Homeಮುಖಪುಟಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

- Advertisement -
- Advertisement -

“ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಆರ್‌ಎಸ್‌ಎಸ್‌ ಅಥವಾ ಮೋಹನ್ ಭಾಗವತ್ ಅವರ ದ್ವಂದ್ವ ನಿಲುವನ್ನು ಪ್ರಶ್ನಿಸಿದ್ದಾರೆ.

“100 ವರ್ಷಗಳಿಂದ ಈ ನೋಂದಾಯಿತವಲ್ಲದ ಸಂಸ್ಥೆಯು ಭಾರತದಲ್ಲಿ ಹಿಂದೂ ರಾಷ್ಟ್ರದ ಕಲ್ಪನೆಯನ್ನು ಪ್ರಚಾರ ಮಾಡುತ್ತಿದೆ ಮತ್ತು ಮುಂದುವರಿಸುತ್ತಾ ಬಂದಿದೆ. ಆದರೂ, ಅಮೆರಿಕದಲ್ಲಿ ಮೋಹನ್ ಭಾಗವತ್ ಅವರು, “ಯಾರಾದರೂ ಹಿಂದೂ, ಭಾರತದಲ್ಲಿ ಯಾವುದೇ ಮುಸ್ಲಿಮರು ಇರಬಾರದು ಎಂದು ಭಾವಿಸಿದರೆ, ಅವನು ಹಿಂದೂ ಆಗಿ ಉಳಿಯುವುದಿಲ್ಲ. ನೀವು ನಿಮ್ಮನ್ನು ಹಿಂದೂ ಎಂದು ಕರೆದುಕೊಂಡರೆ, ಎಲ್ಲಾ ಮಾರ್ಗಗಳೂ ಒಂದೇ ಗುರಿಯತ್ತ ಸಾಗುತ್ತವೆ ಎಂದು ನೀವು ನಂಬಬೇಕು” ಎಂದು ಹೇಳುತ್ತಾರೆ. ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲಿ ಎಂತಹ ಬದಲಾವಣೆ” ಎಂದು ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

“ಸಮಾಜದಲ್ಲಿ ಕೋಮು ವಿಷ ಬೀಜಗಳನ್ನು ಬಿತ್ತುವ ತನ್ನ ವಿಚಾರ ಪರಿವಾರಕ್ಕಾಗಿ ಭಾರತೀಯ ಅನಿವಾಸಿಗಳಿಂದ ಹಣವನ್ನು ಕ್ರೋಡೀಕರಿಸಲು ಆರ್‌ಎಸ್‌ಎಸ್ ಯಾವುದೇ ಹಂತಕ್ಕಾದರೂ ಹೋಗುವಂತೆ ತೋರುತ್ತದೆ. ಭಾಗವತ್ ಅವರ ಮೂರು ದೇಶಗಳ ಪ್ರವಾಸ ಮತ್ತು ಅವರ ‘ವಿಶ್ವ ಏಕತೆ’ ಎಂಬ ಎಚ್ಚರಿಕೆಯಿಂದ ಸಿದ್ಧಪಡಿಸಲಾದ ಸಂದೇಶವು ಕೇವಲ ಧಾರ್ಮಿಕ ಸಾಮರಸ್ಯದ ಬಗ್ಗೆ ಎಂದು ಯಾರಾದರೂ ನಂಬುವುದಾದರೆ, ಅವರು ಪರಿಸ್ಥಿತಿಯನ್ನು ಇನ್ನಷ್ಟು ಹತ್ತಿರದಿಂದ ಅಥವಾ ಆಳವಾಗಿ ಗಮನಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಅನಿವಾಸಿ ಭಾರತೀಯರನ್ನು ಒಟ್ಟುಗೂಡಿಸುವಲ್ಲಿ ಹಿಂದೂ ಸ್ವಯಂಸೇವಕ ಸಂಘದ (HSS – ಆರ್‌ಎಸ್‌ಎಸ್‌ನ ಸಾಗರೋತ್ತರ ವಿಭಾಗ) ಪಾತ್ರವನ್ನು ಒಮ್ಮೆ ನೋಡಿ. ಅದರ ಜೊತೆಗೆ, ಅಂತರಧರ್ಮೀಯ ಸಂವಾದ ಮತ್ತು ಎಲ್ಲರನ್ನೂ ಒಳಗೊಳ್ಳುವ ಭವಿಷ್ಯದ ಪ್ರತಿಪಾದಕ ಎಂದು ತನ್ನನ್ನು ತಾನು ಪ್ರಸ್ತುತಪಡಿಸಿಕೊಳ್ಳುವ ‘ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ (AHEAD) ಸಂಸ್ಥೆಯನ್ನೂ ಗಮನಿಸಿ. ಈ ಹೊಸ ಸಂಸ್ಥೆಯು ಆರ್‌ಎಸ್‌ಎಸ್ ಪರಿಸರ ವ್ಯವಸ್ಥೆಯೊಂದಿಗೆ ತನಗಿರುವ ಸಂಬಂಧವನ್ನು ಎಲ್ಲಿಯೂ ಸ್ಪಷ್ಟವಾಗಿ ಉಲ್ಲೇಖಿಸುವುದಿಲ್ಲ, ಆದರೆ ಇದನ್ನು ಸ್ಥಾಪಿಸಿರುವುದು ಅದೇ ಸಂಘಟನೆಯ ಸದಸ್ಯರೇ ಆಗಿದ್ದಾರೆ” ಎಂದಿದ್ದಾರೆ.

ಮುಂದುವರಿದು, ಈ ‘ವಿಶ್ವ ಏಕತೆ’ (Universal Oneness) ಎಂಬ ಆಕರ್ಷಕ ಭಾಷೆಯ ಹಿಂದೆ, ಅತ್ಯಂತ ಸೂಕ್ಷ್ಮವಾಗಿ ಪರಿಶೀಲಿಸಬೇಕಾದ ಅಥವಾ ಪ್ರಶ್ನಿಸಬೇಕಾದ ಒಂದು ಪ್ರಮುಖ ಪ್ರಶ್ನೆ ಅಡಗಿದೆ. ಸ್ವದೇಶದಲ್ಲಿ ಬಳಸುವ ‘ಹಿಂದೂ ರಾಷ್ಟ್ರ’ದ ಭಾಷೆಯು ವಿದೇಶಕ್ಕೆ ಹೋದಾಗ ಒಳಗೊಳ್ಳುವಿಕೆ (ಎಲ್ಲರನ್ನೂ ಒಳಗೊಳ್ಳುವ ನೀತಿ) ಮತ್ತು ಅಂತರಧರ್ಮೀಯ ಸಾಮರಸ್ಯದ ಭಾಷೆಯಾಗಿ ಹೇಗೆ ಬದಲಾಗುತ್ತದೆ? ಅವರ ಸಂಪರ್ಕ ಜಾಲವನ್ನು ಸೂಕ್ಷ್ಮವಾಗಿ ಗಮನಿಸಿ. ನಿಧಿ ಸಂಗ್ರಹಣೆಯ ಹಾದಿಯನ್ನು ಬೆಂಬತ್ತಿ ನೋಡಿ. ಹಣದ ಮೂಲ ಮತ್ತು ಹರಿವನ್ನು ಪತ್ತೆಹಚ್ಚಿ. ಇದೇ ಕಾರಣಕ್ಕಾಗಿ ಈ ಸಂಸ್ಥೆಯು ಅಧಿಕೃತವಾಗಿ ನೋಂದಾಯಿಸಲ್ಪಡುವ ಅಗತ್ಯವಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಬರೆದುಕೊಂಡಿದ್ದಾರೆ.

ಅಮೆರಿಕದ ನ್ಯೂಯಾರ್ಕ್‌ನಲ್ಲಿ ಶನಿವಾರ (ಆ.29) ಆಯೋಜಿಸಿದ್ದ ‘ವಿಶ್ವ ಏಕತೆ’ (Universal Oneness) ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, “ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ” ಎಂಬ ಹೇಳಿಕೆಯನ್ನು ನೀಡಿದ್ದಾರೆ. ‘ವಿಶ್ವ ಏಕತೆ’ ಕಾರ್ಯಕ್ರಮವನ್ನು ‘ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ (AHEAD) ಎಂಬ ಸಂಘಟನೆ ಆಯೋಜಿಸಿತ್ತು.

ಮೋಹನ್ ಭಾಗವತ್ ಕಾರ್ಯಕ್ರಮದ ವಿರುದ್ದ ಅಮೆರಿಕದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ವ್ಯಕ್ತವಾಗಿತ್ತು. ಸುಮಾರು 60ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ ನಡೆಸಿತ್ತು. ‘ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್’ ನಂತಹ ಪ್ರಮುಖ ಯುಎಸ್ ಮೂಲದ ಹಿಂದೂ ಸಂಘಟನೆಯು ಈ ಪ್ರತಿಭಟನೆಯ ನೇತೃತ್ವ ವಹಿಸಿತ್ತು. “ಆರ್‌ಎಸ್‌ಎಸ್ ಮತ್ತು ಅದರ ಹಿಂದುತ್ವ ಸಿದ್ಧಾಂತವು ನಮ್ಮನ್ನು ಪ್ರತಿನಿಧಿಸುವುದಿಲ್ಲ” ಎಂದು ಈ ಸಂಘಟನೆಯ ಕಾರ್ಯನಿರ್ವಾಹಕ ನಿರ್ದೇಶಕಿ ಸುನಿತಾ ವಿಶ್ವನಾಥ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...