HomeಅಂಕಣಗಳುSIRಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

- Advertisement -
- Advertisement -

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಗುರುವಾರ (ಆ.27) ಮತದಾರರ ವಿವರಗಳಿದ್ದ ಎನ್ಯುಮರೇಷನ್ ಫಾರಂಗಳನ್ನು ಬಿಜೆಪಿ ಕಾರ್ಯಕರ್ತ ಅಂಗಡಿಯೊಂದರಲ್ಲಿ ಜೆರಾಕ್ಸ್ ಮಾಡಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ಶುಕ್ರವಾರ (ಆ.28) ಬೆಳಿಗ್ಗೆ ಮೊಕದ್ದಮೆ ದಾಖಲಿಸಲಾಗಿದೆ ಎಂಬುವುದಾಗಿ ಖಾರ್ಘರ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು thehindu.com ವರದಿ ಮಾಡಿದೆ.

ಆರೋಪಿ ಬಿಜೆಪಿ ಕಾರ್ಯಕರ್ತ ಸೂರಜ್ ಪಾಟೀಲ್ ಎನ್ಯುಮರೇಷನ್‌ ಫಾರಂಗಳ ಜೆರಾಕ್ಸ್‌ ಪಡೆಯುತ್ತಿದ್ದ ಬಗ್ಗೆ ಚುನಾವಣಾ ನೋಂದಣಿ ಕಚೇರಿಗೆ ದೂರು ಬಂದಿತ್ತು. ದೂರಿನ ಆಧಾರದ ಮೇಲೆ ತನಿಖೆ ನಡೆಸಲು ಚುನಾವಣಾ ನೋಂದಣಿ ಅಧಿಕಾರಿಗೆ (ಇಆರ್‌ಒ) ಸೂಚಿಸಲಾಗಿತ್ತು. ತನಿಖೆ ಕೈಗೊಂಡ ಇಆರ್‌ಒ, ಖಾರ್ಘರ್‌ನ ಸೆಕ್ಟರ್ 19 ರಲ್ಲಿರುವ ಜೆರಾಕ್ಸ್ ಅಂಗಡಿಯೊಂದರಲ್ಲಿ 3,400 ಎನ್ಯುಮರೇಷನ್ ಫಾರಂಗಳನ್ನು ಕಾನೂನುಬಾಹಿರವಾಗಿ ಜೆರಾಕ್ಸ್ ಮಾಡಿಸುತ್ತಿದ್ದ ಪಾಟೀಲ್‌ನನ್ನು ರೆಡ್-ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಳಿಕ ಖಾರ್ಘರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕಿಶನ್ ಜಾವಳೆ ವಿವರಿಸಿದ್ದಾರೆ.

ಈ ಎನ್ಯುಮರೇಷನ್ ಫಾರಂಗಳು ಆರೋಪಿ ಪಾಟೀಲ್‌ ಕೈಗೆ ಸಿಗಲು ಕಾರಣರಾದ ಐವರು ಬಿಎಲ್‌ಒಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈ ಎನ್ಯುಮರೇಷನ್ ಫಾರಂಗಳು ಆರೋಪಿ ಪಾಟೀಲ್‌ ಕೈಗೆ ಸಿಗಲು ಕಾರಣರಾದ ಐವರು ಬಿಎಲ್‌ಒಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಎನ್ಯುಮರೇಷನ್ ಫಾರಂಗಳ ಜೆರಾಕ್ಸ್ ಪಡೆಯುತ್ತಿದ್ದ ವಿಷಯ ಗೊತ್ತಾಗುತ್ತಿದ್ದಂತೆ ಖಾರ್ಘರ್ ಪೊಲೀಸರು ಕೂಡ ಸ್ಥಳಕ್ಕೆ ಧಾವಿಸಿದ್ದರು. ಬಿಜೆಪಿ ಕಾರ್ಯಕರ್ತ ಎನ್ನಲಾದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಜೆರಾಕ್ಸ್ ಆಗಿದ್ದ ಎಲ್ಲಾ ಫಾರಂಗಳನ್ನು ವಶಪಡಿಸಿಕೊಂಡು ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪೊಲೀಸರ ಪ್ರಕಾರ, ಜೆರಾಕ್ಸ್ ಮಾಡಿಸುತ್ತಿದ್ದ ವ್ಯಕ್ತಿಯನ್ನು ಶಿವಸೇನಾ (ಯುಬಿಟಿ) ಕಾರ್ಯಕರ್ತರು
ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಆತ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ಎಂದು ಆರೋಪಿಸಿದ್ದಾರೆ.

ವಶಪಡಿಸಿಕೊಳ್ಳಲಾದ ಎನ್ಯುಮರೇಷನ್ ಫಾರಂಗಳು 188 ಪನ್ವೇಲ್ ವಿಧಾನಸಭಾ ಕ್ಷೇತ್ರದ ಅಧಿಕೃತ ಎಸ್‌ಐಆರ್ ಫಾರಂಗಳಾಗಿವೆ. ಅವುಗಳಲ್ಲಿ ಮತದಾರರ ಭಾವಚಿತ್ರ, ವೈಯಕ್ತಿಕ ವಿವರಗಳು ಮತ್ತು ಬಿಎಲ್‌ಒಗಳ ಅಧಿಕೃತ ಸಹಿಗಳಿದ್ದವು ಎಂದು thehindu.com ವರದಿ ಹೇಳಿದೆ.

ಆರೋಪಿ ಪಾಟೀಲ್ ವಿರುದ್ಧ ಖಾರ್ಘರ್ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಮತ್ತು ಜನಪ್ರತಿನಿಧಿ ಕಾಯ್ದೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಪಾಟೀಲ್‌ನನ್ನು ವಶಕ್ಕೆ ಪಡೆದು, ಕಾನೂನು ಪ್ರಕ್ರಿಯೆಯ ಪ್ರಕಾರ ನೋಟಿಸ್ ಜಾರಿ ಮಾಡಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದ ಕೆಲವೇ ಕ್ಷಣಗಳಲ್ಲಿ ಪಾಟೀಲ್ ಖಾರ್ಘರ್ ಪೊಲೀಸ್ ಠಾಣೆಯಿಂದ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆ ಎಂದು ಶಿವಸೇನಾ (ಯುಬಿಟಿ) ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಘಟನೆಯು ಶಿವಸೇನಾ (ಯುಬಿಟಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ.

ಸಾಮಾನ್ಯ ಮತದಾರರು ಭರ್ತಿ ಮಾಡಿದ ಎಸ್‌ಐಆರ್ ಫಾರಂಗಳು ಖಾಸಗಿ ವ್ಯಕ್ತಿಯ ಕೈಗೆ ಹೇಗೆ ಸಿಕ್ಕಿತು ಎಂದು ಪ್ರಶ್ನಿಸಿರುವ ಶಿವಸೇನಾ (ಯುಬಿಟಿ) ಪದಾಧಿಕಾರಿ ಬಾಲೇಶ್ ಭೋಜನೆ, ಈ ಘಟನೆಯ ಹಿಂದೆ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಆದರೆ, ಪನ್ವೇಲ್ ಮಹಾನಗರ ಪಾಲಿಕೆ ಮೇಯರ್ ಹಾಗೂ ಬಿಜೆಪಿ ನಾಯಕ ನಿತಿನ್ ಪಾಟೀಲ್ ಅವರು ಈ ವಿಷಯಕ್ಕೂ ತಮ್ಮ ಪಕ್ಷದ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಕೇವಲ ಬಿಎಲ್‌ಒಗಳ ಅಮಾನತು ಸಾಲದು ಎಂದು ಹೇಳಿರುವ ವಿರೋಧ ಪಕ್ಷದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಎಸ್‌ಐಆರ್ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುತ್ತಿದೆ ಎಂಬುವುದನ್ನು ಈ ಘಟನೆ ಬಹಿರಂಗಪಡಿಸಿದೆ ಎಂದಿದ್ದಾರೆ.

“ಬಿಜೆಪಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಈ ಪ್ರಕ್ರಿಯೆಯನ್ನು ಬಳಸಿಕೊಳ್ಳುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ ಮತ್ತು ಈ ಘಟನೆಯು ನಮ್ಮ ಮಾತನ್ನು ನಿಜ ಎಂದು ಸಾಬೀತುಪಡಿಸಿದೆ” ಎಂದು ಅವರು ಹೇಳಿದ್ದಾರೆ.

ಈ ಘಟನೆಯ ಕುರಿತು ತಾವು ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಕೇಳಿದ್ದರೂ, ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ವರ್ಗಾಯಿಸುತ್ತಿದ್ದಾರೆ ಎಂದು ಪವಾರ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧವೇ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...