Homeಮುಖಪುಟಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

- Advertisement -
- Advertisement -

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್ ಫ್ರಾಂಕ್ ಅವರ ಪುಸ್ತಕಗಳನ್ನು ಓದುತ್ತಿದ್ದ ಯುವಕ-ಯುವತಿಯರ ಗುಂಪಿನ ಮೇಲೆ ಈ ದಾಳಿ ನಡೆದಿದೆ. ಸಾಹಿತ್ಯಿಕ ಚಟುವಟಿಕೆಯಲ್ಲಿ ನಿರತರಾಗಿದ್ದ ಓದುಗರನ್ನು ಗುರಿಯಾಗಿಸಿಕೊಂಡು ನಡೆದ ಈ ಕೃತ್ಯವು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ತೀವ್ರ ಕಳವಳ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಹಿಂಸಾಚಾರ ನಡೆಸಿದ ಗುಂಪು, ಮಲಾಲಾ ಅವರ ಪುಸ್ತಕಗಳು “ಭಾರತ ವಿರೋಧಿ ದೃಷ್ಟಿಕೋನಗಳನ್ನು” ಹೊಂದಿವೆ ಎಂದು ಆರೋಪಿಸಿ ಈ ದಾಳಿಯನ್ನು ಸಮರ್ಥಿಸಿಕೊಳ್ಳಲು ಯತ್ನಿಸಿದೆ.

ಘಟನೆಯ ವಿವರಗಳ ಪ್ರಕಾರ, ಅಹಮದಾಬಾದ್‌ನ ವಸ್ತ್ರಾಪುರದಲ್ಲಿರುವ ಎಯುಡಿಎ (ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರ) ಉದ್ಯಾನವನದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದ ಮೂಲಕ ಒಗ್ಗೂಡಿ ಪುಸ್ತಕ ಓದುವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಗುರುವಾರ ಸಂಜೆ 6 ಗಂಟೆಯ ಸುಮಾರಿಗೆ ಓದುಗರು ತಮ್ಮ ಪುಸ್ತಕಗಳೊಂದಿಗೆ ಸಭೆಗೆ ಸಿದ್ಧತೆ ನಡೆಸುತ್ತಿದ್ದಾಗ, ಕೇಸರಿ ಶಾಲು ಧರಿಸಿದ ಮತ್ತು ಕೈಯಲ್ಲಿ ಮರದ ಕೋಲುಗಳನ್ನು ಹಿಡಿದಿದ್ದ ಸುಮಾರು 20ಕ್ಕೂ ಹೆಚ್ಚು ಜನರ ಗುಂಪು ಸ್ಥಳಕ್ಕೆ ಧಾವಿಸಿದೆ. ಓದುಗರ ಬಳಿ ಬಂದ ಆ ಗುಂಪು, ಮಲಾಲಾ ಯೂಸಫ್‌ಜೈ ಅವರ ಪುಸ್ತಕವನ್ನು ಓದುತ್ತಿರುವುದನ್ನು ಕಂಡು ತೀವ್ರವಾಗಿ ಪ್ರಶ್ನಿಸಲು ಪ್ರಾರಂಭಿಸಿತು. ಮಾತಿನ ಚಕಮಕಿ ಹೆಚ್ಚಾಗುತ್ತಿದ್ದಂತೆ, ಕಾರ್ಯಕ್ರಮದ ಸಂಘಟಕ ಜಯ್ ಥಕ್ಕರ್, ಸ್ನೇಹ್ ಭಾವಸರ್ ಮತ್ತು ಸಾವನ್ ಜಲಾರಿಯಾ ಅವರ ಮೇಲೆ ಗುಂಪು ಏಕಾಏಕಿ ಲಾಠಿಗಳಿಂದ ಹಲ್ಲೆ ನಡೆಸಿದೆ. ಅಷ್ಟಕ್ಕೇ ನಿಲ್ಲದೆ, ಅಲ್ಲಿದ್ದ ಸ್ವಾತಿ ಗೋಸ್ವಾಮಿ ಎಂಬ ಯುವತಿಯ ಕೂದಲನ್ನು ಹಿಡಿದು ಎಳೆದೊಯ್ದು, ಮೈತ್ರೇಯೀ ಛಾಯಾ ಎಂಬ ಮತ್ತೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಬೆದರಿಕೆ ಹಾಕಿದ್ದಾರೆ. ಇಂತಹ ಪುಸ್ತಕಗಳನ್ನು ಓದಿದರೆ ಮುಂದೆಯೂ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಓದುಗರಿಗೆ ಬಹಿರಂಗ ಹೆದರಿಕೆ ಒಡ್ಡಿದ್ದಾರೆ.

ದಾಳಿಯ ನಂತರ ತಕ್ಷಣವೇ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ವಸ್ತ್ರಾಪುರ ಪೊಲೀಸ್ ಸಿಬ್ಬಂದಿ ಗಾಯಾಳುಗಳನ್ನುರಕ್ಷಿಸಿ ಚಿಕಿತ್ಸೆಗಾಗಿ ಸೋಲಾ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಉದ್ಯಮಿ ಜಯ್ ಥಕ್ಕರ್ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ ಮುಂಜಾನೆ ವಸ್ತ್ರಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ಯಾವುದೇ ಸಂಘಟನೆಯ ಹೆಸರನ್ನು ನೇರವಾಗಿ ನಮೂದಿಸದಿದ್ದರೂ, ಕೇಸರಿ ಸ್ಕಾರ್ಫ್ ಧರಿಸಿದ್ದ ಹಿರೇನ್ ರಬಾರಿ, ಜಿಮಿತ್ ರಬಾರಿ ಹಾಗೂ ಇತರ 18 ಅನಾಮಿಕ ವ್ಯಕ್ತಿಗಳನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಇನ್ನೊಂದೆಡೆ, ಬಜರಂಗದಳದ ಮುಖಂಡ ಜ್ವಾಲಿತ್ ಮೆಹ್ತಾ ಅವರು ವೀಡಿಯೊ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ಸಂಘಟನೆಯ ಕಾರ್ಯಕರ್ತರು ಮಲಾಲಾ ಪುಸ್ತಕ ಓದುವುದನ್ನು ವಿರೋಧಿಸಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಮಲಾಲಾ ಯೂಸಫ್‌ಜೈ ತಮ್ಮ ಕೃತಿಗಳಲ್ಲಿ ವಿಶೇಷವಾಗಿ ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ “ಭಾರತ ವಿರೋಧಿ” ನಿಲುವುಗಳನ್ನು ವ್ಯಕ್ತಪಡಿಸಿದ್ದಾರೆ, ಹೀಗಾಗಿ ಅಂತಹ ಪುಸ್ತಕಗಳನ್ನು ಸಾರ್ವಜನಿಕವಾಗಿ ಪ್ರಚಾರ ಮಾಡುವುದನ್ನು ತಮ್ಮ ಸಂಘಟನೆ ಸಹಿಸುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ವಿಶೇಷವೆಂದರೆ, ಈ ಹಿಂಸಾತ್ಮಕ ಘಟನೆ ನಡೆಯುವ ಕೆಲವು ದಿನಗಳಷ್ಟೇ ಮುಂಚೆ ಅಹಮದಾಬಾದ್‌ನ ‘ಆನಂದ್ ನಿಕೇತನ’ ಎಂಬ ಖಾಸಗಿ ಶಾಲೆಯ ಗ್ರಂಥಾಲಯದಲ್ಲಿ ಈ ಪುಸ್ತಕಗಳಿರುವುದಕ್ಕೆ ಕೆಲವು ಪೋಷಕರು ಮತ್ತು ಬಲಪಂಥೀಯ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ತಾಲಿಬಾನ್ ಉಗ್ರರ ಗುಂಡೇಟಿನಿಂದ ಬದುಕಿ, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಮಲಾಲಾ ಅವರ ‘ಐ ಆಮ್ ಮಲಾಲಾ: ದಿ ಗರ್ಲ್ ಹೂ ಸ್ಟುಡ್ ಅಪ್ ಫಾರ್ ಎಜುಕೇಶನ್ ಅಂಡ್ ವಾಸ್ ಶಾಟ್ ಬೈ ದಿ ತಾಲಿಬಾನ್’ ಕೃತಿ ಹಾಗೂ ಎರಡನೇ ಮಹಾಯುದ್ಧದ ನಾಜಿ ಹತ್ಯಾಕಾಂಡದ ಸಮಯದಲ್ಲಿ ಕುಟುಂಬದೊಂದಿಗೆ ಅಡಗಿದ್ದು ತಮ್ಮ ಅನುಭವಗಳನ್ನು ದಾಖಲಿಸಿದ್ದ ಆನ್ ಫ್ರಾಂಕ್ ಅವರ ‘ದಿ ಡೈರಿ ಆಫ್ ಎ ಯಂಗ್ ಗರ್ಲ್’ ಪುಸ್ತಕಗಳನ್ನು ಶಾಲೆಯಿಂದ ತೆರವುಗೊಳಿಸಬೇಕೆಂದು ಒತ್ತಾಯಿಸಲಾಗಿತ್ತು. ಶಾಲೆಯ ವಿವಾದದ ಬೆನ್ನಲ್ಲೇ ಈಗ ಸಾರ್ವಜನಿಕ ಉದ್ಯಾನವನದಲ್ಲೂ ಓದುಗರ ಮೇಲೆ ಕಾಯ್ದುಕೊಂಡು ದಾಳಿ ನಡೆಸಿರುವುದು ಗುಜರಾತ್‌ನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಹಿತ್ಯಿಕ ಅಭಿರುಚಿಯ ಮೇಲಿನ ದಾಳಿಯಾಗಿದೆ ಎಂಬ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...