Homeಮುಖಪುಟಖರ್ಗೆ ಭಾಷಣ ಸ್ಥಳದ 'ಶುದ್ಧೀಕರಣ': ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ ‘ಶುದ್ಧೀಕರಣ’ ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೃತ್ಯವು ಜಾತಿವಾದ ಮತ್ತು ಅಸ್ಪೃಶ್ಯತೆಯ ಮತ್ತೊಂದು ರೂಪವಾಗಿದ್ದು, ಬಿಜೆಪಿ-ಆರ್‌ಎಸ್‌ಎಸ್ ಸಂಘ ಪರಿವಾರದ ವಿಷಪೂರಿತ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಗಳ ಮೂಲಕ ಟೀಕಿಸಿದ್ದದಾರೆ.

ಮಾನವ ಘನತೆ ಮತ್ತು ಸಂವಿಧಾನದ ಮೇಲಿನ ದಾಳಿ

ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ನಮ್ಮ ಸಂವಿಧಾನದಲ್ಲಿ ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ಬಲಪಂಥೀಯ ಸಂಘಟನೆಗಳು ಎಸಗಿರುವ ಈ ಕೃತ್ಯವು ಸಮಾನತೆ ಹಾಗೂ ಮಾನವ ಘನತೆಯ ಮೇಲಿನ ನೇರ ದಾಳಿಯಾಗಿದೆ. ಈ ನಾಚಿಕೆಗೇಡಿನ ಶುದ್ಧೀಕರಣ ಘಟನೆಗೆ ಕಾರಣರಾದವರ ವಿರುದ್ಧ ತಕ್ಷಣವೇ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ (FIR) ದಾಖಲಿಸಬೇಕು,” ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷರಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸುತ್ತಿರುವ ರಾಹುಲ್ ಗಾಂಧಿ ಅವರ ನಿಲುವು ಸಂಪೂರ್ಣವಾಗಿ ಸರಿಯಾಗಿದೆ ಎಂದಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್‌ ಆಳದ ಜಾತಿವಾದಿ ಮನಸ್ಥಿತಿ ಬಹಿರಂಗ

ಉತ್ತರಾಖಂಡ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಅವರು ಈ ಸೋಕಾಲ್ಡ್ ‘ಶುದ್ಧೀಕರಣ’ ಕೃತ್ಯವನ್ನು ಸಮರ್ಥಿಸಿಕೊಂಡಿರುವುದಕ್ಕೆ ಸಿದ್ದರಾಮಯ್ಯ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ಆಡಳಿತಾರೂಢ ಪಕ್ಷದ ಅಧ್ಯಕ್ಷರೇ ಇಂತಹ ಜಾತಿವಾದಿ ಕೃತ್ಯದಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿರುವುದನ್ನು ನೋಡಿದರೆ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ರಾಜಕಾರಣದೊಳಗೆ ಆಳವಾಗಿ ಬೇರೂರಿರುವ ಅಸ್ಪೃಶ್ಯತೆ ಮತ್ತು ಜಾತಿಯಾಧಾರಿತ ಮನಸ್ಥಿತಿ ಎಷ್ಟರಮಟ್ಟಿಗೆ ಇದೆ ಎಂಬುದು ಬಯಲಾಗಿದೆ,” ಎಂದು ಝಾಡಿಸಿದ್ದಾರೆ.

ಮೋದಿ ಮೌನಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಇದು ಕೇವಲ ಮಲ್ಲಿಕಾರ್ಜುನ ಖರ್ಗೆ ಒಬ್ಬರಿಗೆ ಮಾತ್ರ ಸಂಬಂಧಿಸಿದ ವಿಷಯವಲ್ಲ ಎಂದಿರುವ ಅವರು, ದೇಶಾದ್ಯಂತ ದಲಿತರು ಕೇವಲ ತಮ್ಮ ಜಾತಿಯ ಕಾರಣಕ್ಕಾಗಿ ಪ್ರತಿದಿನವೂ ಇಂತಹ ಅವಮಾನ, ತಾರತಮ್ಯ ಮತ್ತು ಅಪಮಾನಗಳನ್ನು ಎದುರಿಸುತ್ತಲೇ ಇದ್ದಾರೆ. ಇಂತಹ ನಿಂದನೀಯ ಕೃತ್ಯಗಳು ನಡೆದಾಗ ಹಾಗೂ ತಮ್ಮದೇ ಪಕ್ಷದ ನಾಯಕರು ಅದನ್ನು ಬಹಿರಂಗವಾಗಿ ಸಮರ್ಥಿಸಿಕೊಂಡಾಗ ಮೌನ ವಹಿಸುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಲು ಯಾವುದೇ ಅರ್ಹತೆ ಇಲ್ಲ, ಎಂದು ಕಿಡಿಕಾರಿದ್ದಾರೆ.

ಅಂತಿಮವಾಗಿ, ಅಸ್ಪೃಶ್ಯತೆಯ ಈ ಕೃತ್ಯವನ್ನು ಪ್ರಧಾನಿ ಮೋದಿ ಅವರು ಖಂಡಿಸುತ್ತಾರೆಯೇ ಅಥವಾ ಅದನ್ನು ಸಮರ್ಥಿಸುವವರ ಪರವಾಗಿ ಬಿಜೆಪಿ ನಿಲ್ಲುತ್ತದೆಯೇ ಎಂಬುದನ್ನು ದೇಶದ ಜನರಿಗೆ ಸ್ಪಷ್ಟಪಡಿಸಬೇಕು,” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...