HomeಅಂಕಣಗಳುKarnataka against SIRಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

- Advertisement -
- Advertisement -

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ ಹಕ್ಕು. ಆದರೆ ಇವತ್ತು ಅಂತಹ ಪವಿತ್ರವಾದ ಹಕ್ಕನ್ನೇ ಕಸಿದುಕೊಳ್ಳುವ ಬೃಹತ್ ಹುನ್ನಾರ ನಡೆಯುತ್ತಿದೆ, ಎಂದು ಬಹುಭಾಷಾ ನಟ ಕಿಶೋರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ‘SIR ವಿರೋಧಿ ಕರ್ನಾಟಕ’ ವೇದಿಕೆ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಬೃಹತ್ ‘ಎಲೆಕ್ಷನ್ ಕಮಿಷನ್ ಚಲೋ’ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಶಾಶ್ವತ ಅಧಿಕಾರಕ್ಕಾಗಿ ಮನುಸ್ಮೃತಿ ಜಾರಿಯ ಷಡ್ಯಂತ್ರ’

ಆಡಳಿತಾರೂಢ ವ್ಯವಸ್ಥೆ ಮತ್ತು ಆರ್‌ಎಸ್‌ಎಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದ ನಟ ಕಿಶೋರ್, ಎಸ್‌ಐಆರ್ ಹಿಂದಿರುವ ಪ್ರಮುಖ ಸಂಚನ್ನು ನಾವೆಲ್ಲರೂ ಮೊದಲು ಅರ್ಥಮಾಡಿಕೊಳ್ಳಬೇಕು. ಆರ್‌ಎಸ್‌ಎಸ್ ಮತ್ತು ಬಿಜೆಪಿ ಮನುವಾದಿ ಸಿದ್ಧಾಂತವನ್ನು ಹೇರಿ, ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿಯನ್ನು ತರಲು ದೊಡ್ಡ ಷಡ್ಯಂತ್ರ ರೂಪಿಸುತ್ತಿವೆ, ಎಂದು ಗಂಭೀರವಾಗಿ ಆರೋಪಿಸಿದರು.

“ದೇಶದ ನಿಜವಾದ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕಿತ್ತುಹಾಕಿ, ಅವರ ಹಕ್ಕನ್ನು ಇಲ್ಲದಂತೆ ಮಾಡಲಾಗುತ್ತಿದೆ. ತನ್ಮೂಲಕ ತಮ್ಮದೇ ಆದ ಸ್ವಂತ ವೋಟ್ ಬ್ಯಾಂಕ್‌ ಅನ್ನು ಮಾತ್ರ ಉಳಿಸಿಕೊಂಡು, ದೇಶದಲ್ಲಿ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯಲು ಇಂತಹ ಕೃತ್ಯ ನಡೆಸಲಾಗುತ್ತಿದೆ,” ಎಂದು ಅವರು ವಿವರಿಸಿದರು.

ಸಂವಿಧಾನ ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಎಲ್ಲರೂ ಒಂದಾಗಬೇಕೆಂದು ಕರೆ ನೀಡಿದ ಅವರು, “ನಟ ಪ್ರಕಾಶ್ ರಾಜ್ ಅವರು ಈ SIR ಪ್ರಕ್ರಿಯೆಯ ಹಿಂದಿರುವ ಸಂಚನ್ನು ಎಲ್ಲರಿಗೂ ಸರಳವಾಗಿ ಮನದಟ್ಟಾಗುವಂತೆ ವಿವರಿಸಿದ್ದಾರೆ. ನಮ್ಮ ಕಣ್ಣೆದುರೇ ನಡೆಯುತ್ತಿರುವ ಈ ಪ್ರಜಾಪ್ರಭುತ್ವದ ವಿರೋಧಿ ಹುನ್ನಾರದ ವಿರುದ್ಧ ನಾವೆಲ್ಲರೂ ಒಂದಾಗಿ ಧ್ವನಿ ಎತ್ತಬೇಕಿದೆ,” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...