Homeಮುಖಪುಟಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

- Advertisement -
- Advertisement -

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ.

‘4 ಪಿಎಮ್ ನ್ಯೂಸ್ ನೆಟ್‌ವರ್ಕ್’ (4 PM News Network) ಸಂಸ್ಥೆಯ ಪತ್ರಕರ್ತೆಯರಾದ ಶಾಹಿನ್ ಖಾನ್ ಮತ್ತು ನಫೀಸಾ ಅವರು, ತಾವು ಮುಸ್ಲಿಮರು ಎಂದು ತಿಳಿದ ನಂತರ ಪೊಲೀಸರು ತಮ್ಮನ್ನು ಬಂಧಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ದೆಹಲಿ ಸರ್ಕಾರ ಮತ್ತು ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಕುರಿತು ಪ್ರಶ್ನೆಗಳನ್ನು ಕೇಳಿದ್ದೇ ಈ ಹಲ್ಲೆಗೆ ಕಾರಣ ಎಂದು ಶಾಹಿನ್ ಹೇಳಿದ್ದಾರೆ.

“ಶಾಹಿನ್ ಅವರು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಪ್ರಶ್ನಿಸಲು ಯತ್ನಿಸುತ್ತಿದ್ದರು. ಈ ವೇಳೆ ದೆಹಲಿ ಪೊಲೀಸರು ಆಕೆಯನ್ನು ಹಿಡಿದು, ಹೊಡೆಯುತ್ತಾ ಠಾಣೆಗೆ ಎಳೆದೊಯ್ದಿದ್ದಾರೆ ಎಂದು ಶಾಹಿನ್ ಆರೋಪಿಸಿದ್ದಾರೆ” ಎಂದು ‘4 ಪಿಎಮ್ ನ್ಯೂಸ್ ನೆಟ್‌ವರ್ಕ್’ ಎಕ್ಸ್ನಲ್ಲಿ ಬರೆದುಕೊಂಡಿದೆ.

“ಪೊಲೀಸ್ ಅಧಿಕಾರಿಗಳು ಆಕೆಯ ಹೆಸರು ಕೇಳಿದಾಗ ‘ಖಾನ್’ ಎಂದು ತಿಳಿದು ಹಲ್ಲೆಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದರು ಎಂದು ಆಕೆ ಆರೋಪಿಸಿದ್ದಾರೆ” ಎಂದು ಸಂಸ್ಥೆ ತಿಳಿಸಿದೆ.

ತಮ್ಮ ವೈದ್ಯಕೀಯ ತಪಾಸಣೆ ಮತ್ತು ‘ಮೆಡಿಕೋ-ಲೀಗಲ್ ಕೇಸ್’ (ಎಂಎಲ್‌ಸಿ) ವರದಿ ಪಡೆಯಲು ತಾವು ಈಗ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್‌) ಗೆ ತೆರಳುತ್ತಿರುವುದಾಗಿ ಶಾಹಿನ್ ಮತ್ತು ನಫೀಸಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಆರೋಪಗಳ ಕುರಿತು ದೆಹಲಿ ಪೊಲೀಸರಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ವೀಡಿಯೊದಲ್ಲೂ ಸಹ, ಶಾಹಿನ್ ಸಿಬ್ಬಂದಿ ವಿರುದ್ಧ ಆರೋಪ ಮಾಡುತ್ತಿದ್ದರೂ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮೇಜಿನ ಬಳಿ ಸುಮ್ಮನೆ ಕುಳಿತಿರುವುದು ಕಂಡುಬಂದಿದೆ.

ದೆಹಲಿ ಪೊಲೀಸ್ ಮತ್ತು ಸಿಎಂ ರೇಖಾ ಗುಪ್ತಾ ವಿರುದ್ಧ ಸಿಜೆಪಿ- ಆಪ್ ಕಿಡಿ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಈ ದಾಳಿಯನ್ನು ಖಂಡಿಸಿದ್ದು, ದೆಹಲಿ ಪ್ರತಿದಿನ “ಇಂತಹ ಆತಂಕಕಾರಿ ಸುದ್ದಿಗಳೊಂದಿಗೆ” ಎಚ್ಚರಗೊಳ್ಳುತ್ತಿದೆ ಎಂದು ಹೇಳಿದೆ.

ಸಿಜೆಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, “ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡುವುದೊಂದೇ ದೆಹಲಿ ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳುವ ಕೆಲಸವೇ? ದೆಹಲಿ ಪೊಲೀಸರಿಗೆ ಮಹಿಳೆಯರ ಮೇಲಿನ ಅಪರಾಧ ಎಂಬುದು ತಮಾಷೆಯ ವಿಷಯವೇ?” ಎಂದು ಪ್ರಶ್ನಿಸಿದೆ.

ಪಕ್ಷದ ವಕ್ತಾರ ಅಶುತೋಷ್ ರಂಕಾ ಮಾತನಾಡಿ, “ಶಾಹಿನ್ ದೆಹಲಿಯಲ್ಲಿ ನಾನು ಕಂಡ ಅತ್ಯುತ್ತಮ ಪತ್ರಕರ್ತೆಯರಲ್ಲಿ ಒಬ್ಬರು. ದೆಹಲಿ ಪೊಲೀಸರು ಮಾಡಿದ್ದು ನಾಚಿಕೆಗೇಡಿನ ಸಂಗತಿ, ಆದರೆ ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಅಲ್ಲದೆ, ಈ ನಾಟಕದ ಸಮಯ ಶೀಘ್ರದಲ್ಲೇ ಮುಗಿಯಲಿದೆ” ಎಂದು ಶಾಹಿನ್‌ಗೆ ಧೈರ್ಯ ತುಂಬಿದ್ದಾರೆ.

ಈ ಘಟನೆಯ ಕುರಿತು ಆಮ್ ಆದ್ಮಿ ಪಾರ್ಟಿ (ಆಪ್‌) ಬಿಜೆಪಿ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಆಪ್ ನಾಯಕ ಸೌರಭ್ ಭಾರದ್ವಾಜ್ ಎಕ್ಸ್‌ನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ಸಿಎಂ ರೇಖಾ ಗುಪ್ತಾ ಅವರನ್ನು ಪ್ರಶ್ನಿಸಿದ್ದಕ್ಕಾಗಿ ಇಬ್ಬರು ಮಹಿಳಾ ವರದಿಗಾರರನ್ನು ದೆಹಲಿ ಪೊಲೀಸರು ಅತ್ಯಂತ ಕ್ರೂರವಾಗಿ ಹೊಡೆದಿದ್ದಾರೆ. ಮಹಿಳಾ ಸಿಎಂ ರೇಖಾ ಗುಪ್ತಾ ಅವರಿಗೆ ನಾಚಿಕೆಯಾಗಬೇಕು” ಎಂದು ವೀಡಿಕೆಯಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...