Homeಮುಖಪುಟಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ ಘಟಕದ (TMCP) ರ್ಯಾಲಿ ಸಭೆಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಆಗಸ್ಟ್ 28 ರಂದು ರಾಜಧಾನಿ ಕೋಲ್ಕತ್ತಾದ ಕ್ಯಾಥೆಡ್ರಲ್ ರಸ್ತೆಯಲ್ಲಿ ತೃಣಮೂಲ ಛತ್ರ ಪರಿಷತ್ತಿನ (ಟಿಎಮ್‌ಸಿಪಿ) ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲು ಕಲ್ಕತ್ತಾ ಹೈಕೋರ್ಟ್ ಮಮತಾ ಬ್ಯಾನರ್ಜಿ ಅವರಿಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆಯ ಒಂದು ಭಾಗವನ್ನು (flank) ತೆರೆದಿಡಬೇಕು ಹಾಗೂ ನಿರ್ದಿಷ್ಟ ಸಮಯದ ಮಿತಿಯನ್ನು ಪಾಲಿಸಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.

ಆದರೆ, ಕಾರ್ಯಕ್ರಮದ ವೇಳೆ ರಸ್ತೆಯನ್ನು ಮುಕ್ತವಾಗಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಲಾಗಿದೆ ಮತ್ತು ಕೋರ್ಟ್ ನಿಗದಿಪಡಿಸಿದ್ದ ಸಮಯದ ಮಿತಿಯನ್ನು ಮೀರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಹಾಗೂ ಟಿಎಮ್‌ಸಿಪಿ ಸಭೆಯ ಸಂಘಟಕರ ವಿರುದ್ಧ ಕೋಲ್ಕತ್ತಾದ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನ್ಯಾಯಾಲಯದ ಆದೇಶ ಉಲ್ಲಂಘನೆಯಲ್ಲಿ ಭಾಗಿಯಾದ ಎಲ್ಲರ ಪಾತ್ರದ ಕುರಿತು ತನಿಖೆ ನಡೆಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಇನ್ನೊಂದೆಡೆ, ಶುಕ್ರವಾರದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಮ್ಮ ಆಡಳಿತದ ಅವಧಿಯಲ್ಲಿ ಪೊಲೀಸರು ಮಾನವೀಯತೆಯಿಂದ ನಡೆದುಕೊಳ್ಳುತ್ತಿದ್ದರು, ಆದರೆ ಪ್ರಸ್ತುತ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಪೊಲೀಸ್ ಪಡೆಯನ್ನು ಒಂದು ದೈತ್ಯ ಹಾಗೂ ರಾಕ್ಷಸಿ ಶಕ್ತಿಯನ್ನಾಗಿ ಮಾರ್ಪಡಿಸಿದೆ ಎಂದು ಆರೋಪಿಸಿದ್ದರು.

ತಮ್ಮ ಬೆಂಬಲಿಗರ ಮೇಲಿನ ‘ಪೊಲೀಸ್ ದೌರ್ಜನ್ಯ’ವನ್ನು ತಡೆಗಟ್ಟುವುದಾಗಿ ರಕ್ಷಾ ಬಂಧನದ ದಿನದಂದು ವಾಗ್ದಾನ ಮಾಡಿದ್ದಾಗಿ ಹೇಳಿದ ಅವರು, ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮತ್ತು ಸಾರ್ವಜನಿಕ ಸಭೆಗಳಿಗೆ ಅನುಮತಿ ಸಿಗದಿದ್ದರೆ ಬೀದಿಗಿಳಿದು ಹೋರಾಡುವುದಾಗಿ ಎಚ್ಚರಿಸಿದ್ದರು.

ಪ್ರತಿಯೊಂದು ಸಭೆಗೂ ಅನುಮತಿ ಪಡೆಯಲು ನ್ಯಾಯಾಲಯದ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ, ಇನ್ಮುಂದೆ ತಾವು ಬಯಸಿದ ಸ್ಥಳಗಳಲ್ಲಿ ಸಭೆ ನಡೆಸಲು ಸಾರ್ವಜನಿಕರ ಅನುಮತಿಯನ್ನೇ ಪಡೆಯುವುದಾಗಿ ತಿಳಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು ಅಕ್ರಮ ಎಸಗಿದೆ ಹಾಗೂ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರವು ಬೀದಿ ಬದಿ ವ್ಯಾಪಾರಿಗಳನ್ನು ಸರಿಯಾದ ಪುನರ್ವಸತಿ ಕಲ್ಪಿಸದೆ ತೆರವುಗೊಳಿಸುತ್ತಿದೆ ಎಂದು ಮಮತಾ ಬ್ಯಾನರ್ಜಿ ಭಾರಿ ವಾಗ್ದಾಳಿ ನಡೆಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...