Homeಅಂತರಾಷ್ಟ್ರೀಯಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

- Advertisement -
- Advertisement -

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್’ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಭಾಗವತ್ ಕಾರ್ಯಕ್ರಮವನ್ನು ವಿರೋಧಿಸಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಅಮೆರಿಕ ಮೂಲದ ಹಿಂದೂ ಒಕ್ಕೂಟಗಳು ಸೇರಿದಂತೆ 61 ಸಂಘಟನೆಗಳು ಭಾಗವತ್ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ವ್ಯಕ್ತಪಡಿಸಿವೆ.

‘ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್’ ನಂತಹ ಪ್ರಮುಖ ಯುಎಸ್ ಮೂಲದ ಹಿಂದೂ ಸಂಘಟನೆಯು ಈ ಪ್ರತಿಭಟನೆಯ ನೇತೃತ್ವ ವಹಿಸಿದೆ. “ಆರ್‌ಎಸ್‌ಎಸ್ ಮತ್ತು ಅದರ ಹಿಂದುತ್ವ ಸಿದ್ಧಾಂತವು ನಮ್ಮನ್ನು ಪ್ರತಿನಿಧಿಸುವುದಿಲ್ಲ” ಎಂದು ಈ ಸಂಘಟನೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸುನಿತಾ ವಿಶ್ವನಾಥ್ ತಿಳಿಸಿದ್ದಾರೆ.

“ನೋ ಪ್ಲಾಟ್‌ಫಾರ್ಮ್ ಫಾರ್ ಹೇಟ್” (ದ್ವೇಷಕ್ಕೆ ಜಾಗವಿಲ್ಲ) ಎಂಬ ಬ್ಯಾನರ್ ಅಡಿಯಲ್ಲಿ ಮುಸ್ಲಿಂ, ಹಿಂದೂ, ಸಿಖ್, ಕ್ರಿಶ್ಚಿಯನ್, ದಲಿತ ಸೇರಿದಂತೆ ವಿವಿಧ ಧರ್ಮಗಳ ಒಟ್ಟು 61 ಸಂಘಟನೆಗಳು ಒಟ್ಟಾಗಿ ಭಾಗವತ್ ಕಾರ್ಯಕ್ರಮದ ವಿರುದ್ಧ ಪ್ರತಿಭಟನೆ ನಡೆಸಿವೆ.

“ಆರ್‌ಎಸ್‌ಎಸ್ ಸಿದ್ಧಾಂತವು ಎಲ್ಲರನ್ನೂ ಒಳಗೊಳ್ಳುವ ನ್ಯೂಯಾರ್ಕ್ ನಗರದ ಬಹುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಮಮ್ದಾನಿ ಹೇಳಿದ್ದರು. ಆದಾಗ್ಯೂ, ಇದು ಖಾಸಗಿ ಕಾರ್ಯಕ್ರಮವಾದ್ದರಿಂದ ರದ್ದುಗೊಳಿಸಲು ನಗರದ ಆಡಳಿತಕ್ಕೆ ಕಾನೂನಾತ್ಮಕ ಅಧಿಕಾರವಿಲ್ಲ ಎಂದಿದ್ದರು.

ಯುಎಸ್ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ (USCIRF) ಕೂಡ ಭಾರತದಲ್ಲಿನ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಉಲ್ಲೇಖಿಸಿ, ಮೋಹನ್ ಭಾಗವತ್ ಅವರ ವೀಸಾವನ್ನು ರದ್ದುಗೊಳಿಸಲು ಮತ್ತು ಆರ್‌ಎಸ್‌ಎಸ್ ಸದಸ್ಯರ ವಿರುದ್ಧ ನಿರ್ಬಂಧ ಹೇರಲು ಅಮೆರಿಕ ಸರ್ಕಾರಕ್ಕೆ ಒತ್ತಾಯಿಸಿದೆ

‘ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ (AHEAD) ಫೋರಂ ಭಾಗವತ್ ಕಾರ್ಯಕ್ರಮವನ್ನು ಆಯೋಜಿಸಿದೆ.

ರಕ್ಷಾಬಂಧನ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮವು ಸಹೋದರತ್ವ, ಸಾಂಸ್ಕೃತಿಕ ಮೌಲ್ಯಗಳು, ಪರಸ್ಪರ ಗೌರವ ಮತ್ತು ಜಾಗತಿಕ ಏಕತೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದು ಆಯೋಜಕರು ಹಾಗೂ ಬೆಂಬಲಿಗರು ಹೇಳಿಕೊಂಡಿದ್ದಾರೆ.

ಪ್ರತಿಭಟನೆಗಳ ಹಿನ್ನೆಲೆಯಲ್ಲಿ ‘ಹಿಂದೂ ಅಮೆರಿಕನ್ ಫೌಂಡೇಶನ್’ (HAF) ಕಾರ್ಯಕ್ರಮದಲ್ಲಿ ಭಾಗವಹಿಸುವ ಭಾರತೀಯ ಮೂಲದ ನಾಗರಿಕರಿಗೆ ಜಾಗರೂಕರಾಗಿರಲು ಮತ್ತು ಶಾಂತಿ ಕಾಪಾಡಲು ಭದ್ರತಾ ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...