HomeUncategorizedಉಮರ್ ಖಾಲಿದ್ - ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

- Advertisement -
- Advertisement -

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ನಲ್ಲಿ ಬಲವಾಗಿ ವಿರೋಧಿಸಿದ್ದಾರೆ.

ಜನವರಿ 5ರ ಸುಪ್ರೀಂ ಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡರೆ, ಅವರ ಹೊಸ ಜಾಮೀನು ಅರ್ಜಿಗಳು ಕಾನೂನುಬದ್ಧವಾಗಿ ವಿಚಾರಣೆಗೆ ಅರ್ಹವಲ್ಲ ಎಂದು ಪೊಲೀಸರು ವಾದಿಸಿದ್ದಾರೆ. ಹೈಕೋರ್ಟ್‌ಗೆ ಸಲ್ಲಿಸಿದ ಪ್ರತ್ಯೇಕ ಅಫಿಡವಿಟ್‌ನಲ್ಲಿ ದೆಹಲಿ ಪೊಲೀಸರು, ಈ ಇಬ್ಬರು ಆರೋಪಿಗಳನ್ನು ಇತರ ಸಹ-ಆರೋಪಿಗಳಿಗಿಂತ ಭಿನ್ನವಾದ ವರ್ಗದಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಚಿನಲ್ಲಿ ಅವರ ಪಾತ್ರಗಳು ‘ಕಮಾಂಡ್ ಅಥಾರಿಟಿ’ ಮತ್ತು ‘ಕಾರ್ಯತಂತ್ರದ ನಿರ್ದೇಶನ’ವನ್ನು ಒಳಗೊಂಡಿವೆ ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಗುರುತಿಸಿದೆ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ.

ಖಾಲಿದ್ ಮತ್ತು ಇಮಾಮ್ ತಮ್ಮ ಜಾಮೀನು ಅರ್ಜಿಗಳನ್ನು ಪುನಃ ಸಲ್ಲಿಸಲು ಸುಪ್ರೀಂ ಕೋರ್ಟ್ ಈಗಾಗಲೇ ನಿರ್ದಿಷ್ಟ ಸಂದರ್ಭಗಳನ್ನು ನಿಗದಿಪಡಿಸಿರುವುದರಿಂದ, ಪ್ರಸ್ತುತ ಜಾಮೀನು ಪ್ರಕ್ರಿಯೆಗಳು ತಪ್ಪು ಕಲ್ಪನೆಯಿಂದ ಕೂಡಿದ್ದು ಮತ್ತು ಕಾನೂನುಬಾಹಿರವಾಗಿವೆ. ಇದು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗಿದೆ ಎಂದು ದೆಹಲಿ ಪೊಲೀಸರು ವಾದಿಸಿದ್ದಾರೆ.

“ಕೆಳಗಿನ ಆಧಾರಗಳ ಹಿನ್ನೆಲೆಯಲ್ಲಿ ಪ್ರಸ್ತುತ ಜಾಮೀನು ಪ್ರಕ್ರಿಯೆಗಳು ತಪ್ಪು ಕಲ್ಪನೆಯಿಂದ ಕೂಡಿದ್ದು, ಕಾನೂನುಬಾಹಿರವಾಗಿವೆ. ಪ್ರಸ್ತುತ ಮೇಲ್ಮನವಿದಾರರು ದೆಹಲಿ ಗಲಭೆಯ ‘ಮುಖ್ಯ ಸಂಚುಕೋರರಲ್ಲಿ’ ಒಬ್ಬರಾಗಿದ್ದಾರೆ” ಎಂದು ಪೊಲೀಸರ ಪ್ರತ್ಯುತ್ತರದಲ್ಲಿ ತಿಳಿಸಲಾಗಿದೆ.

‘ಗುಲ್ಫಿಶಾ ಫಾತಿಮಾ ವಿರುದ್ಧ ದೆಹಲಿ ಸರ್ಕಾರ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಜನವರಿ 5ರ ತೀರ್ಪನ್ನು ಪ್ರಾಸಿಕ್ಯೂಷನ್ ಹೆಚ್ಚಾಗಿ ನೆಚ್ಚಿಕೊಂಡಿದೆ. ಆ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಇತರ ಐದು ಜನ ಸಹ-ಆರೋಪಿಗಳಿಗೆ ರಕ್ಷಣೆ/ಜಾಮೀನು ನೀಡಿದ್ದರೆ, ಖಾಲಿದ್ ಮತ್ತು ಇಮಾಮ್ ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿತ್ತು.

ಪ್ರಾಸಿಕ್ಯೂಷನ್ ಒದಗಿಸಿದ ಸಾಕ್ಷ್ಯಗಳ ಕುರಿತು ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಉಲ್ಲೇಖಿಸಿದ ಪೊಲೀಸರು, ಈ ಮುಖ್ಯ ಸಂಚುಕೋರರ ವಿರುದ್ಧ ಡಿಜಿಟಲ್ ಸಂವಹನ ಸಾಕ್ಷ್ಯಗಳು, ವಶಪಡಿಸಿಕೊಂಡ ವಸ್ತುಗಳು ಮತ್ತು ನಿರ್ವಹಣಾ ಜವಾಬ್ದಾರಿಯನ್ನು ಸೂಚಿಸುವ ಹೇಳಿಕೆಗಳು ಸೇರಿದಂತೆ ನೇರ ಹಾಗೂ ಸಮಕಾಲೀನ ಸಾಕ್ಷ್ಯಗಳ ಬೆಂಬಲವಿದೆ ಎಂದು ಹೇಳಿದರು.

“ಆರೋಪಿಗಳ ಅಪಾಯದ ಮಟ್ಟಗಳು (ರಿಸ್ಕ್ ಪ್ರೊಫೈಲ್) ಸ್ಪಷ್ಟವಾಗಿ ಭಿನ್ನವಾಗಿವೆ ಎಂದು ಸುಪ್ರೀಂ ಕೋರ್ಟ್ ಕಂಡುಕೊಂಡಿದೆ. ಹೀಗಾಗಿ ಅವರ ನಿರಂತರ ಬಂಧನವು ಸಮರ್ಥನೀಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ತೀರ್ಮಾನವು, ಇದೇ ಪ್ರಕರಣದ ಇತರ ಸಹ-ಆರೋಪಿಗಳಿಗೆ ನೀಡಿರುವ ಜಾಮೀನು ಆದೇಶಗಳನ್ನು ನೆಚ್ಚಿಕೊಳ್ಳುವುದರಿಂದ ಖಾಲಿದ್ ಮತ್ತು ಇಮಾಮ್ ಅವರನ್ನು ತಡೆಯುತ್ತದೆ” ಎಂದು ಪೊಲೀಸರು ವಾದಿಸಿದ್ದಾರೆ.

ಜನವರಿ 5ರಂದು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳನ್ನು ಸಹ ಅಫಿಡವಿಟ್ ನೆಚ್ಚಿಕೊಂಡಿದ್ದು, ಅದರಂತೆ ಪ್ರಾಸಿಕ್ಯೂಷನ್‌ನ ಸಂರಕ್ಷಿತ ಸಾಕ್ಷಿಗಳ (ಪ್ರೊಟೆಕ್ಟೆಡ್ ವಿಟ್ನೆಸ್) ವಿಚಾರಣೆ ಪೂರ್ಣಗೊಂಡ ನಂತರ ಅಥವಾ ತೀರ್ಪಿನ ದಿನಾಂಕದಿಂದ ಒಂದು ವರ್ಷ ಮುಗಿದ ನಂತರ ಖಾಲಿದ್ ಮತ್ತು ಇಮಾಮ್ ಹೊಸ ಜಾಮೀನು ಅರ್ಜಿ ಸಲ್ಲಿಸಲು ಅನುಮತಿಸಲಾಗಿದೆ. ಆ ಎರಡೂ ಸಂದರ್ಭಗಳು ಎದುರಾಗುವ ಮುನ್ನವೇ ಪ್ರಸ್ತುತ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಸಂರಕ್ಷಿತ ಸಾಕ್ಷಿಗಳ ವಿಚಾರಣೆಗೆ ಮೊದಲು ಅಥವಾ ಮಾನ್ಯ ಸುಪ್ರೀಂ ಕೋರ್ಟ್ ಆದೇಶದ ದಿನಾಂಕದಿಂದ ಒಂದು ವರ್ಷದ ಅವಧಿ ಮುಗಿಯುವ ಮೊದಲು (ಅಂದರೆ 05.01.2027 ಕ್ಕಿಂತ ಮೊದಲು) ಸಲ್ಲಿಸಲಾದ ಪ್ರಸ್ತುತ ಜಾಮೀನು ಪ್ರಕ್ರಿಯೆಗಳು ಮಾನ್ಯ ಸುಪ್ರೀಂ ಕೋರ್ಟ್‌ನ ಬಾಧ್ಯತಾರಹಿತ ನಿರ್ದೇಶನಗಳಿಗೆ ವಿರುದ್ಧವಾಗಿವೆ” ಎಂದು ಪೊಲೀಸರು ಹೇಳಿದ್ದಾರೆ.

ಖಾಲಿದ್ ಮತ್ತು ಇಮಾಮ್ ತಮ್ಮ ಜಾಮೀನು ಅರ್ಜಿಗಳನ್ನು ನವೀಕರಿಸಲು ಅನುವು ಮಾಡಿಕೊಡುವ ಸಂದರ್ಭಗಳ ಬದಲಾವಣೆಯನ್ನು ಸುಪ್ರೀಂ ಕೋರ್ಟ್ ಸ್ವತಃ ಒದಗಿಸಿದೆ. ಅಂತಹ ಅರ್ಜಿಗಳು ಯಾವಾಗ ಪರಿಗಣನೆಗೆ ಅರ್ಹವಾಗುತ್ತವೆ ಎಂಬುದನ್ನು ವ್ಯಾಖ್ಯಾನಿಸಿದೆ ಎಂದು ಪೊಲೀಸರು ವಾದಿಸಿದ್ದಾರೆ.

‘ಸೈಯದ್ ಇಫ್ತಿಕಾರ್ ಅಂದ್ರಾಬಿ v/s ಎನ್‌ಐಎ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಂತರದ ತೀರ್ಪನ್ನು ಆರೋಪಿಗಳು ಆಧಾರವಾಗಿ ಇಟ್ಟುಕೊಂಡಿರುವದನ್ನು ದೆಹಲಿ ಪೊಲೀಸರು ವಿರೋಧಿಸಿದ್ದಾರೆ. ಆ ತೀರ್ಪು ಸಂಬಂಧವಿಲ್ಲದ ಬೇರೊಂದು ಪ್ರಕರಣಕ್ಕೆ ಸಂಬಂಧಸಿದ್ದಾಗಿದ್ದು, ಖಾಲಿದ್ ಮತ್ತು ಇಮಾಮ್ ಅವರ ಸ್ವಂತ ಪ್ರಕರಣದಲ್ಲಿ ನೀಡಲಾದ ನಿರ್ದಿಷ್ಟ ತೀರ್ಮಾನಗಳು ಮತ್ತು ನಿರ್ದೇಶನಗಳನ್ನು ಅದು ಮೀರಿಸಲು ಸಾಧ್ಯವಿಲ್ಲ ಎಂದು ಪೊಲೀಸರು ವಾದಿಸಿದ್ದಾರೆ.

“ಬೇರೊಂದು ಪ್ರಕರಣದಲ್ಲಿ ನೀಡಲಾದ ತೀರ್ಪು… ಮೇಲ್ಮನವಿದಾರರ ಸ್ವಂತ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ನೀಡಿದ ನಿರ್ದಿಷ್ಟ ತೀರ್ಮಾನಗಳು ಮತ್ತು ನಿರ್ದೇಶನಗಳನ್ನು ಮೀರಿಸಲು ಸಾಧ್ಯವಿಲ್ಲ” ಎಂದು ಪ್ರತ್ಯುತ್ತರದಲ್ಲಿ ತಿಳಿಸಲಾಗಿದೆ.

ಸೈಯದ್ ಇಫ್ತಿಕಾರ್ ಅಂದ್ರಾಬಿ ಪ್ರಕರಣದ ತೀರ್ಪು ದೆಹಲಿ ಗಲಭೆ ಪ್ರಕರಣ ಅಥವಾ ಖಾಲಿದ್ ಮತ್ತು ಇಮಾಮ್ ಅವರ ಆರೋಪಿತ ಪಾತ್ರಕ್ಕೆ ಸಂಬಂಧಿಸಿದ್ದಲ್ಲ ಎಂಬುದನ್ನು ಪೊಲೀಸರು ವಾದಿಸಿದ್ದಾರೆ. ಗುಲ್ಫಿಶಾ ಫಾತಿಮಾ ಪ್ರಕರಣದ ತೀರ್ಪಿನಲ್ಲಿ ನೀಡಲಾದ ವಾಸ್ತವಿಕ ಅಂಶಗಳು ಹಾಗೂ ಯುಎಪಿಎ ಕಾಯ್ದೆಯ ಸೆಕ್ಷನ್ 43ಡಿ(5) ಅನ್ವಯಿಸುವುದನ್ನು ನಂತರದ ತೀರ್ಪಿನಲ್ಲಿ ಸಂಶಯಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಗಯೇ, ‘ತಸ್ಲೀಮ್ ಅಹಮದ್ v/s ದೆಹಲಿ ಸರ್ಕಾರ’ ಪ್ರಕರಣದಲ್ಲಿ ಮೇ 22ರಂದು ಸುಪ್ರೀಂ ಕೋರ್ಟ್ ನೀಡಿದ ಮಧ್ಯಂತರ ಆದೇಶವನ್ನು ಆರೋಪಿಗಳು ನೆಚ್ಚಿಕೊಳ್ಳುವುದನ್ನೂ ಪೊಲೀಸರು ತಿರಸ್ಕರಿಸಿದ್ದಾರೆ. ಆ ಆದೇಶದಲ್ಲಿ, ಯುಎಪಿಎ ಜಾಮೀನು ನಿರ್ಬಂಧಗಳ ಅನ್ವಯ ಮತ್ತು ಸುದೀರ್ಘ ಜೈಲು ವಾಸಕ್ಕೆ ಸಂಬಂಧಿಸಿದ ಭಿನ್ನಾಭಿಪ್ರಾಯವನ್ನು ಲಾರ್ಜರ್ ಬೆಂಚ್‌ಗೆ ಉಲ್ಲೇಖಿಸಲಾಗಿತ್ತು.

ದೆಹಲಿ ಪೊಲೀಸರ ಪ್ರಕಾರ, ಕಾನೂನಾತ್ಮಕ ವಿಷಯವನ್ನು ಬೃಹತ್ ಪೀಠಕ್ಕೆ ಉಲ್ಲೇಖಿಸಿದ ಮಾತ್ರಕ್ಕೆ ಹಿಂದಿನ ತೀರ್ಪಿನಲ್ಲಿ ಘೋಷಿಸಲಾದ ಕಾನೂನು ರದ್ದಾಗುವುದಿಲ್ಲ. “ಬೃಹತ್ ಪೀಠಕ್ಕೆ ಬರಿ ಉಲ್ಲೇಖ ಮಾಡುವುದರಿಂದ ಈಗಾಗಲೇ ಘೋಷಿಸಲ್ಪಟ್ಟ ಕಾನೂನು ಬದಲಾಗುವುದಿಲ್ಲ” ಎಂದು ತೀರ್ಪು ನೀಡಿದ್ದ ‘ಲಡಾಖ್ ಕೇಂದ್ರಾಡಳಿತ ಪ್ರದೇಶ ವಿರುದ್ಧ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್’ ಪ್ರಕರಣದ ಸುಪ್ರೀಂ ಕೋರ್ಟ್ ತೀರ್ಪನ್ನು ಪೊಲೀಸರು ಉಲ್ಲೇಖಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...