HomeಮುಖಪುಟKPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

- Advertisement -
- Advertisement -

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ ಮಾರ್ಗದರ್ಶನ ಮತ್ತು ಸೂಚನೆಯಂತೆಯೇ ಜ್ಞಾನೇಂದ್ರ ಕುಮಾರ್ ತಲೆಮರೆಸಿಕೊಂಡಿದ್ದರು ಎಂಬ ಸತ್ಯ ಹೊರಬಂದಿದ್ದು, ಅವರಿಗೆ ನೆರವಾದ ಆ ‘ಪ್ರಭಾವಿಗಳು’ ಯಾರು ಎಂಬ ಕುತೂಹಲ ಸಾರ್ವಜನಿಕ ವಲಯದಲ್ಲಿ ತೀವ್ರಗೊಂಡಿದೆ.

ಪ್ರಭಾವಿ ವ್ಯಕ್ತಿಗಳು ನೀಡುತ್ತಿದ್ದ ಮಾಹಿತಿ ಮತ್ತು ಸೂಚನೆಗಳ ಆಧಾರದ ಮೇಲೆಯೇ ಜ್ಞಾನೇಂದ್ರ ಕುಮಾರ್ ತಮ್ಮ ವಾಸ್ತವ್ಯದ ಸ್ಥಳಗಳನ್ನು ಪದೇ ಪದೇ ಬದಲಾಯಿಸುತ್ತಿದ್ದರು ಎಂದು ಸಿಐಡಿ ಮೂಲಗಳು ತಿಳಿಸಿವೆ.

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದ ಬೆನ್ನಲ್ಲೇ ಜ್ಞಾನೇಂದ್ರ ಕುಮಾರ್ ತೀವ್ರ ಆತಂಕಕ್ಕೆ ಒಳಗಾಗಿದ್ದರು. ಮುಂದಿನ ಗುರಿ ತಾವೇ ಆಗಬಹುದು ಎಂಬುದನ್ನು ಅರಿತು, ತಕ್ಷಣವೇ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿನಿಂದ ಎಸ್ಕೇಪ್ ಆಗಲು ಯೋಜಿಸಿದ್ದರು.

ರಾಜ್ಯದ ಪ್ರಭಾವಿಗಳ ಸಲಹೆಯಂತೆ ಸಣ್ಣ ಬಟ್ಟೆ ಬ್ಯಾಗ್ ಹಿಡಿದು ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ್ದ ಅವರು, ಅಲ್ಲಿಂದ ನೋಯ್ಡಾದಲ್ಲಿ ಬಾಡಿಗೆ ಕೊಠಡಿ ಪಡೆದು ವಾಸ್ತವ್ಯ ಹೂಡಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

ನೋಯ್ಡಾದಲ್ಲಿ ತಂಗಿದ್ದ ಕೊಠಡಿಗೆ ಜ್ಞಾನೇಂದ್ರ ಕುಮಾರ್ ಅವರು ರಾಷ್ಟ್ರೀಯ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿರುವ ತಮ್ಮ ಗೆಳತಿಯನ್ನು ಕರೆಸಿಕೊಂಡಿದ್ದರು. ಈ ವೇಳೆ ಪ್ರಭಾವಿ ವ್ಯಕ್ತಿಯೊಬ್ಬರಿಂದ ಕರೆ ಬಂದು, “ನಿನ್ನ ಮೇಲೆ ಯಾವುದೇ ಕ್ಷಣದಲ್ಲಾದರೂ ಇಡಿ ದಾಳಿಯಾಗಬಹುದು. ಹಗರಣದ ಪ್ರಮುಖ ದಾಖಲೆಗಳು ಇಡಿ ಕೈಸೇರಿವೆ, ತಕ್ಷಣ ಸ್ಥಳ ಖಾಲಿ ಮಾಡು” ಎಂದು ಎಚ್ಚರಿಸಿದ್ದರು. ಈ ವಿಚಾರ ತಿಳಿದ ಗೆಳತಿ ತೀವ್ರ ಕೋಪಗೊಂಡು, “ನಿನ್ನಿಂದಾಗಿ ನಾನು ತೊಂದರೆಗೆ ಸಿಲುಕುತ್ತೇನೆ” ಎಂದು ಜ್ಞಾನೇಂದ್ರ ಅವರಿಗೆ ಕಪಾಳಮೋಕ್ಷ ಮಾಡಿ ಅಲ್ಲಿಂದ ನಿರ್ಗಮಿಸಿದ್ದರು ಎನ್ನಲಾಗಿದೆ.

ಇಷ್ಟಕ್ಕೇ ನಿಲ್ಲದ ಹೈಡ್ರಾಮಾ, ಪ್ರಭಾವಿ ವ್ಯಕ್ತಿಯ ಸೂಚನೆಯಂತೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ದೆಹಲಿಗೆ ತೆರಳಿ ಜ್ಞಾನೇಂದ್ರ ಕುಮಾರ್ ಅವರನ್ನು ಭೇಟಿಯಾಗಿದ್ದರು. ಇಡಿ ಅಧಿಕಾರಿಗಳು ಬಂಧಿಸಿದರೆ ಅಥವಾ ದಾಖಲೆಗಳನ್ನು ಮುಂದೆ ಇಟ್ಟಾಗ ಹೇಗೆ ಉತ್ತರಿಸಬೇಕು, ತನಿಖೆಯನ್ನು ಹೇಗೆ ಎದುರಿಸಬೇಕು ಎಂದು ಕಾನೂನುನಾತ್ಮಕ ‘ಪಾಠ’ ಮಾಡಿದ್ದರು ಎನ್ನಲಾಗಿದೆ.

ನಿವೃತ್ತ ಅಧಿಕಾರಿಯ ಭೇಟಿಯ ನಂತರ ಜ್ಞಾನೇಂದ್ರ ಕುಮಾರ್ ತಮ್ಮ ಮೂವರು ಐಎಎಸ್ ಬ್ಯಾಚ್‌ಮೇಟ್‌ಗಳನ್ನು ದೆಹಲಿಗೆ ಕರೆಸಿಕೊಂಡು, ನಾಲ್ವರೂ ಸೇರಿ ಶ್ರೀಲಂಕಾಗೆ ತೆರಳಿದ್ದರು. ಶ್ರೀಲಂಕಾದಲ್ಲಿ ಎರಡು ದಿನ ಉಳಿದುಕೊಂಡಿದ್ದಾಗ, ತಮ್ಮ ವಿರುದ್ಧ ಆಯೋಗ ಅಥವಾ ಪೊಲೀಸರು ‘ಲುಕ್ಔಟ್ ನೋಟಿಸ್’ ಹೊರಡಿಸುವ ಸಾಧ್ಯತೆ ಇದೆ ಎಂಬ ಸುಳಿವು ಸಿಕ್ಕಿತ್ತು. ಲುಕ್ಔಟ್ ನೋಟಿಸ್ ಜಾರಿಯಾದರೆ ವಿಮಾನ ನಿಲ್ದಾಣದಲ್ಲೇ ಸಿಕ್ಕಿಬೀಳುವ ಭೀತಿಯಿಂದ ಕೊಲಂಬೊದಿಂದ ತಕ್ಷಣ ಚೆನ್ನೈಗೆ ಮರಳಿದ್ದರು.

ಆ ನಂತರ ಚೆನ್ನೈನಿಂದ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜ್ಞಾನೇಂದ್ರ ಅವರು ಪ್ರಭಾವಿ ವ್ಯಕ್ತಿಗಳ ಸೂಚನೆಯಂತೆ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಯಾವುದೇ ಕಾರಣಕ್ಕೂ ಇಡಿ ನೋಟಿಸ್‌ಗೆ ಉತ್ತರಿಸದಂತೆ ಅವರಿಗೆ ಸೂಚನೆ ನೀಡಲಾಗಿತ್ತು.

ಸಿಐಡಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಜ್ಞಾನೇಂದ್ರ ಕುಮಾರ್ ಎರಡು ದಿನ ವಿಚಾರಣೆಗೆ ಹಾಜರಾಗಿದ್ದರು. ಎರಡನೇ ದಿನ ವಿಚಾರಣೆ ಮುಗಿಸಿ ಸಿಐಡಿ ಕಚೇರಿಯಿಂದ ಹೊರಬರಲು ಮುಂದಾಗುತ್ತಿದ್ದಂತೆ, ಪ್ರಭಾವಿ ವ್ಯಕ್ತಿಯೊಬ್ಬರು ಕರೆ ಮಾಡಿ “ನಿನ್ನ ಮನೆಯ ಬಳಿ ಇಡಿ ಅಧಿಕಾರಿಗಳು ಕಾಯುತ್ತಿದ್ದಾರೆ” ಎಂದು ಎಚ್ಚರಿಸಿದ್ದರು. ಇಡಿ ಬಂಧನದಿಂದ ತಪ್ಪಿಸಿಕೊಳ್ಳಲು ಅವರು ಹೊರಗೆ ಹೋಗದೆ ಮತ್ತೆ ಸಿಐಡಿ ಕಚೇರಿಯೊಳಗೇ ಸುರಕ್ಷಿತವಾಗಿ ಉಳಿಯಲು ಯತ್ನಿಸಿದ್ದರು. ಆದರೆ, ಈ ಹಿಂದೆ ನೀಡಿದ್ದ ನೋಟಿಸ್‌ಗಳಿಗೆ ಸರಿಯಾಗಿ ಸ್ಪಂದಿಸದ ಕಾರಣ ಸಿಐಡಿ ಅಧಿಕಾರಿಗಳೇ ಅವರನ್ನು ಮಧ್ಯರಾತ್ರಿ ಬಂಧಿಸಿದ್ದರು.

ಪ್ರಸ್ತುತ ಸಿಐಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾರ್ ಅವರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದಿದ್ದು, ಕೆಪಿಎಸ್‌ಸಿ ಹಗರಣದ ಮೂಲ, ಪ್ರಭಾವಿ ರಾಜಕಾರಣಿಗಳೊಂದಿಗಿನ ಸಂಪರ್ಕ ಹಾಗೂ ಪರಾರಿಯಾಗಲು ನೆರವಾದ ಜಾಲವನ್ನು ಭೇದಿಸಲು ವಿಚಾರಣೆ ತೀವ್ರಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...