಿಯಲ್ಲಿ ಬಿತ್ತನೆ ಪ್ರಮಾಣ, ಬೆಳೆ ಆರೋಗ್ಯ, ಮಣ್ಣಿನ ತೇವಾಂಶ, ಅಂತರ್ಜಲ ಮಟ್ಟ ಮತ್ತು ಕೆರೆ-ಜಲಾಶಯಗಳಲ್ಲಿನ ನೀರಿನ ಲಭ್ಯತೆಯನ್ನು ಮೌಲ್ಯಮಾಪನ ಮಾಡಲಾಗುತ್ತದೆ.

ಪ್ರಸ್ತುತ ಇರುವ ಮೌಲ್ಯಮಾಪನ ಮಾನದಂಡಗಳಲ್ಲಿನ ಮಿತಿಗಳಿಂದಾಗಿ ಕೆಲವು ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸುವುದು ಕಷ್ಟಕರವಾಗಿದೆ ಎಂದು ಪರಮೇಶ್ವರ್ ಆರೋಪಿಸಿದರು. ಈ ಮಾನದಂಡಗಳನ್ನು ಪರಿಷ್ಕರಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರವನ್ನು ಪದೇ ಪದೇ ಕೋರಿದ್ದರೂ, ತನ್ನ ಕಳಕಳಿಗೆ ಸ್ಪಂದಿಸಿಲ್ಲ ಎಂದು ಅವರು ಹೇಳಿದರು.

ಆಗಸ್ಟ್ 21 ರ ವೇಳೆಗೆ ನಿಗದಿತ 84.10 ಲಕ್ಷ ಹೆಕ್ಟೇರ್ ಪೈಕಿ 60 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ (ಶೇ. 71 ರಷ್ಟು) ಬಿತ್ತನೆ ಪೂರ್ಣಗೊಂಡಿದೆ. ಕರ್ನಾಟಕದ 240 ತಾಲೂಕುಗಳ ಪೈಕಿ 104 ತಾಲೂಕುಗಳಲ್ಲಿ ಶೇ. 75 ಕ್ಕಿಂತ ಕಡಿಮೆ ಬಿತ್ತನೆಯಾಗಿದ್ದರೆ, 42 ತಾಲೂಕುಗಳಲ್ಲಿ ಬಿತ್ತನೆ ಪ್ರಮಾಣ ಶೇ. 25 ಕ್ಕಿಂತಲೂ ಕಡಿಮೆಯಿದೆ.

ಅಧಿಕೃತವಾಗಿ ಬರಪೀಡಿತ ಎಂದು ಘೋಷಿಸಲಾಗಿರುವ 101 ತಾಲ್ಲೂಕುಗಳ ಪೈಕಿ 89 ತಾಲ್ಲೂಕುಗಳು ‘ತೀವ್ರ ಬರ’ಕ್ಕೆ ತುತ್ತಾಗಿದ್ದರೆ, ಉಳಿದ 12 ತಾಲ್ಲೂಕುಗಳಲ್ಲಿ ‘ಸಾಧಾರಣ ಬರ’ ಪರಿಸ್ಥಿತಿ ಇದೆ. ಮುಂಬರುವ ಬೇಸಿಗೆಯ ದಿನಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...

ನೇಪಾಳದಲ್ಲಿ ಜಲಪ್ರಳಯ: 300 ಭಾರತೀಯರು ಸೇರಿ 1,500 ಮಂದಿ ನಾಪತ್ತೆ, ಸಾವಿನ ಸಂಖ್ಯೆ 165ಕ್ಕೆ ಏರಿಕೆ

ನೇಪಾಳ ಮತ್ತು ಟಿಬೆಟ್‌ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ನಂತರ ಸುಮಾರು 1,500 ಜನರು ಕಾಣೆಯಾಗಿದ್ದಾರೆ. ಈ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್...

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...