Homeಮುಖಪುಟಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

- Advertisement -
- Advertisement -

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ ಮಹತ್ವದ ದಾಖಲೆಗಳನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಆರಂಭದಲ್ಲಿ ವಿವಿಯ ಅಧಿಕಾರಿಗಳು ಪ್ರಭಾರ ಅಧಿಕಾರದಲ್ಲಿದ್ದೇವೆ, ದಾಖಲೆ ಪರಿಶೀಲನೆಗೆ ಸಮಯ ಬೇಕು ಎಂದು ವಿಳಂಬ ಧೋರಣೆ ತಳೆದಿದ್ದರಾದರೂ, ತನಿಖಾಧಿಕಾರಿಗಳು ಕಟ್ಟುನಿಟ್ಟಿನ ಒತ್ತಡ ಹೇರಿದ ನಂತರ ಅಗತ್ಯ ದಾಖಲೆಗಳನ್ನು ಹಸ್ತಾಂತರಿಸಿದ್ದಾರೆ. ತನಿಖೆಗೆ ಸಹಕರಿಸಲು ವಿಳಂಬ ಮಾಡಿದ ಅಧಿಕಾರಿಗಳಿಗೆ ನೋಟಿಸ್ ಜಾರಿಯಾಗುವ ಸಾಧ್ಯತೆಯೂ ಇದೆ.

ತನಿಖಾ ಮೂಲಗಳ ಪ್ರಕಾರ, ಬಸವರಾಜ ಕನ್ನಾಳೆ ತುಮಕೂರು ವಿಶ್ವವಿದ್ಯಾಲಯದ ಕುಲಪತಿ (VC) ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಹಲವು ಹಿರಿಯ ಪ್ರಾಧ್ಯಾಪಕರೊಂದಿಗೆ ಸಂಪರ್ಕದಲ್ಲಿದ್ದರು. ರಾಜಭವನ ಸೇರಿದಂತೆ ಪ್ರಭಾವಿ ವಲಯಗಳಲ್ಲಿ ತಮಗೆ ನಿಕಟ ಸಂಪರ್ಕವಿದೆ ಎಂದು ಹೇಳಿಕೊಂಡು, ವಿವಿ ಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಭಾರಿ ಹಣಕಾಸಿನ ವ್ಯವಹಾರ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ಆಂಧ್ರಪ್ರದೇಶದ ಅನಂತಪುರದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ನೇಮಕಾತಿಯಲ್ಲೂ ಪ್ರಭಾವ ಬೀರುವುದಾಗಿ ಭರವಸೆ ನೀಡಿ ಹಣ ಪಡೆದಿದ್ದರೆನ್ನಲಾದ ಪ್ರಕರಣದ ತನಿಖೆಯೂ ನಡೆಯುತ್ತಿದೆ. ಸದ್ಯ ತನಿಖಾಧಿಕಾರಿಗಳು ಕನ್ನಾಳೆಯ ಇತ್ತೀಚಿನ ಕರೆಗಳ ವಿವರಗಳನ್ನು (CDR) ಜಾಲಾಡುತ್ತಿದ್ದು, ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಪ್ರಾಧ್ಯಾಪಕರು, ವಿವಿ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಟ್ಟಿ ಸಿದ್ಧಪಡಿಸುತ್ತಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದ ಕಾಮಗಾರಿಗಳು, ಟೆಂಡರ್ ಪ್ರಕ್ರಿಯೆಗಳು ಹಾಗೂ ವಿವಿಧ ವಿವಿಗಳ ಕಾಮಗಾರಿಗಳನ್ನು ತುಂಡುಗುತ್ತಿಗೆ (Piece-work contract) ಮೂಲಕ ತಮಗೆ ಬೇಕಾದವರಿಗೆ ಕೊಡಿಸುವ ಮಧ್ಯಸ್ಥಿಕೆಯಲ್ಲೂ ಕನ್ನಾಳೆ ಭಾಗಿಯಾಗಿದ್ದರು ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಟೆಂಡರ್ ದಾಖಲೆಗಳು, ತಾಂತ್ರಿಕ-ಹಣಕಾಸು ಬಿಡ್‌ಗಳು, ಕಾರ್ಯಾದೇಶಗಳು ಮತ್ತು ಸಮಿತಿಗಳ ನಡಾವಳಿಗಳ ಪರಿಶೀಲನೆ ನಡೆಯುತ್ತಿದೆ.

ಬಸವರಾಜ ಕನ್ನಾಳೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ರಾಜಕೀಯ ನಾಯಕರೊಂದಿಗೆ ಇರುವ ಫೋಟೋಗಳನ್ನು ತೋರಿಸಿ, ಕೆಪಿಎಸ್‌ಸಿ (KPSC), ರಾಜಭವನ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡಿಸಿಕೊಡುವುದಾಗಿ ಜನರನ್ನು ನಂಬಿಸುತ್ತಿದ್ದರು. ಈ ರಾಜಕೀಯ ಪ್ರಭಾವ ಬಳಸಿ ಅಧಿಕಾರ ದುರುಪಯೋಗ ಮತ್ತು ಹಣಕಾಸು ಅಕ್ರಮ ಎಸಗಲಾಗಿದೆಯೇ ಎಂಬುದೇ ತನಿಖೆಯ ಪ್ರಮುಖ ವಸ್ತುವಾಗಿದೆ.

ರಾಜಭವನದ ನಡೆ ಹಾಗೂ ಸಿಂಡಿಕೇಟ್ ನಿರ್ಧಾರಗಳ ಮರುಪರಿಶೀಲನೆ?

ಬಂಧನದಂತಹ ಗಂಭೀರ ಬೆಳವಣಿಗೆಯ ನಂತರ, ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸುವ ಕುರಿತು ರಾಜಭವನ ಕೈಗೊಳ್ಳುವ ನಿರ್ಧಾರ ಕುತೂಹಲ ಮೂಡಿಸಿದೆ. ಅವರು ಸಿಂಡಿಕೇಟ್ ಸದಸ್ಯರಾಗಿ ಭಾಗವಹಿಸಿ ತೆಗೆದುಕೊಂಡ ನಿರ್ಧಾರಗಳು, ಭಾಗಿಯಾಗಿದ್ದ ಸಮಿತಿಗಳ ನಿರ್ಧಾರಗಳ ಸ್ವತಂತ್ರ ಪರಿಶೀಲನೆ ನಡೆಯಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ಈ ಪ್ರಕರಣವು ತುಮಕೂರು ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯ ಪಾರದರ್ಶಕತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಕನ್ನಾಳೆ ಬಂಧನವು ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗುತ್ತದೆಯೇ ಅಥವಾ ಸಿಬಿಐ ಹಾಗೂ ಸಿಐಡಿ ತನಿಖೆಯ ಮೂಲಕ ವಿಶ್ವವಿದ್ಯಾಲಯಗಳು ಮತ್ತು ಕೆಪಿಎಸ್‌ಸಿಯಲ್ಲಿ ಹರಿದಾಡುತ್ತಿರುವ ಬೃಹತ್ ಅಕ್ರಮ ಜಾಲವನ್ನು ಬಯಲಿಗೆಳೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...